NLP_Assignment_1 / eesanje /url_46_101_2.txt
CoolCoder44's picture
efe37858b586a9a048bc0ecc57a15bf9f7189f016b8fcfa2006a47467850c382
c188c15 verified
raw
history blame
5.92 kB
ಮೊದಲನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
ಮೈಸೂರು, ಜೂ. 22– ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿ ಕಾರಿ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ವರ್ಷ ಜುಲೈ 12ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 19ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27ರ ಶನಿವಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯ ಕ್ರಮ ಹಾಗೂ ಆಗ್ಟ್ 2ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿ ಗಳ ಜೊತೆ ಆಷಾಢ ಶುಕ್ರವಾರ ಕುರಿತು ಆಗಿರುವ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತಾದಿಗಳು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಆಹಾರದ ಸುರಕ್ಷತೆಗೆ ಗಮನ ಕೊಡಲಾಗಿದೆ. ಆಹಾರ ಸುರಕ್ಷತಾ ಅಧಿ ಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿ ಕಾರಿಗಳು ತಿಳಿಸಿದರು.
ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳ ಪಾರ್ಕಿಂಗ್ ಅನ್ನು ಕ್ರಮಬದ್ಧವಾಗಿ ಮಾಡಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ. ಬೆಟ್ಟಕ್ಕೆ ಬರುವವರು ಪ್ಲಾಸ್ಟಿಕ್ಗಳನ್ನು ತರುವಂತಿಲ್ಲ ಎಂದು ತಿಳಿಸಿದರು.
ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಚಾಮುಂಡಿ ಬೆಟ್ಟದಲ್ಲಿನ ಅಂಗಡಿಗಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಚಾಮುಂಡಿ ಬೆಟ್ಟದಲ್ಲಿ ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಕುಡಿಯುವ ನೀರಿನ ರ್ಆ ಓ ಪ್ಲಾಂಟ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಯಾವುದೇ ಪ್ಲ್ಸೆ್ ಬ್ಯಾನರ್ಗಳನ್ನು ಅಳವಡಿಸುವಂತಿಲ್ಲ. ಪಾಸ್ ವ್ಯವಸ್ಥೆ ಇರುವುದಿಲ್ಲ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದರ್ಶನ ಸುಗಮವಾಗಿ ಆಗಬೇಕು. ಬರುವ ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿ ಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಕೆ.ಎಂ.ಗಾಯತ್ರಿ, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ, ಅಪರ ಜಿಲ್ಲಾಧಿ ಕಾರಿಗಳಾದ ಡಾ.ಪಿ. ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಉಪಸ್ಥಿತರಿದ್ದರು.