| ಮಧ್ಯಪ್ರದೇಶ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರೋಹಿತ್ ಆರ್ಯ ಬಿಜೆಪಿಗೆ ಸೇರ್ಪಡೆ ಮಧ್ಯಪ್ರದೇಶ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರೋಹಿತ್ ಆರ್ಯ ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.ಕೇವಲ ಮೂರು ತಿಂಗಳ ಹಿಂದಷ್ಟೇ ಅವರು ವೃತ್ತಿಯಿಂದ ನಿವೃತ್ತಿಯಾಗಿದ್ದರು. ನವದೆಹಲಿ:ಮಧ್ಯಪ್ರದೇಶ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರೋಹಿತ್ ಆರ್ಯ ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.ಕೇವಲ ಮೂರು ತಿಂಗಳ ಹಿಂದಷ್ಟೇ ಅವರು ವೃತ್ತಿಯಿಂದ ನಿವೃತ್ತಿಯಾಗಿದ್ದರು. ಇದನ್ನೂ ಓದಿ: ವರದಿಯ ಪ್ರಕಾರ, ಭೋಪಾಲ್‌ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಆರ್ಯ ಅವರು ಬಿಜೆಪಿ ಮಧ್ಯಪ್ರದೇಶದ ಮುಖ್ಯಸ್ಥ ಡಾ ರಾಘವೇಂದ್ರ ಶರ್ಮಾ ಅವರ ಸದಸ್ಯತ್ವವನ್ನು ಸ್ವೀಕರಿಸಿದರು.ಜಸ್ಟಿಸ್ ಆರ್ಯ ಅವರು 1962 ರಲ್ಲಿ ಜನಿಸಿದ್ದು 1984 ರಲ್ಲಿ ವಕೀಲರಾಗಿ ದಾಖಲಾದರು. ಮುಂದೆ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ 2003 ರಲ್ಲಿ ಹಿರಿಯ ವಕೀಲರಾಗಿ ನೇಮಿಸಲಾಯಿತು.ಅವರು ಪ್ರಮುಖವಾಗಿ ನಾಗರಿಕ ಕಾನೂನು, ವಾಣಿಜ್ಯ ಕಾನೂನು, ಮಧ್ಯಸ್ಥಿಕೆ, ಆಡಳಿತಾತ್ಮಕ ಕಾನೂನು, ಸೇವಾ ಕಾನೂನು, ಕಾರ್ಮಿಕ. ಕಾನೂನು ಮತ್ತು ತೆರಿಗೆ ಕಾನೂನಿನಲ್ಲಿ ಪರಿಣಿತಿಯನ್ನು ಹೊಂದಿದ್ದಾರೆ. ಇದನ್ನೂ ಓದಿ: ಅಷ್ಟೇ ಅಲ್ಲದೆ ಅವರು ಕೇಂದ್ರ ಸರ್ಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟೆಲಿಕಾಂ ಇಲಾಖೆ, ಬಿಎಸ್ ಎನ್ ಎಲ್ ನೌಕರರ ರಾಜ್ಯ ವಿಮಾ ನಿಗಮ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿದರು.ಅವರು 2013 ರಲ್ಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಉನ್ನತೀಕರಿಸಲ್ಪಟ್ಟ ಅವರು 2015 ರಲ್ಲಿ ಕಾಯಂ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಏಪ್ರಿಲ್ 27, 2024 ರಂದು ನಿವೃತ್ತರಾದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |