4dda6192277dcc6b481dad30c206d3576f50b84602ecf54bf577f5e20962af93
Browse files- eesanje/url_46_84_2.txt +6 -0
- eesanje/url_46_84_3.txt +16 -0
- eesanje/url_46_84_4.txt +5 -0
- eesanje/url_46_84_5.txt +9 -0
- eesanje/url_46_84_6.txt +5 -0
- eesanje/url_46_84_7.txt +8 -0
- eesanje/url_46_84_8.txt +6 -0
- eesanje/url_46_84_9.txt +6 -0
- eesanje/url_46_85_1.txt +8 -0
- eesanje/url_46_85_10.txt +11 -0
- eesanje/url_46_85_11.txt +5 -0
- eesanje/url_46_85_12.txt +6 -0
- eesanje/url_46_85_2.txt +8 -0
- eesanje/url_46_85_3.txt +8 -0
- eesanje/url_46_85_4.txt +10 -0
- eesanje/url_46_85_5.txt +6 -0
- eesanje/url_46_85_6.txt +9 -0
- eesanje/url_46_85_7.txt +12 -0
- eesanje/url_46_85_8.txt +5 -0
- eesanje/url_46_85_9.txt +8 -0
- eesanje/url_46_86_1.txt +6 -0
- eesanje/url_46_86_10.txt +4 -0
- eesanje/url_46_86_11.txt +4 -0
- eesanje/url_46_86_12.txt +7 -0
- eesanje/url_46_86_2.txt +3 -0
- eesanje/url_46_86_3.txt +9 -0
- eesanje/url_46_86_4.txt +10 -0
- eesanje/url_46_86_5.txt +10 -0
- eesanje/url_46_86_6.txt +5 -0
- eesanje/url_46_86_7.txt +11 -0
- eesanje/url_46_86_8.txt +5 -0
- eesanje/url_46_86_9.txt +6 -0
- eesanje/url_46_87_1.txt +8 -0
- eesanje/url_46_87_10.txt +5 -0
- eesanje/url_46_87_11.txt +5 -0
- eesanje/url_46_87_12.txt +4 -0
- eesanje/url_46_87_2.txt +7 -0
- eesanje/url_46_87_3.txt +5 -0
- eesanje/url_46_87_4.txt +7 -0
- eesanje/url_46_87_5.txt +9 -0
- eesanje/url_46_87_6.txt +12 -0
- eesanje/url_46_87_7.txt +4 -0
- eesanje/url_46_87_8.txt +5 -0
- eesanje/url_46_87_9.txt +4 -0
- eesanje/url_46_88_1.txt +7 -0
- eesanje/url_46_88_10.txt +5 -0
- eesanje/url_46_88_11.txt +3 -0
- eesanje/url_46_88_12.txt +8 -0
- eesanje/url_46_88_2.txt +9 -0
- eesanje/url_46_88_3.txt +7 -0
eesanje/url_46_84_2.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಪೇಪರ್ ಹಾವು ಬಿಟ್ಟು ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡಲಾಗುತ್ತದೆ : ಜಗದೀಶ್ ಶೆಟ್ಟರ್
|
| 2 |
+
ಹುಬ್ಬಳ್ಳಿ,ಜು.8-ಮುಡಾ ಹಗರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಆಗುತ್ತಿಲ್ಲ. ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡುವ ಕೆಲಸವಾಗುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹೇದೇವಪ್ಪ ಅವರು ನಿನ್ನೆ ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡುವ ಮೂಲಕ ಪೇರ್ಪರ್ಹಾವು ಬಿಟ್ಟಿದ್ದಾರೆ, ಇದು ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡುವ ವ್ಯವಸ್ಥೆ ಆಗಿದೆ ಎಂದು ಹೇಳಿದರು.
|
| 3 |
+
ಮುಡಾ ಹಗರಣದಲ್ಲಿ ಬೇರೆ ಪಕ್ಷದಲ್ಲಿ ಬೇರೆ ಪಕ್ಷದವರು ಇದ್ದಾರೆ, ಬೇರೆಯವರು ಹಗರಣದಲ್ಲಿ ಭಾಗಿಯಾಗಿದ್ದಾರೆ, ಎಲ್ಲ ಶಾಸಕರು ಇದ್ದಾರೆ ಎಂದು ಮಹದೇವಪ್ಪ ನೀಡಿರುವ ಹೇಳಿಕೆ, ಇದೊಂದು ಪೇಪರ್ ಹಾವು ಅಷ್ಟೇ ಆಗಿದ್ದು, ಅವರ ಹುಳುಕೂ ಸಹ ಹೊರಗೆ ಬರುತ್ತದೆ ಎಂದರು.
|
| 4 |
+
ಮುಡಾ ಹಗರಣ ಮುಖ್ಯಮಂತ್ರಿಗಳ ತಲೆಗೆ ಬರತ್ತದೆ ಎಂದು ಅವರನ್ನು ಬಚಾವ್ ಮಾಡಲು ಸುದ್ದಿಗೋಷ್ಠಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬಚಾವ್ ಮಾಡುವ ಕೆಲಸ ಆಗಬಾರದು ಎಂದು ಹೇಳಿದರು.
|
| 5 |
+
ಮಹದಾಯಿ ಯೋಜನೆ ಆರಂಭದ ಕಣಕುಂಬಿಗೆ ಪ್ರವಾಹ ತಂಡ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರದ ನಿಯೋಗ ಬಂದಿದ್ದು ಪರಿಸರ, ಹುಲಿ ಕಾರಿಡಾರ್ ಹಿನ್ನೆಲೆಯಲ್ಲಿ ಬಂದರೆ ಓಕೆ. ಆದರೆ, ಕೇಂದ್ರದ ಇಂತಹ ತಂಡ ಬಂದಾಗ ರಾಜ್ಯ ಸರ್ಕಾರ ಲ್ ಅಲರ್ಟ್ ಆಗಬೇಕಾಗುತ್ತದೆ.
|
| 6 |
+
ರಾಜ್ಯದಿಂದ ಸರಿಯಾದ ರಿಪೋರ್ಟ್ ಹೋಗದೇ ಇದ್ದಾಗ ಕಾನೂನು ತೊಡಕುಗಳು ಆರಂಭವಾಗುತ್ತವೆ ಎಂದರು.ರಾಜ್ಯ ಸರ್ಕಾರ ಮಹದಾಯಿ ವಿಚಾರದಲ್ಲಿ ಗಂಭೀರವಾದ ಪ್ರಯತ್ನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮಹದಾಯಿ ಹೋರಾಟಗಾರರು, ರೈತರು ಸಹ ಎಚ್ಚರಿಕೆ ಕೊಟ್ಟಿದ್ದಾರೆ, ತಂಡ ಬಂದಾಗ ಏನೇನು ಪರಿಶೀಲನೆ ಆಯಿತು, ಏನೆಲ್ಲಾ ವಿಚಾರಣೆ ನಡೆಸಲಾಯಿತು, ಈ ಆಧಾರದ ಮೇಲೆ ರಾಜ್ಯ ಸರ್ಕಾರ ವರದಿ ಕೊಡಬೇಕು ಎಂದು ತಿಳಿಸಿದರು.
|
eesanje/url_46_84_3.txt
ADDED
|
@@ -0,0 +1,16 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ
|
| 2 |
+
ಬೆಂಗಳೂರು ಜು 8– ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ, ಕರ್ತವ್ಯ ಲೋಪಕ್ಕೆ ಇನ್ನೂ ಮುಂದೆ ಕೆಳ ಹಂತದ ಅಧಿಕಾರಿಗಳ ಜೊತೆಗೆ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
|
| 3 |
+
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವರ್ಹಣಾಧಿಕಾರಿಗಳ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ ಹಾಗೂ ಸಿಇಒಗಳು ಜಿಲ್ಲೆಯ ಮಾಹಿತಿಯನ್ನು ಅಂಗೈನಲ್ಲಿ ಇಟ್ಟುಕೊಂಡು ಉತ್ಸಾಹ, ಕ್ರಿಯಾಶೀಲತೆ ಹಾಗೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು, ಜಿಲ್ಲೆಯ ಅಭಿವೃದ್ಧಿಯಾಗಲು ಸಾಧ್ಯ ಎಂದರು.
|
| 4 |
+
ಜಿಲ್ಲಾಧಿಕಾರಿಗಳು ಗಜೆಟಿಯರ್, ಎಕನಾಮಿಕ್ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಜಿಲ್ಲೆಯ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು ಎಂದು ಹೇಳಿದರು.
|
| 5 |
+
ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಇಒ, ಎಸ್ಪಿ ಅಧಿಕಾರಿಗಳ ಪಾತ್ರ ದೊಡ್ಡದು. ಈ ಮೂರು ಜನರು ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದರೆ ಅಭಿವೃದ್ಧಿ ವೇಗ ಪಡೆಯಲು ಸಾಧ್ಯ ಎಂದರು.
|
| 6 |
+
ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ. ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ.
|
| 7 |
+
ಫ್ರೇಸರ್ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಗಾಯಕ್ವಾಡ್, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿ���್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ.
|
| 8 |
+
ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ. ನಮ್ಮ ಜನರು ತಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮಿಂದ ಇದು ಸಾಧ್ಯವಿದೆ ಎಂದು ಹುರಿದುಂಬಿಸಿದರು.
|
| 9 |
+
ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯ ಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಮುಂದೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು. 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ವಿಷಾದಿಸಿದರು.
|
| 10 |
+
ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ . ಕರ್ನಾಟಕ ಗುಡ್ ಗೌರ್ನೆನ್್ಸನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ ಮೇಲಿದೆ ಎಂದರು.
|
| 11 |
+
ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ಸ್ಥಳೀಯವಾಗಿ ಸರಿಯಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಅರ್ಜಿಗಳು ತಮವರೆಗೂ ಬರುತ್ತಿರಲಿಲ್ಲ. ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದೂಡಿ ಮುಚ್ಚಳಿಕೆ ಕೊಟ್ಟು ಕೈ ತೊಳೆದುಕೊಳ್ಳಬಾರದು, ಸಮಸ್ಯೆಗಳಿಗೆ ಪರಿಹಾರ ಕೊಡಿಸಬೇಕು.
|
| 12 |
+
ಅರ್ಜಿಯನ್ನು ಮುಂದೂಡಿಕೆ ಮಾಡಲು ಡಿಸಿಗಳು, ಸಿಇಒಗಳು ಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿಯಾಗದೆ, ಗುಣಾತ್ಮಕವಾಗಿ ವಿಲೇವಾರಿ ಆಗದಿದ್ದರೆ ನಿಮ ವಿರುದ್ಧ ಕ್ರಮ ಖಚಿತ ಎಂದು ಹಿರಿಯ ಅಧಿಕಾರಿಗಳಿಗೆ ಎಚ್ಚರಿಸಿದರು.
|
| 13 |
+
ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ ಡಿಸಿಗಳು, ಸಿಇಒಗಳು ಗಮನ ಹರಿಸಬೇಕು ಎಂದು ಆದೇಶಿಸಿದರು.
|
| 14 |
+
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ ಆರ್ಆರ್ಟಿ (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ. ಡಿಸಿಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. ಡಿಸಿಗಳೇ ಬಾಕಿ ಉಳಿಸಿಕೊಂಡರೆ ಎಸಿಗಳು ಮತ್ತು ತಹಶೀಲ್ದಾರ್ ಗಳಿಗೆ ಡಿಸಿಗಳು ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು.
|
| 15 |
+
ಕೆಲವು ಡಿಸಿಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಇದೇ ರೀತಿ ಕೆಲಸ ಮಾಡಲು ಉಳಿದ ಅಧಿಕಾರಿಗಳಿಗೆ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಯವರು, ಜನರನ್ನು ಅನಗತ್ಯವಾಗಿ ಅಲೆದಾಡಿಸುವುದು ಹಾಗೂ ಕೆಲಸ ಮಾಡಿಕೊಡದೆ ಇರುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
|
| 16 |
+
ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು ಎಂದರು.
|
eesanje/url_46_84_4.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಬೆಡ್ಶೀಟ್ ಸುತ್ತಿಕೊಂಡು ಎಟಿಎಂ ದೋಚಿದ ದರೋಡೆಕೋರರು
|
| 2 |
+
ಬೆಂಗಳೂರು,ಜು.8-ಬೆಡ್ಶೀಟ್ ಸುತ್ತಿಕೊಂಡು ಎಟಿಎಂನೊಳಗೆ ನುಗ್ಗಿದ ದರೋಡೆಕೋರರು ಎಟಿಎಂನಿಂದ 16.56 ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
|
| 3 |
+
ಬೆಳ್ಳಂದೂರಿನ ದೊಡ್ಡಕನ್ನಳ್ಳಿಯಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಮೊನ್ನೆ ಬೆಳಗಿನ ಜಾವ 3.30ರ ಸುಮಾರಿನಲ್ಲಿ ನುಗ್ಗಿದ ದರೋಡೆಕೋರರು ಒಳಬರುತ್ತಿದ್ದಂತೆ ತಮ ಚಹರೆ ಕಾಣಬಾರದು ಎಂದು ಸಿಸಿ ಕ್ಯಾಮರಾಗೆ ಕಪ್ಪು ಸ್ಪ್ರೇ ಸಿಂಪಡಿಸಿದ್ದಾರೆ.
|
| 4 |
+
ನಂತರ ಗ್ಯಾಸ್ ಕಟರ್ ಬಳಸಿ ಎಟಿಎಂ ಮಿಷಿನ್ ಅನ್ನು ಕತ್ತರಿಸಿ ಅದರಲ್ಲಿದ್ದಂತಹ 16,56,800 ರೂ. ಹಣ ಕದ್ದೊಯ್ದಿದ್ದಾರೆ.ದರೋಡೆಕೋರರು ಬೆಡ್ಶೀಟ್ ಸುತ್ತಿಕೊಂಡು ಎಟಿಎಂನೊಳಗೆ ಬಂದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದರೋಡೆಕೋರರು ಹೊಸೂರಿನಲ್ಲಿ ಮತ್ತೊಂದು ಎಟಿಎಂನಲ್ಲಿ ದರೋಡೆ ಮಾಡಿರುವುದು ಗೊತ್ತಾಗಿದೆ.
|
| 5 |
+
ಸುದ್ದಿ ತಿಳಿದು ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.ದರೋಡೆಕೋರರು ಯಾವ ರಸ್ತೆ ಮೂಲಕ ಎಟಿಎಂ ಬಳಿ ಬಂದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
|
eesanje/url_46_84_5.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಹೇಗೆ ನಿಲ್ಲಿಸಲು ಸಾಧ್ಯ..? : ಪರಮೇಶ್ವರ್
|
| 2 |
+
ಬೆಂಗಳೂರು,ಜು.8-ಸರ್ಕಾರದ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿಗೊಳಿಸುವಂತೆ ಕೇಂದ್ರ ಸರ್ಕಾರ ಮೊದಲು ಸೂಚನೆ ನೀಡಲಿ,ಅನಂತರ ರಾಜ್ಯಸರ್ಕಾರ ಆ ಕುರಿತು ಪರಿಶೀಲನೆ ನಡೆಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ರಾಜ್ಯದ ಆಡಳಿತ ನಡೆಸಲು ಜನ ನಮನ್ನು ಆಯ್ಕೆ ಮಾಡಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸಲು ಬಿಜೆಪಿಯವರನ್ನು ಆಯ್ಕೆ ಮಾಡಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಹೇಗೆ ನಿರ್ದೇಶನ ನೀಡಲು ಸಾಧ್ಯ ಎಂದು ಪ್ರಶ್ನಿಸಿದರು.
|
| 3 |
+
ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ಕೇಂದ್ರಸರ್ಕಾರಕ್ಕೆ ಪತ್ರ ಬರೆದು, ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಆರ್ಥಿಕ ಸಂಕಷ್ಟ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ನಾವು ಬಗೆಹರಿಸಿಕೊಳ್ಳುತ್ತೇವೆ. ಆಡಳಿತ ನಡೆಸುವವರು ನಾವು.
|
| 4 |
+
ಪಂಚಖಾತ್ರಿಗಳನ್ನು ವಿಧಿಸುತ್ತವೆ ಎಂದು ಎಂದೂ ಹೇಳಿಲ್ಲ. ಯೋಜನೆಗಾಗಿ 52 ಸಾವಿರ ಕೋಟಿ ರೂ.ಗಳನ್ನು ನಿಗದಿ ಮಾಡಿದ್ದೇವೆ. ಇದರ ಸಾಧಕ-ಬಾಧಕಗಳನ್ನು ನಾವೇ ನಿಭಾಯಿಸಿಕೊಳ್ಳುತ್ತೇವೆ. ಅದನ್ನು ಮೀರಿ ಕೇಂದ್ರ ಸರ್ಕಾರ ಯಾವ ಆಧಾರದ ಮೇಲೆ ನಿರ್ದೇಶನ ನೀಡಲು ಸಾಧ್ಯವಿದೆ. ಮೊದಲು ಆ ರೀತಿಯ ನಿರ್ದೇಶನ ಕೊಡಲಿ ಎಂದು ಸವಾಲು ಹಾಕಿದರು.
|
| 5 |
+
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಆದರೆ ಅಕ್ಕಿ ಖರೀದಿಗೆ ರಾಜ್ಯಸರ್ಕಾರದ ಬಳಿ ಹಣವೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಪ್ರಹ್ಲಾದ್ ಜೋಷಿಯವರು ಅಕ್ಕಿ ನೀಡಲು ಸಿದ್ಧ ಎಂದು ನಾಳೆಯೇ ಪತ್ರ ಬರೆಯಲಿ, ನಾವು ಹೇಗೆ ಸ್ಪಂದಿಸುತ್ತೇವೆ ಎಂದು ಗೊತ್ತಾಗುತ್ತದೆ ಎಂದರು.
|
| 6 |
+
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಯಾವುದನ್ನೂ ಮುಚ್ಚಿ ಹಾಕಲು ರಾಜ್ಯಸರ್ಕಾರ ಯತ್ನಿಸುತ್ತಿಲ್ಲ. ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಮದು ತೆರೆದ ಪುಸ್ತಕವಾಗಿದೆ. ಈ ಬಗ್ಗೆ ಪದೇಪದೇ ಹೇಳುವ ಅಗತ್ಯವಿಲ್ಲ. ಕುಮಾರಸ್ವಾಮಿಯವರು ನೀಡುತ್ತಿರುವ ಹೇಳಿಕೆಯ ಬಗ್ಗೆಯೂ ನಮಗೆ ಮಾಹಿತಿ ಇಲ್ಲ ಎಂದು ಹೇಳಿದರು.ಯಾವುದೇ ಹಗರಣ ನಡೆಯದೇ ಇದ್ದ ಮೇಲೆ ಎಸ್ಐಟಿಯಾಗಲೀ, ಸಿಬಿಐ ತನಿಖೆಯಾಗಲೀ ಅಗತ್ಯವಿಲ್ಲ ಎಂದರು.
|
| 7 |
+
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಗತ್ಯ ರಾಜ್ಯಸರ್ಕಾರಕ್ಕಿಲ್ಲ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಮಾಧ್ಯಮದವರು ಹೇಳಿದರು ಎಂದು ಫಾಸ್ಟ್ ಫಾರ್ಫರ್ಡ್ ಮಾಡಿಕೊಂಡು ತನಿಖೆ ಮಾಡಲಾಗುವುದಿಲ್ಲ. ಅದಕ್ಕೆ ತನ್ನದೇ ಆದ ಪ್ರಕ್ರಿಯೆಗ��ಿವೆ. ಅದನ್ನು ಆಧರಿಸಿ ದೋಷಾರೋಪಣ ಪಟ್ಟಿ ಸಲ್ಲಿಸುತ್ತಾರೆ. ಸಮರ್ಪಕ ಸಾಕ್ಷಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಹೇಳಿದರು.
|
| 8 |
+
ನಾವು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಹೈಕಮಾಂಡ್ನ ನಾಯಕರನ್ನು ಭೇಟಿ ಮಾಡಿದ್ದೇವೆ. ರಾಜ್ಯಸರ್ಕಾರದ ಆಡಳಿತಕ್ಕೆ ವರಿಷ್ಠರು ಶಹಬ್ಬಾಸ್ಗಿರಿ ನೀಡಿದ್ದಾರೆ. ಇದರ ಹೊರತಾಗಿ ಹುದ್ದೆಗಳ ವಿಚಾರವಾಗಿ ಚರ್ಚೆ ಮಾಡಬೇಕು ಎಂದು ಯಾವ ನಿರ್ದೇಶನಗಳನ್ನೂ ನೀಡಿಲ್ಲ. ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೀರಾ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕಳುಹಿಸಿದ್ದಾರೆ ಎಂದರು.
|
| 9 |
+
ಪಿಎಎಸ್ಐ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಹಿಂದೆ ಮೂರು ಅಧಿಸೂಚನೆಗಳನ್ನು ಹೊರಡಿಸಲಾಗಿದ್ದು, ಆ ವಿಷಯದಲ್ಲಿ ಏನೆಲ್ಲಾ ನಡೆದಿದೆ ಎಂದು ಎಲ್ಲರಿಗೂ ಗೊತ್ತು. ಮರುಪರೀಕ್ಷೆಯಾಗಿದೆ. ನ್ಯಾಯಾಲಯ ನಿರ್ದೇಶನ ನೀಡಿದೆ. ಅಂತಿಮವಾಗಿ ಪಟ್ಟಿ ತಯಾರಾಗಿದೆ. ಅಂತಿಮವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಕೆಲ ಸ್ಪಷ್ಟನೆಗಳನ್ನು ಕೇಳಿದೆ. ಅದನ್ನು ನೀಡಿದ ಮೇಲೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಹೇಳಿದರು.
|
eesanje/url_46_84_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವು
|
| 2 |
+
ಹುಬ್ಬಳ್ಳಿ,ಜು.8-ದಿನದಿಂದ ದಿನಕ್ಕೆ ಮಾರಕ ರೋಗ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಡೆಂಘೀ ಲಕ್ಷಣಗಳಿಂದ ನಲುಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಡೆಂಘೀ ಕಾಯಿಲೆಯಿಂದ ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಎಸ್.ಕಮಾರ್ ಹೇಳಿದ್ದಾರೆ.
|
| 3 |
+
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಕ್ಕಳ ವಾರ್ಡ್ನಲ್ಲಿ ಡೆಂಘೀಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್ ಆಸ್ಪತ್ರೆಯ ಮೆಡಿಸನ್ ವಾರ್ಡ್ನಲ್ಲಿ ಯಾವುದೇ ಸಾವು ಆಗಿಲ್ಲ ಎಂದು ತಿಳಿಸಿದ್ದಾರೆ.
|
| 4 |
+
ಧಾರವಾಡ ಜಿಲ್ಲೆಯಲ್ಲಿ ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
|
| 5 |
+
ಸದ್ಯ ಮೆಡಿಸನ್ ವಾರ್ಡ್ನ ಐಸಿಯುವಿನಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳ ವಾರ್ಡ್ನ ಐಸಿಯುವಿನಲ್ಲಿ 18 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
|
eesanje/url_46_84_7.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮೈ ಶುಗರ್ ಸಕ್ಕರೆ ಕಾರ್ಖಾನೆ ವಿದ್ಯುತ್ ಬಿಲ್ ಮನ್ನಾ ಮಾಡುವ ಕಡತ ಮಂಡನೆಗೆ ಸಿಎಂ ಸೂಚನೆ
|
| 2 |
+
ಬೆಂಗಳೂರು,ಜು.8-ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
|
| 3 |
+
ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಅವರು ಮೈಶುಗರ್ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡುವಂತೆ ಮಾಡಿರುವ ಮನವಿಗೆ ಮುಖ್ಯಮಂತ್ರಿಗಳು, ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತರಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
|
| 4 |
+
ಮಂಡ್ಯ ಮೈ ಶುಗರ್ ಕಾರ್ಖಾನೆ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಹೀಗಾಗಿ 52.25 ಕೋಟಿ ರೂ. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಮೈಶುಗರ್ ಸಕ್ಕರೆ ಕಾರ್ಖಾನೆಗೆ ನೋಟಿಸ್ ನೀಡಿತ್ತು. ರೈತರ ಹಿತ ದೃಷ್ಟಿಯಿಂದ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
|
| 5 |
+
ಮನವಿ ಪತ್ರದಲ್ಲೇನಿತ್ತು? :ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ.
|
| 6 |
+
ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂಪಾಯಿಯನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದರು.
|
| 7 |
+
ಕಾರ್ಖಾನೆ ಕೆಲವು ಅನಿವಾರ್ಯ ಕಾರಣಗಳಿಂದ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್ ನೀಡಿದೆ. ವಿದ್ಯುತ್ ಪಾವತಿ ಮಾಡುವಂತೆ ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂಪಾಯಿ ನಷ್ಟದಲ್ಲಿದೆ.
|
| 8 |
+
ಅಷ್ಟೊಂದು ಹಣವನ್ನು ವಿದ್ಯುತ್ ಬಿಲ್ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಇದರಿಂದ ಈಗಾಗಲೇ ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು ಎಂದು ದಿನೇಶ್ ಗೂಳಿಗೌಡ ಅವರು ಮನವಿ ಪತ್ರದಲ್ಲಿ ಸಮಸ್ಯೆಗಳ ತೀವ್ರತೆಯನ್ನು ತಿಳಿಸಿದ್ದರು.
|
eesanje/url_46_84_8.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಡೆಂಘೀ ನಿಯಂತ್ರಣಕ್ಕೆ ಕ್ರಮ ವಹಿಸಲು ಗ್ರಾಮ ಪಂಚಾಯತಿಗಳಿಗೆ ಸೂಚನೆ
|
| 2 |
+
ಬೆಂಗಳೂರು,ಜು.7-ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ವರದಿ ಯಾಗುತ್ತಿರುವ ಹಿನ್ನೆಲೆ ಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
|
| 3 |
+
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ.
|
| 4 |
+
ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು, ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು, ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಛಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.
|
| 5 |
+
ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಮತ್ತು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು, ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮಿಕೊಳ್ಳಬೇಕು ಎಂದು ಸಚಿವರು ತಮ ಮಾರ್ಗದರ್ಶನ ಸೂಚಿಯಲ್ಲಿ ತಿಳಿಸಿದ್ದಾರೆ.
|
| 6 |
+
ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಗಳನ್ನು ಡೆಂಘೀ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಪಂಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
|
eesanje/url_46_84_9.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಡೆಂಘೀಗೆ ಮತ್ತಿಬ್ಬರು ಬಲಿ
|
| 2 |
+
ಬೆಂಗಳೂರು,ಜು.7-ರಾಜ್ಯದಲ್ಲಿ ಮಹಾಮಾರಿ ಡೆಂಘೀ ಅಬ್ಬರ ಜೋರಾಗಿದ್ದು, ಅದರಲ್ಲೂ ಮಕ್ಕಳೇ ಬಲಿಯಾಗುತ್ತಿದ್ದು, ಗದಗ ಜಿಲ್ಲೆಯಲ್ಲಿ ಬಾಲಕನೊಬ್ಬ ಸೋಂಕಿಗೆ ಮೃತಪಟ್ಟಿದ್ದರೆ, ಹಾಸನ ಜಿಲ್ಲೆಯಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದು, ಆತಂಕ ಹೆಚ್ಚಿಸಿದೆ.ಹಾಸನ ಜಿಲ್ಲೆಯಲ್ಲಿ ಇದುವರೆಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಇದೀಗ ಯುವತಿಯೊಬ್ಬಳು ಬಲಿಯಾಗಿರುವ ಘಟನೆ ವರದಿಯಾಗಿದೆ.
|
| 3 |
+
ಹಾಸನ ಜಿಲ್ಲೆಯಲ್ಲಿ ಇದುವರೆಗೆ ಐವರು ಸಾವನ್ನಪ್ಪಿದ್ದು, ನಿಯಂತ್ರಣಕ್ಕೆ ಜಿಲ್ಲಾಡಳಿತ ಹರಸಾಹಸ ಪಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. 224 ಮಂದಿಗೆ ಸೋಂಕು ಪತ್ತೆಯಾಗಿದೆ.ಹೆಚ್ಚಾಗಿ ಮಕ್ಕಳೇ ಶಂಕಿತ ಸೋಂಕಿಗೆ ಬಲಿಯಾಗಿದ್ದಾರೆ. ಗದಗ ತಾಲೂಕಿನ ಶಿರುಂಜ ಗ್ರಾಮಕ್ಕೂ ಸಹ ಸೋಂಕು ಆವರಿಸಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕ ಮೃತಪಟ್ಟಿದ್ದಾನೆ.
|
| 4 |
+
ತೀವ್ರತರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಗದಗದ ಜಿಮ್ಸೌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.ನಿನ್ನೆ ಒಂದೇ ದಿನ 175 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಿಗೆ ಡೆಂಘೀ ಪತ್ತೆಯಾಗಿದೆ.ರಾಜ್ಯದಲ್ಲಿ ಇದುವರೆಗೆ 7 ಸಾವಿರ ಜನರಿಗೆ ಡೆಂಘೀ ಸೋಂಕು ತಗುಲಿದ್ದು, ಜನರಲ್ಲಿ ತೀವ್ರ ಆತಂಕ ಮನೆಮಾಡಿದೆ.
|
| 5 |
+
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಡೆಂಘೀ ಹರಡುವ ಪ್ರದೇಶಗಳಲ್ಲಿ ಲಾರ್ವಾ ಸರ್ವೆ ಮಾಡಲಾಗುತ್ತಿದ್ದು, ಲಾರ್ವಾ ಸೊಳ್ಳೆ ನಾಶಕ್ಕೆ ಫಾಗಿಂಗ್ ಮಾಡಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೂ ಸಹ ಸೊಳ್ಳೆಗಳ ನಿಯಂತ್ರಣಕ್ಕೆ ಪಾಲಿಕೆ ಅಗತ್ಯ ಕ್ರಮ ಕೈಗೊಂಡಿದ್ದು, ದಿನಕ್ಕೆ 2-3 ಬಾರಿ ಫಾಗಿಂಗ್ ಮಾಡಲಾಗುತ್ತಿದೆ.
|
| 6 |
+
ಯಾವುದೇ ಕಾರಣಕ್ಕೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಕ್ರಮ ವಹಿಸಿ, ಸೊಳ್ಳೆಗಳ ಉತ್ಪತ್ತಿಯಾಗದಂತೆ ಎಚ್ಚರ ವಹಿಸಿ. ಆದಷ್ಟು ಮಕ್ಕಳನ್ನು ಸುರಕ್ಷತೆಯಿಂದ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
|
eesanje/url_46_85_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮೋದಿ ಸರ್ಕಾರದ ಜೊತೆ ಸಿದ್ದರಾಮಯ್ಯ ಅನಗತ್ಯವಾಗಿ ಕಾಲುಕೆರೆದು ಜಗಳಮಾಡುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ
|
| 2 |
+
ಬೆಂಗಳೂರು, ಜು.7– ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಕಾಲುಕೆರೆದು ಜಗಳ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
|
| 3 |
+
ಕೇಂದ್ರದ ಜೊತೆ ಸುಖಾಸುಮನೆ ಜಗಳ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲಾ ರಾಜ್ಯಗಳು ಕೇಂದ್ರದ ಜೊತೆ ಸೌಹಾರ್ದಯುತವಾದ ವಾತಾವರಣ ಮೂಡಿಸಿ ಕೆಲಸ ಮಾಡಿಕೊಳ್ಳುತ್ತವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಕೇಂದ್ರದ ಜೊತೆ ದುರದ್ದೇಶಪೂರ್ವಕವಾಗಿ ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಕುಮಾರಸ್ವಾಮಿ ದೂಡಿದ್ದಾರೆ.
|
| 4 |
+
ಪಿಟಿಐಗೆ ಸಂದರ್ಶನ ನೀಡಿರುವ ಅವರು ಕೇಂದ್ರದ ಜೊತೆ ನೀವು ಜಗಳ ಮಾಡುವುದರಿಂದ ಯಾವ ಪ್ರಯೋಜನವೂ ಇಲ್ಲ. ಅಲ್ಲಿನ ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆದರೆ ರಾಜ್ಯಕ್ಕೆ ಅನುಕೂಲವಾಗಲಿದೆ. ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿ ಎಂಬ ಮಾತ್ರಕ್ಕೆ ಪ್ರತಿ ದಿನ ಕುಂಟು ಲಾಭ ಹೇಳುತ್ತಿದ್ದಾರೆ. ಇದರಿಂದ ನಿಮಗೆ ಏನು ಲಾಭ ಸಿಗುತ್ತದೆ ಎಂದು ಪ್ರಶ್ನಿಸಿದ್ದಾರೆ.
|
| 5 |
+
ಅನಗತ್ಯವಾಗಿ ನೀವು ಕೇಂದ್ರದ ಜೊತೆ ಸಂಘರ್ಷ ಮಾಡುವುದನ್ನು ನಿಲ್ಲಿಸಿ. ಅಧಿಕಾರಕ್ಕೆ ಬಂದ ಮೊದಲ ದಿನವೇ ಟೀಕೆ ಮಾಡುವುದು, ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
|
| 6 |
+
ಏನೇ ಸಮಸ್ಯೆಗಳಿದ್ದರೂ ಕೂತು ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಆದರೆ ಕಾಂಗ್ರೆಸ್ ನಾಯಕರು, ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಮಾತಿನಲ್ಲೇ ಛಾಟಿ ಬೀಸಿದ್ದಾರೆ.
|
| 7 |
+
ಕೇಂದ್ರದಲ್ಲಿ ಆಡಳಿತಾರೂಢ ಎನ್ಡಿಎಯ ಭಾಗವಾಗಿರುವ ಜೆಡಿ (ಎಸ್) ನಾಯಕ, ಪ್ರಧಾನಿ ನರೇಂದ್ರ ಮತ್ತು ಬಿಜೆಪಿ ನಾಯಕತ್ವವು ತನ್ನ ಮೇಲೆ ವಿಶ್ವಾಸವನ್ನು ಹೊಂದಿದೆ ಮತ್ತು ಅವರ ನಿರೀಕ್ಷೆಗಳನ್ನು ಈಡೇರಿಸಲು ಅವರು ಬಯಸುತ್ತಾರೆ ಎಂದು ಹೇಳಿದರು.ಯುವ ಪೀಳಿಗೆಗೆ ಉದ್ಯೋಗ ಸೃಷ್ಟಿಸುವುದು ಪ್ರಧಾನಮಂತ್ರಿಯವರ ದೃಷ್ಟಿಯಾಗಿದೆ ಮತ್ತು ಅದರ ಬಗ್ಗೆ ನಾನು ಕೂಡ ಗಮನಹರಿಸಿದ್ದೇನೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೇರಿಸಿದರು.ಲೋಕಸಭೆ ಚುನಾವಣೆಯ ನಂತರ ಪ್ರಧಾನಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಮೇಲೆ ಸ್ವಲ್ಪ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಹೇಳಿದರು.
|
| 8 |
+
ಜಿಡಿಪಿ ಬೆಳವಣಿಗೆ ಮತ್ತು ಉದ���ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಎರಡು ಸೂಕ್ಷ್ಮ ಇಲಾಖೆಗಳ ಜವಾಬ್ದಾರಿಯನ್ನು ಪ್ರಧಾನಿ ನನಗೆ ನೀಡಿದ್ದಾರೆ. ಉಕ್ಕು ಮತ್ತು ಭಾರೀ ಕೈಗಾರಿಕೆ ಇಲಾಖೆಗಳನ್ನು ವಹಿಸಿರುವುದರಿಂದ ತಮ ಇಲಾಖೆಯ ಅಧ್ಯಯನಕ್ಕೆ ಕನಿಷ್ಠ ಮೂರು ತಿಂಗಳ ಅಗತ್ಯವಿದೆ ಎಂದರು.
|
eesanje/url_46_85_10.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಡ್ರಗ್ಸ್, ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕದಿದ್ದರೆ ಪೊಲೀಸ್ ಅಧಿಕಾರಿಗಳೇ ಹೊಣೆ : ಸಿಎಂ ಖಡಕ್ ಎಚ್ಚರಿಕೆ
|
| 2 |
+
ಬೆಂಗಳೂರು,ಜು.6-ತಮ್ಮ ವ್ಯಾಪ್ತಿಯಲ್ಲಿನ ಕ್ಲಬ್, ಇಸ್ಪೀಟು, ಬೆಟ್ಟಿಂಗ್, ಡ್ರಗ್ಸ್ ದಂಧೆಗಳನ್ನು ನಿಲ್ಲಿಸದಿದ್ದರೆ ಎಸ್ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.
|
| 3 |
+
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024 ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಎಸ್ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ನಿಮ ವ್ಯಾಪ್ತಿಯಲ್ಲಿನ ಕ್ಲಬ್, ಇಸ್ಪೀಟ್, ಬೆಟ್ಟಿಂಗ್ ದಂಧೆಗಳನ್ನು ತಪ್ಪಿಸಬಹುದು ಎಂದು ಹೇಳಿದರು.
|
| 4 |
+
ಎಸ್ಪಿ-ಡಿಸಿಪಿ-ಐಜಿಗಳು ಪೊಲೀಸ್ ಮ್ಯಾನುಯೆಲ್ ವ್ಯಾಪ್ತಿಯ ಪ್ರಕಾರ, ಪ್ರತೀ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸ್ಪಷ್ಟ ಸೂಚನೆ ನೀಡಿದ ಸಿಎಂ, ನಾಳೆಯಿಂದಲೇ ಠಾಣೆಗಳಿಗೆ ಭೇಟಿ ನೀಡಬೇಕು, ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು, ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಎಚ್ಚರಿಸಿದರು.
|
| 5 |
+
ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ :ಫೇಕ್ ನ್ಯೂಸ್ಗಳು ಸಮಾಜದ ನೆಮದಿಗೆ ಕಂಠಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ ಫ್ಯಾಕ್ಟ್ಚೆಕ್ ಘಟಕಗಳನ್ನು ಮಾಡಿದ್ದೇವೆ, ಆದರೂ ಫೇಕ್ ನ್ಯೂಸ್ಗಳು ಹೆಚ್ಚಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಕಾಗುತ್ತಿಲ್ಲ ಎಂದು ಎಚ್ಚರಿಸಿದರು.ಕೃತಕ ಬುದ್ಧಿಮತ್ತೆ ಬಳಸಿ ಸ್ವಯಂಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದೂರುಗಳನ್ನು ದಾಖಲಿಸಿ, ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕೆಂದು ಸ್ಪಷ್ಟ ಸೂಚನೆ ನೀಡಿದರು.
|
| 6 |
+
ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ? :ಡ್ರಗ್್ಸ ಮಾರುವವರು ಯಾರು?, ರೌಡಿಗಳು ಯಾರು, ರಿಯಲ್ ಎಸ್ಟೇಟ್ ಮಾಡುವವರು ಯಾರು ಎನ್ನುವುದು ಆಯಾ ಠಾಣಾ ಅಧಿಕಾರಿಗಳಿಗೆ ಗೊತ್ತಿರುತ್ತೆ. ಆದರೂ ಏಕೆ ನಿಲ್ಲುತ್ತಿಲ್ಲ ಎಂದು ಪ್ರಶ್ನಿಸಿದರು. ನಿಮಗೆ ಗನ್ಗಳನ್ನು ಕೊಟ್ಟಿರುವುದು ಏಕೆ?, ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ?, ರೌಡಿಗಳಿಗೆ ಪೊಲೀಸ್ ಭಯವಿರಬೇಕು ಎಂದು ಎಚ್ಚರಿಸಿದರು.ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
|
| 7 |
+
ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ ಪೊಲೀಸ್ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು ಎಂದರು.ಸಮಾಜದ���್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯ ಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು. ಮಹಾತಗಾಂಧಿ ಅವರ ಮಾತು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
|
| 8 |
+
ಕಾನೂನು ಸುವ್ಯವಸ್ಥೆ ಸುರಕ್ಷಿತವಾಗಿದ್ದರೆ ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯ. ಇವೆಲ್ಲದರಿಂದ ತಲಾ ಆದಾಯ, ಜಿಡಿಪಿ ಬೆಳವಣಿಗೆ ಆಗುತ್ತ್ತದೆ. ನಮ ಸಮಾಜ ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆಯಿಂದ ಕೂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ನಿಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ ಕೆಳಗಿನ ಅಧಿಕಾರಿಗಳು ಇನ್ನಷ್ಡು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಬೀಟ್ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸೂಚನೆ ನೀಡಿದರು.
|
| 9 |
+
ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು. ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು ಎಂದರು.
|
| 10 |
+
ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ಗೆ ಅಭಿನಂದಿಸಿದ ಸಿಎಂ :ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.
|
| 11 |
+
ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಅವರುಗಳು ಉಪಸ್ಥಿತರಿದ್ದರು.
|
eesanje/url_46_85_11.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಬಿನಿ, ಕೆಆರ್ಎಸ್ನಲ್ಲಿ ನೀರಿನ ಮಟ್ಟ ಹೆಚ್ಚಳ
|
| 2 |
+
ಬೆಂಗಳೂರು,ಜು.6-ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ಕೇರಳ, ಕೊಡಗು, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳ ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿದೆ. ಕಬಿನಿ ಜಲಾಶಯ ಭರ್ತಿಯಾಗಲು ಕೇವಲ 3 ಅಡಿ ಮಾತ್ರ ಬಾಕಿಯಿದೆ. 2284 ಅಡಿ ಗರಿಷ್ಠ ಸಾಮರ್ಥ್ಯ ಇರುವ ಕಬಿನಿ ಜಲಾಶಯದಲ್ಲಿ ಇಂದು 2281.32 ಅಡಿ ಸಂಗ್ರಹವಾಗಿದೆ. ಅಂದರೆ 19.52 ಟಿಎಂಸಿ ಗರಿಷ್ಠ ಸಾಮರ್ಥ್ಯವಿದೆ.
|
| 3 |
+
17.82 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಸುಮಾರು ಇನ್ನು ಒಂದು ಟಿಎಂಸಿ ನೀರು ಬಂದರೆ ಪೂರ್ಣವಾಗಿ ಭರ್ತಿಯಾಗಲಿದೆ. 5500ಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು, 4000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯಕ್ಕೆ 6 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು 101 ಅಡಿಗೆ ತಲುಪಿದೆ. 49.452 ಅಡಿ ಟಿಎಂಸಿ ಗರಿಷ್ಠ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿ ಇಂದು 23.523 ಟಿಎಂಸಿ ನೀರಿದೆ. ಇನ್ನು ಶೇ.50ರಷ್ಟು ನೀರು ಜಲಾಶಯಕ್ಕೆ ಇನ್ನೂ ಬಂದಿಲ್ಲ.
|
| 4 |
+
ಕಬಿನಿ ಮತ್ತು ಕಾವೇರಿ ಜಲನಯನ ಭಾಗದಲ್ಲಿ ಮಳೆಯ ಪ್ರಮಾಣ ಏರಿಳಿತವಾದಂತೆ ಈ ಜಲಾಶಯಗಳಿಗೆ ಬರುವ ಒಳಹರಿವಿನಲ್ಲೂ ವ್ಯತ್ಯಾಸವಾಗುತ್ತಿದೆ. ಇನ್ನು ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಇನ್ನಷ್ಟು ನೀರು ಜಲಾಶಯಗಳಿಗೆ ಹರಿದುಬರಲಿದೆ.
|
| 5 |
+
ಇದೇ ರೀತಿ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತುಂಗಭದ್ರ, ಲಿಂಗನಮಕ್ಕಿ, ವರಾಹಿ, ಸೂಪಾ ಜಲಾಶಯಗಳಿಗೂ ಒಳಹರಿವು ಹೆಚ್ಚಳವಾಗಿದೆ.ಕೃಷ್ಣಾ ಕೊಳ್ಳದ ಘಟಪ್ರಭಾ, ಮಲಪ್ರಭಾ ಜಲಾಶಯಗಳ ಒಳಹರಿವು ಕೂಡ ಹೆಚ್ಚುತ್ತಿದ್ದು, ನೀರಿನ ಸಂಗ್ರಹವು ಏರಿಕೆ ಕಂಡಿದೆ.
|
eesanje/url_46_85_12.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ಅಧಿಕಾರ ಎಚ್ಡಿಡಿ-ಎಚ್ಡಿಕೆಗೆ
|
| 2 |
+
ಬೆಂಗಳೂರು,ಜು.6– ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ.
|
| 3 |
+
ಜೆಪಿಭವನದಲ್ಲಿಂದು ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆ ಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕುಮಾರಸ್ವಾಮಿ ಅವರು ಲೋಕಸಭೆಗೆ ಚುನಾಯಿತರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಶಾಸಕಾಂಗ ಪಕ್ಷದ ಸ್ಥಾನ ತೆರವಾಗಿದೆ. ಆ ಸ್ಥಾನಕ್ಕೆ ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ಎಚ್.ಡಿ. ರೇವಣ್ಣ ಸೇರಿದಂತೆ ಹಲವರ ಹೆಸರು ಗಳು ಕೇಳಿಬಂದಿವೆ. ದೇವೇಗೌಡರು ಮತ್ತು ಕುಮಾರಸ್ವಾಮಿಯವರು ನೇಮಕ ಮಾಡುವವರು ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ.
|
| 4 |
+
ಮಳೆಗಾಲದ ಅಧಿವೇಶನದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು, ಜನರ ಸಮಸ್ಯೆಗಳನ್ನು ಹೇಗೆ ಪ್ರಸ್ತಾಪಿಸಬೇಕು ಎಂಬ ಬಗ್ಗೆ ಕುಮಾರಸ್ವಾಮಿ ಶಾಸಕರಿಗೆ ಮಾರ್ಗ ದರ್ಶನ ಮಾಡಿದ್ದಾರೆ.ಪೂರ್ವ ಸಿದ್ದತೆ ಮಾಡಿಕೊಂಡು ಅಧಿವೇಶನದಲ್ಲಿ ಭಾಗಿಯಾಗಬೇಕು, ಜನರು ಅಧಿವೇಶನದಲ್ಲಿ ನಾವು ನಡೆಸುವ ಹೋರಾಟ ಬೆಳಕು ಚೆಲ್ಲುವ ವಿಚಾರವನ್ನು ಗಮನಿಸುತ್ತಾರೆ.
|
| 5 |
+
ಕ್ಷೇತ್ರದ ಸಮಸ್ಯೆಗಳಿಗೂ ಆದ್ಯತೆ ನೀಡಬೇಕು, ಪ್ರಶ್ನೋತ್ತರ ಅವಧಿ ಮಹತ್ತರವಾದುದು ಎಲ್ಲರೂ ತಪ್ಪದೇ ಅಧಿವೇಶನದಲ್ಲಿ ಪಾಲ್ಗೊಳ್ಳ ಬೇಕು, ಸಮರ್ಥವಾಗಿ ಜನರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.ಸದನದಲ್ಲಿ ವಿಷಯಾಧಾರಿತ ಹೋರಾಟ ಮಾಡಬೇಕು, ಪಕ್ಷ ಸಂಘಟನೆಗೂ ಒತ್ತು ಕೊಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
|
| 6 |
+
ಸಭೆಯಲ್ಲಿ ಶಾಸಕರಾದ ಸುರೇಶ್ ಬಾಬು, ವೆಂಕಟಶಿವಾ ರೆಡ್ಡಿ, ಸಮೃದ್ದಿ ಮಂಜುನಾಥ್, ಸ್ವರೂಪ್, ಎಂ.ಪಿ.ಕೃಷ್ಣಪ್ಪ, ಶಾರದಾ ಪುರ್ಯಾ ನಾಯಕ್, ಹರೀಶ್ಗೌಡ, ನೇಮಿರಾಜ ನಾಯಕ್, ಜವರಾಯಿಗೌಡ, ತಿಪ್ಪೇಸ್ವಾಮಿ, ಕರೆಮ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತ, ಬಂಡೆಪ್ಪ ಕಾಶಂಪುರ್, ವೆಂಕಟರಮಣ ನಾಡಗೌಡ, ಅಲ್ಕೋಡ್ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ಪಾಲ್ಗೊಂಡಿದ್ದರು.
|
eesanje/url_46_85_2.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿಎಂ-ಡಿಸಿಎಂ ವಿಚಾರ ಹಾದಿ-ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಸಚಿವ ಆರ್.ಬಿ. ತಿಮ್ಮಾಪುರ
|
| 2 |
+
ಹುಬ್ಬಳ್ಳಿ, ಜು.7-ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ ಬೀದಿಯಲ್ಲಿ ಮಾತನಾಡುವ ವಿಷಯವಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅದರದ್ದೇ ಆದ ಘನತೆ, ಮಹತ್ವ ಇರುತ್ತದೆ. ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ.
|
| 3 |
+
ಇದಕ್ಕಾಗಿ ಒಂದು ರೂಪುರೇಷೆ ಇದೆ. ಹೈಕಮಾಂಡ್ ಇದೆ, ಸಿಎಲ್ಪಿ ಇದೆ. ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಎಲ್ಲೆಂದರಲ್ಲಿ ಚರ್ಚೆ ಮಾಡಬಾರದು ಎಂದು ಹೇಳಿದರು.ಮಾಧ್ಯಮದವರೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡ್ತಾ ಇದ್ದೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
|
| 4 |
+
ಎಸ್ಸಿಎಸ್ಪಿ/ ಟಿಎಸ್ಪಿ ಅನುದಾನ ದುರ್ಬಳಕೆಯಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ದುರ್ಬಳಕೆ ಆಗುತ್ತಿಲ್ಲ. ವಾಸ್ತವಾಂಶ ನೋಡಬೇಕು ಎಂದರು.ಹಿಂದುಳಿದ ಜನಾಂಗಕ್ಕೆ ಸಹಾಯ ಮಾಡುವ ಪ್ರವೃತ್ತಿ ಮುಖ್ಯಮಂತ್ರಿಗಳಲ್ಲಿ ಇದೆ. ಯಾವುದೇ ರೀತಿಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಿಲ್ಲ. ಈಗಾಗಲೇ ಸಿಎಂ ಅವರೇ ತಂದ ಕಾನೂನು ಇದು. ಹೆಚ್ಚಿಗೆ ಅನುದಾನ ಕೊಡುತ್ತಿದ್ದಾರೆ. ಇದರಲ್ಲಿ ವಿಪಕ್ಷದವರು ಹುಳುಕು ಹುಡುಕುತ್ತಿದ್ದಾರೆ ಎಂದರು.
|
| 5 |
+
ಅಬಕಾರಿ ಇಲಾಖೆಯಲ್ಲಿ ಬಾರ್ ವ್ಯಾಪಾರಸ್ಥರಿಗಾಗಿ ವ್ಯಾಪಾರ ಸ್ನೇಹಿ ಅದಾಲತ್ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಂತಹ ವಿಚಾರ ಬಹಳ ದಿನಗಳಿಂದ ಇದೆ. ನಮ ಇಲಾಖೆಯಲ್ಲಿ ಇದು ಆಗಬೇಕಾಗಿದೆ. ಗೋವಾದಲ್ಲಿ ಲಿಕ್ಕರ್ ಬಹಳ ಕಡಿಮೆ ದರದಲ್ಲಿ ಸಿಗುತ್ತದೆ. ಅಲ್ಲಿ ಯಾವುದೇ ತೆರಿಗೆ ಇಲ್ಲ. ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಸ್ಪಿರಿಟ್ ಹೋಗುತ್ತದೆ. ಅದನ್ನು ಮೊದಲು ತಡೆಗಟ್ಟಬೇಕು. ನಮ ರಾಜ್ಯದ ಲಿಕ್ಕರ್ ಚೆನ್ನಾಗಿದೆ. ಬೇರೆ ರಾಜ್ಯದ ಕಳಪೆ ಲಿಕ್ಕರ್ ನಮ ರಾಜ್ಯಕ್ಕೆ ಬರದಂತೆ ಕಡಿವಾಣ ಹಾಕಬೇಕಾಗಿದೆ ಎಂದರು.
|
| 6 |
+
ಮದ್ಯದ ದರ ಏರಿಕೆ ಇಲ್ಲ:ಮದ್ಯದ ದರ ಏರಿಕೆ ಕೇವಲ ಊಹಾಪೋಹ. ಎಂಎಸ್ ಐಎಸ್ಗಳಿಗೆ ಇನ್ನು ಮುಂದೆ ಪರವಾನಗಿ ಕೊಡದಿರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಾರ್ಗಳಿಗೆ ತೊಂದರೆಯಾಗುತ್ತದೆ ಎಂಬುದಕ್ಕೆ ಅಲ್ಲ, ಇದೊಂದು ಆಡಳಿತಾತಕ ನಿರ್ಧಾರ ಎಂದು ಹೇಳಿದರು.
|
| 7 |
+
ಮುಡಾ ಹಗರಣ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿಯವರು ಕೆಲಸವಿಲ್ಲದೆ ಒತ್ತಡ ಮಾಡುತ್ತಿದ್ದಾರೆ.ಮುಖ್ಯಮಂತ್ರಿಗಳ ಘನತೆಗೆ ಧಕ್ಕೆ ತರಲು ಬಿಜೆಪಿ ಈ ಆಗ್ರಹ ಮಾಡುತ್ತಿದೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ. ಅವರ ಸರ್ಕಾರ ಇದ್ದಾಗಲೇ ಮಾಡಿದ್ದು ಈಗ ಸಿಬಿಐಗೆ ಒತ್ತಡ ಮಾಡುತ್ತಿದ್ದಾರೆ ಎಂದು ಹೇಳಿದರು.
|
| 8 |
+
ಬಡವರ ಬಗ್ಗೆ ಕಾಳಜಿ ��ದ್ದರೆ ರಾಜ್ಯಕ್ಕೆ ಅಕ್ಕಿ ಕೊಡಬೇಕು. ಅವರಿಗೆ ಕೇವಲ ಹಿಂದುತ್ವ, ಜಾತಿ, ಧರ್ಮದ ವಿವಾದ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
|
eesanje/url_46_85_3.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ವಾಹನಗಳಿಗೆ ಹೈಬೀಮ್ ಹೆಡ್ಲೈಟ್ ಬಳಕೆ : 4 ದಿನದಲ್ಲಿ 5 ಸಾವಿರ ಕೇಸ್ ದಾಖಲು
|
| 2 |
+
ಬೆಂಗಳೂರು,ಜು.7-ವಾಹನಗಳಿಗೆ ಹೆಚ್ಚು ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವ ಹೈಬೀಮ್ ಹೆಡ್ಲೈಟ್ ಬಳಸಿ ವಾಹನ ಚಲಾಯಿಸುತ್ತಿದ್ದ ಚಾಲಕರಿಗೆ ರಾಜ್ಯ ಪೊಲೀಸರು ಬಿಸಿ ಮುಟ್ಟಿಸಿದ್ದು, ನಾಲ್ಕು ದಿನಗಳ ಅವಧಿಯಲ್ಲಿ 5 ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
|
| 3 |
+
ನಗರದಲ್ಲಿ 2,153 ಪ್ರಕರಣ, ಮೈಸೂರು 302, ತುಮಕೂರು 237, ಉ.ಕನ್ನಡ 236, ರಾಯಚೂರು 260, ವಿಜಯನಗರ 182 ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ ಜುಲೈ 1 ರಿಂದ 4 ರವರೆಗೆ 5 ಸಾವಿರ ಪ್ರಕರಣಗಳು ದಾಖಲಾಗಿವೆ.
|
| 4 |
+
ಹೆಚ್ಚು ಬೆಳಕು ಹೊರಸೂಸುವಂತಹ ಎಲ್ಇಡಿ ದೀಪಗಳಿಂದ ಎದುರುಗಡೆ ಬರುವ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
|
| 5 |
+
ಈ ಬಗ್ಗೆ ಈ ಹಿಂದೆಯೇ ರಾಜ್ಯ ರಸ್ತೆ ಹಾಗೂ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು, ಹೈಬೀಮ್ ಲೈಟ್ ಬಳಸದಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದರೂ ಸಹ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ.ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ 500 ರೂ., ಎರಡನೇ ಬಾರಿ 1,000 ರೂ. ದಂಡ ವಿಧಿಸಲಾಗುತ್ತದೆ.
|
| 6 |
+
ಈ ಬಗ್ಗೆ ಅಲೋಕ್ಕುಮಾರ್ರವರು ಪ್ರತಿಕ್ರಿಯಿಸಿ, ವಾಹನಗಳಲ್ಲಿ ಪ್ರಖರ ಬೆಳಕು ಹೊರಸೂಸುವಂತಹ ಎಲ್ಇಡಿ ದೀಪ ಬಳಸುವುದರಿಂದ ಅಪಘಾತಗಳು ಸಂಭವಿಸಿ ಸಾವು-ನೋವುಗಳು ಹೆಚ್ಚಾಗುತ್ತಿವೆ. ಹಾಗಾಗಿ ವಾಹನ ಸವಾರರು ಕೇಂದ್ರ ಮೋಟಾರು ಕಾಯಿದೆಯ ಮಾರ್ಗಸೂಚಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.
|
| 7 |
+
ವಾಹನಗಳಲ್ಲಿ ಸೂಕ್ತವಾದ ಹೆಡ್ಲೈಟ್ ಬಳಸದಿದ್ದರೆ ಇತರ ವಾಹನ ಚಾಲಕರಿಗೆ ಅಡ್ಡಿಯುಂಟಾಗಿ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ. ವಾಹನದ ಮುಂಬದಿಯ ರಸ್ತೆ ಗೋಚರಿಸದಿದ್ದಾಗ, ಮಂಜು, ಹೊಗೆ, ಮಳೆ, ದಟ್ಟ ಕತ್ತಲು ಕವಿದ ಸಂದರ್ಭಗಳಲ್ಲಿ ಮಾತ್ರ ಹೈಬೀಮ್ ಲೈಟ್ ಬಳಸಬಹುದಾಗಿದೆ.
|
| 8 |
+
ಒಂದು ವೇಳೆ ನಿಮಗೆ ರಸ್ತೆ ಕಾಣಿಸದಿದ್ದಾಗ ಅಥವಾ ನಿಮ ಎದುರಿನಿಂದ ಯಾವುದೇ ವಾಹನ ಬರುತ್ತಿಲ್ಲ ಎಂದರಷ್ಟೇ ಇಂತಹ ಹೈಬೀಮ್ ಲೈಟ್ ಬಳಸಬಹುದಾಗಿದೆ.ಜನವಸತಿ ಪ್ರದೇಶಗಳಲ್ಲಿ, ನಗರ ಪ್ರದೇಶದಲ್ಲಿ, ವಾಹನಗಳು ಬರುತ್ತಿದ್ದಾಗ, ಸಂಚಾರ ದಟ್ಟಣೆ ಇರುವ ಕಡೆಗಳಲ್ಲಿ ಹೈಬೀಮ್ ಲೈಟ್ ಬಳಸುವುದನ್ನು ನಿಷಿದ್ಧವಾಗಿದೆ ಎಂದು ಅಲೋಕ್ ಕುಮಾರ್ರವರು ತಿಳಿಸಿದ್ದಾರೆ.
|
eesanje/url_46_85_4.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಡೆಂಘೀ ಹಾವಳಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ, ಜನರ ನರಳಾಟ
|
| 2 |
+
ಬೆಂಗಳೂರು,ಜು.7-ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ತೀವ್ರಗೊಂಡಿರುವ ನಡುವೆಯೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಕಂಡುಬಂದಿದ್ದು, ಜನಸಾಮಾನ್ಯರು ಸಂಕಷ್ಟಕ್ಕೀಡಾಗುವಂತಾಗಿದೆ.
|
| 3 |
+
ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಮಲ್ ಹೊರತುಪಡಿಸಿದರೆ, ಉಳಿದ ಔಷಧಿಗಳ ಕೊರತೆ ತೀವ್ರವಾಗಿ ಕಾಡುತ್ತಿವೆ. ಸರ್ಕಾರದಿಂದ ಔಷಧಿ ಖರೀದಿಗೆ ಸರಿಯಾದ ಅನುದಾನ ದೊರೆಯುತ್ತಿಲ್ಲ ಎಂಬ ಆರೋಪಗಳು ತೀವ್ರವಾಗಿವೆ.
|
| 4 |
+
ರಾಜ್ಯಸರ್ಕಾರ ಯಾವುದೇ ಆರೋಗ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವಸನ್ನದ್ಧವಾಗಿದೆ ಎಂಬ ಹೇಳಿಕೆಗಳು ಪದೇಪದೇ ಕೇಳಿಬರುತ್ತಿವೆ. ಆದರೆ, ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿವೆ.
|
| 5 |
+
ಸುಮಾರು ಏಳೆಂಟು ಸಾವಿರ ಮಂದಿ ಈ ಸೋಂಕಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಅವರ ಚಿಕಿತ್ಸೆಗೆ ಅಗತ್ಯವಾದ ಔಷಧೋಪಾರಗಳು ಹಾಗೂ ಪ್ರಯೋಗಾಲಯದ ಸಲಕರಣೆಗಳ ಕೊರತೆ ಎದುರಾಗಿದೆ ಎಂದು ಹೇಳಲಾಗಿದೆ.
|
| 6 |
+
ಸಾಮಾನ್ಯವಾಗಿ ಪ್ರತಿ ವರ್ಷ ಆಗಸ್ಟ್ನಿಂದ ಸೆಪ್ಟಂಬರ್ ನಡುವೆ ಡೆಂಘೀ ಪ್ರಕರಣಗಳು ಹೆಚ್ಚಾಗುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿನಿಂದ ಎದುರಾಗಬಹುದಾದ ಸಮಸ್ಯೆಗೆ ಸರ್ಕಾರ ಪೂರ್ವತಾಲೀಮು ನಡೆಸಿತ್ತು. ಆದರೆ ಡೆಂಘೀ ಸಮಸ್ಯೆ ಒಂದು ತಿಂಗಳು ಮುಂಚಿತವಾಗಿಯೇ ಎದುರಾಗಿದ್ದು, ರಾಜ್ಯ ಸರ್ಕಾರಕ್ಕೆ ಗಲಿಬಿಲಿ ಉಂಟುಮಾಡಿದೆ.
|
| 7 |
+
ಹಲವಾರು ವರ್ಷಗಳಿಂದ ಸರ್ಕಾರಿ ಆಸ್ಪತ್ರೆಗಳ ಔಷಧಿ ಪೂರೈಕೆಯ ಪ್ರಮಾಣ ಶೇ.30ರಿಂದ ಶೇ.40 ಕ್ಕೆ ಕಡಿತ ಮಾಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ನೂರು ರೋಗಿಗಳು ಚಿಕಿತ್ಸೆ ಪಡೆದರೆ, ಅವರಲ್ಲಿ ಶೇ. 30 ಮಂದಿಗೆ ಔಷಧಿ ಕೊಡುವಷ್ಟು ಮಾತ್ರ ಪೂರೈಕೆ ಇದೆ ಎಂದು ಹೇಳಲಾಗುತ್ತಿತ್ತು.
|
| 8 |
+
ಇತ್ತೀಚೆಗೆ ರಾಜ್ಯಸರ್ಕಾರ ಈ ಪ್ರಮಾಣವನ್ನು ಶೇ.60 ರಿಂದ ಶೇ.70 ಕ್ಕೆ ಹೆಚ್ಚಿಸಿದೆ. ಅದರಲ್ಲೂ ಕೆಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ ಲಭ್ಯವಿಲ್ಲದೆ ಸರ್ಕಾರಿ ವೈದ್ಯರು ಚೀಟಿ ಬರೆದುಕೊಡುವುದು, ಜನಸಾಮಾನ್ಯರು ಖಾಸಗಿ ಔಷಧಾಲಯಗಳಿಗೆ ಹಣ ತೆರುವುದು ಸಾಮಾನ್ಯವಾಗಿದೆ.
|
| 9 |
+
ಸರ್ಕಾರಿ ಆಸ್ಪತ್ರೆಗಳೆಂದರೆ ನೈರ್ಮಲ್ಯದ ಕೊರತೆ, ವೈದ್ಯಕೀಯ ಸಿಬ್ಬಂದಿಗಳ ಅಸಡ್ಡೆ ಮೊದಲಿನಿಂದಲೂ ಕೇಳಿಬರುತ್ತಿರುವ ಆರೋಪಗಳಿವೆ.ಅನಿವಾರ್ಯವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಆಶ್ರಯಿಸಬೇಕಾದವರಿಗೆ ಅಲ್ಲಿನ ಅವ್ಯವಸ್ಥೆಗಳು ರೇಜಿಗಿಡಿಸುತ್ತಿವೆ. ಅನಿರೀಕ್ಷಿತವಾಗಿ ಎದುರಾಗಿರುವ ಡೆಂಘೀ ಸಮಸ್ಯೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ವೈದ್ಯರು ಬರೆದುಕೊಡುವ ಔಷಧಿಯಲ್ಲಿ ಬಹುತೇಕ ಹೊರಗಿನ ಖಾಸಗಿ ಔಷಧಾಲಯಗಳಲ್ಲೇ ಖರೀದಿಸಬೇಕಾದ ಪರಿಸ್ಥಿತಿ ಇದೆ.
|
| 10 |
+
ಜನರ ಆರೋಗ್ಯ ಸೇವೆಗೆ ಹಣಕಾಸಿನ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇಪದೇ ಹೇಳುತ್ತ��ದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಯ ಕೊರತೆಯ ಬಗ್ಗೆ ಚಕಾರವೇ ಎತ್ತದೆ ಸರ್ಕಾರ ಜಾಣ ಮೌನಕ್ಕೆ ಶರಣಾಗಿದೆ.
|
eesanje/url_46_85_5.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸ್ವಿಮ್ಮಿಂಗ್ ವಿಚಾರ : ಬಿಜೆಪಿಗೆ ದಿನೇಶ್ಗುಂಡೂರಾವ್ ತಿರುಗೇಟು
|
| 2 |
+
ಬೆಂಗಳೂರು,ಜು.7-ಈಜು, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೊಟ್ಟವರು ಬಿಜೆಪಿ ಪಕ್ಷದಲ್ಲಿರುವಾಗ ಬಿಜೆಪಿ ಈಜನ್ನು ಕ್ರೀಡೆಯಾಗಿ ನೋಡಲು ಹೇಗೆ ಸಾಧ್ಯ? ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
|
| 3 |
+
ಬಿಜೆಪಿಯ ಟೀಕೆಗೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರಿಗೆ ಈಜು ಒಂದು ಮೋಜಿನ ರೀತಿ ಕಾಣುತ್ತದೆ, ಈಜುವುದು ಮೋಜು ಮಸ್ತಿಯೇ ಎಂದು ಪ್ರಶ್ನಿಸಿದ್ದಾರೆ.ತಾವು ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದು ಮೋಜು ಮಸ್ತಿಗಲ್ಲ.
|
| 4 |
+
ಜಿಲ್ಲಾ ಉಸ್ತುವಾರಿ ಸಚಿವನಾಗಿ ಈ ಹಿಂದೆ ಈಜುಕೊಳ ಉದ್ಘಾಟನೆಯಲ್ಲಿ ನನಗೆ ಪಾಲ್ಗೊಳ್ಳಲು ಆಗಿರಲಿಲ್ಲ. ಆ ಸಂದರ್ಭದಲ್ಲಿ ಅಲ್ಲಿಯ ಕ್ರೆಡಾಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು ಹಿನ್ನೆಲೆಯಲ್ಲಿ ನಾನು ಇನ್ನಮೆ ಭೇಟಿ ನೀಡಿ ಈಜುಕೊಳದಲ್ಲಿ ಈಜುತ್ತೇನೆ ಎಂದು ಭರವಸೆ ನೀಡ್ದೆಿ. ಅದರಂತೆ ಸಮಯ ಬಿಡುವು ಮಾಡಿಕೊಂಡು ಈಜುಕೊಳಕ್ಕೆ ಭೇಟಿ ನೀಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
|
| 5 |
+
ನಾನು ಈಜುವುದಕ್ಕೂ, ರಾಜ್ಯದಲ್ಲಿ ಡೆಂಘೀ ಹೆಚ್ಚಳಕ್ಕೂ ಎತ್ತಣ ಸಂಬಧ. ಅಷ್ಟಕ್ಕೂ ಮಂಗಳೂರಿಗೆ ಬಂದು ನಾನು ಮೊದಲ ಮಾಡಿದ ಕೆಲಸವೇ ಡೆಂಘೀ ತಪಾಸಣೆ. ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳ ನಾಶ ಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾದ ಸ್ಥಳಗಳನ್ನು ಪರಿಶೀಲಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ಹೇಳಿದ್ದಾರೆ.
|
| 6 |
+
ಬಿಜೆಪಿಯವರಿಗೆ ಈಜು ಒಂದು ಮೋಜಿನ ರೀತಿ ಕಾಣುತ್ತೆ.. ಈಜು, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೊಟ್ಟವರು ಬಿಜೆಪಿ ಪಕ್ಷದಲ್ಲಿರುವಾಗ ಬಿಜೆಪಿ ಇದನ್ನ ಕ್ರೀಡೆಯಾಗಿ ಹೇಗೆ ನೋಡಲು ಸಾಧ್ಯ.. ಬಿಜೆಪಿಗರಿಗೆ ಈಜುವುದು ಮೋಜು ಮಸ್ತಿಯೇ..!ನಾನು ಇಂದು ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದು ಮೋಜು ಮಸ್ತಿಗಲ್ಲ. ಜಿಲ್ಲಾ…://./nATzEn4NYc
|
eesanje/url_46_85_6.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸದ್ಯಕ್ಕೆ ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ : ‘ಕೈ’ಕಮಂಡ್ ಸಂದೇಶ
|
| 2 |
+
ಬೆಂಗಳೂರು,ಜು.7-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿದಂತೆ ನಾನಾ ರೀತಿಯ ಚರ್ಚೆಗಳಿಗೆ ತಣ್ಣನೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್ ಸದ್ಯದ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಎಲ್ಲವೂ ಯಥಾರೀತಿಯಲ್ಲಿ ಮುಂದುವರೆಯುತ್ತವೆ ಎಂಬ ಸಂದೇಶ ರವಾನಿಸಿದ್ದು, ಗೊಂದಲ ಹೇಳಿಕೆ ನೀಡುತ್ತಿದ್ದವರಿಗೆ ಮುಖಭಂಗವಾದಂತಾಗಿದೆ.
|
| 3 |
+
ರಾಜಕೀಯ ಕಾರಣಗಳಿಗಾಗಿ ಮತ್ತು ಕೆಲವರು ತಮ ಅಸ್ತಿತ್ವದ ಉಳಿವಿಗೆ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆಯಾಗಬೇಕಾಗಿದ್ದ ವಿಚಾರಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಗೊಂದಲ ಉಂಟು ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಇದೇ ರೀತಿಯ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡಿದ್ದವು.
|
| 4 |
+
ಈಗ ಪಂಚಾಯತ್ರಾಜ್, ಬಿಬಿಎಂಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಂದರ್ಭದಲ್ಲಿ ಮತ್ತೆ ಗೊಂದಲಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೈಕಮಾಂಡ್ಗೆ ದೂರು ನೀಡಿದ್ದಾರೆ.
|
| 5 |
+
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯದಲ್ಲಿ ವಿವಾದಿತ ಹೇಳಿಕೆ ನೀಡುವ ಕೆಲ ನಾಯಕರುಗಳಿಗೆ ದೂರವಾಣಿ ಕರೆ ಮಾಡಿದ್ದು, ತಮಗೆ ನಿರಂತರವಾಗಿ ಪ್ರಚಾರದಲ್ಲಿರುವ ಆಸಕ್ತಿ ಇದ್ದರೆ, ತಾವು ಪಕ್ಷದಿಂದ ಪಡೆದಿರುವ ಸಾಂವಿಧಾನಿಕ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ, ಅನಂತರ ತಮಗಿಷ್ಟ ಬಂದಂತೆ ಹೇಳಿಕೆ ನೀಡಿ ಎಂದು ಖಾರವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
|
| 6 |
+
ಅಧಿಕಾರ ಬದಲಾವಣೆ ಅಥವಾ ಯಾವುದೇ ಜವಾಬ್ದಾರಿಗಳ ಕುರಿತಂತೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಅಂತಹ ಸಂದರ್ಭ ಬಂದಾಗ ಹಿರಿಯ ನಾಯಕರ ಜೊತೆ ಚರ್ಚೆ ನಡೆಸಲಾಗುವುದು. ಸದ್ಯಕ್ಕೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಹಾನಿ ಉಂಟುಮಾಡಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
|
| 7 |
+
ಕೆಲವು ಮುಖಂಡರು ತಮ ನೆಚ್ಚಿನ ನಾಯಕನ ಓಲೈಕೆಗೆ ಮತ್ತು ಇನ್ನ್ಯಾರದೋ ಮೇಲಿನ ದ್ವೇಷಕ್ಕಾಗಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಪಕ್ಷದಲ್ಲಿ ಕೇಳಿಬರುತ್ತಿವೆ.ಇದಕ್ಕೆ ಪ್ರತಿತಂತ್ರ ಎಂಬಂತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳಿಗೂ ಇಂಬು ನೀಡಿದಂತಾಗಿದೆ.
|
| 8 |
+
ಮುಖ್ಯಮಂತ್ರಿ ಹುದ್ದೆಯ ಕುರಿತು ಗೊಂದಲಗಳು ಸೃಷ್ಟಿಯಾದರೆ ಅದು ಆಡಳಿತದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಹೀಗಾಗಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಅನಗತ್ಯ ಗೊಂದಲಗಳಿಗೆ ಕಡಿವಾಣ ಹಾಕಬೇಕು ಎಂದು ಸಿದ್ದರಾಮಯ್ಯ ಅವರು ಇತ್ತೀಚಿನ ದೆಹಲಿಯ ಭೇಟಿಯ ವೇಳೆ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದರು.
|
| 9 |
+
ಯಾವುದೇ ಗುಂಪಿನ ಪರ-ವಿರೋಧ ಚರ್ಚೆಗ���ು ಅನಗತ್ಯ. ಜನ ನೀಡಿರುವ ಅಧಿಕಾರವನ್ನು ಜನಪರ ಕೆಲಸಗಳಿಗಷ್ಟೇ ಬಳಕೆ ಮಾಡಬೇಕು, ರಾಜಕಾರಣ ಪ್ರತಿ ಪಕ್ಷಗಳ ವಿರುದ್ಧವಾಗಿರಬೇಕೇ ಹೊರತು ಸ್ವ ಪಕ್ಷೀಯರ ವಿರುದ್ಧ ಅಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯ ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.ಇನ್ನು ಮುಂದೆಯೂ ಗೊಂದಲ ಹೇಳಿಕೆ ನೀಡುವುದು ಮುಂದುವರೆದರೆ ಪಕ್ಷ ಅನಿವಾರ್ಯವಾಗಿ ಶಿಸ್ತುಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂಬ ಎಚ್ಚರಿಕೆ ರವಾನಿಸಿದ್ದಾರೆ ಎನ್ನಲಾಗಿದೆ.
|
eesanje/url_46_85_7.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣ ಪ್ರಕ್ರಿಯೆಗೆ ಚಾಲನೆ
|
| 2 |
+
ಬೆಂಗಳೂರು,ಜು.7-ತಮಿಳುನಾಡಿಗೆ ಸಡ್ಡು ಹೊಡೆದು ರಾಜ್ಯದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಸ್ಥಳ ಆಯ್ಕೆಯೂ ಸೇರಿದಂತೆ ಹಲವು ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗಿನ ಒಪ್ಪಂದದ ಪ್ರಕಾರ, 2032 ರವರೆಗೂ ಮತ್ತೊಂದು ವಿಮಾನನಿಲ್ದಾಣ ನಿರ್ಮಿಸಲು ಅವಕಾಶ ಇಲ್ಲ. 2033 ರ ನಂತರ ವಿಮಾನನಿಲ್ದಾಣ ಸ್ಥಾಪನೆಗೆ ಯಾವುದೇ ಅಡ್ಡಿ ಇಲ್ಲ ಎಂದರು.
|
| 3 |
+
ಆದರೂ ರಾಜ್ಯಸರ್ಕಾರಕ್ಕೆ ವಿಶೇಷ ರಿಯಾಯಿತಿಗಳಿವೆ. ಎಕ್್ಸಕ್ಯೂಸ್ಲೀವ್ ಕ್ಲಾಸ್ ನಿಯಮಾವಳಿಗಳ ಅನುಸಾರವೇ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸ್ಥಾಪನೆಗೆ ನಿರ್ಧರಿಸಲಾಗಿದೆ.ಕೆಲದಿನಗಳ ಹಿಂದೆ ಮೂಲಭೂತ ಸೌಕರ್ಯ ಇಲಾಖೆಯ ಸಭೆ ನಡೆಸಲಾಗಿದ್ದು, 2033 ರವರೆಗೂ ಕಾಯುವ ಅಗತ್ಯವಿಲ್ಲ. ಇದರ ನಡುವೆ ಭೂಸ್ವಾಧೀನ, ಸ್ಥಳ ಆಯ್ಕೆ ಸೇರಿದಂತೆ ಇತರ ಮಾನದಂಡಗಳ ಪರಿಶೀಲನೆ ಆರಂಭವಾಗಿದೆ ಎಂದರು.
|
| 4 |
+
2ನೇ ವಿಮಾನನಿಲ್ದಾಣದ ನಿರ್ಮಾಣಕ್ಕೆ ಈಗಾಗಲೇ ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಸಂಪರ್ಕವನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಳ್ಳಬೇಕೇ? ಅಥವಾ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಬೇಕೇ? ಎಂಬ ಗೊಂದಲಗಳಿವೆ.
|
| 5 |
+
ಈ ಗೊಂದಲವನ್ನು ಮೊದಲು ಪರಿಹರಿಸಿಕೊಳ್ಳಬೇಕಿದೆ. ಇದಕ್ಕಾಗಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳಿಗೂ ವರದಿ ನೀಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ನ್ಯೂಯಾರ್ಕ್, ಲಂಡನ್ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹತ್ತಿರದಲ್ಲೇ ಇವೆ.
|
| 6 |
+
ನಮ ದೇಶದ ಮುಂಬೈನ ಹೊಸ ವಿಮಾನನಿಲ್ದಾಣ, ಹಳೆ ವಿಮಾನ ನಿಲ್ದಾಣಗಳು 35 ಕಿ.ಮೀ.ಅಂತರದಲ್ಲಿವೆ. ಹಾಲಿ ಇರುವ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ 2ನೇ ವಿಮಾನನಿಲ್ದಾಣ ನಿರ್ಮಿಸುವುದಾದರೆ ಅದಕ್ಕೆ ದೊಡ್ಡಬಳ್ಳಾಪುರ, ದಾಬಸ್ಪೇಟೆ, ತುಮಕೂರಿನಂತಹ ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರಿನ ಉತ್ತರಭಾಗದ ಕಡೆ ಗಮನ ಹರಿಸಬೇಕಾಗುತ್ತದೆ.
|
| 7 |
+
ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದನ್ನು ಪರಿಗಣಿಸುವುದಾದರೆ ಬೆಂಗಳೂರು ದಕ್ಷಿಣದಲ್ಲಿ ವಿಮಾನನಿಲ್ದಾಣ ನಿರ್ಮಿಸಬೇಕು. ಇದಕ್ಕಾಗಿ ವೈಟ್ಫೀಲ್್ಡ ಅಥವಾ ಕನಕಪುರ ಭಾಗಗಳನ್ನು ಪರಿಶೀಲಿಸಲಾಗುತ್ತಿದೆ.
|
| 8 |
+
ಐದಾರು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಎರಡನೇ ಸಭೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಳಿಕ ಸಚಿವ ಸಂಪುಟ���ಲ್ಲಿ ಚರ್ಚಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು ಎಂದರು.ನಾವು ಸಭೆ ನಡೆಸಿದ ಮೇಲೆ ತಮಿಳುನಾಡು ಸರ್ಕಾರವೂ ಕೂಡ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳಿದೆ. ಅವರಿಗೆ ಯಾವ ಮಾನದಂಡಗಳು ಅವಕಾಶ ಕಲ್ಪಿಸುತ್ತವೆ ಎಂಬುದನ್ನು ನೋಡಬೇಕಿದೆ ಎಂದರು.
|
| 9 |
+
ಇನ್ನು ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ. ಯಾರು, ಯಾವುದೇ ಚರ್ಚೆ ಮಾಡಿದರೂ ಅದು ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.
|
| 10 |
+
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಗೆ ಸಂಬಂಧಪಟ್ಟ ಪ್ರಕರಣದಲ್ಲಿ ಬಿಜೆಪಿಯವರು ಸಿಬಿಐ ತನಿಖೆಗೆ ಕೇಳುತ್ತಿರುವುದು ಹಾಸ್ಯಾಸ್ಪದ. ಈ ಮೊದಲು ಸಿಬಿಐ ಅನ್ನು ಕಾಂಗ್ರೆಸ್ ಇನ್ವೆಸ್ಟಿಗೇಷನ್ ಬ್ಯೂರೋ ಎನ್ನುತ್ತಿದ್ದರು. ಕಳೆದ 2 ಅವಧಿಯಲ್ಲಿ ಸಿಬಿಐ ಅನ್ನು ವಿರೋಧಪಕ್ಷಗಳ ವಿರುದ್ಧ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲಾಗಿದೆ.
|
| 11 |
+
ಪ್ರತಿಪಕ್ಷಗಳ ನಾಯಕರ ವಿರುದ್ಧ ಸಿಬಿಐ, ಇಡಿ ದಾಳಿ ನಡೆಸಿ ರಾಜಕೀಯವಾಗಿ ಅಸ್ತಿತ್ವ ಯತ್ನ ನಡೆಸಿದೆ. ಈಗ ಅದು ಬಿಜೆಪಿ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ ಆಗಿದೆ. ಎಲೆಕ್ಟೊರಲ್ ಬಾಂಡ್ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳ ದಾಳಿ ನಡೆಸಿರುವುದು ಕಂಡುಬಂದಿದೆ.
|
| 12 |
+
ಹೀಗಾಗಿ ಬಿಜೆಪಿಯವರು ಸಿಬಿಐ ತನಿಖೆ ಕೇಳುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಈ ಹಿಂದೆ ನಮ ಸರ್ಕಾರ ಇದ್ದಾಗ ಏಳೆಂಟು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆವು. ಬಿಜೆಪಿಯವರು ಒಂದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಿರಲಿಲ್ಲ ಎಂದು ಹೇಳಿದರು.ಕೆಐಎಡಿಬಿ ನಿವೇಶನ ಹಂಚಿಕೆಯಲ್ಲೂ ಅವ್ಯವಹಾರಗಳಾಗಿವೆ ಎಂಬುದು ಆಧಾರರಹಿತವಾದ ಆರೋಪ. ನಾವು ಪಾರದರ್ಶಕವಾದ ಪದ್ಧತಿಯನ್ನು ಅನುಸರಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಯವರಿಗೆ ದೂರು ನೀಡಿರುವುದು ತಮ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ದೂರು ಕುರಿತು ಮುಖ್ಯಮಂತ್ರಿಯವರು ತಮ ಬಳಿ ವಿವರಣೆ ಕೇಳಿದರೆ ಉತ್ತರ ನೀಡುವುದಾಗಿ ತಿಳಿಸಿದರು.
|
eesanje/url_46_85_8.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಬಿನಿ- ಕೆಆರ್ಎಸ್ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ..?
|
| 2 |
+
ಬೆಂಗಳೂರು,ಜು.7-ಕಾವೇರಿ ಜಲಾಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೃಷ್ಣರಾಜ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ.
|
| 3 |
+
ಕೃಷ್ಣರಾಜ ಜಲಾಶಯಕ್ಕೆ 11,027 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 124.80 ಅಡಿ ಗರಿಷ್ಠ ಮಟ್ಟದ ಜಲಾಶಯ ಈಗ 102 ಅಡಿ ಮಟ್ಟಕ್ಕೆ ತಲುಪಿದೆ. ಒಳಹರಿವಿನ ಪ್ರಮಾಣ 562 ಕ್ಯೂಸೆಕ್ ಇದೆ. 49.42 ಅಡಿ ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 24.417 ಅಡಿ ಟಿಎಂಸಿ ನೀರು ಸಂಗ್ರಹವಾಗಿದೆ.
|
| 4 |
+
ಮಳೆ ಮತ್ತಷ್ಟು ಜೋರಾದರೆ ಡ್ಯಾಮ್ನಲ್ಲಿ ನೀರು ಸಂಗ್ರಹ ಹೆಚ್ಚಾಗಲಿದೆ. ದಿನೇ ದಿನೇ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಜಲಾಯನ ಭಾಗದ ರೈತರಲ್ಲಿ ಸಂತಸ ಮನೆ ಮಾಡಿದೆ.
|
| 5 |
+
ಅದೇ ರೀತಿ ಕಬಿನಿ ಜಲಾಶಯಕ್ಕೂ ನೀರಿನ ಮಟ್ಟ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 2 ಅಡಿ ಮಾತ್ರ ಬಾಕಿ ಇದೆ. 5,039 ಕ್ಯೂಸೆಕ್ ಒಳಹರಿವಿನ ಪ್ರಮಾಣ ಇದೆ. 3250 ಕ್ಯೂಸೆಕ್ ಹೊರಹರಿವಿನ ಪ್ರಮಾಣ ಇದೆ. ಈ ಭಾಗದಲ್ಲಿ ಮಳೆ ಮುಂದುವರೆದಿದ್ದು, ಸದ್ಯದಲ್ಲೇ ಜಲಾಶಯ ಭರ್ತಿಯಾಗಲಿದೆ.
|
eesanje/url_46_85_9.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹೇಮಾವತಿ ಯೋಜನೆಯ ಸಾಧಕ-ಬಾಧಕ ಅಧ್ಯಯನಕ್ಕೆ ಸಮಿತಿ ರಚನೆ
|
| 2 |
+
ಬೆಂಗಳೂರು, ಜು.6-ಹೇಮಾವತಿ ನಾಲೆಯಿಂದ ಕುಣಿಗಲ್ ಹಾಗೂ ಮಾಗಡಿ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಸಾಧಕ-ಬಾಧಕಗಳು ಹಾಗೂ ತಾಂತ್ರಿಕ ಮಾಹಿತಿ ಅಧ್ಯಯನಕ್ಕೆ ರಾಜ್ಯಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ತಿಂಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಿದೆ.
|
| 3 |
+
ತುಮಕೂರು ಶಾಖಾ ನಾಲೆಯ ಸರಪಳಿ 70 ಕಿ.ಮೀ.ನಿಂದ ಗುರುತ್ವಾಕರ್ಷಣೆ ಪೈಪ್ಲೈನ್ ಅವಳಡಿಸುವ ಮುಖಾಂತರ ಶ್ರೀರಂಗ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತ ಸರಪಳಿ 0 ಕಿ.ಮೀ.ನಿಂದ 17 ನೇ ಕಿ.ಮೀ. ವರೆಗೆ ಹಾಗೂ 2ನೇ ಹಂತ ಸರಪಳಿ 17 ಕಿ.ಮೀ.ನಿಂದ 35.54 ಕಿ.ಮೀ.ವರೆಗೆ ಕಾಮಗಾರಿ ಪ್ರಾರಂಭಿಸಲಾಗಿದೆ.
|
| 4 |
+
ಆದರೆ ವಿವಿಧ ರೈತ ಸಂಘಟನೆಗಳು ಜನಪ್ರತಿನಿಧಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಧರಣಿಗಳು ನಡೆಯುತ್ತಿವೆ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
|
| 5 |
+
ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೂ.20 ರಂದು ತುಮಕೂರು ಜಿಲ್ಲಾ ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಎನ್.ರಾಜಣ್ಣ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದ್ದರು.
|
| 6 |
+
ಸಭೆಯಲ್ಲಿ ಕೇಳಿಬಂದ ಸಲಹೆ ಪ್ರಕಾರ, ತುಮಕೂರು ಶಾಖಾ ಕಾಲುವೆ ಜಾಲದ ಪ್ರಾರಂಭದಲ್ಲಿ ನಿಗದಿಪಡಿಸಿದ ನೀರು ಹರಿಸಲು ಉಂಟಾಗಬಹುದಾದ ತೊಂದರೆಗಳನ್ನು ಪರಿಹರಿಸಲು ಹಾಗೂ ತುಮಕೂರು ಶಾಖಾ ಕಾಲುವೆಯ ವಿವಿಧ ಭಾಗಗಳಿಗೆ ನಿಗದಿಯಾಗಿರುವ ನೀರನ್ನು ಹರಿಸಲು ಕೈಗೊಳ್ಳಬಹುದಾದ ನೀರು ನಿರ್ವಹಣಾ ಕ್ರಮಗಳಾದ ಹಾಗೂ ನಿಯಮಗಳ ಬಗ್ಗೆ ಅಧ್ಯಯನ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದೆ.
|
| 7 |
+
ನಿವೃತ್ತ ಮುಖ್ಯ ಎಂಜಿನಿಯರ್ ಅರವಿಂದ ಡಿ. ಕಣಗಿಲೆ ಸಮಿತಿ ಅಧ್ಯಕ್ಷರಾಗಿದ್ದು, ನಿವೃತ್ತ ಪ್ರಧಾನ ಎಂಜಿನಿಯರ್ ಕೆ.ಬಾಲಕೃಷ್ಣ, ನಿವೃತ್ತ ಮುಖ್ಯ ಎಂಜಿನಿಯರುಗಳಾದ ಶಂಕರೇಗೌಡ, ಎಂ.ಜಿ.ಶಿವಕುಮಾ ಸದಸ್ಯರಾಗಿದ್ದು, ಹೇಮಾವತಿ ನಾಲಾ ವೃತ್ತದ ಅಧೀಕ್ಷಕ ಎಂಜಿನಿಯರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
|
| 8 |
+
70 ಕಿ.ಮೀ.ನಿಂದ 166.70 ಕಿ.ಮೀ.ವರೆಗೆ ನೀರು ಹರಿಸುವ ಮಾರ್ಗದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಅಧ್ಯಯನ ನಡೆಸಿ ಅವುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಬಗ್ಗೆಯೂ ಸಮಿತಿ ಅಧ್ಯಯನ ವರದಿ ನೀಡಬೇಕು ಎಂದು ಸೂಚಿಸಲಾಗಿದೆ.
|
eesanje/url_46_86_1.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹೊಸ ಕ್ರಿಮಿನಲ್ ಕಾನೂನುಗಳ ಮಾಹಿತಿಗೆ ಕೈಪಿಡಿ ಆಪ್ ಬಿಡುಗಡೆ
|
| 2 |
+
ಬೆಂಗಳೂರು,ಜು.6-ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕೈಪಿಡಿ ಆಪ್ಗಳನ್ನು ಬಿಡುಗಡೆ ಮಾಡಿದರು. ನೂತನ ಕ್ರಿಮಿನಲ್ ಕಾನೂನುಗಳ ಸಂಚಯ ಎಂಬ ಮೊಬೈಲ್ ಆಪ್, ವಿಧಿವಿಜ್ಞಾನ ಇಲಾಖೆಯಿಂದ ಸೀನ್ ಆಫ್ ಕ್ರೈಂ ಕೈಪಿಡಿ, ಹೊಯ್ಸಳ ವಾಹನಗಳ ರಿಯಲ್ ಟೈಮ್ ಟ್ರಾಕಿಂಗ್ ಪ್ರಾತ್ಯಕ್ಷಿಕೆ, ಸೇಫ್ ಕನೆಕ್ಟ್ ತಂತ್ರಾಂಶ ಬಿಡುಗಡೆ, ಆಡಿಯೋ-ವಿಡಿಯೋ ಸಂಪರ್ಕ ಮಾಡುವ ಟೆಕ್ನಾಲಜಿ, ಡಿಜಿಟಲ್ಅರೆಸ್ಟ್ ಸ್ಕ್ಯಾಮ್ ತನಿಖಾ ಕೈಪಿಡಿ, ಆನ್ಲೈನ್ ವಂಚನೆ ಪ್ರಕರಣಗಳ ತನಿಖೆ ಮಾಡುವ ಕೈಪಿಡಿ ಹಾಗೂ ತೊಂದರೆಯಲ್ಲಿರುವ ವ್ಯಕ್ತಿ ಕಮಾಂಡ್ ಸೆಂಟರ್ ಸಿಬ್ಬಂದಿ ಯೊಂದಿಗೆ ಸಂಪರ್ಕಿಸುವ ತಂತ್ರಜ್ಞಾನವನ್ನು ಇಂದು ಬಿಡುಗಡೆ ಮಾಡಲಾಯಿತು.
|
| 3 |
+
ಪೊಲೀಸ್ ಪ್ರಧಾನ ಕಛೇರಿಯ ಸಮೇಳನ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಪಾಲ್ಗೊಂಡಿದ್ದರು.
|
| 4 |
+
ಹೊಸ ಕಾನೂನು ಮಾಹಿತಿಗೆ ಸಂಚಯ ಆಪ್:ಹೊಸದಾಗಿ ಜಾರಿಗೆ ಬಂದಿರುವ ಮೂರು ಕ್ರಿಮಿನಲ್ ಕಾನೂನುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒಂದೇ ಸ್ಥಳದಲ್ಲಿ ಸಮಗ್ರ ಮಾರ್ಗದರ್ಶಿಯಾಗಿ ಕಾರ್ಯ ನಿರ್ವಹಿಸಲು ಮೊಬೈಲ್ ಅಪ್ಲಿಕೇಷನ್ ಸಂಚಯವನ್ನು ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯಾ ಅಧಿನಿಯಮಗಳ ಸಂಕಲನವಾಗಿದೆ.
|
| 5 |
+
ಸಂಚಯ ಆಪ್ ಕ್ರಿಮಿನಲ್ ಕಾನೂನುಗಳ ಸಂಪನೂಲದ ಕೇಂದ್ರಬಿಂದುವಾಗಿ ಹೊರ ಹೊಮಲಿದ್ದು, ಸಂಬಂಧಿತ ಪಾಲುದಾರರಾದ ನ್ಯಾಯಾಂಗ ಅಭಿಯೋಜಕರು, ವಕೀಲರು, ಕಾನೂನು ವಿದ್ಯಾರ್ಥಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಇತ್ತೀಚಿನ ಕ್ರಿಮಿನಲ್ ಕಾನೂನುಗಳ ಮಾರ್ಪಾಡಿನ ಬಗ್ಗೆ ಮಾಹಿತಿ ನೀಡುವ ಮೂಲಕ ಅರಿವು ಹೆಚ್ಚಿಸಲಿದೆ.
|
| 6 |
+
ಮುಖ್ಯಾಂಶಗಳು:*ಕಾನೂನು ಸಂಬಂಧಿತ ಪಾಲುದಾರರಾದ ನ್ಯಾಯಾಂಗ ಅಭಿಯೋಜಕರು, ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಇತ್ತೀಚಿನ ಕ್ರಿಮಿನಲ್ ಕಾನೂನುಗಳ ಮಾರ್ಪಾಡಿನ ಬಗ್ಗೆ ಸಿದ್ದ ಮಾರ್ಗದರ್ಶಿ.*ಆಫ್ಲೈನ್ ಮತ್ತು ಆನ್ಲೈನ್ ಎರಡೂ ವಿಧದಲ್ಲಿ ಬಳಕೆ ಮಾಡಬಹುದಾಗಿರುತ್ತದೆ.*ಕಾನೂನುಗಳ ಮಾರ್ಪಾಡಿನ ಬಗ್ಗೆ ಹಳೆಯ ಹಾಗೂ ಹೊಸ ಕಾನೂನುಗಳ ತುಲನಾ ಅವಕಾಶ.*ಬದಲಾದ ಕಾನೂನುಗಳ ಸುಲಭ ಮತ್ತು ಶೀಘ್ರ ಅರ್ಥೈಸುವಿಕೆ*ಕಾನೂನಿನ ಎಲ್ಲಾ ಅಧ್ಯಾಯಗಳ ಮತ್ತು ಭಾಗಗಳ ಲಿಂಕ್ ಸೌಲಭ್ಯ*ನಿರ್ಧಿಷ್ಟ ಮಾಹಿತಿಯ ಪತ್ತೆಹಚ್ಚುವ ಕಾರ್ಯನಿರತೆ*ಕರ್ನಾಟಕ ಪೊಲೀಸ್ ಅಕಾಡೆಮಿಯಿಂದ ಪ್ರಕಟಿಸಲಾಗಿರುವ ನ್ಯೂ ಕ್ರಿಮಿನಲ್ ಲಾ ಕನ್ನಡ ಕೈಪಿಡಿಯನ್ನು ಆಪ್��ಲ್ಲಿ ಅಳವಡಿಸಲಾಗಿದೆ.
|
eesanje/url_46_86_10.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ ವೃದ್ಧ ಬಲಿ
|
| 2 |
+
ಬೆಂಗಳೂರು,ಜು.6-ರಾಜ್ಯಾದ್ಯಂತ ಡೆಂಘೀ ಮಹಾಮಾರಿ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ ವೃದ್ಧನೊಬ್ಬ ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ.ಮಹಾರಾಷ್ಟ್ರದಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು, ಎಲ್ಲ ರಾಜ್ಯಗಳಿಗೂ ಕಟ್ಟೆಚ್ಚರ ವಹಿಸಬೇಕೆಂದು ಕೇಂದ್ರ ಸರ್ಕಾರ ನಿನ್ನೆಯಷ್ಟೇ ಸೂಚನೆ ನೀಡಿದ ಬೆನ್ನಲ್ಲೇ ವೃದ್ದರೊಬ್ಬರು ಸಾವನ್ನಪ್ಪಿರುವುದು ಕಳವಳ ಉಂಟು ಮಾಡಿದೆ.
|
| 3 |
+
ಶಿವಮೊಗ್ಗದ ಗಾಂಧಿನಗರದ 74 ವರ್ಷದ ವೃದ್ದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಜೂ.19ರಂದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೊಡಿಸಿ ಗುರುವಾರ ಕುಟುಂಬದವರು ಅವರನ್ನು ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ಮೃತಪಟ್ಟಿದ್ದಾರೆ.
|
| 4 |
+
ಝೀಕಾ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚನೆ ನೀಡಿದೆ.
|
eesanje/url_46_86_11.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಹೆಚ್ಚಳ
|
| 2 |
+
ಬೆಂಗಳೂರು,ಜು.6-ರಾಜ್ಯದಲ್ಲಿ ಜೂನ್ ತಿಂಗಳಿನ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣ 7773.83 ಕೋಟಿ ರೂ. ಆಗಿದೆ. ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ಒಟ್ಟು 24,862.77 ಕೋಟಿ ರೂ. ಸಂಗ್ರಹವಾಗಿದೆ. ಮೇ ತಿಂಗಳಿಗಿಂತ ಜೂನ್ ತಿಂಗಳಿನಲ್ಲಿ 349.52 ಕೋಟಿ ರೂ. ಹೆಚ್ಚು ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಸಂಗ್ರಹವಾಗಿತ್ತು.
|
| 3 |
+
ಜೂನ್ ತಿಂಗಳಿನಲ್ಲಿ 5792.34 ಕೋಟಿ ಸರಕು ಸೇವಾ ತೆರಿಗೆ, 1885.65 ಕೋಟಿ ಕರ್ನಾಟಕ ಮಾರಾಟ ತೆರಿಗೆ ಹಾಗೂ 95.84 ಕೋಟ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ.ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಿನಲ್ಲಿ ಸುಮಾರು 20 ಕೋಟಿ ರೂ.ನಷ್ಟು ವೃತ್ತಿ ತೆರಿಗೆ ಕಡಿಮೆಯಾಗಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೂ ಈ ವರ್ಷ ಜೂನ್ ತಿಂಗಳ ವಾಣಿಜ್ಯ ತೆರಿಗೆ ಹೆಚ್ಚಾಗಿದೆ.
|
| 4 |
+
ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಇದುವರೆಗೆ 19043.44 ಕೋಟಿ ಸರಕು ಸೇವಾ ತೆರಿಗೆ, 5428.45 ಕೋಟಿ ಮಾರಾಟ ತೆರಿಗೆ ಹಾಗೂ 390.88 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ. ಒಟ್ಟಾರೆ 24862.77 ಕೋಟಿ ರೂ. ವಾಣಿಜ್ಯ ತೆರಿಗೆ ರಾಜ್ಯದಲ್ಲಿ ಸಂಗ್ರಹವಾದಂತಾಗಿದೆ.
|
eesanje/url_46_86_12.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಸಾವಿನ ಡೆಂಘೀ ಕೇಕೆ, ಬೆಂಗಳೂರಲ್ಲಿ ಬಾಲಕ ಬಲಿ
|
| 2 |
+
ಬೆಂಗಳೂರು,ಜು.6- ರಾಜ್ಯದಲ್ಲಿ ಡೆಂಘೀ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಮಹಾಮಾರಿ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಾಲಕನೋರ್ವ ಡೆಂಘೀಗೆ ಬಲಿಯಾಗಿದ್ದಾನೆ.ಈಗಾಗಲೇ ಡೆಂಘೀ ಮಹಾಮಾರಿಗೆ ಈಗಾಗಲೇ ಹಾಸನದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
|
| 3 |
+
ಡೆಂಘೀ ಜ್ವರದಿಂದ ಬಳಲುತ್ತಿದ್ದ ಅಂಜನಾಪುರದ ಗಗನ್(11) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಸಾವನ್ನಪ್ಪಿದ್ದಾನೆ.ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಮುಂದುವರೆದಿದೆ. ದಿನೇ ದಿನೇ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
|
| 4 |
+
ಈಗಾಗಲೇ ನಗರದಲ್ಲಿ 1700ಕ್ಕೂ ಹೆಚ್ಚು ಮಂದಿ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ, ಮೈಸೂರು, ಹಾಸನ, ಧಾರವಾಡ, ಚಿತ್ರದುರ್ಗ, ಹಾವೇರಿ ಹಲವೆಡೆ ಡೆಂಘೀ ತನ್ನ ಹಾವಳಿಯನ್ನು ಮುಂದುವರೆಸಿದ್ದು, 6700ಕ್ಕೂ ಹೆಚ್ಚು ಜನ ಡೆಂಘೀ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
|
| 5 |
+
ಹಾಸನ ಜಿಲ್ಲೆಯಲ್ಲಿ ಡೆಂಘೀ ಆರ್ಭಟ ಮುಂದುವರೆದಿದೆ. ಡೆಂಘೀ ಜ್ವರಕ್ಕೆ ನಾಲ್ವರು ಈಗಾಗಲೇ ಬಲಿಯಾಗಿದ್ದಾರೆ. ಕಳೆದ ಜೂ.30ರಂದು ಹೊಳೆನರಸೀಪುರ ತಾಲ್ಲೂಕಿನ ದೊಡ್ಡಮಗ್ಗೆಯ ವರ್ಷಿಕ(8) ಸಾವನ್ನಪಿದ್ದಳು. ಜು.1ರಂದು ಅರಕಲಗೂಡಿನ ಅಕ್ಷತಾ(13), ಜುಲೈ 3ರಂದು ಗುಡ್ಡೇನಹಳ್ಳಿಯ ಕಲಾಶ್ರೀ( 11), ಜು.5ರಂದು ಹೊಳೆನರಸೀಪುರದ ದೊಡ್ಡಳ್ಳಿ ಗ್ರಾಮದ ಸಮೃದ್ದಿ(8) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
|
| 6 |
+
ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನಿವಾಸಿ ವೇಣು ಡೆಂಘೀ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ರಾಮನಗರ ಜಿಲ್ಲೆಯಲ್ಲೂ ಕೂಡ ಡೆಂಘೀ ಕಾಯಿಲೆ ಬಗ್ಗೆ ತಪಾಸಣೆ ಮಾಡಲಾಗಿದ್ದು, 773 ಜ್ವರ ಪೀಡಿತ ರೋಗಿಗಳ ರಕ್ತ ಮಾದರಿ ಪರೀಕ್ಷೆ ಮಾಡಿದ್ದು, 58 ಜನರಿಗೆ ಡೆಂಘೀ ಪಾಸಿಟಿವ್ ಇರುವುದು ಪತ್ತೆಯಾಗಿದೆ.
|
| 7 |
+
ದಿನೇ ದಿನೇ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ಸಾವುನೋವುಗಳಿಂದ ಜನ ಬಳಲುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.ರೋಗ ಬರದಂತೆ ಮುನ್ನೆಚ್ಚರಿಕೆಗೆ ವಹಿಸಲು ಸಾರ್ವಜನಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.
|
eesanje/url_46_86_2.txt
ADDED
|
@@ -0,0 +1,3 @@
|
|
|
|
|
|
|
|
|
|
|
|
|
| 1 |
+
ನ್ಯಾಯ ನೀಡಿಕೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಪ್ರಥಮ : ಗೃಹಸಚಿವ ಪರಮೇಶ್ವರ್
|
| 2 |
+
ಬೆಂಗಳೂರು,ಜು.6-ದೇಶದ ಪ್ರತಿಷ್ಠಿತ ಇಂಡಿಯನ್ ಜಸ್ಟೀಸ್ ರಿಪೋರ್ಟ್ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ನ್ಯಾಯ ನೀಡಿಕೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
|
| 3 |
+
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇಂಡಿಯನ್ ಜಸ್ಟೀಸ್ ರಿಪೋರ್ಟ್ ಒಟ್ಟು 10 ಅಂಕಗಳನ್ನಿಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ 6.38 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದರು. ಈ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಗೃಹಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
|
eesanje/url_46_86_3.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮಾಡಬೇಕು : ಸಂಸದ ಡಾ.ಮಂಜುನಾಥ್
|
| 2 |
+
ಬೆಂಗಳೂರು,ಜು.6-ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಹಿರಿಯ ಹೃದ್ರೋಗ ತಜ್ಞ ಹಾಗೂ ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ನೀಡಿದ್ದಾರೆ.
|
| 3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಏಳೆಂಟು ಸಾವಿರ ಮಂದಿ ಡೆಂಘೀ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳೆಂಟು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿ ಇದನ್ನು ನಿರ್ವಹಣೆ ಮಾಡಲು ವಿಶೇಷ ಕಾರ್ಯಪಡೆಯನ್ನು ರಚಿಸಬೇಕು. ವಿವಿಧ ಇಲಾಖೆಗಳು ಸಮನ್ವಯತೆಯಿಂದ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.
|
| 4 |
+
ಡೆಂಘೀ ಸೋಂಕಿಗೆ ನಿಖರವಾದಂತಹ ಚಿಕಿತ್ಸೆ ಇಲ್ಲ. ರೋಗಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ, ತಲೆನೋವು, ಸುಸ್ತುಗಳಿಗೆ ಆಯಾ ಪರಿಹಾರದ ಚಿಕಿತ್ಸೆ ನೀಡಲಾಗುತ್ತಿದೆಯೇ ಹೊರತು, ಡೆಂಘೀ ಸೋಂಕಿಗೆ ನಿಖರವಾದ ಚಿಕಿತ್ಸೆ ಇಲ್ಲ. ಹೀಗಾಗಿ ನಿಯಂತ್ರಣವೇ ಸೂಕ್ತ ಮಾರ್ಗ ಎಂದು ಹೇಳಿದರು.
|
| 5 |
+
ರಾಜ್ಯದಲ್ಲಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆಗಳನ್ನು ಅಗೆದಿದ್ದಾರೆ. ಹಳ್ಳದಿಣ್ಣೆಗಳು ಹೆಚ್ಚಾಗಿವೆ. ನೀರು ನಿಂತು ಸೊಳ್ಳೆಗಳ ಉತ್ಪಾದನೆ ತೀವ್ರಗೊಳ್ಳುತ್ತಿವೆ. ಮೊದಲು ಸರ್ಕಾರ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಕಂದಾಯ ಸೇರಿ ಹಲವು ಇಲಾಖೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಯಬೇಕಿದೆ ಎಂದರು.
|
| 6 |
+
ಆರೋಗ್ಯ ತುರ್ತು ಪರಿಸ್ಥಿತಿಯಾಗಿರುವುದರಿಂದ ಡೆಂಘೀ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೋವಿಡ್ ಸಂದರ್ಭದಲ್ಲಿ ಅನುಸರಿಸಿದಂತೆ ಗರಿಷ್ಠ ಚಿಕಿತ್ಸೆಯ ಮಿತಿಯನ್ನು ನಿಗದಿ ಮಾಡಿ ಡೆಂಘೀಗೂ ಉಚಿತವಾದ ಚಿಕಿತ್ಸೆ ನೀಡಬೇಕು. ಪ್ರತ್ಯೇಕವಾದ ವಾರ್ ರೂಂ ಅನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
|
| 7 |
+
ಸೊಳ್ಳೆಗಳ ಹಾವಳಿಯಿಂದ ಮಕ್ಕಳನ್ನು ರಕ್ಷಿಸಲು ಲಭ್ಯವಿರುವ ವ್ಯವಸ್ಥೆಗಳನ್ನು ಪಾಲಿಸಬೇಕು. ಶಾಲಾ-ಕಾಲೇಜುಗಳಲ್ಲಿ, ಮಕ್ಕಳಲ್ಲಿ ಜಾಗೃತಿ ಜಾಥಾ ಮೂಡಿಸಬೇಕು ಎಂದು ಹೇಳಿದರು.
|
| 8 |
+
ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಮಂದಿ ತೊಂದರೆಗೀಡಾಗಿದ್ದರು. ಈಗ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳ ಪ್ರಮಾಣ ಇದೆ. ಹೀಗಾಗಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಪರಿಸ್ಥಿತಿ ನಿಭಾಯಿಸಲು ಸಾಧ್ಯ. ಕೆಲವು ದೇಶಗಳಲ್ಲಿ ಡೆಂಘೀ ನಿಯಂತ್ರಣಕ್ಕೆ ಲಸಿಕೆ ನೀಡಲಾಗುತ್ತಿದೆ. ಜೂನ್-ಜುಲೈನಲ್ಲಿ ಇದನ್ನು ನೀಡಿದರೆ ಸಾವಿನ ಸಾಧ್ಯತೆ, ತೀವ್ರ ನಿಗಾ ಘಟಕದ ಅವಶ್ಯಕತೆ ತಗ್ಗಲಿದೆ ಎಂದು ಹೇಳಿದರು.
|
| 9 |
+
ಸ್ಪಷ್ಟನೆ :ಮುಂದಿನ ಉಪಚುನಾವಣೆಯಲ್ಲಿ ನನ್ನ ಪತ್ನಿ ಅನುಸೂಯ ಅವರು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು. ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಕೆಲವು ಮಾಧ್ಯಮಗಳಲ್ಲಿ ಅನುಸೂಯ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಬಂದಿದ್ದು, ನಮಗೆ ಮುಜುಗರ ತಂದಿದೆ ಅವರು ಹೇಳಿದರು.
|
eesanje/url_46_86_4.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಪತ್ತೆ : ಹೈ ಅಲರ್ಟ್ ಘೋಷಣೆ, ಪ್ರವಾಸ ನಿಲ್ಲಿಸುವಂತೆ ಸೂಚನೆ
|
| 2 |
+
ಬೆಂಗಳೂರು,ಜು.6-ರಾಜ್ಯದಲ್ಲಿ ಡೆಂಘೀ ಪ್ರಕರಣ ಗಳು ತೀವ್ರವಾಗಿ ಹೆಚ್ಚಾಗಿರುವ ನಡುವೆ ಶಿವಮೊಗ್ಗದಲ್ಲಿ ಝೀಕಾ ವೈರಸ್ ಪರಿಣಾಮ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆರೆಯ ರಾಜ್ಯದಲ್ಲಿ ಮೆದುಳು ಸೋಂಕಿನ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಪತ್ತೆಯಾಗಿರುವುದು ತೀವ್ರ ಆತಂಕ ಮೂಡಿಸಿದೆ.
|
| 3 |
+
ರಾಜ್ಯದಲ್ಲಿ ಡೆಂಘೀ ಪ್ರಕರಣಗಳು 6 ಸಾವಿರದ ಗಡಿ ದಾಟಿದ್ದು, ಜೀವಹಾನಿಯ ಸಂಖ್ಯೆ 6 ರಷ್ಟಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಝೀಕಾ ವೈರಸ್ ಸೋಂಕಿಗೆ ಜೀವ ತೆತ್ತಿದ್ದಾರೆ. ಇತ್ತ ಕೇರಳದಲ್ಲಿ ಕಳೆದ ಮೇ ತಿಂಗಳಿನಿಂದೀಚೆಗೆ 4 ಮಂದಿ, ಅದರಲ್ಲೂ ಬಾಲಕರು ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಸೋಂಕಿಗೆ ಸಿಲುಕಿದ್ದು, 3 ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ.
|
| 4 |
+
ಡೆಂಘೀ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಬೇಕು ಎಂದು ಹಿರಿಯ ವೈದ್ಯರು ಹಾಗೂ ಮಾಜಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.ಡೆಂಘೀ ಮತ್ತು ಝೀಕಾ ವೈರಸ್ ಆತಂಕದ ನಡುವೆ ಕೇರಳದ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಮತ್ತಷ್ಟು ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಿದೆ.
|
| 5 |
+
ಕಲುಷಿತ ನೀರಿನಲ್ಲಿ ಸ್ವತಂತ್ರವಾಗಿ ಜೀವಿಸುವ ಅಮೀಬಾ ಮಾದರಿಯ ಸೋಂಕಿನಿಂದ ಹರಡುವ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಮೆದುಳಿನ ಸೋಂಕಿಗೆ ಕಾರಣವಾಗಲಿದ್ದು, ಮಾರಣಾಂತಿಕವಾಗಿದೆ.
|
| 6 |
+
ಉತ್ತರ ಕೇರಳದ ಪಯೋಲಿ ಪ್ರದೇಶದಲ್ಲಿ 14 ವರ್ಷದ ಬಾಲಕ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಜೀವ ಕಳೆದುಕೊಂಡಿದ್ದಾನೆ. ಈತನಿಗೆ ಚಿಕಿತ್ಸೆ ನೀಡಿದ್ದ ವೈದ್ಯರೂ ಕೂಡ ಜು.1 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
|
| 7 |
+
ವೈದ್ಯರಲ್ಲಿ ಸೋಂಕನ್ನು ತಕ್ಷಣವೇ ಗುರುತಿಸಿ ಚಿಕಿತ್ಸೆ ಆರಂಭಿಸಿದ್ದರಿಂದಾಗಿ ಆರೋಗ್ಯ ಸುಧಾರಣೆ ಕಂಡುಬಂದಿದೆ ಎಂದು ಹೇಳಲಾಗಿದೆ.ಇದಕ್ಕೂ ಮೊದಲು ಮೇ 21 ರಂದು ಮಲಪ್ಪುರಂನಲ್ಲಿ 5 ವರ್ಷದ ಬಾಲಕಿ, ಕನ್ನೂರಿನಲ್ಲಿ ಜೂ.25 ರಂದು 13 ವರ್ಷದ ಬಾಲಕಿ ಮೆದುಳು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸಭೆ ನಡೆಸಿದ್ದು, ಹಲವಾರು ಸೂಚನೆಗಳನ್ನು ನೀಡಿದ್ದಾರೆ.
|
| 8 |
+
ಜಲ ಮೂಲಗಳ ಶುದ್ಧೀಕರಣ, ಈಜುಕೊಳಗಳಿಗೆ ಕ್ಲೋರೇನಿಯೇಷನ್ ಮೂಲಕ ಸ್ವಚ್ಛಗೊಳಿಸುವುದು, ಮಕ್ಕಳನ್ನು ನೀರಿನಲ್ಲಿ ಬಿಡುವಾಗ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ನಾನಾ ರೀತಿಯ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.
|
| 9 |
+
ಕೇರಳದಲ್ಲಿ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದಲ್ಲೂ ಕಟ್ಟೆಚ್ಚರ ವಹಿಸಲಾ��ಿದೆ. ಸೋಂಕಿತ ಪ್ರದೇಶಗಳಿಂದ ರಾಜ್ಯಕ್ಕೆ ಬರುವವರು ಮತ್ತು ಇಲ್ಲಿಂದ ಅಲ್ಲಿಗೆ ಪ್ರವಾಸಕ್ಕೆ ತೆರಳುವವರ ಮೇಲೆ ನಿಗಾ ವಹಿಸಲಾಗಿದೆ. ಈ ಸಂದರ್ಭದಲ್ಲಿ ಕೇರಳದ ಪ್ರವಾಸವನ್ನು ಮುಂದೂಡುವುದು ಸೂಕ್ತ ಎಂಬ ಸಲಹೆಗಳು ಕೇಳಿಬರುತ್ತಿವೆ.
|
| 10 |
+
ಅಶುದ್ಧ ನೀರಿನಲ್ಲಿ ಅಡಗಿರುವ ಅಮೀಬಾ ಮಾದರಿ ವೈರಾಣು ಮೂಗಿನ ಮೂಲಕ ದೇಹ ಪ್ರವೇಶಿಸಲಿದ್ದು, ಸೋಂಕಿಗೆ ಕಾರಣವಾಗಲಿದೆ.ಕೇರಳದಲ್ಲಿ 2017 ಮತ್ತು 2023 ರಲ್ಲೂ ಇದೇ ಸೋಂಕು ಪತ್ತೆಯಾಗಿ ತೀವ್ರ ಆತಂಕ ಮೂಡಿಸಿತ್ತು.
|
eesanje/url_46_86_5.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಚುನಾವಣೆ ನಂತರ ಕೇಂದ್ರ ಸರ್ಕಾರ ‘ಭಾರತ್ ಅಕ್ಕಿ’ ಯೋಜನೆ ಕೈಬಿಟ್ಟಿದೆ : ಸಿಎಂ ಸಿದ್ದರಾಮಯ್ಯ ಆಕ್ಷೇಪ
|
| 2 |
+
ಬೆಂಗಳೂರು,ಜು.6-ಚುನಾವಣೆಯ ಕಾರಣಕ್ಕಾಗಿ ಭಾರತ್ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿತ್ತು. ಮತದಾನದ ಬಳಿಕ ಆ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
|
| 3 |
+
ಬಾಬು ಜಗಜೀವನ್ರಾಂ ಅವರ ಪುಣ್ಯಸರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗ ಇರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಅಕ್ಕಿ ರಾಜಕೀಯ ಕಾರಣಕ್ಕಾಗಿ ಜಾರಿಗೊಳಿಸಿದ್ದ ಯೋಜನೆ. ಚುನಾವಣೆ ಬಳಿಕ ಅದು ಸ್ಥಗಿತಗೊಂಡಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
|
| 4 |
+
ನಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಇದು ರಾಜಕೀಯ ಹೊರತಾದ ಕಾರ್ಯಕ್ರಮ. ಕೇಂದ್ರಸರ್ಕಾರ ಬಡವರಿಗೆ ಅಕ್ಕಿ ಸಿಗಬಾರದು ಎಂಬ ಕಾರಣಕ್ಕೆ ಅನ್ನಭಾಗ್ಯಕ್ಕೆ ಅಕ್ಕಿ ನೀಡುತ್ತಿಲ್ಲ. ಆಹಾರ ದಾಸ್ತಾನು ಮಳಿಗೆಯಲ್ಲಿ ಸಾಕಷ್ಟು ಅಕ್ಕಿ ಇದ್ದರೂ ರಾಜ್ಯಕ್ಕೆ ಪೂರೈಸದೆ ನಮ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿ ಎಂಬ ಸಂಚು ನಡೆಸಿದೆ ಎಂದು ಆರೋಪಿಸಿದರು.
|
| 5 |
+
ಇದರ ಅರ್ಥ ಕೇಂದ್ರ ಸರ್ಕಾರ ದಲಿತರು, ಹಿಂದುಳಿದ ವರ್ಗದವರು ಎಲ್ಲಾ ಜಾತಿಯ ಬಡವರ ವಿರುದ್ಧವಾಗಿದೆ. ನಾವು ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ನಾವು ಅಕ್ಕಿಯ ಬದಲು ಹಣವನ್ನು ಫಲಾನುಭವಿಗಳಿಗೆ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ದೂರಿದರು.
|
| 6 |
+
ಬಾಬು ಜಗಜೀವನ್ ರಾಂ 1952 ರಿಂದ ಸುದೀರ್ಘವಾಗಿ 40 ವರ್ಷಕ್ಕೂ ಹೆಚ್ಚು ಕಾಲ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಇಂದಿರಾಗಾಂಧಿಯವರ ಸಂಪುಟದಲ್ಲಿ ಆಹಾರ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಹೊಸ ತಳಿ, ರಸಗೊಬ್ಬರವನ್ನು ಪರಿಚಯಿಸಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಿದರು ಎಂದರು.
|
| 7 |
+
ಅದಕ್ಕೂ ಮೊದಲು ನಾವು ವಿದೇಶಗಳ ಮುಂದೆ ಆಹಾರಕ್ಕಾಗಿ ಕೈ ಚಾಚಿ ಬೇಡಬೇಕಾದ ಪರಿಸ್ಥಿತಿ ಇತ್ತು. ಭಾರತ ಆಹಾರ ಸ್ವಾವಲಂಬನೆ ಸಾಧಿಸಲು ಬಾಬು ಜಗಜೀವನ ರಾಂ ಪ್ರಮುಖ ಕಾರಣಕರ್ತರಲ್ಲೊಬ್ಬರು.
|
| 8 |
+
ರಕ್ಷಣಾ ಮಂತ್ರಿಯಾಗಿಯೂ ಕೆಲಸ ಮಾಡಿದ್ದರು. ದಕ್ಷ ಆಡಳಿತಗಾರ, ಕಾರ್ಮಿಕ ಕಾನೂನುಗಳ ರಚನೆಗೆ ಕಾರಣಕರ್ತರಾಗಿದ್ದರು. ದಲಿತರು, ಬಡವರು, ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿದ್ದ ಅವರನ್ನು ಸರಿಸಿ, ಅವರು ತೋರಿದ ದಾರಿಯಲ್ಲಿ ನಡೆಯುವುದು ನಮ ಕರ್ತವ್ಯ ಎಂದರು.
|
| 9 |
+
ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗ 100 ಕೋಟಿ ರೂ. ವೆಚ್ಚದಲ್ಲಿ ಬಾಬು ಜಗಜೀವನ ರಾಂ ಹೆಸರಿನ ಭವನ ನಿರ್ಮಿಸಿ ಅಲ್ಲಿ ವಿಜ್ಞಾನ, ಕೌಶಲ್ಯ ತರಬೇತಿ ನೀಡಲು ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದು, ಇದೇ 13 ರಂದು ತಾವು ಅದನ್ನು ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.
|
| 10 |
+
ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮಹದೇವಪ್ಪ, ಆರ್.ಬಿ.ತಿಮಾಪುರ್ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_86_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಮಂಗಳೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್
|
| 2 |
+
ಮಂಗಳೂರು,ಜು.6-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಬೆಳಿಗ್ಗೆ ಮಂಗಳೂರಿನ ಎಮ್ಮೆ ಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಕಸರತ್ತು ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
|
| 3 |
+
ಮಳೆಗಾಲ ಸಂದರ್ಭದಲ್ಲಿ ಸಂಭವಿಸಬಹುದಾದ ನೆರೆ ಹಾಗೂ ಇತರ ಪರಿಸ್ಥಿತಿಗಳ ಅವಲೋಕನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಕೈಗೊಂಡಿದ್ದಾರೆ.ನಿನ್ನೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಹಾಗೂ ಸೊಳ್ಳೆ ನಾಶ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಜೊತೆಗೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
|
| 4 |
+
ಇಂದೂ ಕೂಡ ಮಂಗಳೂರು ವಾಸ್ತವ್ಯವನ್ನು ಮುಂದುವರೆಸಿರುವ ಸಚಿವರು, ವಿವಿಧ ಅಭಿವೃದ್ಧಿ ಯೋಜನೆಗಳ ಪರಾಮರ್ಶೆ ಜೊತೆಗೆ ಮಳೆ ಅನಾಹುತಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
|
| 5 |
+
ಅದಕ್ಕೂ ಮುನ್ನ ಬೆಳಿಗ್ಗೆ ವಾಯುವಿಹಾರದ ಬಳಿಕ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಮೀನಿನಂತೆ ಈಜಿ ತಮ ದೈಹಿಕ ಕ್ಷಮತೆ ಪ್ರದರ್ಶನ ಮಾಡಿದರು.ಲೀಲಾಜಾಲವಾಗಿ ಸಚಿವರು ಈಜಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
|
eesanje/url_46_86_7.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪಕ್ಕೆ ಪರಮೇಶ್ವರ್ ತಿರುಗೇಟು
|
| 2 |
+
ಬೆಂಗಳೂರು,ಜು.6-ದಿಶಾ ಸಮಿತಿಯ ಸಭೆಗಳನ್ನು ಹೊರತುಪಡಿಸಿ ಕೇಂದ್ರ ಸಚಿವರು ನೇರವಾಗಿ ರಾಜ್ಯಸರ್ಕಾರದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲು ಅವಕಾಶ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
|
| 3 |
+
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪರಮೇಶ್ವರ್ರವರು, ಮುಖ್ಯಮಂತ್ರಿ ಹಾಗೂ ರಾಜ್ಯದ ಸಚಿವರನ್ನು ಹೊರತುಪಡಿಸಿ ಕೇಂದ್ರ ಸಚಿವರಿಗೆ ರಾಜ್ಯದ ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶಗಳಿಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿಯವರಿಗೆ ಈ ವಿಚಾರ ಚೆನ್ನಾಗಿ ಗೊತ್ತಿದೆ. ಆದರೂ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
|
| 4 |
+
ಮುಖ್ಯಮಂತ್ರಿಯಾದವರು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ಶಿಷ್ಟಾಚಾರದ ಪಾಲನೆಗೆ ಸೂಚನೆಗಳನ್ನು ಸರ್ಕಾರ ನೀಡುತ್ತದೆ. ಕುಮಾರಸ್ವಾಮಿ ಕೇಂದ್ರದ ಸಚಿವರಾಗಿದ್ದಾರೆ. ಅವರಿಗೆ ಪ್ರತ್ಯೇಕ ಶಿಷ್ಟಾಚಾರಗಳಿರುತ್ತವೆ. ಸಂಸದರು ಮತ್ತು ಕೇಂದ್ರ ಸಚಿವರಿಗೆ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ನಡೆಸಲು ದಿಶಾ ಸಮಿತಿ ಸಭೆಗಳಿರುತ್ತವೆ.
|
| 5 |
+
ಜೊತೆಗೆ ರಾಜ್ಯಸರ್ಕಾರದ ಸಚಿವರು ನಡೆಸುವ ಸಭೆಗಳಲ್ಲಿ ಭಾಗವಹಿಸಬಹುದು. ಅವರೇ ನೇರವಾಗಿ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶವಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯ ನಿಯಮಾವಳಿಗಳ ಪಾಲನೆಯಾಗಿತ್ತು ಎಂದು ಪ್ರತಿಪಾದಿಸಿದರು.
|
| 6 |
+
ಸಂಸದರಾಗಿದ್ದ ಡಿ.ಕೆ.ಶಿವಕುಮಾರ್ ಸಭೆ ಮಾಡಿ, ಪ್ರಗತಿ ಪರಿಶೀಲನೆ ನಡೆಸಿದ ಮಾಹಿತಿ ತಮಗಿಲ್ಲ. ನಾಲ್ಕು ಮಂದಿ ಅಧಿಕಾರಿಗಳನ್ನು ಕರೆದು ಚರ್ಚೆ ಮಾಡಿರಬಹುದು. ಆದರೆ ಪ್ರಗತಿ ಪರಿಶೀಲನೆ ನಡೆಸಲು ಅವರಿಗೂ ಅವಕಾಶವಿರಲಿಲ್ಲ ಎಂದರು.
|
| 7 |
+
ಮುಡಾ ನಿವೇಶನ ಹಂಚಿಕೆ ಹಗರಣ ಬಯಲಾಗಿರುವುದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪ ಆಧಾರರಹಿತ. ಈ ಬಗ್ಗೆ ಖುದ್ದು ಡಿ.ಕೆ.ಶಿವಕುಮಾರ್ರವರೇ ಸ್ಪಷ್ಟನೆ ನೀಡಿ ತಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.
|
| 8 |
+
ವಾಲೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಗತ್ಯ ಕಂಡುಬಂದರೆ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಅವರನ್ನು ವಿಚಾರಣೆಗೊಳಪಡಿಸಲಿದೆ ಎಂದರು.
|
| 9 |
+
ಮಾಹಿತಿ ಪಡೆಯುವ ಸಲುವಾಗಿ ಅವಶ್ಯಕತೆ ಇರುವವರಿಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುತ್ತಾರೆ. ನಾಗೇಂದ್ರ ಅವರ ಮೂರ್ನಾಲ್ಕು ಜನ ಆಪ್ತ ಸಹಾಯಕರಿಗೆ ಈಗಾಗಲೇ ನೋಟೀಸ್ ಕೊಟ್ಟು ವಿಚಾರಣೆ ನಡೆಸಲಾಗಿದೆ. ಅಗತ್ಯ ಬಿದ್ದರೆ ನಾಗೇಂದ್ರ ಅವರ���ಗೂ ನೋಟೀಸ್ ನೀಡಲಾಗುವುದು ಎಂದು ನುಡಿದರು.
|
| 10 |
+
ಹುಬ್ಬಳ್ಳಿಯಲ್ಲಿನ ಸಿದ್ದರಾಮೋತ್ಸವದ ಬಗ್ಗೆ ಈವರೆಗೂ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಯ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಪಾಲನೆಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಪ್ರತಿ ವರ್ಷ ಎರಡು ಬಾರಿ ಎಸ್ಪಿ ದರ್ಜೆಗಿಂತಲೂ ಮೇಲ್ಪಟ್ಟ ಅಧಿಕಾರಿಗಳ ಸಮೇಳನವನ್ನು ನಡೆಸಲಾಗುತ್ತದೆ.
|
| 11 |
+
ಸರ್ಕಾರದ ಆದ್ಯತೆಗಳೇನು? ಪೊಲೀಸ್ ಇಲಾಖೆ ಯಾವ ರೀತಿ ನಡೆದುಕೊಳ್ಳಬೇಕು. ಸಮಸ್ಯೆಗಳೇನು? ಅಗತ್ಯಗಳೇನು? ಎಂಬ ಬಗ್ಗೆ ಚರ್ಚೆ ಮಾಡಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇರಬೇಕು ಎಂಬ ಬಗ್ಗೆಯೂ ಮಾರ್ಗದರ್ಶನ ನೀಡಲಾಗುವುದು ಎಂದರು.
|
eesanje/url_46_86_8.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ, ನಿಟ್ಟುಸಿರು ಬಿಟ್ಟ ಜನ
|
| 2 |
+
ಬೆಂಗಳೂರು, ಜು.6-ಕಳೆದ ಎರಡು ತಿಂಗಳಿನಿಂದ ಸ್ಥಿರತೆ ಕಾಯ್ದುಕೊಂಡಿದ್ದ ತರಕಾರಿ ಬೆಲೆ ಹಂತ ಹಂತವಾಗಿ ಇಳಿಮುಖವಾಗುತ್ತಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಬಿರು ಬೇಸಿಗೆ ಹಾಗೂ ನೀರಿನ ಅಭಾವದಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಭಾರೀ ಹೊರೆಯಾಗಿತ್ತು. ಅದರಲ್ಲೂ ಬೀನ್ಸ್ ಡಬ್ಬಲ್ ಸೆಂಚುರಿ ಬಾರಿಸಿತ್ತು. ಕಳೆದ ಐದು ದಿನಗಳಿಂದ ಬೆಲೆಗಳು ಇಳಿಮುಖವಾಗುತ್ತಿವೆ.
|
| 3 |
+
ರಾಜ್ಯದ ವಿವಿಧೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಹೊಸ ಬೆಳೆಗಳು ಮಾರುಕಟ್ಟೆಗೆ ಬರುತ್ತಿದ್ದು, ಬೆಲೆಯಲ್ಲಿ ಇಳಿಮುಖವಾಗುತ್ತಿದೆ. ಜತೆಗೆ ಆಷಾಢ ಕೂಡ ಪ್ರಾರಂಭವಾಗಿದ್ದು, ಈ ಸಮಯದಲ್ಲಿ ಹೆಚ್ಚು ಶುಭ ಸಮಾರಂಭಗಳು ನಡೆಯದ ಹಿನ್ನೆಲೆಯಲ್ಲಿ ತರಕಾರಿಗಳ ಬೇಡಿಕೆ ಕಡಿಮೆಯಾಗಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಬಹುದು.
|
| 4 |
+
ಕೆಜಿಗೆ 200ರೂ. ಗಡಿ ದಾಟಿದ್ದ ಬೀನ್ಸ್ ಇದೀಗ 60ರೂ.ಗೆ ಬಂದಿದೆ. ಕ್ಯಾರೆಟ್ 50ರೂ., ಬದನೆಕಾಯಿ 40ರೂ., ಮೂಲಂಗಿ 30ರೂ., ಸೌತೆಕಾಯಿ 20ರೂ., ಟೊಮ್ಯಾಟೋ 50ರೂ., ಆಲೂಗಡ್ಡೆ 40ರೂ., ಬೆಂಡೆಕಾಯಿ 40ರೂ., ತೊಂಡೆಕಾಯಿ 30ರೂ., ಬೀಟ್ರೂಟ್ 40ರೂ., ಹಸಿಮೆಣಸಿನಕಾಯಿ 80ರೂ., ಕೋಸು 40ರೂ.ಗೆ ಇಳಿದಿದೆ.
|
| 5 |
+
ಕಳೆದ ಎರಡು ತಿಂಗಳಿನಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿತ್ತು. ಈ ಸಮಯದಲ್ಲಿ ಗ್ರಾಹಕರು ಹಾಗೂ ಚಿಲ್ಲರೆ ವ್ಯಾಪಾರಿಗಳು ಸಂಕಷ್ಟ ಎದುರಾಗಿತ್ತು. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ರಾಮನಗರ, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನೆಲಮಂಗಲ ಸೇರಿದಂತೆ ವಿವಿಧ ಭಾಗಗಳಿಂದ ಬೆಂಗಳೂರಿನ ಮಾರುಕಟ್ಟೆಗಳಿಗೆ ಅಪಾರ ಪ್ರಮಾಣದಲ್ಲಿ ಮಾಲು ಬರುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಲಿದೆ.
|
eesanje/url_46_86_9.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
100 ಕೋಟಿ ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ
|
| 2 |
+
ತುಮಕೂರು, ಜು.6-ಮೆಟೋಪಾಲಿಟನ್ ಸೀಟಿ ಮಾದರಿಯಲ್ಲೇ ತುಮಕೂರು ರೈಲ್ವೆ ನಿಲ್ದಾಣವನ್ನು ನೂರು ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಸಂಬಂಧ ಚರ್ಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ತಿಂಗಳು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಸಂದರ್ಭದಲ್ಲಿ ರಾಜ್ಯ ಸೇರಿದಂತೆ ದೇಶಕ್ಕೆ ಸಿಹಿ ಸುದ್ದಿ ನೀಡುತ್ತೇವೆ ಎಂದರು.
|
| 3 |
+
ತುಮಕೂರು ಬೆಂಗಳೂರಿಗೆ ಸಮೀಪವಿರುವುದರಿಂದ ತುಮಕೂರು ಮತ್ತಷ್ಟು ಅಭಿವೃದ್ಧಿಯಾಗಬೇಕು. ಜಿಲ್ಲೆಯ ಮೂಲಕವೇ ಹಲವು ನಗರಗಳಿಗೆ ರೈಲ್ವೆ ಸಂಪರ್ಕ ಇರುವುದರಿಂದ ಮೇಲ್ದರ್ಜೆಗೇರಿಸುಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ಗುರುವಾರದವರೆಗೆ ಕೇಂದ್ರ ಸ್ಥಾನ ದೆಹಲಿಯಲ್ಲೇ ಇದ್ದು, ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಆದೇಶವಿರುವುದರಿಂದ ಕೇಂದ್ರ ಸ್ಥಾನದಲ್ಲೇ ಇರಬೇಕಾಗುತ್ತದೆ. ಈ ಬಗ್ಗೆ ಜನರಿಗೆ ಗೊಂದಲ ಬೇಡ ಎಂದರು.
|
| 4 |
+
ಗುರುವಾರದಿಂದ ಭಾನುವಾರದವರೆಗೆ ಜನರ ಜೊತೆಯಲ್ಲಿ ಇರುತ್ತೇನೆ ಎಂದ ಸಚಿವರು, ಕಾರ್ಪೊರೇಟರ್ ಆಗಿ, ಶಾಸಕನಾಗಿ, ಸಚಿವನಾಗಿ ಈಗ ಕೇಂದ್ರ ಸರ್ಕಾರದಲ್ಲಿ ಸಚಿವನಾಗಿದ್ದು, ಜಿಲ್ಲೆಯ ಜನತೆ ಆಶೀರ್ವದಿಸಿ ಕೇಂದ್ರ ಸಚಿವನನ್ನಾಗಿ ಮಾಡಿದ್ದಾರೆ.
|
| 5 |
+
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ತುಮಕೂರು ದಾವಣಗೆರೆಯ ರೈಲ್ವೆ ಮಾರ್ಗ ಕಾಮಗಾರಿಗೆ 600 ಕೋಟಿ ರೂ., ರೈಲ್ವೆ ವಿದ್ಯುದ್ದೀಕರಣಕ್ಕೆ 389 ಕೋಟಿ ರೂ. ಮೀಸಲಿಡಲಾಗಿದೆ. ತುಮಕೂರು ರಾಯದುರ್ಗ, ತುಮಕೂರು ದಾವಣಗೆರೆ ರೈಲ್ವೆ ಮಾರ್ಗಗಳ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು.
|
| 6 |
+
ಮಾಜಿ ಸಂಸದ ಜಿ.ಎಸ್.ಬಸವರಾಜು ಅವರ ಕನಸಿನಂತೆ ಬಾಕಿ ಉಳಿದಿರುವ ರಿಂಗ್ ರೋಡ್, ವಸಂತ ನರಸಪುರ, ಮದ್ರಾಸ್ ಕಾರಿಡಾರ್ ರಸ್ತೆಗೆ ಶೀಘ್ರ ಚಾಲನೆ ನೀಡಲಾಗುವುದು. ಶಿರಾ ಮತ್ತು ಬೆಂಗಳೂರಿನ ಮಾದವರವರೆಗಿನ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಇರುತ್ತದೆ. ಇದನ್ನು ಸರಿಪಡಿಸಲು ನೂತನ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.ಶಾಸಕ ಜ್ಯೋತಿಗಣೇಶ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಜತೆಯಲ್ಲಿದ್ದರು.
|
eesanje/url_46_87_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಂಗಳೂರು ವಿಮಾನನಿಲ್ದಾಣದಿಂದ ಅಂತಾರಾಷ್ಟ್ರೀಯ ಸರಕು ಸಾಗಣೆ ಸೇವೆ ಆರಂಭ
|
| 2 |
+
ಮಂಗಳೂರು,ಜುಲೈ 6-ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್ನಿಂದ (ಸರಕು ಸಾಗಣೆ )ಐಕ್ಸ್ -815 ವಿಮಾನದಲ್ಲಿ 2,522 ಕೆಜಿ ಹಣ್ಣುಗಳು ಮತ್ತು ತರಕಾರಿಗಳನ್ನು ಅಬುಧಾಬಿಗೆ ಸಾಗಿಸಲಾಗಿದೆ. ಇಂದಿನಿಂದ ಅಧಿಕೃತವಾಗಿ ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
|
| 3 |
+
ಎಎಎಚ್ಎಲ್ ಕಾರ್ಗೋ ತಂಡ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಸ್ಟಮ್ಸ್, ಮತ್ತು ಇಂಡಿಗೋ ಮತ್ತು ಏರ್ ಇಂಡಿಯಾ ಎಕ್್ಸಪ್ರೆಸ್ ಮತ್ತು ಸಿಐಎಸ್ಎಫ್ನ ಏರ್ಪೋರ್ಟ್ ಸೆಕ್ಯುರಿಟಿ ಗ್ರೂಪ್ನ ಪ್ರತಿನಿಧಿಗಳ ಸಮುಖದಲ್ಲಿ ಔಪಚಾರಿಕ ಚಾಲನೆ ನೀಡಲಾಯಿತು .
|
| 4 |
+
ವಿಮಾನ ನಿಲ್ದಾಣವು ದೇಶೀಯ ಸರಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಒಂದು ವರ್ಷದ ನಂತರ ಈಗ ಅಂತರಾಷ್ಟ್ರೀಯ ವಲಯ ಪ್ರವೇಶಿಸಿದ್ದೇವೆ ಹೆಚ್ಚಿನ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
|
| 5 |
+
ಕಳೆದ ಮೇ 10 ರಂದು ಕಸ್ಟಮ್ಸ್ ಕಮಿಷನರ್ ಅವರು ವಿಮಾನ ನಿಲ್ದಾಣವನ್ನು ಕಸ್ಟೋಡಿಯನ್ ಮತ್ತು ಕಸ್ಟಮ್ಸ್ ಕಾರ್ಗೋ ಸರ್ವಿಸ್ ಪೊವೈಡರ್ ನೇಮಿಸಿದ್ದಾರೆ, ಇದು ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಗಳ ಪ್ರಾರಂಭಕ್ಕೆ ಹಸಿರು ನಿಶಾನೆಯಾಗಿದೆ.
|
| 6 |
+
ಅಂತರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳ ಪ್ರಾರಂಭವು ಕರಾವಳಿ ಕರ್ನಾಟಕ ಮತ್ತು ಕೇರಳ ಮತ್ತು ಒಳನಾಡಿನ ರಫ್ತುದಾರರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಆಹಾರ, ಯಂತ್ರದ ಭಾಗಗಳು, ಜವಳಿ, ಶೂಗಳು, ಉಷ್ಣವಲಯದ ಮೀನು, ಘನೀಕತ ಮತ್ತು ಒಣ ಮೀನು, ಪ್ಲಾಸ್ಟಿಕ್ ಬಣ್ಣ ಸಾಮಗ್ರಿಗಳು ಮತ್ತು ಹಡಗು ಭಾಗಗಳಂತಹ ಹಾಳಾಗುವ ವಸ್ತುಗಳನ್ನು ರಫ್ತು ಮಾಡಲು ಅನುವು ಮಾಡಿಕೊಡುತ್ತದೆ.
|
| 7 |
+
ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ಗಳು ತಮ ಸಂಪರ್ಕದೊಂದಿಗೆ ದುಬೈ, ದೋಹಾ, ದವಾಮ್, ಕುವೈತ್, ಮಸ್ಕತ್, ಅಬುಧಾಬಿ ಮತ್ತು ಬಹ್ರೇನ್ಗಳಿಗೆ ಸರಕುಗಳನ್ನು ಕಳುಹಿಸುತ್ತಿದೆ.
|
| 8 |
+
ದೇಶೀಯ ಕಾರ್ಗೋದಲ್ಲಿ 2024-25 ರ ಹಣಕಾಸು ವರ್ಷದಲ್ಲಿ ಮೇ 1, 2023 ರಿಂದ ತನ್ನ ಕಾರ್ಯಾಚರಣೆಯ ಮೊದಲ 11 ತಿಂಗಳುಗಳಲ್ಲಿ 3706.02 ಟನ್ ಸರಕುಗಳನ್ನು ನಿರ್ವಹಿಸುವಲ್ಲಿ ವಿಮಾನ ನಿಲ್ದಾಣವು ಉತ್ತಮವಾಗಿ ಕಾರ್ಯನಿರ್ವಹಿಸಿದೆ.
|
eesanje/url_46_87_10.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ, ಆರೇಂಜ್ ಅಲರ್ಟ್ ಘೋಷಣೆ
|
| 2 |
+
ಬೆಂಗಳೂರು, ಜು.5-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಕೇರಳ ಕರಾವಳಿಯಿಂದ ದಕ್ಷಿಣ ಗುಜರಾತ್ವರೆಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
|
| 3 |
+
ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಜುಲೈ 8 ಮತ್ತು 9ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
|
| 4 |
+
ಕಳೆದೊಂದು ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳು ಮೈದುಂಬಿ ಹರಿಯುತ್ತಿವೆ. ಕೆಲವೆಡೆ ಭೂ ಕುಸಿತವೂ ಉಂಟಾಗಿದೆ. ಮರ, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
|
| 5 |
+
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆಗಳಿದ್ದು, ಆರೇಂಜ್ ಅಲರ್ಟ್ ನೀಡಲಾಗಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
|
eesanje/url_46_87_11.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿಎಂ ಸ್ಥಾನದ ಆಕಾಂಕ್ಷಿಗಳಿಂದ ಮೂಡಾ ಹಗರಣ ಬಯಲು : ಹೆಚ್ಡಿಕೆ ಸ್ಪೋಟಕ ಹೇಳಿಕೆ
|
| 2 |
+
ಬೆಂಗಳೂರು, ಜು.5-ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೈಸೂರಿನ ಮೂಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
|
| 3 |
+
ಮಂಡ್ಯದಲ್ಲಿ ಜನತಾ ದರ್ಶನ ಆರಂಭಿಸುವ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.ಇಷ್ಟು ದಿನಗಳ ಕಾಲ ಹೊರಗೆ ಬಾರದ ಮೂಡಾ ಹಗರಣ ಈಗ ಬೆಳಕಿಗೆ ಬಂದಿರುವುದು ಏಕೆ? ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿಯ ಮೇಲೆ ಟವೆಲ್ ಹಾಕಿರುವವರ ಪಾತ್ರವಿದೆ ಎಂದು ಆರೋಪಿಸಿದ್ದಾರೆ.
|
| 4 |
+
ಸಿಡಿ ಫ್ಯಾಕ್ಟರಿ ಬಂದ್ ಆಯ್ತು. ಮೂಡಾ ಫ್ಯಾಕ್ಟರಿ ಶುರುವಾಯ್ತು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಮೂಡಾ ಹಗರಣ ಹೊರಬರಲು ಕಾಂಗ್ರೆಸ್ನವರು ಒಳಗೇ ಕುಮಕ್ಕು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಮಾಹಿತಿ ಇದೆ.
|
| 5 |
+
ಮುಖ್ಯಮಂತ್ರಿ ಅವರ ಪತ್ನಿಗೆ ಆ ಜಾಗ ಹೇಗೆ ಬಂದಿದೆ ಎಂಬುದೂ ಗೊತ್ತಿದೆ ಎಂದಿದ್ದಾರೆ.ಸುಮಾರು 62 ಕೋಟಿ ರೂ. ಪರಿಹಾರ ಕೇಳುವ ಮುಖ್ಯಮಂತ್ರಿ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.
|
eesanje/url_46_87_12.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಮೇಲ್ಮನೆ ಉಪ ಚುನಾವಣೆ : ಬಸನಗೌಡ ಬಾದರ್ಲಿ ಅವಿರೋಧ ಆಯ್ಕೆ
|
| 2 |
+
ಬೆಂಗಳೂರು, ಜು.5– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
|
| 3 |
+
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಚುನಾವಣೆಯಲ್ಲಿ ಸ್ಪರ್ಧಿಸದೇ ದೂರ ಉಳಿದಿದ್ದವು.
|
| 4 |
+
ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಮಾತ್ರ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಲಿದ್ದಾರೆ. ಇವರ ಮೇಲನೆ ಸದಸ್ಯತ್ವದ ಅವಧಿ 2028ರ ಜೂನ್ 14ರವರೆಗೆ ಇರಲಿದೆ. ಈ ಚುನಾವಣಾ ಫಲಿತಾಂಶದ ನಂತರ ಮೇಲನೆಯಲ್ಲಿ ಕಾಂಗ್ರೆಸ್ ಸದಸ್ಯರ ಬಲ 33ಕ್ಕೆ ಹೆಚ್ಚಾಗಲಿದೆ.
|
eesanje/url_46_87_2.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಲೆನಾಡು-ಕರಾವಳಿ ಭಾಗಗಳಲ್ಲಿ ಮುಂದುವರೆದ ಮಳೆ ಆರ್ಭಟ,ಜನಜೀವನ ಅಸ್ತವ್ಯಸ್ತ
|
| 2 |
+
ಬೆಂಗಳೂರು,ಜು.6-ಮಲೆನಾಡು, ಕರಾವಳಿ, ಉತ್ತರಕನ್ನಡ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಹಲವೆಡೆ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಗಾತ್ರದ ಮರಗಳು ಧರೆಗುರುಳಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
|
| 3 |
+
ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈಮುಗಿಲನ್ ತಿಳಿಸಿದ್ದಾರೆ.
|
| 4 |
+
ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಂಬ ಮತ್ತು ತಂತಿಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
|
| 5 |
+
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ದಾಖಲೆಯ ಮಳೆಯಾಗಿದೆ. ಚಾರ್ಮುಡಿಘಾಟ್ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. ಬಾಳೂರು, ಮಲೆಮನೆ, ಮದುಗುಂಡಿ, ಜಾವಳಿ ಕೋಗ್ರೆ ಮುಂತಾದ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ, ಕುದುರೆಮುಖ ಭಾಗದಲ್ಲಿಯೂ ಭಾರೀ ಮಳೆ ಸುರಿಯುತ್ತಿದ್ದು, ತುಂಗಭದ್ರ, ಹೇಮಾವತಿ ನದಿನೀರಿನ ಮಟ್ಟ ಏರಿಕೆಯಾಗಿದೆ.
|
| 6 |
+
ಉತ್ತರಕನ್ನಡ ಭಾಗದಲ್ಲೂ ಕೂಡ ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೊಲಗದ್ದೆಗಳು ನೀರಿನಿಂದ ತುಂಬಿದ್ದು, ಜನ ಮನೆಯಲ್ಲಿ ಇರಲಾರದೆ ಹೊರಗೂ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ದೇವಾಲಯಗಳು, ಶಾಲಾಕಾಲೇಜುಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆ ಸಂಚಾರದಲ್ಲೂ ಕೂಡ ವ್ಯತ್ಯವಾಗಿದ್ದು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
|
| 7 |
+
ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜನಜಾನುವಾರುಗಳ ಸಾವುನೋವು ಸಂಭವಿಸದಂತೆ ಎಚ್ಚರ ವಹಿಸಲಾಗಿದೆ.ಇತ್ತ ಕೊಡಗು, ಕಾವೇರಿ, ಜಲಾನಯನ ಪ್ರದೇಶದಲ್ಲೂ ಕೂಡ ಮಳೆ ಮುಂದುವರೆದಿದೆ. ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
|
eesanje/url_46_87_3.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ಜಾರಿ
|
| 2 |
+
ಬೆಂಗಳೂರು,ಜು.6– ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ, ಕೆಕೆಆರ್ಟಿಸಿ, ಕೆಯುಡಬ್ಲುಎಸ್ಡಿಬಿಯ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಜು.13 ಮತ್ತು 14ರಂದು ನಡೆಯಲಿದೆ. ಈ ಪರೀಕ್ಷೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಪುರುಷ ಅಭ್ಯರ್ಥಿಗಳು ತುಂಬು ತೋಳಿನ ಅಂಗಿ, ಜೀನ್ಸ್ ಪ್ಯಾಂಟ್, ಕಸೂತಿ ಬಟ್ಟೆ, ಶೂ, ಕಿವಿಯೋಲೆ, ಉಂಗುರ, ಸರ, ಕಡಗ ಧರಿಸುವುದನ್ನು ನಿಷೇಧಿಸಲಾಗಿದೆ
|
| 3 |
+
ಅರ್ಧತೋಳಿನ ಅಂಗಿ, ಕುರ್ತ, ಫೈಜಾಮ, ಜೇಬುಗಳು ಕಡಿಮೆ ಇರುವ ಪ್ಯಾಂಟ್, ತೆಳುವಾದ ಚಪ್ಪಲಿ ಧರಿಸಬಹುದಾಗಿದೆ. ಮಹಿಳಾ ಅಭ್ಯರ್ಥಿಗಳು ಕಸೂತಿ, ಹೂಗಳು, ಬ್ರೂಚ್ಗಳು, ಬಟನ್ಗಳು ಹೊಂದಿರುವ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್, ಎತ್ತರವಾದ ಹಿಮಡಿಯ ಶೂ, ಚಪ್ಪಲಿಗಳನ್ನು, ಮಂಗಳಸೂತ್ರ , ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಪರೀಕ್ಷಾ ಕೊಠಡಿಗೆ ನಿಷೇಧಿಸಿದೆ. ಅರ್ಧತೋಳಿನ ಬಟ್ಟೆಗಳನ್ನು , ತೆಳುವಾದ ಅಡಿ ಭಾಗ ಹೊಂದಿರುವ ಚಪ್ಪಲಿಗಳನ್ನು ಧರಿಸಬಹುದಾಗಿದೆ.
|
| 4 |
+
ಈ ಡ್ರೆಸ್ ಕೋಡ್ ಅನುಸರಿಸುವುದರ ಜೊತೆಗೆ ಎಲ್ಲ ಅಭ್ಯರ್ಥಿಗಳು ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಪೆನ್ಡ್ರೈವ್, ಮೈಕ್ರೊಫೋನ್, ಬ್ಲೂಟೂತ್, ಕೈಗಡಿಯಾರ, ತಿನ್ನಬಹುದಾದ ಪದಾರ್ಥಗಳು, ಕುಡಿಯುವ ನೀರಿನ ಬಾಟಲ್, ಪೆನ್ಸಿಲ್, ಪೇಪರ್, ಎರೈಸರ್, ಟೋಪಿ, ಮಾಸ್ಕ್ ನಿಷೇಧಿಸಲಾಗಿದೆ.
|
| 5 |
+
ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಗುರುತಿನಚೀಟಿ ತರುವುದು ಕಡ್ಡಾಯವಾಗಿದ್ದು, ಪರೀಕ್ಷೆಯ ಕೊನೆಯ ಗಂಟೆ ಬಾರಿಸಿದ ನಂತರ ಅಭ್ಯರ್ಥಿಗಳು ಹೊರಹೋಗಲು ಮಾತ್ರ ಅನುಮತಿ ಇರುತ್ತದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
|
eesanje/url_46_87_4.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮುಡಾದಲ್ಲಿ ಯಾವ ಹಗರಣವೂ ನಡೆದಿಲ್ಲ : ಸಚಿವ ಬೈರತಿ ಸುರೇಶ್
|
| 2 |
+
ಮೈಸೂರು, ಜು.5-ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಯಾವ ಹಗರಣ ಇದೆ. ಅದರಲ್ಲಿ ಯಾವ ಹಗರಣವೂ ಇಲ್ಲ. ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಯಾರಿಗೆ ನಿವೇಶನ ನೀಡಲಾಗಿದೆ ಎಂಬ ವಿಚಾರವನ್ನು ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
|
| 3 |
+
ನಿವೇಶನವನ್ನೂ ರೈತರಿಗೆ, ಖಾಸಗಿಯವರಿಗೆ, ಏಜೆಂಟರಿಗೆ ನಿವೇಶನ ನೀಡಲಾಗಿದೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಹಗರಣ ಎಂದು ಸಾಬೀತು ಆದ ಮೇಲೆ ಮುಂದಿನ ಚರ್ಚೆ ಮಾಡಬಹುದು ಎಂದರು.
|
| 4 |
+
ಈ ಪ್ರಕರಣಕ್ಕೂ ಡಿ.ಕೆ.ಶಿವುಕುಮಾರ್ ಅವರಿಗೂ ಸಂಬಂಧ ಇಲ್ಲ. ಅವರು ಬೆಂಗಳೂರಿನ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಮೈಸೂರಿನಲ್ಲಿ ಅವರ ಪಾತ್ರ ಇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು. ಮುಡಾದಲ್ಲಿ ಏನಾಗಿದೆ ಎಂದು ಸಿಬಿಐ ತನಿಖೆಗೆ ಒಪ್ಪಿಸಬೇಕು. ಹಗರಣ ನಡೆದಿದ್ದರೆ ತಾನೇ ಸಿಬಿಐಗೆ ವಹಿಸುವುದು. ಏನು ಆಗೇ ಇಲ್ಲ ಎಂದ ಮೇಲೆ ಸಿಬಿಐ ತನಿಖೆ ಯಾಕೆ ಎಂದ ಅವರು, ನಮಲ್ಲಿ ಪೊಲೀಸ್ ಅಧಿಕಾರಿಗಳಿಲ್ಲವೇ, ಬಿಜೆಪಿಯವರು ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು ಎಂದು ಪ್ರಶ್ನಿಸಿದರು.
|
| 5 |
+
ಮುಡಾ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈತರಿಗೆ ನಿವೇಶನ ನೀಡದೇ ಮೂರನೇ ವ್ಯಕ್ತಿಗಳಿಗೆ ನೀಡಲಾಗಿದೆ ಎಂಬ ಆರೋಪವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಅದರ ಪರಿಶೀಲನೆಗೆ ತನಿಖೆ ನಡೆಸುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ.
|
| 6 |
+
ಅದು ಮುಗಿಯುವವರೆಗೂ ಕಾಯಬೇಕು. ಅದಕ್ಕೂ ಮೊದಲು ಸಿಬಿಐ, ಎಫ್ಬಿಐ ತನಿಖೆಗೆ ಕೊಡಿ ಎಂದರೆ ಬಿಜೆಪಿ-ಜೆಡಿಎಸ್ನವರು ಹೇಳಿದರೆ, ಸರ್ಕಾರ ಅದನ್ನು ಪಾಲನೆ ಮಾಡಬೇಕೆ. ಸರ್ಕಾರಕ್ಕೆ ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡಲಿದೆ ಎಂದರು. ಕಾಂಗ್ರೆಸ್ನಲ್ಲಿ ಯಾವುದೇ ಬಣಗಳಿಲ್ಲ ಎಂದು ಸ್ಪಷ್ಟ ಪಡಿಸಿದ ಅವರು, ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
|
| 7 |
+
ವಿಶ್ವನಾಥ್ ತಮ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದಾರೆ. ರಿಯಲ್ ಎಸ್ಟೇಟ್ ಗಿರಾಕಿ ಎಂದಿದ್ದಾರೆ. ನನಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ. ವಯಸ್ಸಿಗೆ ಮರ್ಯಾದೆ ಕೊಟ್ಟು ಇಷ್ಟು ದಿನ ಸುಮನಿದ್ದೆ. ಯಾರ್ರಿ ಅವನು ವಿಶ್ವನಾಥ್ ಎಂದು ಸಿಡಿಮಿಡಿಯಾದ ಸಚಿವರು, ಅವನು ಅವನ ಮಗ ನನ್ನ ಬಳಿ ಬಂದು ನಿವೇಶನ ಕೇಳಿದ್ದರು. ಆ ಕುರಿತ ಫೋಟೋ ನನ್ನ ಬಳಿ ಇದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತೇನೆ. ಅದೇನು ವ್ಯವಹಾರ ಅಲ್ಲವೇ ಅವನಂತೆ ನಾನೇನು ರೊಲ್ಕಾಲ್ ಗಿರಾಕಿ ಅಲ್ಲ ಎಂದು ತಿರುಗೇಟು ನೀಡಿದರು.
|
eesanje/url_46_87_5.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕೇಂದ್ರ ಪುರಸ್ಕೃತ ಯೋಜನೆಗಳ ಹಣ ಬಿಡುಗಡೆಗೆ ಮೂಗುದಾರ ಹಾಕಿದ ‘ಗ್ಯಾರಂಟಿ’ ಸರ್ಕಾರ
|
| 2 |
+
ಬೆಂಗಳೂರು,ಜು.5-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಬೊಕ್ಕಸದಿಂದ ಹಣ ಬಿಡುಗಡೆಗೆ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದೆ.ಜೊತೆಯಲ್ಲೇ ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಬಿಡುಗಡೆಗೆ ಮುನ್ನ ರಾಜ್ಯ ಆರ್ಥಿಕ ಇಲಾಖೆಯ ಪೂರ್ವಾನುಮತಿ ಕಡ್ಡಾಯ ಎಂಬ ಸುತ್ತೋಲೆ ರವಾನಿಸಲಾಗಿದೆ.ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಅವರು 16 ಪುಟಗಳ ಸುತ್ತೋಲೆಯನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ, ನಿಗಮ ಮಂಡಳಿಗಳು, ಅರೆ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಪ್ರಮುಖರಿಗೆ ಕಳುಹಿಸಿದ್ದಾರೆ.
|
| 3 |
+
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈ ಮೊದಲು ಪೂರ್ವ ನಿರ್ಧರಿತ ಅನುಮೋದನೆ ಆಧರಿತವಾಗಿ ಹಣ ಬಿಡುಗಡೆಯಾಗುತ್ತಿತ್ತು. ಅದಕ್ಕೆ ಕಡಿವಾಣ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಸಮಾನ್, ಫಸಲ್ ಭೀಮಾ ಸೇರಿದಂತೆ ಹಲವು ಯೋಜನೆಗಳಿಗೆ ಹಣ ಬಿಡುಗಡೆಗೂ ಮುನ್ನ ಆರ್ಥಿಕ ಇಲಾಖೆ ಅನುಮತಿ ಅಗತ್ಯ ಎಂದು ಆದೇಶಿಸಲಾಗಿದೆ.
|
| 4 |
+
ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಕೆಆರ್ಐಡಿಎಲ್ನಂತಹ ಸಂಸ್ಥೆಗಳು, ಗಂಗಕಲ್ಯಾಣ, ಸ್ವಾವಲಂಬನೆ ಯೋಜನೆಯಂತಹ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡುವ ಮುನ್ನ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯುವಂತೆ ತಾಕೀತು ಮಾಡಲಾಗಿದೆ.
|
| 5 |
+
ಕೆಲವು ಯೋಜನೆಗಳಿಗೆ ಅದರಲ್ಲೂ 10 ಕೋಟಿಗಿಂತ ಕಡಿಮೆ ವೆಚ್ಚದ ಕಾರ್ಯಕ್ರಮಗಳಿಗೆ ಕರ್ನಾಟಕ ಪಾರದರ್ಶಕ ಅಧಿನಿಯಮ ಪಾಲನೆ ಮಾಡಿ ಹಣ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದೆ.
|
| 6 |
+
ಷೇರು ಬಂಡವಾಳ ಹೂಡಿಕೆ ಮತ್ತು ಸಾಲ ಪಾವತಿ ವಿಚಾರಗಳಿಗೂ ನಿಯಂತ್ರಣ ಹೇರಲಾಗಿದೆ. ಸರ್ಕಾರದ ಬಹುನಿರೀಕ್ಷಿತ ಶಕ್ತಿ, ಯುವನಿಧಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇವುಗಳಡಿ ಹಣ ಬಿಡುಗಡೆ ಮಾಡುವಾಗ ಆರ್ಥಿಕ ಇಲಾಖೆಯಿಂದ ಕಡತದಲ್ಲಿ ಪೂರ್ವಾನುಮೋದನೆ ಪಡೆಯಬೇಕೆಂದು ಸೂಚಿಸಲಾಗಿದೆ.
|
| 7 |
+
ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಹಣ ಬಿಡುಗಡೆಯಾಗುವ ಹಿಂದಿನ ಪಾವತಿಯಲ್ಲಿ ಶೇ.75ರಷ್ಟು ಬಳಕೆಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು, ಈ ವರ್ಷದ ಜುಲೈನಿಂದ ಸೆಪ್ಟೆಂಬರ್ವರೆಗೆ ಆಯವ್ಯಯ ಅಂದಾಜಿನ 12/1 ಭಾಗವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಬೇಕು. ಬಂಡವಾಳ ವೆಚ್ಚದ ಹಣ ಬಿಡುಗಡೆ ಸಂದರ್ಭದಲ್ಲಿ ಸರ್ಕಾರ ಅನುಮೋದಿಸಿದ ಯೋಜನೆಗಳಿಗೆ ಮಾತ್ರ ಅವಕಾಶ ನೀಡಬೇಕು.
|
| 8 |
+
ಆರ್ಥಿಕ ಇಲಾಖೆಯ ಅಂಕಿತ ಪತ್ರ ಇಲ್ಲದೆ ಆಯಾ ಇಲಾಖೆಗಳ ಬಿಲ್ಗಳನ್ನು ನೇರವಾಗಿ ಪಾವತಿಸತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಪಂಚಖಾತ್ರಿ ಯೋಜನೆಗಳ ಜಾರಿಯ ಬಳಿಕ ಆರ್ಥಿಕವಾಗಿ ಸಾಕಷ್ಟು ಹ��ನ್ನಡೆಯಾಗಿದೆ. ಸಂಪನೂಲ ಕೊರತೆ ಇದೆ ಎಂಬ ಆರೋಪಗಳನ್ನು ವಿರೋಧ ಪಕ್ಷಗಳು ಪದೇ ಪದೇ ಮಾಡುತ್ತಲೇ ಇವೆ. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧೀನದಲ್ಲಿರುವ ಆರ್ಥಿಕ ಇಲಾಖೆಯು ಪ್ರತಿಯೊಂದು ವಹಿವಾಟಿನ ಮೇಲೂ ನಿಗಾ ಇಡುವ ಆದೇಶ ಹೊರಡಿಸಿರುವುದು ಗಮನ ಸೆಳೆದಿದೆ.
|
| 9 |
+
ಮತ್ತೊಂದೆಡೆ 14 ಬಜೆಟ್ಗಳನ್ನು ಮಂಡಿಸಿ ಅನುಭವಿಯಾಗಿರುವ ಸಿದ್ದರಾಮಯ್ಯನವರು, ಹಣಕಾಸು ವ್ಯವಸ್ಥೆಯಲ್ಲಿ ಶಿಸ್ತು ತರಲು ಈ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಸ್ವಾಗತಾರ್ಹ. ಬೇಕಾಬಿಟ್ಟಿ ಹಣ ಬಿಡುಗಡೆಯಾಗಿ ದುರ್ಬಳಕೆಯಾಗುವುದು ತಪ್ಪುತ್ತದೆ. ಜನರ ತೆರಿಗೆ ಹಣದ ರಕ್ಷಣೆ ಸರ್ಕಾರದ ಹೊಣೆ ಎಂಬ ಸಮರ್ಥನೆಗಳು ಕೇಳಿಬರುತ್ತಿದೆ.
|
eesanje/url_46_87_6.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ವರ್ಗಾವಣೆಗೆ ಶಿಫಾರಸು ತರಬೇಡಿ : ಕಮಿಷನರ್ ದಯಾನಂದ ಎಚ್ಚರಿಕೆ
|
| 2 |
+
ಬೆಂಗಳೂರು,ಜು.5-ವರ್ಗಾವಣೆಗೆ ಯಾವುದೇ ಶಿಫಾರಸು, ಒತ್ತಡ ತರಬೇಡಿ ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್ ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕಕವಾಯಿತಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
|
| 3 |
+
ಬಡ್ತಿಯಾಗಲಿ, ವರ್ಗಾವಣೆಯಾಗಲಿ ಪಾರದರ್ಶಕವಾಗಿರಲಿದೆ, ಏಕರೂಪದಲ್ಲಿ ಕೌನ್ಸಿಲಿಂಗ್ ಮೂಲಕ ನಡೆಯಲಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ, ವರ್ಗಾವಣೆಯ ಪಟ್ಟಿ ರೆಡಿಯಾಗುತ್ತಿದೆ. ನಮ ಇಲಾಖೆಯಲ್ಲದೆ ಬೇರೆ ಬೇರೆ ಇಲಾಖೆಗಳಲ್ಲೂ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು.
|
| 4 |
+
ಈಗಾಗಲೇ ಎಎಸ್ಐ ಮಟ್ಟದ ಅಧಿಕಾರಿಗಳಿಗೆ ಪಿಎಸ್ಐ ಬಡ್ತಿ ನೀಡಲಾಗಿದೆ. ಇದೀಗ ಹೆಡ್ ಕಾನ್ಸ್ಟೇಬಲ್ನಿಂದ ಎಎಸ್ಐ ಹಾಗೂ ಕಾನ್ಸ್ಟೇಬಲ್ನಿಂದ ಹೆಡ್ ಕಾನ್ಸ್ಟೇಬಲ್ಗೆ ಬಡ್ತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
|
| 5 |
+
ಪ್ರಶಂಸೆ:ನಗರದ ಪೊಲೀಸರ ಕಾರ್ಯತತ್ಪರತೆ ಹಾಗೂ ವೃತ್ತಿ ಕೌಶಲ್ಯವನ್ನು ಪ್ರಶಂಸಿಸಿದ ಆಯುಕ್ತರು, ಇತ್ತೀಚಿನ ಕೆಲವು ಪ್ರಕರಗಳ ತನಿಖೆಯಿಂದಾಗಿ ಪೊಲೀಸರ ವೃತ್ತಿ ಕೌಶಲ್ಯವನ್ನು ಎಲ್ಲಾ ಕಡೆ ಶ್ಲಾಘಿಸಲಾಗುತ್ತಿದೆ. ಇದು ಅಭಿನಂದನಾರ್ಹ ಅಂಶ. ನಗರದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮನ್ನಣೆ ದೊರೆಯುತ್ತಿದೆ. ಇದೊಂದು ಟೀಂ ವರ್ಕ್ ಕೆಲಸಕ್ಕೆ ಸಾಕ್ಷಿ ಎಂದು ಭಾವಿಸಿದ್ದೇನೆ ಎಂದರು.
|
| 6 |
+
ಇದೇ ರೀತಿ ವೃತ್ತಿಪರತೆ, ಕರ್ತವ್ಯ ತತ್ಪರತೆ, ಸಮಯ ಪ್ರಜ್ಞೆ, ಎಲ್ಲಾ ವಿಷಯಗಳನ್ನು ನಾವು ಪಾಲನೆ ಮಾಡಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.
|
| 7 |
+
ಸ್ವತ್ತಿನ ಅಪರಾಧ ತಡೆಗಟ್ಟಿ:ಪ್ರಮುಖವಾಗಿ ಅಪರಾಧ ಪ್ರಕರಣಗಳ ಪೈಕಿ ಸ್ವತ್ತಿನ ಅಪರಾಧಗಳ ಆರೋಪಿಗಳನ್ನು ಪತ್ತೆಹಚ್ಚಲು ಕರ್ತವ್ಯ ಪ್ರಜ್ಞೆ ತೋರಿಸಬೇಕು. ಸಾರ್ವಜನಿಕರ ಜೀವನದ ದುಡಿಮೆಯ ಹಣವಾಗಲಿ, ಸ್ವತ್ತು ಇಲ್ಲವೇ ಮನೆಗಳ್ಳತನ,ಮೊಬೈಲ್ ಕಳ್ಳತನ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಬೇಕು.
|
| 8 |
+
ವಸ್ತುಗಳನ್ನು ಕಳೆದುಕೊಂಡವರು ನೊಂದಿರುತ್ತಾರೆ. ಅಂಥವರ ಕಷ್ಟಗಳಿಗೆ ಸ್ಪಂದಿಸಬೇಕು. ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದರೆ ಮುಂದೆ ದೊಡ್ಡ ಕ್ರಿಮಿನಲ್ಗಳಾಗುವುದನ್ನು ತಪ್ಪಿಸಬಹುದು ಎಂದರು.
|
| 9 |
+
ಸಂಯಮದಿಂದ ವರ್ತಿಸಿ:ಪೊಲೀಸ್ ಠಾಣೆಗಳಿಗೆ ದೂರು ನೀಡಲು ಬರುವಂತಹ ದೂರುದಾರರು, ಸಾರ್ವಜನಿಕರ ಜೊತೆ ಸಂಯಮದಿಂದ ವರ್ತಿಸಿ ಏರುಧ್ವನಿಯಲ್ಲಿ ಮಾತನಾಡಬೇಡಿ ಎಂದು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.
|
| 10 |
+
ಹೊಸ ಕಾನೂನಿನ ಅರಿವಿರಲಿ:ರಾಜ್ಯದಲ್ಲಿ ಜಾರಿಯಾಗಿರುವ ಮೂರು ಹೊಸ ಕಾನೂನುಗಳ ಬಗ್ಗೆ ಅರಿತುಕೊಳ್ಳಬೇಕು. ಈ ಕಾನೂನುಗಳನ್ನು ಲೋಪವಾಗದಂತೆ ಸರಿಯಾದ ರೀತಿಯಲ್ಲಿ ಪಾಲಿಸಬೇಕು. ಏನಾದರೂ ಸಮಸ್ಯೆ ಇದ್ದರೆ ಮೇಲಾಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಿರಿ, ಆ ಬಗ್ಗೆ ಚರ್ಚಿಸಿ ತಿಳಿದುಕೊಳ್ಳಿ, ಠಾಣೆಗಳ ಸಿಬ್ಬಂದಿಗಳು ಈ ಮೂರು ಕಾನೂನುಗಳ ಬಗ್ಗೆ ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಿ ಎಂದು ಆಯುಕ್ತರು ಹೇಳಿದರು.
|
| 11 |
+
ಕವಾಯತಿನಲ್ಲಿ ಎಲ್ಲಾರೂ ಭಾಗವಹಿಸಿ:ಪ್ರತಿ ತಿಂಗಳು ಮಾಸಿಕ ಕವಾಯತು ಅನುಷ್ಠಾನಕ್ಕೆ ತರಲಾಗಿದೆ. ನಿರಂತರವಾಗಿ ಕವಾಯತಿನಲ್ಲಿ ಎಲ್ಲಾ ಸಿಬ್ಬಂದಿ ವರ್ಗ ಪಾಲ್ಗೊಳ್ಳಬೇಕು. ಅದರಲ್ಲೂ ದೈನಂದಿನ ಕರ್ತವ್ಯದ ಜೊತೆಗೆ ನಿತ್ಯ ನಿರ್ವಹಿಸುವಂತಹ ಸಂಚಾರ, ರಾತ್ರಿ ಗಸ್ತು, ಠಾಣೆಯಲ್ಲಿನ ಕರ್ತವ್ಯದ ಜೊತೆಗೆ ಕವಾಯತು ಅಭ್ಯಾಸ ಮಾಡಿ ಮುಂದೆಯೂ ನಿರ್ವಹಿಸಿಕೊಂಡು ಹೋಗಬೇಕೆಂದು ಹೇಳಿದರು.
|
| 12 |
+
ಇಂದಿನ ಕವಾಯಿತಿನಲ್ಲಿ ಅತ್ಯಂತ ಉತ್ತಮ ಶ್ರೇಣಿಯ ಪ್ರದರ್ಶನವನ್ನು ನೀಡಿದಂತಹ ದೇವರಾಜ್ ಹಾಗೂ ಕವಾಯಿತಿನಲ್ಲಿ ಭಾಗವಹಿಸಿದ್ದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಮಿತ್ರರಿಗೆ ಅಭಿನಂದನೆ ಸಲ್ಲಿಸಿ ಶುಭಾಷಯ ಹೇಳಿದರು.
|
eesanje/url_46_87_7.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಸಿಎಂ ಪತ್ನಿಗೆ ನೀಡಿದ ನಿವೇಶನಗಳ ಕಡತ ತಿರುಚುವ ಪ್ರಯತ್ನ ನಡೆಯುತ್ತಿದೆ : ಅಶೋಕ್ ಆರೋಪ
|
| 2 |
+
ಬೆಂಗಳೂರು,ಜು.5-ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ಪ್ರತಿಪಕ್ಷದ ನಾಯಕ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
|
| 3 |
+
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
|
| 4 |
+
ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದು ಸಿದ್ದರಾಮಯ್ಯ ಅವರನ್ನು ಅಶೋಕ್ ಒತ್ತಾಯಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
eesanje/url_46_87_8.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಮೈಸೂರು ಡಿಸಿ ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ
|
| 2 |
+
ಬೆಂಗಳೂರು, ಜು.5– ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಕಳೆದ 2 ದಿನದಲ್ಲಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು ಇದೀಗ, 23 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತಡ ರಾತ್ರಿ ಆದೇಶ ಹೊರಡಿಸಲಾಗಿದೆ.
|
| 3 |
+
ಪ್ರಮುಖವಾಗಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ನೇಮಿಸಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಉಳಿದಂತೆ ವರ್ಗಾವಣೆಯಾದ ಅಧಿಕಾರಿಗಳ ವಿವರ ಕೆಳಕಂಡಂತಿದೆ.
|
| 4 |
+
* ಡಾ.ರಾಮ್ಪ್ರಸಾತ್ ಮನೋಹರ್, ಹೆಚ್ಚುವರಿ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಅಧ್ಯಕ್ಷರು ಬೆಂಗಳೂರು ಜಲಮಂಡಳಿ* ಬಿ.ಶರತ್-ವ್ಯವಸ್ಥಾಪಕ ನಿರ್ದೇಶಕರು ,ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ* ಸೆಲ್ವಮಣಿ- ವ್ಯವಸ್ಥಾಪಕ ನಿರ್ದೇಶಕರು,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ* ನಿತೀಶ್ ಪಾಟೀಲ್-ಐಎಎಸ್ ನಿರ್ದೇಶಕರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಬೆಂಗಳೂರು* ಡಾ. ಅರುಂಧತಿ ಚಂದ್ರಶೇಖರ್-ಆಯುಕ್ತರು, ಪಂಚಾಯತ್ ರಾಜ್ ಇಲಾಖೆ ,ಬೆಂಗಳೂರು* ಜ್ಯೋತಿ ಕೆ-ಆಯುಕ್ತರು ಮತ್ತು ನಿರ್ದೇಶಕರು, ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ, ಬೆಂಗಳೂರು* ಶ್ರೀಧರ ಸಿ.ಎನ್.-ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು* ಡಾ.ರಾಜೇಂದ್ರ ಕೆ.ವಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಬೆಂಗಳೂರು* ಚಂದ್ರಶೇಖರ ನಾಯಕ ಎಲ್- ಹೆಚ್ಚುವರಿ ಆಯುಕ್ತರು,ವಾಣಿಜ್ಯ ತೆರಿಗೆಗಳು(ಜಾರಿ), ಬೆಂಗಳೂರು* ವಿಜಯಮಹಾಂತೇಶ ಬಿ ದಾನಮನವರ್-ಜಿಲ್ಲಾಧಿಕಾರಿ, ಹಾವೇರಿ ಜಿಲ್ಲೆ* ಗೋವಿಂದ ರೆಡ್ಡಿ-ಜಿಲ್ಲಾಧಿಕಾರಿ, ಗದಗ
|
| 5 |
+
* ರಘುನಂದನ್ ಮೂರ್ತಿ-ಖಜಾನೆ ಆಯುಕ್ತರು, ಬೆಂಗಳೂರು* ಡಾ.ಗಂಗಾಧರಸ್ವಾಮಿ ಜಿ.ಎಂ.-ಜಿಲ್ಲಾಧಿಕಾರಿ, ದಾವಣಗೆರೆ* ಲಕ್ಷೀಕಾಂತ್ ರೆಡ್ಡಿ-ಜಿಲ್ಲಾಧಿಕಾರಿ, ಮೈಸೂರು* ನಿತೀಶ್ ಕೆ-ಜಿಲ್ಲಾಧಿಕಾರಿ, ರಾಯಚೂರು ಜಿಲ್ಲೆ* ಮೊಹಮದ್ ರೋಷನ್ -ಜಿಲ್ಲಾಧಿಕಾರಿ, ಬೆಳಗಾವಿ ಜಿಲ್ಲೆ* ಶಿಲ್ಪಾ ಶರ್ಮಾ- ಜಿಲ್ಲಾಧಿಕಾರಿ, ಬೀದರ್ ಜಿಲ್ಲೆ.* ಡಾ.ದಿಲೀಶ್ ಸಸಿ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸೆಂಟರ್ ಫಾರ್ ಇ-ಆಡಳಿತ, ಬೆಂಗಳೂರು* ಲೋಖಂಡೆ ಸ್ನೇಹಲ್ ಸುಧಾಕರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖಾನೆ
|
eesanje/url_46_87_9.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಜನತಾ ದರ್ಶನ ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ : ಹೆಚ್ಡಿಕೆ
|
| 2 |
+
ಬೆಂಗಳೂರು, ಜು.5-ಜನತಾ ದರ್ಶನ ನಡೆಸುವ ವಿಚಾರದಲ್ಲೂ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
|
| 3 |
+
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಡೆಸುವ ಜನತಾ ದರ್ಶನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರವಿಡಲು ನಿಮಿಂದ ಸಾಧ್ಯವಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
|
| 4 |
+
ಜನತಾ ದರ್ಶನ ನಡೆಸುವುದನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಡೆಸುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿಯ ಸಭೆ ನಡೆಸಿದಾಗ ಏನು ಮಾಡುತ್ತಿದ್ದರು? ಚುನಾವಣೆ ಸಂದರ್ಭದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ.
|
eesanje/url_46_88_1.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ
|
| 2 |
+
ಬೆಂಗಳೂರು ಜು.5-ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿ ನಿಗದಿ ಮಾಡಲಾದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
|
| 3 |
+
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ನಿಗದಿ ಪಡಿಸಿದ ಅನುದಾನ ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಪಾಲನೆ ಮಾಡಲಾಗಿದೆ. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಕಾನೂನು ರೂಪಿಸಲಾಗಿದೆ. ಈ ನಿಯಮವನ್ನು ಯಾರು ನಿರ್ಲಕ್ಷ್ಯಿಸಿದರೂ ಕ್ರಮ ತೆಗೆದುಕೊಳ್ಳಲಾಗುವುದು, ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ ಎಂದು ಎಚ್ಚರಿಸಿದರು.
|
| 4 |
+
ಇಡೀ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ಮಾಡಿರುವುದು ನಮ ಸರ್ಕಾರ ಮಾತ್ರ. ಇದರಿಂದ 2024-25 ನೇ ಸಾಲಿಗೆ ಎಸ್.ಸಿ.ಎಸ್.ಪಿ., ಟಿಎಸ್.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11ರಷ್ಟು ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್.ಸಿ.ಎಸ್.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು.
|
| 5 |
+
ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ. ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಣ ಬಿಡುಗಡೆಗೆಯಾಗಿದ್ದು, ಅದರಲ್ಲಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
|
| 6 |
+
ಉಳಿಕೆ ಹಣ ವ್ಯಯವಾಗಬಾರದು. ಅದೇ ವರ್ಷ ವೆಚ್ಚವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ. ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು. ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ ಎಂದು ವಿವರಿಸಿದರು.
|
| 7 |
+
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಸಚಿವರಾದ ಹೆಚ��.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್, ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್, ಪಿ.ಎಂ.ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಗೋಯೆಲ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
|
eesanje/url_46_88_10.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ
|
| 2 |
+
ಬೆಂಗಳೂರು,ಜು.4-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರ ಹೆಸರು ಹಾಗೂ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ.
|
| 3 |
+
ಮೈಸೂರಿನಲ್ಲಿ ನಡೆದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ವ್ಯಾಪಕ ಟೀಕೆ ಮಾಡುತ್ತಿವೆ. ರಾಜೀನಾಮೆಗೂ ಪಟ್ಟು ಹಿಡಿದಿವೆ. ಆದರೆ ಇವೆಲ್ಲದಕ್ಕೂ ಸೆಡ್ಡು ಹೊಡೆದಂತೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ತಮ ಕೈ ಮೇಲೆ, ಬೆನ್ನ ಮೇಲೆ ಸಿದ್ದರಾಮಯ್ಯ ಅವರ ಹೆಸರನ್ನು ದೊಡ್ಡದಾಗಿ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಿದ್ದರಾಮಯ್ಯನವರ ಭಾವಚಿತ್ರವನ್ನು ಬರೆಸಿಕೊಳ್ಳುತ್ತಿರುವುದು ಗಮನ ಸೆಳೆದಿದೆ.
|
| 4 |
+
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಜೈಲಿನಲ್ಲಿ ನೀಡಲಾಗಿದ್ದ ಖೈದಿ ಸಂಖ್ಯೆಯನ್ನು ಅಭಿಮಾನಿಗಳು ತಮ ಕೈಮೇಲೆ ಟ್ಯಾಟೂ ಹಾಕಿಸಿಕೊಂಡು, ಗಾಡಿಯ ಮೇಲೆ ಬರೆಸಿಕೊಂಡು ಅಭಿಮಾನ ವ್ಯಕ್ತಪಡಿಸಿದ್ದರು.
|
| 5 |
+
ಇದೇ ರೀತಿ ಕಾಂಗ್ರೆಸ್ನ ಶಾಸಕ ಲಕ್ಷ್ಮಣ್ ಸವದಿ ಅವರ ಹೆಸರನ್ನೂ ಕೆಲವು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.ಈಗ ಸಿದ್ದರಾಮಯ್ಯ ಅವರ ಪರವಾಗಿ ಅದೇ ರೀತಿಯ ವಿಡಿಯೋಗಳು ವೈರಲ್ ಆಗುತ್ತಿವೆ.
|
eesanje/url_46_88_11.txt
ADDED
|
@@ -0,0 +1,3 @@
|
|
|
|
|
|
|
|
|
|
|
|
|
| 1 |
+
ಮತ್ತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
|
| 2 |
+
ಬೆಂಗಳೂರು, ಜು.4– ಕಳೆದ ಮಂಗಳವಾರ ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರ ಕಮಿಷನರ್ ಸೇರಿದಂತೆ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಇದೀಗ ಮತ್ತೆ ನಾಲ್ಕು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
|
| 3 |
+
ಪುಟ್ಟ ಮಾದಯ್ಯ- ರಾಯಚೂರು ಎಸ್ಪಿ, ಯಶೋಧ ವಂಟಗೋಡಿ – ಕರ್ನಾಟಕ ಲೋಕಾಯುಕ್ತ ಎಸ್ಪಿ, ಸಜೀತ್- ಈಶಾನ್ಯ ವಿಭಾಗದ ಡಿಸಿಪಿ, ಡಾ. ರಾಮ್ ಎಲ್ ಅರಸಿದ್ದಿ- ಕೊಪ್ಪಳ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
|
eesanje/url_46_88_12.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿದ್ದರಾಮಯ್ಯನವರಿಗೆ ಧಮ್ಮು-ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ : ಬಿಎಸ್ವೈ ಚಾಲೆಂಜ್
|
| 2 |
+
ಬೆಂಗಳೂರು,ಜು.4-ಲೋಕಸಭೆ ಚುನಾವಣೆಯಲ್ಲಿ ಮತದಾರರಿಂದ ತಿರಸ್ಕೃತವಾಗಿರುವ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಲು ನೈತಿಕತೆ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಮ್ಮು ಮತ್ತು ತಾಕತ್ತಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಎದುರಿಸಿ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ, ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದ್ದಾರೆ.
|
| 3 |
+
ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನ ಗೆದ್ದಿದೆ. ನಿಮನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಹೇಳಿದ್ದ ನಾವು ಹೇಳಿದಂತೆ ನಡೆದುಕೊಂಡಿದ್ದೇವೆ. ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
|
| 4 |
+
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಇವರು ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ತಾಕತ್ತಿದ್ದರೆ ವಿಧಾನಸಭೆ ಚುನಾವಣೆ ವಿಸರ್ಜಿಸಿ ಹೊಸ ಜನಾದೇಶ ಪಡೆಯಿರಿ ಎಂದು ಸವಾಲು ಎಸೆದರು.
|
| 5 |
+
ಈಗಲೇ ಚುನಾವಣೆ ನಡೆದರೆ ಬಿಜೆಪಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ. 19 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆದ್ದಿದೆ. ಕಾಂಗ್ರೆಸ್ ಕಟಾಕಟ್ ಸುಳ್ಳು, ಗ್ಯಾರಂಟಿಗಳ ನಡುವೆಯೂ 19 ಸ್ಥಾನ ಗೆದ್ದು , ಶೇ 46.06% ಮತ ಬಿಜೆಪಿ ಪಡೆದಿದೆ. ಅದರ ಶ್ರೇಯಸ್ಸು ನಮ ಮತಭಾಂದವರಿಗೆ ಸಲುತ್ತದೆ ಎಂದರು.
|
| 6 |
+
ಸಿಕ್ಕ ಸಿಕ್ಕ ಕಡೆ ಜನರ ತೆರಿಗೆ ಹೆಚ್ಚಿಸಿ ಜನರ ಹೊಟ್ಟೆ ಮೇಲೆ ಹೊಡಿತಿದ್ದಾರೆ. ಸರ್ಕಾರ ಪಾಪರ್ ಆಗದಿದ್ದರೆ ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಿಸುವ ಅಗತ್ಯ ಇರುತ್ತಿರಲಿಲ್ಲ. ಬರಗಾಲ ಇದ್ದರೂ ಕಾವೇರಿ ನೀರು ಹರಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
|
| 7 |
+
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಪೋಲಿಸ್ ಠಾಣೆ ಮುತ್ತಿಗೆ, ದಲಿತ ಮಹಿಳೆ ಮೇಲೆ ಹಲ್ಲೆ, ವಾಲೀಕಿ ನಿಗಮದ ಹಗರಣ ಇದು ಒಂದು ಹಂತಕ್ಕೆ ಬರುವ ಮೊದಲೇ ಮೂಡಾ ಹಗರಣ ಬಯಲಿಗೆ ಬಂದಿದೆ. ಮುಖ್ಯಮಂತ್ರಿ ಗಳ ತವರು ಜಿಲ್ಲೆಯಲ್ಲೇ ಅವರ ಕಣ್ಣುಮುಂದೆ ನಡೆದಿದೆ. ಈ ಹಗರಣದಲ್ಲಿ ಸಿಎಂ ಕೈವಾಡವಿದೆ. ಮುಂದೆ ಬರುವ ಅಧಿವೇಶನದಲ್ಲಿ ಎಲ್ಲಾ ಹಗರಣಗಳನ್ನು ಬಯಲು ಮಾಡುತ್ತೇವೆ ಎಂದು ಗುಡುಗಿದರು.
|
| 8 |
+
ಇನ್ನು ಕೆಲವೇ ದಿನಗಳಲ್ಲಿ ಸ್ಥಳೀಯ ಸಂಸ್ಥೆ, ಬಿಬಿಎಂಪಿ ಚುನಾವಣೆ ಬರ್ತಿದೆಈ ಚುನಾವಣೆಗಳಲ್ಲಿ ನಾವು ಹೆಚ್ಚು ಸೀಟ್ ಗೆದ್ದು ಅಧಿಕಾರಕ್ಕೆ ಬರಬೇಕಾಗಿದೆ. ವಿಜಯೇಂದ್ರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದಾರೆ. ಸದನದ ಒಳಗೂ- ಹೊರಗೂ ಸಕ್ರಿಯ ವಿರೋಧ ಪಕ್ಷವಾಗಿ ಕೆಲಸ ಮಾಡೋಣಪಕ್ಷ ಸಂಘಟನೆ ಮಾಡಿ , ಪಕ್ಷವನ್ನು ಬೆಳೆಸೋಣಕಾಂಗ್ರೆಸ್ ನ ಜನವಿರೋಧಿ, ಭ್ರಷ್ಟಾಚಾರದ ವಿರುದ್ಧ ಸಮರ ಸಾರೋಣ ಎಂದು ಕರೆ ಕೊಟ್ಟರು.
|
eesanje/url_46_88_2.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ದಿನಕಳೆದಂತೆ ಹೆಚ್ಚುತ್ತಲೇ ಇದೆ ಡೆಂಘೀ ಆರ್ಭಟ, ಸಾರ್ವಜನಿಕರಲ್ಲಿ ಆತಂಕ
|
| 2 |
+
ಬೆಂಗಳೂರು,ಜು.5-ರಾಜಧಾನಿ ಬೆಂಗಳೂರು ಸೇರಿದಂತೆ ಮಹಾಮಾರಿ ಡೆಂಘೀ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈಗಾಗಲೇ ಈ ಮಾರಕ ಕಾಯಿಲೆಗೆ ಮಕ್ಕಳು, ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಸಾವುನೋವಿನ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ.
|
| 3 |
+
ಡೆಂಘೀ ಮಹಾಮಾರಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿರುವ ನಡುವೆಯೇ ರೋಗ ಲಕ್ಷಣಗಳಿಂದ ಆಸ್ಪತ್ರೆ ಸೇರುವವರ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ.ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಉಡುಪಿ, ಧಾರವಾಡ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈವರೆಗೆ 6,676 ಮಂದಿಯಲ್ಲಿ ಡೆಂಘೀ ರೋಗ ಲಕ್ಷಣಗಳಿರುವುದು ಕಂಡುಬಂದಿದೆ.
|
| 4 |
+
ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಡೆಂಘೀಗೆ ಬಲಿಯಾಗಿರುವುದು ಸೇರಿದಂತೆ ಈವರೆಗೆ 7 ಮಂದಿ ರೋಗಕ್ಕೆ ಬಲಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಎಂಬುವರು ತಾಲ್ಲೂಕಿನಾದ್ಯಂತ ಡೆಂಘೀ ವಿರುದ್ಧ ಜಾಗೃತಿ ಮೂಡಿಸುತ್ತಿದ್ದರು. ಇದೀಗ ಅವರೇ ಡೆಂಘೀಗೆ ಬಲಿಯಾಗಿದ್ದಾರೆ.
|
| 5 |
+
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಡೆಂಘೀ ಪ್ರಕರಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 512 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರತಿದಿನ ತಪಾಸಣೆ ನಡೆಸಲಾಗುತ್ತಿದೆ. ಶಿವಮೊಗ್ಗದಲ್ಲೂ ಕೂಡ ಆಸ್ಪತ್ರೆಗಳು ರೋಗಿಗಳಿಂದ ತುಂಬಿದೆ.
|
| 6 |
+
ಈವರೆಗೆ 83 ಪ್ರಕರಣಗಳು ದಾಖಲಾಗಿವೆ. ರೋಗಕ್ಕೆ ಅಗತ್ಯವಾದ ವೈಟ್ ಪ್ಲೇಟ್ಲೇಟ್ ಸಂಗ್ರಹಿಸಿಡುವಂತೆ ಸೂಚಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಈ ರೋಗದಿಂದ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದು, 463 ಮಂದಿ ಡೆಂಘೀ ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.ಚಿತ್ರದುರ್ಗ, ದಕ್ಷಿಣ ಕನ್ನಡದ ಆಸ್ಪತ್ರೆಗಳಲ್ಲಿ ಡೆಂಘೀ ರೋಗಗಳಿಗೆ ಪ್ರತ್ಯೇಕ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.
|
| 7 |
+
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಜೋರಾಗುತ್ತಿದೆ. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು , ಬಿಬಿಎಂಪಿ, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಿವೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ನೀರು ತುಂಬಿಕೊಳ್ಳುವುದರಿಂದ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಡೆಂಘೀ ಹರಡಲು ಕಾರಣವಾಗುತ್ತದೆ.
|
| 8 |
+
ಈ ಹಿನ್ನೆಲೆಯಲ್ಲಿ ಮನೆಗಳ ಸುತ್ತಮುತ್ತ ಮತ್ತು ಖಾಲಿ ಜಾಗಗಳಲ್ಲಿ ಸ್ವಚ್ಛತೆ ಕಾಪಾಡ��ು ಸೂಚನೆ ನೀಡಲಾಗಿದೆ. ಖಾಸಗಿ ಮಾಲೀಕತ್ವದ ಜಾಗಗಳಲ್ಲಿ ಸ್ವಚ್ಚತೆ ಕಾಪಾಡದವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ಖಾಸಗಿಯವರ ನಿವೇಶನ ಮತ್ತು ಸ್ವತ್ತುಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡುಬಂದಲ್ಲಿ ಮೊದಲಿಗೆ ಎಚ್ಚರಿಕೆ ನೀಡಲಾಗುತ್ತದೆ. ಇದಕ್ಕೆ ಸ್ಪಂದಿಸದಿದ್ದರೆ 50 ರೂ. ದಂಡ ವಿಧಿಸಲಾಗುತ್ತದೆ. ನಂತರ ಸ್ಥಳ ಸ್ವಚ್ಚವಾಗುವವರೆಗೂ ಪ್ರತಿನಿತ್ಯ 15 ರೂ. ದಂಡ ವಿಧಿಸಲು ತೀರ್ಮಾನಿಸಲಾಗಿದೆ.
|
| 9 |
+
ಕಳೆದ ಏಪ್ರಿಲ್ನಿಂದ ಮೇ 10ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 1974 ತಪಾಸಣೆಗಳನ್ನು ನಡೆಸಲಾಗಿದ್ದು, 930 ಜನರಿಗೆ ಡೆಂಘೀ ಲಕ್ಷಣಗಳು ಕಂಡುಬಂದಿವೆ. ನಿರ್ಲಕ್ಷ್ಯ ಮಾಡಿದರೆ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಬೊಮನಹಳ್ಳಿ ವಲಯದಲ್ಲಿ 20, ದಾಸರಹಳ್ಳಿ 2, ಮಹದೇವಪುರ 97, ಆರ್ಆರ್ನಗರ 18, ದಕ್ಷಿಣ ವಲಯ 453, ಪಶ್ಚಿಮ ವಲಯ 99, ಯಲಹಂಕದಲ್ಲಿ 17 ಡೆಂಘೀ ಪ್ರಕರಣಗಳು ದಾಖಲಾಗಿವೆ.
|
eesanje/url_46_88_3.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಶೇ.5ರಷ್ಟು ವಿನಾಯ್ತಿಯೊಂದಿಗೆ ಆಸ್ತಿ ತೆರಿಗೆ ಪಾವತಿಯ ಅವಧಿ ವಿಸ್ತರಣೆ
|
| 2 |
+
ಬೆಂಗಳೂರು,ಜು.5-ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್ಎಲ್ಎಸ್ಎ)ದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತಿಯನ್ನು ಜುಲೈ ಅಂತ್ಯದವರೆಗೆ ವಿಸ್ತರಿಸಿದೆ.ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ವಿನಾಯಿತಿಯನ್ನು ಈ ತಿಂಗಳ ಅಂತ್ಯದವರೆಗೆ ನೀಡಲಾಗುತ್ತಿದೆ.
|
| 3 |
+
ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ರಿಯಾಯಿತಿಯನ್ನು ಜುಲೈ 31ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮನವಿಯಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
|
| 4 |
+
ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಜೂ.4ರಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಲ್.ರಘುನಾಥ್ ಪತ್ರ ಬರೆದಿದ್ದರು. ಇದರಿಂದ ಇನ್ನೂ ಆಸ್ತಿ ತೆರಿಗೆ ಪಾವತಿಸದೇ ಇದ್ದವರು ಜುಲೈ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿ ಶೇ.5ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.
|
| 5 |
+
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜುಲೈ 13ರಂದು ರಾಜ್ಯ ವ್ಯಾಪಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಇದರಲ್ಲಿ ಸಾವಿರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ ಇದೆ ಎಂಬ ವಿಚಾರ ಪ್ರಾಧಿಕಾರದ ಗಮನಕ್ಕೆ ಬಂದಿದೆ.
|
| 6 |
+
ಶೇ.5ರಷ್ಟು ರಿಯಾಯಿತಿಯನ್ನು ಜುಲೈ 13ರವರೆಗೆ ನೀಡಿದರೆ ಲೋಕ ಅದಾಲತ್ ಅವಕಾಶವನ್ನು ಬಳಸಿಕೊಂಡು ಆಸ್ತಿ ಮಾಲೀಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿ ತೆರಿಗೆ ಪಾವತಿಸಬಹುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುತ್ತದೆ. ಹಾಗಾಗಿ ರಿಯಾಯಿತಿ ಅವಕಾಶವನ್ನು ವಿಸ್ತರಿಸಬೇಕು ಎಂದು ಪ್ರಾಧಿಕಾರ ಮನವಿ ಮಾಡಿತ್ತು.
|
| 7 |
+
ಇದನ್ನು ಪರಿಗಣಿಸಿದ ನಗರಾಭಿವೃದ್ಧಿ ಇಲಾಖೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲು ಕಲ್ಪಿಸಲಾಗಿರುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಆದೇಶಿಸಾಗಿದೆ.
|