| ಕೇಂದ್ರ ಸಚಿವ ಕುಮಾರಸ್ವಾಮಿಯವರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಮಹಿಳೆ ವಿರುದ್ಧ ದೂರು | |
| ಬೆಂಗಳೂರು,ಜೂ.20-ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿರುವ ಮಹಿಳೆಯೊಬ್ಬರ ವಿರುದ್ಧ ಜೆಡಿಎಸ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ. | |
| ಮಂಗಳ ಎಂಬ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿಯವರನ್ನು ಕುರಿತು ಅತ್ಯಂತ ಕೀಳು ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮಹಿಳೆ ದುರುದ್ದೇಶಪೂರ್ವಕವಾಗಿ ನಿಂದಿಸಿದ್ದಾರೆ ಎಂದು ಜೆಡಿಎಸ್ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಸ್.ಪಿ. ಅವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. | |
| ನಟ ದರ್ಶನ್ ಅವರ ಮೇಲಿನ ಆರೋಪ ಪ್ರಕರಣಕ್ಕೂ, ಕುಮಾರಸ್ವಾಮಿಯವರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕುಮಾರಸ್ವಾಮಿಯವರ ಹೆಸರನ್ನು ಬಳಸಿ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವುದು ಜೆಡಿಎಸ್ ಪಕ್ಷದ ನಾಯಕರಿಗೆ, ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ. | |
| ಈ ಸಂಬಂಧ ಮಂಗಳ ಮತ್ತು ಅವರ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಅವರು ಕೋರಿದ್ದಾರೆ. |