8c84d743ea3e07cd41e564bf129ac6465bffb7183d14e9b70fd2ff7eee2d1e53
Browse files- eesanje/url_46_172_3.txt +7 -0
- eesanje/url_46_172_4.txt +10 -0
- eesanje/url_46_172_5.txt +4 -0
- eesanje/url_46_172_6.txt +7 -0
- eesanje/url_46_172_7.txt +5 -0
- eesanje/url_46_172_8.txt +14 -0
- eesanje/url_46_172_9.txt +5 -0
- eesanje/url_46_173_1.txt +5 -0
- eesanje/url_46_173_10.txt +5 -0
- eesanje/url_46_173_11.txt +6 -0
- eesanje/url_46_173_12.txt +4 -0
- eesanje/url_46_173_2.txt +7 -0
- eesanje/url_46_173_3.txt +8 -0
- eesanje/url_46_173_4.txt +5 -0
- eesanje/url_46_173_5.txt +6 -0
- eesanje/url_46_173_6.txt +6 -0
- eesanje/url_46_173_7.txt +7 -0
- eesanje/url_46_173_8.txt +10 -0
- eesanje/url_46_173_9.txt +8 -0
- eesanje/url_46_174_1.txt +9 -0
- eesanje/url_46_174_10.txt +6 -0
- eesanje/url_46_174_11.txt +7 -0
- eesanje/url_46_174_12.txt +8 -0
- eesanje/url_46_174_2.txt +11 -0
- eesanje/url_46_174_3.txt +9 -0
- eesanje/url_46_174_4.txt +13 -0
- eesanje/url_46_174_5.txt +6 -0
- eesanje/url_46_174_6.txt +5 -0
- eesanje/url_46_174_7.txt +5 -0
- eesanje/url_46_174_9.txt +6 -0
- eesanje/url_46_175_1.txt +6 -0
- eesanje/url_46_175_10.txt +9 -0
- eesanje/url_46_175_11.txt +9 -0
- eesanje/url_46_175_12.txt +6 -0
- eesanje/url_46_175_2.txt +4 -0
- eesanje/url_46_175_3.txt +5 -0
- eesanje/url_46_175_4.txt +5 -0
- eesanje/url_46_175_5.txt +8 -0
- eesanje/url_46_175_6.txt +13 -0
- eesanje/url_46_175_7.txt +10 -0
- eesanje/url_46_175_8.txt +8 -0
- eesanje/url_46_175_9.txt +6 -0
- eesanje/url_46_176_1.txt +8 -0
- eesanje/url_46_176_10.txt +11 -0
- eesanje/url_46_176_11.txt +6 -0
- eesanje/url_46_176_12.txt +5 -0
- eesanje/url_46_176_2.txt +7 -0
- eesanje/url_46_176_3.txt +5 -0
- eesanje/url_46_176_4.txt +8 -0
- eesanje/url_46_176_5.txt +10 -0
eesanje/url_46_172_3.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮತದಾರರನ್ನು ಸೆಳೆಯಲು ಗ್ಯಾರಂಟಿ ಕಾರ್ಡ್ ಹಂಚಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ದೂರು
|
| 2 |
+
ಬೆಂಗಳೂರು, ಏ.22-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವಂತಹ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ಪಕ್ಷದಿಂದ ಮನೆ ಮನೆಗೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
|
| 3 |
+
ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಪಕ್ಷವು ಮನೆಮನೆಗೆ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ವಿತರಿಸದಂತೆ ತಡೆಯಲು ಆಯೋಗವು ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.
|
| 4 |
+
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ, ಆರ್. ಪ್ರಕಾಶ್ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದೆ.
|
| 5 |
+
ಮತದಾರರ ಮೇಲೆ ಪರಿಣಾಮ ಬೀರುವಂತಹ ಅಂಶವುಳ್ಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸದಂತೆ ನಿರ್ಬಂಧಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ. 5 ಗ್ಯಾರಂಟಿಯ ನ್ಯಾಯ ಪತ್ರ ಎಂಬ ಹೆಸರಿನ ಪ್ರಣಾಳಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಡುಗಡೆ ಮಾಡಿದೆ.
|
| 6 |
+
ಪ್ರಣಾಳಿಕೆಯಲ್ಲಿನ ಅಂಶಗಳನ್ನು ಗ್ಯಾರಂಟಿ ಕಾರ್ಡಿನಲ್ಲಿ ಮುದ್ರಿಸಿ ಸರ್ಕಾರದ ಯೋಜನೆಗಳೆಂಬಂತೆ ಕಾಂಗ್ರೆಸ್ನಿಂದ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ವರ್ಗದವರನ್ನು ತಲುಪಲು ಪ್ರಯತ್ನಿಸಿದ್ದು, ಇದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ.
|
| 7 |
+
ಮತದಾರರಿಗೆ ಈ ರೀತಿಯ ಆಮಿಷಗಳು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿವೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.
|
eesanje/url_46_172_4.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ : ಗೃಹಸಚಿವ ಪರಮೇಶ್ವರ್
|
| 2 |
+
ಬೆಂಗಳೂರು,ಏ.22-ನೇಹಾ ಕೊಲೆ ಆರೋಪಿ ಫಯಾಜ್ನನ್ನು ಒಂದು ಗಂಟೆಯೊಳಗಾಗಿಯೇ ಬಂಧಿಸಿ, ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಕಾನೂನು ಪಾಲನೆ ವಿಷಯದಲ್ಲಿ ಯಾವುದೇ ರಿಯಾಯಿತಿ ತೋರಿಸಿಲ್ಲ. ಆದರೂ ಬಿಜೆಪಿಯವರು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನೇಹಾಗಾಗಿ ಮತ ನೀಡಿ ಎಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆಕ್ಷೇಪಿಸಿದ್ದಾರೆ.
|
| 3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೇಹಾ ಮನೆಗೆ ಬಂದು ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನೇಹಾಗಾಗಿ ಮತ ಹಾಕಿ ಎಂದು ಕೇಳುತ್ತಿರುವುದರ ಅರ್ಥವೇನು? ಇದು ಸಂಪೂರ್ಣವಾಗಿ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ಈ ಕಾರಣಕ್ಕಾಗಿಯೇ ತಾವು ಹೆಚ್ಚು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಹೇಳಿದರು.
|
| 4 |
+
ತಮ್ಮ ಹಾಗೂ ಮುಖ್ಯಮಂತ್ರಿ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ. ಸಂತೋಷ. ಅದಕ್ಕೆ ತಕರಾರಿಲ್ಲ. ಆದರೆ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಹಿಂದೂ, ಮುಸಲ್ಮಾನ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಜಾತಿಯವರಾಗಿದ್ದರೂ ಕಾನೂನು ಪ್ರಕಾರವೇ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನನ್ನು ಬಿಟ್ಟು ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದರು. ಆರೋಪಿ ಮುಸಲ್ಮಾನ್ ಆಗಿರುವುದರಿಂದ ರಕ್ಷಣೆ ಮಾಡುತ್ತಿದ್ದಾರೆ ಎಂಬ ಟೀಕೆಗಳಿವೆ.
|
| 5 |
+
ನಮಗೆ ಅದರ ಅಗತ್ಯವೇನಿದೆ? ಆತ ಒಬ್ಬ ವ್ಯಕ್ತಿ, ಕೊಲೆ ಮಾಡಿದ್ದಾನೆ. ಅದಕ್ಕಾಗಿ ಶಿಕ್ಷೆಯಾಗಬೇಕಿದೆ. ಅದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ ಒಂದು ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಜರುಗಿಸಿದ್ದಾರೆ.
|
| 6 |
+
ಆರೋಪಿಯ ಹಿಂದೆ ಬೇರೆಯವರೂ ಇದ್ದಾರೆ ಎಂದು ಹೇಳಲಾಗುತ್ತಿದೆ. ಅದನ್ನೂ ತನಿಖೆ ನಡೆಸಲಾಗುತ್ತಿದೆ ಎಂದರು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಬಿಐ ಕೂಡ ತನಿಖಾ ಸಂಸ್ಥೆ. ಅಲ್ಲೇನೂ ದೊಡ್ಡ ವ್ಯವಸ್ಥೆಗಳಿಲ್ಲ. ನಮ್ಮಲ್ಲಿ ಆರೋಪಿಯನ್ನು ಹಿಡಿದುಕೊಂಡು ಬಂದಿಲ್ಲ. ಬಿಟ್ಟುಬಿಟ್ಟಿದ್ದಾರೆ.
|
| 7 |
+
ಬೇರೆ ದೇಶಕ್ಕೆ ಪರಾರಿಯಾಗಿದ್ದಾರೆ ಎಂದಾಗಿದ್ದರೆ, ಆಗ ಸಿಬಿಐ ತನಿಖೆಯ ಬಗ್ಗೆ ಯೋಚಿಸಬಹುದಿತ್ತು. ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ. ತನಿಖೆ ನಡೆಯುತ್ತಿದೆ. ಫಲಿತಾಂಶ ಏನು ಎಂದು ಕಾದುನೋಡೋಣ. ರಾಜ್ಯದಲ್ಲಿ ಈ ಮೊದಲು ಹಲವು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದೇವೆ. ಅದರಿಂದಾಗಿರುವುದೇನು ಎಂಬುದು ನಮ್ಮ ಕಣ್ಣ ಮುಂದಿದೆ ಎಂದರು.
|
| 8 |
+
ನಾವು ಏನಾದರೂ ಹೇಳಿದರೆ ಅದನ್ನು ತಿರುಚುವುದು, ಅನಗತ್ಯವಾಗಿ ಟೀಕೆ ಮಾಡುವುದು ಸರಿಯ���್ಲ. ಒಂದು ವ್ಯವಸ್ಥೆಯಿದೆ. ಅದರ ಪ್ರಕಾರವೇ ನಾವು ಮುನ್ನಡೆಯಬೇಕಿದೆ ಎಂದು ಹೇಳಿದರು.
|
| 9 |
+
ಈ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದೂ ಇಲ್ಲದಂತಹ ದ್ವೇಷಗಳು ಕಂಡುಬರುತ್ತಿವೆ. ಖುದ್ದು ಪ್ರಧಾನಿಯವರೇ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಹಿಂದೆಂದೂ ಈ ರೀತಿ ಇರಲಿಲ್ಲ. ಜನ ಇದನ್ನೆಲ್ಲಾ ಹೇಗೆ ಸ್ವೀಕರಿಸುತ್ತಾರೆ ಎಂಬುದು ಗೊತ್ತಿಲ್ಲ. ನಾಯಕರುಗಳು ಹೇಳಿಕೆ ನೀಡಿದಾಕ್ಷಣ ಜನ ಚಪ್ಪಾಳೆ ಹೊಡೆಯುವುದು ಸಹಜ. ಆದರೆ ನಮ್ಮ ವ್ಯಕ್ತಿತ್ವವನ್ನು ಅದರ ಆಧಾರದ ಮೇಲೆಯೇ ಅಳೆಯುತ್ತಾರೆ. ಚಪ್ಪಾಳೆ ಹೊಡೆದಾಕ್ಷಣ ಹೇಳಿದ್ದು ಸರಿ ಎಂಬುದು ಸಮರ್ಥನೆಯಾಗುವುದಿಲ್ಲ
|
| 10 |
+
ಎಂದರು. ಲೋಕಸಭಾ ಚುನಾವಣೆ ಯಲ್ಲಿ ಊಹೆಗೂ ಮೀರಿದ ಫಲಿತಾಂಶ ಬರಲಿದೆ. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದರು.
|
eesanje/url_46_172_5.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ
|
| 2 |
+
ಶಿವಮೊಗ್ಗ, ಏ.22-ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
|
| 3 |
+
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ತನಿಖೆಯನ್ನು ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು.
|
| 4 |
+
ನಮ್ಮ ಆಡಳಿತ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ ಕಾನೂನು ಸುವ್ಯವಸ್ತೆ ಕಾಪಾಡಲಾಗುತ್ತಿದೆ ಆದರೆ ಹಿಂದಿನ ಬಿಜೆಪಿ ಆಡಳಿತದಲ್ಲಿ ಹೆಚ್ಚು ಅಪರಾಧ ಘಟನೆ ನಡೆದಿವೆ ಎಂದು ಆರೋಪಿಸಿದರು .ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದರು.
|
eesanje/url_46_172_6.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬೆಳಗಾವಿ : ಹಿಂದೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮತಾಂತರಕ್ಕೆ ಯತ್ನಿಸಿದ್ದ ಆರೋಪಿಗಳ ಬಂಧನ
|
| 2 |
+
ಬೆಳಗಾವಿ, ಏ. 22-ಹುಬ್ಬಳಿಯಲ್ಲಿ ನೇಹಾ ಭೀಕರ ಹತ್ಯೆ ಹಿಂದೆ ಲವ್ ಜಿಹಾದ್ ಮಾತುಗಳು ಕೇಳಿಬರುತ್ತಿರುವ ನಡುವೆ ಕೆಲಸ ಕೊಡಿಸುವುದಾಗಿ ಹೇಳಿ ಹಿಂದೂ ಮಹಿಳೆಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಸವದತ್ತಿ ಪೊಲೀಸರು ಬಂಧಿದ್ದಾರೆ.
|
| 3 |
+
ಮುನವಳ್ಳಿ ಪಟ್ಟಣದ ಆರೀಫ್ ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಪ್ರಕರಣ ದಾಖಲಾಗಿದ್ದು ,ಪ್ರಸ್ತುತ ಪ್ರಮುಖ ಆರೋಪಿ ಆರೀಫ್ ಮತ್ತು ಆತನ ಪತ್ನಿ ಬಂಸಲಾಗಿದೆ. ರಾಜ್ಯದಲ್ಲಿ ಲವ್ ಜಿಹಾದ್ನ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದ್ದು. ಹಿಂದೂ ಯುವತಿಯರಷ್ಟೇ ಅಲ್ಲದೆ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಿರುವ ಘಟನೆ ಇದಾಗಿದೆ.
|
| 4 |
+
ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದು ಆಕೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಸಂತ್ರಸ್ತ ಮಹಿಳೆ ಆಗಾಗ ಕಿರಾಣಿ ಅಂಗಡಿಯಲ್ಲಿ ಕೂತು, ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ ಆರೋಪಿ ಆರೀಫ್ ಬೇಪಾರಿ ನೆರೆ ಮನೆಯವರೆಂದು ಮಹಿಳೆಯನ್ನು ಪರಿಚಯ ಮಾಡಿಕೊಂಡು, ಅವರ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ.
|
| 5 |
+
ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬೆಳಗಾವಿ ಬಂದ ಬಳಿಕ ಆರೀಫ್ಗೆ ಮತ್ತೆ ಐವರು ದುಷ್ಕರ್ಮಿಗಳು ಸಾಥ್ ನೀಡಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ಮತ್ತು ಮಹಿಳೆಯ ಖಾಸಗಿ ಪೋಟೋಗಳನ್ನು ಸೆರೆಹಿಡಿದು, ಮತಾಂತರಗೊಳ್ಳುವಂತೆ ಬ್ಯ್ಲಾಕ್ಮೇಲ್ಮಾಡಿದ್ದಾರೆ.
|
| 6 |
+
ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳು ಇಲ್ಲದಿದ್ದರೆ ಫೋಟೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿ ಹಣೆಗೆ ಕುಂಕುಮ ಅಳಿಸಿ ನಮಾಜ್ ಮಾಡಲು ಒತ್ತಡ ಹಾಕಿದ್ದಾರೆ.ಇದಲ್ಲದೆ ದುಷ್ಕರ್ಮಿಗಳು ಒತ್ತಾಯ ಪೂರ್ವಕವಾಗಿ ಬುರ್ಖಾ ಕೂಡ ಹಾಕಿಸಿದ್ದಾರೆ.
|
| 7 |
+
ದುರಳರ ಜಾಲದಿಂದ ತಪ್ಪಿಸಿಕೊಂಡ ಬಂದ ಸಂತ್ರಸ್ತ ಮಹಿಳೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನುಸೆರೆ ಹಿಡಿದಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
|
eesanje/url_46_172_7.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ ಪರ ಪ್ರಗತಿಪರ ಸಾಹಿತಿಗಳು, ಚಿಂತಕರ ಬ್ಯಾಟಿಂಗ್
|
| 2 |
+
ಬೆಂಗಳೂರು, ಏ.22-ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಎಂಪಿಗಳು ಜಿಎಸ್ಟಿಯ ಕುರಿತು ಸಂಸತ್ನಲ್ಲಿ ಒಂದು ಮಾತನ್ನು ಎತ್ತದೆ ರಾಜ್ಯಕ್ಕೆ ಮೋಸ ಮಾಡಿ ದ್ದಾರೆ. ಆದ್ದರಿಂದ ಅವರನ್ನು ಬೆಂಗಳೂರಿನ ಜನ ಬೆಂಬಲಿಸಬಾರದು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಪ್ರಗತಿಪರ ಚಿಂತಕರು ಎಂದು ಮನವಿ ಮಾಡಿದರು
|
| 3 |
+
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಮತ್ತು ಚಿಂತಕ ತಲಕಾಡು ಚಿಕ್ಕರಂಗೇಗೌಡ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕರ್ನಾಟಕದ ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ಕೊಡದೆ ಬೇರೆ ರಾಜ್ಯಗಳಿಗೆ ಕೊಟ್ಟು ಅನ್ಯಾಯ ಮಾಡಿದೆ.
|
| 4 |
+
ಇಲ್ಲಿ ಬಂದ ಆದಾಯವನ್ನು ಬೇರೆ ರಾಜ್ಯಗಳಿಗೆ ಹಂಚಿ ಉತ್ತರ ರಾಜ್ಯಗಳನ್ನು ಅಭಿವೃದ್ಧಿ ಮಾಡುತ್ತಿದೆ. ಮಲತಾಯಿ ಧೋರಣೆಯನ್ನು ಅನುಸರಿಸುತ್ತಾ ಬಂದಿರುವ ಬಿಜೆಪಿಯನ್ನು ಈ ಬಾರಿ ಯಾರು ಬೆಂಬಲಿಸಬಾರದು ಎಂದರು.
|
| 5 |
+
ಬೆಂಗಳೂರು ಲೋಕಸಭಾ ಕ್ಷೇತ್ರಗಳಿಗೆ ನಿಂತಿರುವ ಡಿ.ಕೆ. ಸುರೇಶ್, ಸೌಮ್ಯ ರೆಡ್ಡಿ, ಮನ್ರ್ಸೂರ್ ಆಲಿಖಾನ್, ಪೊ್ರ. ರಾಜೀವ್ ಗೌಡ ಇವರನ್ನು ಬೆಂಬಲಿಸಬೇಕು ಇವರನ್ನು ಬೆಂಬಲಿಸಿದಾಗ ಮಾತ್ರ ನಮ್ಮ ಕನ್ನಡ ನಾಡು ನುಡಿ ಸಂಪತ್ತು ಮತ್ತು ನಮ್ಮ ಅಸ್ಮಿತೆ ಉಳಿಯುತ್ತದೆ. ಇಲ್ಲವಾದಲ್ಲಿ ಕನ್ನಡ ನಾಡಿನ ಜನತೆಗೆ ಉಳಿಗಾಲವಿಲ್ಲ ಎಂದು ಮೋದಿಯನ್ನು ವಿರೋಸಿದರು. ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಮುಕುಂದರಾಜï, ಭಾರತಿ ಶಂಕರ್ ಮುಂತಾದವರು.
|
eesanje/url_46_172_8.txt
ADDED
|
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ
|
| 2 |
+
ಬೆಂಗಳೂರು,ಏ.22-ಸಹಪಾಠಿಯಿಂದಲೇ ಬರ್ಬರವಾಗಿ ಹತ್ಯೆಗೀಡಾದ ನೇಹಾ ಕೊಲೆ ಪ್ರಕರಣ ವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ತುಷ್ಟೀಕರಣ ನಿಲ್ಲಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿತು.
|
| 3 |
+
ಬಿಜೆಪಿ ರಾಜ್ಯ ಘಟಕವು ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು, ಧಾರವಾಡ, ತುಮಕೂರು, ಹಾವೇರಿ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ರಾಮನಗರ, ಮಂಡ್ಯ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಮತ್ತಿತರ ಕಡೆ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.
|
| 4 |
+
ಹುಬ್ಬಳ್ಳಿಯಲ್ಲಂತೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
|
| 5 |
+
ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಹಚ್ಚಿ ಫಯಾಜ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು. ಬಿಜೆಪಿಗೆ ಎಬಿವಿಪಿ ಹಾಗೂ ಕೆಲವು ಹಿಂದೂಪರ ಸಂಘಟನೆಗಳು ಕೈಜೋಡಿಸಿದ್ದವು.
|
| 6 |
+
ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಹಾಗೂ ರಘು ಕೌಟಿಲ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಗಾಂವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿಯಲ್ಲೂ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಲಾಯಿತು.
|
| 7 |
+
ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿಭಟನೆಗೆ ವ್ಯಾಪಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಬಾಗಲಕೋಟೆ ಸೇರಿದಂತೆ ಮತ್ತಿತರ ಕಡೆ ಸ್ವಯಂಪ್ರೇರಿತರಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು.ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಮುಸ್ಲಿಂ ಸಮುದಾಯದವರು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ಗೆ ಬೆಂಬಲ ಸೂಚಿಸಲಾಗಿತ್ತು.
|
| 8 |
+
ಜೊತೆಗೆ ಬಂದ್ ಮಾಡಲಾದ ಅಂಗಡಿಗಳಿಗೆ ನೇಹಾ ಶ್ರದ್ಧಾಂಜಲಿಯ ಪೊಸ್ಟರ್ ಅಂಟಿಸಲಾಗಿತ್ತು. ಅಂಜುಮನ್ ಸಂಸ್ಥೆಯಿಂದ ಡಿಸಿ ಕಚೇರಿವರೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪಂಜಿನ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅರ್ಧ ದಿನ ಬಂದ್ಗೆ ಕರೆ ನೀಡಿದ್ದರು.
|
| 9 |
+
ಅಂಜುಮನ್ ಸಂಸ್ಥೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಂಜಿನ ಮೆರವಣಿಗೆ ಮಾಡಿ, ಕಪ್ಪುಪಟ್ಟಿ ಧರಿಸಿ ಜಸ್ಟೀಸ್ ಫಾರ್ ನೇಹಾ ಎಂದು ಅಂಗಡಿಗಳಿಗೆ ಭಿತ್ತಿಪತ್ರ ಅಂಟಿಸಿದ್ದಾರೆ. ಮೆರವಣಿಗೆಯಲ್ಲಿ ಅಂಜುಮನ್ ಸಂಸ್ಥೆ ಸದಸ್ಯರು ಮತ್ತು ಜನರು ಭಾಗವಹಿಸಿದ್ದರು. ಇನ್ನು ಹಿಂದೂಪರ ಸಂಘಟನೆಗಳು ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ ನಡೆಸಿ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಹಂತಕ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
|
| 10 |
+
ತುಮಕೂರಿನ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಲೆಗಡುಕ ಸಿದ್ದರಾಮಯ್ಯ, ಸಿದ್ದರಾಮುಲ್ಲಾ ಖಾನ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
|
| 11 |
+
ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮೂಲಕ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
|
| 12 |
+
ರಾಜ್ಯಸರ್ಕಾರದ ಅತಿಯಾದ ತುಷ್ಠೀಕರಣದ ನೀತಿಯಿಂದಾಗಿ ಈ ರೀತಿ ಕಗ್ಗೊಲೆಗಳು ನಡೆಯುತ್ತಿವೆ. ನಮಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಮನೋಭಾವನೆಗೆ ಕೆಲವರು ಬಂದಿದ್ದಾರೆ. ಓರ್ವ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸಿನಲ್ಲೇ ಇಷ್ಟ��� ಬರ್ಭರವಾಗಿ ಹತ್ಯೆ ಮಾಡುತ್ತಾರೆ ಎಂದರೆ ಉಳಿದವರಿಗೆ ರಕ್ಷಣೆ ಸಿಗಲು ಸಾಧ್ಯವೇ ಎಂದು ಪ್ರತಿಭಟನಾ ನಿರತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
|
| 13 |
+
ನೇಹಾಳನ್ನು ಬರ್ಭರವಾಗಿ ಹತ್ಯೆಗೈದ ಆರೋಪಿಗೆ 3 ತಿಂಗಳೊಳಗೆ ಗಲ್ಲುಶಿಕ್ಷೆಯಾಗಬೇಕು. ಇವನ ಪರ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು. ವಿದ್ಯಾರ್ಥಿನಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ನೇಹಾ ಹತ್ಯೆ ಪ್ರಕರಣದಲ್ಲಿ ಲವ್ ಜಿಹಾದ್ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ.
|
| 14 |
+
ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ಎಲ್ಲಾ ನಾಯಕರು ಇದು ಲವ್ ಜಿಹಾದ್ ಪ್ರಕರಣ ಎಂದೂ, ಇದನ್ನು ಅದೇ ದೃಷ್ಟಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಮೃದು ಧೋರಣೆ ತಳೆದಿದೆ ಎಂದು ಆರೋಪಿಸಿದೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು. ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆದಿದೆ.
|
eesanje/url_46_172_9.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಸರ್ಕಾರಿ ನೌಕರರಿಂದ ಅಂಚೆ ಮತದಾನಕ್ಕೂ ಮೀನಾಮೇಷ
|
| 2 |
+
ಬೆಂಗಳೂರು,ಏ.22-ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಎಂದು ಸರ್ಕಾರ ಬೊಬ್ಬೆ ಹೊಡೆದುಕೊಳ್ಳುತ್ತಿದ್ದರೂ ಸರ್ಕಾರಿ ನೌಕರರೇ ಮತದಾನಕ್ಕೆ ಮನಸ್ಸು ಮಾಡದಿರುವ ವಿಚಾರ ಇದೀಗ ಬಹಿರಂಗಗೊಂಡಿದೆ.
|
| 3 |
+
ಮೂರು ದಿನ ಅಂಚೆ ಮತದಾನಕ್ಕೆ ಅವಕಾಶ ಇದ್ದರು ಹಕ್ಕು ಚಲಾಯಿಸಲು ಸರ್ಕಾರಿ ನೌಕರರು ಹಿಂದೇಟು ಹಾಕಿರುವುದು ಗೊತ್ತಾಗಿದೆ. ಕಳೆದ ಶುಕ್ರವಾರದಿಂದ ಅಂಚೆ ಮತದಾನ ಆರಂಭವಾಗಿದೆ ನಿನ್ನೆ ಭಾನುವಾರದ ರಜೆ ದಿನವಾಗಿದ್ದರೂ ಸಾಕಷ್ಟು ಮಂದಿ ಸರ್ಕಾರಿ ನೌಕರರು ತಮ್ಮ ಹಕ್ಕು ಚಲಾಯಿಸದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ.
|
| 4 |
+
ಅಂಚೆ ಮತದಾನಕ್ಕೆ ವಿವಿಧ ಇಲಾಖೆಗಳ 1342 ಮಂದಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿಕೊಂಡಿದ್ದರು. ಆದರೆ ಅಂಚೆ ಮತದಾನ ಮಾಡಿರುವುದು ಮಾತ್ರ ಕೇವಲ 426 ಮಂದಿ. ನಗರದ ಮೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇವಲ ಶೇ.31 ರಷ್ಟು ಮಂದಿ ಮಾತ್ರ ಮತದಾನ ಮಾಡಿದ್ದಾರೆ.
|
| 5 |
+
ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು ಆದರೆ ನಗರದ 1342 ಮಂದಿ ನೌಕರರಲ್ಲಿ 916 ಮಂದಿ ಮತದಾನ ಮಾಡದೇ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ.ಮತದಾನದ ವಿವರ
|
eesanje/url_46_173_1.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
2026ಕ್ಕೆ ಬೆಂಗಳೂರಲ್ಲಿ ಆರಂಭವಾಗಲಿದೆ ಏರ್ ಟ್ಯಾಕ್ಸಿ ಸೇವೆ
|
| 2 |
+
ಬೆಂಗಳೂರು,ಏ.22-ಸಿಲಿಕಾನ್ ಸಿಟಿಯಲ್ಲಿ ಮುಂಬರುವ 2026ರಲ್ಲಿ ಎಲೆಕ್ಟ್ರಿಕಲ್ ಏರ್ ಟ್ಯಾಕ್ಸಿ ಸೇವೆ ಆರಂಭವಾಗಲಿದೆ. ಇಂಡಿಗೋದ ಪ್ರವರ್ತಕ ಸಮೂಹದ ಇಂಟರ್ಗ್ಲೋಬ್ ಎಂಟರ್ಪ್ರೈಸಸ್ ಸಂಸ್ಥೆ ಏರ್ ಟ್ಯಾಕ್ಸಿ ಸೇವೆ ಆರಂಭಿಸಲು ನಿರ್ಧರಿಸಿದೆ.
|
| 3 |
+
ನಗರದಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸುವ ಉದ್ದೇಶದಿಂದ ಇಂಟರ್ಗ್ಲೋಬ್ ಸಂಸ್ಥೆ ಹಾಗೂ ಅಮೆರಿಕ ಮೂಲದ ಆರ್ಚರ್ ಏವಿಯೇಷನ್ ಸಂಸ್ಥೆಗಳು ನಗರದಲ್ಲಿ ಮ್ಯಾಪಿಂಗ್ ಕಾರ್ಯ ನಡೆಸುತ್ತಿವೆ.
|
| 4 |
+
ಮೊದಲ ಹಂತದಲ್ಲಿ ದೆಹಲಿಯಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತಿದ್ದು ನಂತರ ಸಿಲಿಕಾನ್ ಸಿಟಗೂ ಆ ಸೇವೆಯನ್ನು ವಿಸ್ತರಿಸಲಾಗುವುದು ಎಂದು ತಿಳಿದುಬಂದಿದೆ. ಸರ್ಜಾಪುರ, ಐಟಿಪಿಎಲ್, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಏರ್ ಟ್ಯಾಕ್ಸಿ ನಿಲ್ದಾಣಗಳ ಗುರುತು ಕಾರ್ಯ ನಡೆಸಲಾಗುತ್ತಿದ್ದ ಡ್ರೋಣ್ ಮಾದರಿಯಲ್ಲಿರುವ ಏರ್ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
|
| 5 |
+
ಏರ್ ಟ್ಯಾಕ್ಸಿ ನಿಲ್ದಾಣ ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳ ಗುರುತು ಹಾಕಲಾಗಿದ್ದು, ಏರ್ ಪೋರ್ಟ್ ಗೆ ಏರ್ ಟ್ಯಾಕ್ಸಿಯಲ್ಲಿ ತೆರಳುವವರಿಗೆ 2 ಸಾವಿರಂದ 2,500 ರೂಪಾಯಿ ದರ ನಿಗದಿಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.ಉದ್ದೇಶಿತ ಏರ್ ಟ್ಯಾಕ್ಸಿ ಸೇವೆ ಆರಂಭವಾದರೆ ಕೇವಲ 6 ನಿಮಿಷದೊಳಗೆ ಏರ್ ಪೋರ್ಟ್ ಗೆ ತಲುಪಬಹುದಾಗಿದೆ.
|
eesanje/url_46_173_10.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಇಂಡಿ ಮೈತ್ರಿಕೂಟದಲ್ಲಿ ಮಿತ್ರರು ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ : ದೇವೇಗೌಡರು
|
| 2 |
+
ಬೆಂಗಳೂರು,ಏ.21-ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಪ್ರಹಸನವಲ್ಲದೆ, ಬೇರೇನೂ ಅಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಟೀಕಿಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ. ಅದರಲ್ಲಿ ಮೈತ್ರಿಕೂಟದ ಸ್ಥಿತಿ ಯಾವ ಮಟ್ಟದಲ್ಲಿದೆ ಎಂಬುದನ್ನು ಸ್ಪಷ್ಟವಾಗಿ ವರದಿ ಮಾಡಿದಂತಿದೆ.
|
| 3 |
+
ಪತ್ರಿಕೆಗಳ ಮುಖ್ಯಾಂಶಗಳನ್ನು ಗಮನಿಸಿದಾಗ ಇಂಡಿ ಮೈತ್ರಿಕೂಟದ ಮಿತ್ರರ್ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ ಎಂಬಂತಾಗಿದೆ ಎಂದು ತಿಳಿಸಿದ್ದಾರೆ. ಪತ್ರಿಕೆಗಳಲ್ಲಿ ವರದಿಯಾಗುತ್ತಿರುವ ಪ್ರಮುಖಾಂಶಗಳನ್ನು ತಮ್ಮ ಪೋಸ್ಟ್ ನ ಜೊತೆ ಗೌಡರು ಟ್ಯಾಗ್ ಮಾಡಿ ಟೀಕಿಸಿದ್ದಾರೆ.
|
| 4 |
+
ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳ ನಾಯಕರೇ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಗಮನಿಸಿ ಗೌಡರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
|
| 5 |
+
. . . ’ . .@@##../f26qR5Bxwm
|
eesanje/url_46_173_11.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಶೀಘ್ರದಲ್ಲೇ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
|
| 2 |
+
ಬೆಂಗಳೂರು,ಏ.21-ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪ್ರಶ್ನೆಪತ್ರಿಕೆಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.27 ರ ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಿಇಟಿಯ ಪ್ರಶ್ನೆಪತ್ರಿಕೆಗಳಿಗೆ ಸದ್ಯದಲ್ಲೇ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
|
| 3 |
+
ಏ.18 ಮತ್ತು 19 ರಂದು ನಡೆದ ಜೀವಶಾಸ್ತ್ರ ಮತ್ತು ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ಇ-ಮೇಲ್ ಮೂಲಕ ಕೆಇಎ ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆಪತ್ರಿಕೆಯ ಪ್ರಶ್ನೆಗಳ ಸಂಖ್ಯೆ, ವಿವರಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
|
| 4 |
+
ಸಿಇಟಿ ಪರೀಕ್ಷೆ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪಿಯುಸಿ ಪಠ್ಯಕ್ರಮದಲ್ಲಿ ಇಲ್ಲದಂತಹ ಪ್ರಶ್ನೆಗಳನ್ನು ಕೇಳಲಾಗಿದೆ, ಕೆಲವರು ಮರುಪರೀಕ್ಷೆಗೆ ಒತ್ತಾಯಿಸಿದ್ದರೆ, ಮತ್ತೆ ಕಲವರು ಕೃಪಾಂಕ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ನೀಡಿರುವ ಗಡುವು ಮುಗಿದ ನಂತರ ವಿಷಯ ತಜ್ಞರ ಸಭೆ ನಡೆಸಿ ಕೆಇಎ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
| 5 |
+
ಏ.18ರಂದು ಜೀವಶಾಸ್ತ್ರ ಮತ್ತು ಗಣಿತ, 19 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆದಿದ್ದು, ನಿನ್ನೆ ಹೊರನಾಡ ಹಾಗೂ ಗಡಿನಾಡ ಕನ್ನಡಿಗರ ಅಭ್ಯರ್ಥಿಗಳಿಗಾಗಿ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿದೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆದಿದ್ದಾರೆ.
|
| 6 |
+
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದರು. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 3,18,865 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ಬರೆದಿದ್ದರು.
|
eesanje/url_46_173_12.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಕಾಂಗ್ರೆಸ್ ದೂರು
|
| 2 |
+
ಬೆಂಗಳೂರು,ಏ.21-ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.
|
| 3 |
+
ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್ ಒಡೆಯರ್ರವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವವರೊಂದಿಗೆ ಸಭೆ ನಡೆಸಿದ್ದಾರೆ. ಆ ವೇಳೆ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿದ್ದಾರೆ.
|
| 4 |
+
ಉಡುಗೊರೆಗಳ ಜೊತೆಗೆ ಹಣವನ್ನೂ ನೀಡಲಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಮತದಾರರಿಗೆ ಹಣ ನೀಡುವುದಷ್ಟೇ ಅಲ್ಲ, ಮತದಾನದ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಯದುವೀರ್ ಒಡೆಯರ್ ಅವರ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
|
eesanje/url_46_173_2.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ
|
| 2 |
+
ಬೆಂಗಳೂರು,ಏ.22-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ನಾಲ್ಕೇ ದಿನಗಳು ಬಾಕಿ ಇರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ.
|
| 3 |
+
ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ನರಸಿಂಹದತ್ತ ಒಡೆಯರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿರುವ ಡಾ.ಸಿ.ಎನ್.ಮಂಜುನಾಥ್ ಹಾಗೂ ದಕ್ಷಿಣ ಕನ್ನಡದಿಂದ ಮೊದಲ ಬಾರಿಗೆ ಸ್ಪರ್ಧೆ ಮಾಡಿರುವ ಬೃಜೇಶ್ ಚೌತಲ ಅವರಿಗೆ ಖುದ್ದು ಪ್ರಧಾನಿಯೇ ಪತ್ರ ಬರೆದು, ನೀವು ಗೆದ್ದು ಸಂಸತ್ತಿಗೆ ಆಯ್ಕೆಯಾಗುತ್ತೀರಿ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
|
| 4 |
+
ಮೋದಿ ಬರೆದ ಪತ್ರದಲ್ಲೇನಿದೆ?ನನ್ನ ಸಹೋದ್ಯೋಗಿ ಯದುವೀರ್ ಜೀ ಎಂದು ಪತ್ರ ಆರಂಭಸಿರುವ ಮೋದಿ, ಈ ಪತ್ರ ನಿಮಗೆ ಉತ್ತಮ ಆರೋಗ್ಯವನ್ನು ನೀಡುತ್ತೆ ಎಂದು ಭಾವಿಸುವೆ. ನೀವು ನೇರವಾಗಿ ಜನರ ಸೇವೆ ಮಾಡುವ ಮೂಲಕ ಮೈಸೂರಿನ ಒಡೆಯರ ಪರಂಪರೆಯನ್ನು ಮುನ್ನಡೆಸುತ್ತಿರುವುದು ಶ್ಲಾಘನೆ. ಸುಸ್ಥಿರ ಅಭಿವೃದ್ಧಿ, ಶಿಕ್ಷಣಕ್ಕಾಗಿ ನಿಮ್ಮ ಸಮರ್ಪಣೆ ಸ್ಪಷ್ಟವಾಗಿದೆ. ಜನರ ಆಶೀರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ ಎಂಬ ವಿಶ್ವಾಸವಿದೆ. ನಿಮ್ಮಂತಹ ತಂಡದ ಸದಸ್ಯರು ನನಗೆ ದೊಡ್ಡ ಆಸ್ತಿ ಎಂದು ಹೇಳಿದ್ದಾರೆ.
|
| 5 |
+
ಒಂದು ತಂಡವಾಗಿ, ನಿಮ್ಮ ಕ್ಷೇತ್ರ ಮತ್ತು ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಜನತೆಗೆ ಇದು ಮಾಮೂಲಿ ಚುನಾವಣೆಯಲ್ಲ ಎಂದು ಹೇಳ ಬಯಸುತ್ತೇನೆ. ಪ್ರತಿಯೊಬ್ಬರಿಗೂ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಈ ಚುನಾವಣೆಯು ನಮ್ಮ ಧ್ಯೇಯದಲ್ಲಿ ನಿರ್ಣಾಯಕವಾಗಿರುತ್ತದೆ. ಬಿಜೆಪಿ ಪಡೆಯುವ ಪ್ರತಿ ಮತವು ಸ್ಥಿರ ಸರ್ಕಾರ ರಚಿಸುವತ್ತ ಸಾಗುತ್ತದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರದ ಪಯಣಕ್ಕೆ ವೇಗ ನೀಡುತ್ತದೆ ಎಂದಿದ್ದಾರೆ.
|
| 6 |
+
ಬೇಸಿಗೆ ಬಿಸಿ ಎಲ್ಲರಿಗೂ ಸಮಸ್ಯೆ ಉಂಟುಮಾಡುತ್ತದೆ ಎಂದು ನನಗೆ ತಿಳಿದಿದೆ. ಆದರೆ ಈ ಚುನಾವಣೆ ನಮ್ಮ ದೇಶದ ಭವಿಷ್ಯಕ್ಕೆ ಅತ್ಯಂತ ಮಹತ್ವದ್ದಾಗಿದೆ. ಬಿಸಿಲಿನ ತಾಪಕ್ಕೂ ಮುನ್ನವೇ ಮತದಾರರು ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ನನ್ನ ಪ್ರತಿ ಕ್ಷಣವನ್ನು ನನ್ನ ಸಹ ನಾಗರಿಕರ ಕಲ್ಯಾಣಕ್ಕಾಗಿ ಮೀಸಲಿಡುವೆ. ಈ ಭರವಸೆಯನ್ನು ಪ್ರತಿಯೊಬ್ಬರಿಗೆ ತಿಳಿಸಲು ನಿಮ್ಮನ್ನು ಒತ್ತಾಯಿಸುವೆ. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ನನ್ನ ಶುಭಾಶಗಳನ್ನ ಕಳಿಸಿದ್ದೇನೆ ಎಂದು ಯದುವೀರ್ಗೆ ಬರೆದ ಪತ್ರದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
|
| 7 |
+
ಇದೇ ರೀತಿ ಡಾ.ಸಿ.ಎನ್.ಮಂಜುನಾಥ್ ಮತ್ತು ಬೃಜೇಶ್ ಚೌತಲಗೆ ಪ್ರಧಾನಿಯವರು ಖುದ್ದು ಪತ್ರ ಬರೆದಿದ್ದು, ಮತದಾರರು ನಿಮ್ಮನ್ನು ಎರಡೂ ಕ್ಷೇತ್ರಗಳಲ್ಲಿ ಆಯ್ಕೆ ಮಾಡಲಿದ್ದಾರೆ. ಜನರ ನಿರೀಕ್ಷೆಗಳು ಹುಸಿಯಾಗದಂತೆ ಅವರ ಸೇವೆಗೆ ಸಿದ್ಧರಾಗಿ ಎಂದು ಕರೆ ಕೊಟ್ಟಿದ್ದಾರೆ.
|
eesanje/url_46_173_3.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬೆಂಗಳೂರು ಗ್ರಾಮಾಂತರವನ್ನು ಅತೀಸೂಕ್ಷ್ಮ ಕ್ಷೇತ್ರ ವೆಂದು ಪರಿಗಣಿಸುವಂತೆ ಆಯೋಗ ಸೂಚನೆ
|
| 2 |
+
ಬೆಂಗಳೂರು,ಏ.22-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಪ್ರತಿಷ್ಠಿತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
|
| 3 |
+
ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಗಳನ್ನೂ ತೆಗೆದುಕೊಳ್ಳಬೇಕೆಂದು ಉಪ ಮುಖ್ಯ ಚುನಾವಣಾಧಿಕಾರಿ ನವೀನ್ ಜೋಸೆಫ್ ಎ. ಅವರು ರಾಮನಗರ ಚುನಾವಣಾಧಿಕಾರಿಗೆ ಸೂಚನೆ ನೀಡಿದ್ದಾರೆ.
|
| 4 |
+
ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ಬಿಜೆಪಿ ಚುನಾವಣಾ ಏಜೆಂಟ್ ಪದ್ಮನಾಭ ಜಿ.ವಿ. ಅವರು ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದರು.
|
| 5 |
+
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆಡಳಿತಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯವುದು ಅನಿವಾರ್ಯವಾಗಿದೆ.
|
| 6 |
+
ರಾಷ್ಟ್ರೀಯ ಪಕ್ಷಗಳಿಂದ ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸಿರುವ ಕಾರಣ ಈ ಕ್ಷೇತ್ರವನ್ನು ಅತೀಸೂಕ್ಷ್ಮವೆಂದು ಪರಿಗಣಿಸಿ ಎಲ್ಲಿ ಅಗತ್ಯವಿದೆಯೋ ಅಂತಹ ಕಡೆ ಸೇನಾಪಡೆ, ಅರೆಸೇನಾಪಡೆ, ಕ್ಷಿಪ್ರಪಡೆ ಸೇರಿದಂತೆ ಮತ್ತಿತರ ಭದ್ರತಾ ಪಡೆಗಳನ್ನು ನಿಯೋಜಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದರು.
|
| 7 |
+
ಈ ಪತ್ರವನ್ನು ಮುಖ್ಯ ಚುನಾವಣಾ ಆಯುಕ್ತರಿಗೆ ರವಾನಿಸಲಾಗಿತ್ತು. ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿದ ಆಯೋಗ ಅತೀಸೂಕ್ಷ್ಮ ಎಂದು ಪರಿಗಣಿಲುಸ ನಿರ್ದೇಶನ ನೀಡಿತ್ತು. ಇದೀಗ ಗ್ರಾಮಾಂತರ ಕ್ಷೇತ್ರವು ಅತೀ ಸೂಕ್ಷ್ಮ ಕ್ಷೇತ್ರವೆಂದು ಘೋಷಣೆಯಾಗಿರುವುದರಿಂದ ಮತದಾನಕ್ಕೂ ಮುನ್ನ ಕ್ಷೇತ್ರದಾದ್ಯಂತ ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜನೆ ಮಾಡಲಾಗುತ್ತದೆ.
|
| 8 |
+
ಮೂಲಗಳ ಪ್ರಕಾರ, ಒಂದೆರೆಡು ದಿನಗಳಲ್ಲಿ ಸಿಐಎಸ್ಎಫ್, ಸಿಆರ್ಪಿಎಫ್, ಆರ್ಎಎಫ್ ಹಾಗೂ ಸ್ಥಳೀಯ ಪೊಲೀಸರನ್ನು ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
|
eesanje/url_46_173_4.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಟನ್ಪೇಟೆ ಕಾರಿನಲ್ಲಿ ಸಿಕ್ಕ 2 ಕೋಟಿ ರೂ.ಹಣಕ್ಕೆ ಬಿಜೆಪಿ ಲಿಂಕ್
|
| 2 |
+
ಬೆಂಗಳೂರು,ಏ.22-ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.
|
| 3 |
+
ಕಳೆದ ಶನಿವಾರ ಮಧ್ಯಾಹ್ನ ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್ , ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.
|
| 4 |
+
ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು – ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು.
|
| 5 |
+
ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
|
eesanje/url_46_173_5.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕೊನೆಗೂ ನಾಮಪತ್ರ ಹಿಂಪಡೆಯಲು ದಿಂಗಾಲೇಶ್ವರ ಸ್ವಾಮೀಜಿ ಸಮ್ಮತಿ
|
| 2 |
+
ಬೆಂಗಳೂರು,ಏ.22-ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ಕೊನೆಗೂ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ. ಹಿರಿಯ ಮಠಾಧೀಶರೊಬ್ಬರ ಮನವೊಲಿಕೆ ಹಾಗೂ ರಾಜ್ಯದ ಪ್ರಭಾವಿ ಹಿರಿಯ ಲಿಂಗಾಯತ ಸಮುದಾಯದ ನಾಯಕರ ಮಧ್ಯಪ್ರವೇಶದಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ಮುಂದಾಗಿದ್ದಾರೆ.
|
| 3 |
+
ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಸಮುದಾಯದವರ ಮಾತಿಗೆ ಕಟಿಬಿದ್ದು ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆಯುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಸಮುದಾಯದ ಜೊತೆಗೆ ಭಕ್ತರ ವಿರೋಧವನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ದೂರವಾಣಿಯಲ್ಲಿ ಸಂಪರ್ಕಿಸಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
|
| 4 |
+
ನನಗೆ ಈಗಲೂ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಮೇಲೆ ಇರುವ ಅಸಮಾಧಾನ ಸ್ವಲ್ಪವೂ ಕಡಿಮೆಯಾಗಿಲ್ಲ. ಆದರೆ ನೀವು ಮತ್ತು ನಿಮ್ಮ ಕುಟುಂಬದವರು ಮಠದ ಬಗ್ಗೆ ಇಟ್ಟುಕೊಂಡಿರುವ ಗೌರವದಿಂದ ನಿಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ಹಿಂಪಡೆಯುತ್ತಿದ್ದೇನೆ. ಮುಂದಿನ ದಿನಗಳಲ್ಲಾದರೂ ಪ್ರಹ್ಲಾದ್ ಜೋಷಿಗೆ ನಮ್ಮ ಸಮುದಾಯದ ವಿರುದ್ಧ ಷಡ್ಯಂತ್ರ್ಯ ನಡೆಸುವುದು ಇಲ್ಲವೇ ಎರಡು ಮತ್ತು ಮೂರನೇ ಹಂತದ ನಾಯಕರನ್ನು ತುಳಿಯುವ ಪ್ರವೃತ್ತಿ ಬಿಡುವಂತೆ ಸೂಚನೆ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ.
|
| 5 |
+
ಉಳಿದ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ, ಮೊದಲು ನೀವು ನಾಮಪತ್ರ ಹಿಂಪಡೆಯಿರಿ. ಚುನಾವಣೆ ಮುಗಿದ ಬಳಿಕ ಇಬ್ಬರನ್ನೂ ಪರಸ್ಪರ ಭೇಟಿ ಮಾಡಿಸಿ ಸಮಸ್ಯೆ ಇತ್ಯರ್ಥಪಡಿಸುವ ಆಶ್ವಾಸನೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ಇದೇ ವೇಳೆ ಧಾರವಾಡ ಮೂಲದ ಹಿರಿಯ ಸ್ವಾಮೀಜಿಯೊಬ್ಬರು ಮಧ್ಯಪ್ರವೇಶಿಸಿ ನೀವು ಚುನಾವಣೆಗೆ ಸ್ಪರ್ಧಿಸುವುದಾದರೆ ನಮ್ಮ ಅಭ್ಯಂತರವಿಲ್ಲ. ಮೊದಲು ಪೀಠ ತ್ಯಾಗ ಮಾಡಿ, ಇಲ್ಲವೇ ಭಕ್ತರ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಿ ಎಂದು ಸೂಚ್ಯವಾಗಿ ಹೇಳಿದ್ದಾರೆ.
|
| 6 |
+
ಮಠಾೀಧಿಶರಾಗಿ ಕಾವಿ ಧರಿಸಿ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ. ಒಂದು ವೇಳೆ ಸ್ರ್ಪಸಬೇಕೆಂಬ ನಿರ್ಧಾರ ಅಚಲವಾದರೆ, ಪೀಠ ತ್ಯಾಗ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಹಿರಿಯ ಶ್ರೀಗಳು ತಿಳಿ ಹೇಳಿದ್ದಾರೆ. ಅಂತಿಮವಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_173_6.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು
|
| 2 |
+
ಮೈಸೂರು, ಏ. 21– ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ವಿಕಲತೇಚನ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕನ ಅಂತ್ಯಸಂಸ್ಕಾರಕ್ಕೆ ಗ್ರಾಮದಲ್ಲಿ ಅವಕಾಶ ನೀಡದ ಹಿನ್ನಲೆ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮೃತದೇಹಕ್ಕೆ ಮುಕ್ತಿ ದೊರಕಿಸಿದ್ದಾರೆ.
|
| 3 |
+
ಜಿಲ್ಲಾಧಿಕಾರಿಗಳ ಮೌಖಿಕ ಆದೇಶಕ್ಕೆ ತಹಸೀಲ್ದಾರ್ ಗ್ರಾಮಕ್ಕೆ ಭೇಟಿ ನೀಡಿ ಮುಖಂಡರ ಮನ ಒಲಿಸಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಯಿತು.ತರಗನಹಳ್ಳಿಯ ವಾಸಿ ಕುಳ್ಳನಾಯಕನ ಕುಟುಂಬದ ಮೇಲೆ ನಾಲ್ಕು ವರ್ಷಗಳ ಹಿಂದೆ ಮುಖಂಡರು ಬಹಿಷ್ಕಾರ ಹೇರಿದ್ದರು.
|
| 4 |
+
ಬಹಿಷ್ಕಾರವನ್ನ ತೆರವುಗೊಳಿಸಲು ಕುಳ್ಳನಾಯಕ ಸರ್ಕಾರಿ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದ್ದರು. ತಾಲ್ಲೂಕು ಆಡಳಿತ ಸೂಕ್ತವಾಗಿ ಸ್ಪಂದಿಸಿರಲಿಲ್ಲ.ಕುಳ್ಳನಾಯಕನ ಮಗ ಮಾದೇಶ ಮೃತಪಟ್ಟಿದ್ದಾನೆ.ಅಂತ್ಯಸಂಸ್ಕಾರ ಮಾಡಲು ಗ್ರಾಮದಲ್ಲಿ ಅವಕಾಶ ನೀಡಿಲ್ಲ ಹಾಗೂ ಯಾರೂ ಸಹ ಮುಂದೆ ಬಂದಿಲ್ಲ.ಇದರಿಂದ ನೊಂದ ಕುಳ್ಳನಾಯಕ ಮಗನ ಮೃತದೇಹವನ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಕೊಂಡೊಯ್ಯಲು ಮುಂದಾಗಿದ್ದಾನೆ.
|
| 5 |
+
ಈ ಮಾಹಿತಿ ಅರಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕುಳ್ಳನಾಯಕನ ಪರಿಸ್ಥಿತಿ ಅರಿತು ಕೂಡಲೇ ತಹಸೀಲ್ದಾರ್ ಗೆ ಸೂಚನೆ ನೀಡಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.ಎಚ್ಚೆತ್ತ ತಹಸೀಲ್ದಾರ್ ಗ್ರಾಮದ ಮುಖಂಡರ ಮನ ಒಲಿಸಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದಾರೆ.
|
| 6 |
+
21 ನೇ ಶತಮಾನಕ್ಕೆ ಕಾಲಿಟ್ಟರೂ ಬಹಿಷ್ಕಾರದ ಪಿಡುಗಿನಿಂದ ಹೊರಬರಲು ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶದಿಂದ ಸಧ್ಯ ಅಂತ್ಯಕ್ರಿಯೆ ನಡೆಸಲಾಗಿದ್ದು ಮೃತದೇಹಕ್ಕೆ ಮುಕ್ತಿ ನೀಡಲಾಗಿದೆ.
|
eesanje/url_46_173_7.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ : ಜೋಶಿ
|
| 2 |
+
ಹುಬ್ಬಳ್ಳಿ,ಏ.21-ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸ ದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.
|
| 3 |
+
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
|
| 4 |
+
ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು ಕನ್ವರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ ಆಕೆ ಒಪ್ಪಿರಲಿಲ್ಲ ಎಂಬುದನ್ನು ಆಕೆ ತಂದೆಯೇ ಹೇಳಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು. ಆರೋಪಿ ಫಯಾಜ್ ನೇಹಾಳನ್ನು ಕನ್ವರ್ಟ್ ಮಾಡಿ ಮದುವೆ ಮಾಡಿಕೊಳ್ಳಲು ನೋಡಿದ್ದಾನೆ. ಇದಕ್ಕೆ ನೇಹಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಒಪ್ಪದಿದ್ದಾಗ ಅಂತಿಮವಾಗಿ ಹತ್ಯೆ ಕೃತ್ಯ ವೆಸಗಿದ್ದಾನೆ ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ್ ಅವರೇ ನನ್ನೆದುರು ಮಾತ್ರವಲ್ಲಾ ಬಹಿರಂಗವಾಗೇ ಹೇಳಿದ್ದಾರೆ ಎಂದರು ಸಚಿವ ಜೋಶಿ.
|
| 5 |
+
ಜನಸಾಮಾನ್ಯರ ಗತಿ ಏನು:ಕಾಂಗ್ರೆಸ್ ಕಾರ್ಪೊರೇಟರ್ ಆದ ನನ್ನ ಮಗಳ ಘಟನೆಯಲ್ಲೇ ಹೀಗೆ ವರ್ತಿಸುತ್ತಿದ್ದೀರಿ. ಇನ್ನು ಜನ ಸಾಮಾನ್ಯರ ಗತಿ ಏನು? ನಿರಂಜನ್ ಅವರೇ ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅಂಥ ದುಸ್ಥಿತಿಗೆ ತಂದಿದ್ದಾರೆ ಎಂದು ಜೋಶಿ ಹರಿ ಹಾಯ್ದರು.
|
| 6 |
+
ಕಾಂಗ್ರೆಸ್ನವರಿಗೆ ಕರುಣೆಯೇ ಇಲ್ಲ:ನೇಹಾಳನ್ನು ಹಾಡಹಗಲೇ ಒಂಬತ್ತು-ಹತ್ತು ಬಾರಿ ಚೂರಿ ಇರಿದು ಹತ್ಯೆಗೈದ ದೃಶ್ಯ ನೋಡಿದರೂ ಈ ಕಾಂಗ್ರೆಸ್ಸಿಗರಿಗೆ ಕರುಣೆಯೇ ಇಲ್ಲ. ನೇಹಾಳ ಕುಟುಂಬಕ್ಕೆ ನ್ಯಾಯ ಕೊಡಬೇಕು ಎಂಬ ಕಿಂಚಿತ್ತೂ ಜವಾಬ್ದಾರಿ ಇಲ್ಲ ಎಂದು ಸರ್ಕಾರದ ವಿರುದ್ಧ ಜೋಶಿ ಕಿಡಿ ಕಾರಿದರು.
|
| 7 |
+
ತುಷ್ಟಿಕರಣ ಮಿತಿಮೀರಿದೆ:ಡಿಜೆ ಹಳ್ಳಿ-ಕೆಜೆ ಹಳ್ಳಿ, ರಾಮೇಶ್ವರ್ ಕೆಫೇ ಬಾಂಬ್ ಸೋಟ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ಉಡುಪಿಯ ಟಾಯ್ಲೆಟ್ ಒಳಗೆ ಕ್ಯಾಮರಾ ಇಟ್ಟ ಪ್ರಕರಣ ಹೀಗೆ ಎಲ್ಲಾ ಘಟನೆಗಳಲ್ಲೂ ಇವರ ತುಷ್ಟಿಕರಣ ನೀತಿ ಮಿತಿಮೀರಿದೆ. ಇದರಿಂದಾಗಿ ಜನರ ಆಕ್ರೋಶ ಮುಗಿಲು ಮುಟ್ಟಿದೆ ಎಂದು ಎಚ್ಚರಿಸಿದರು.
|
eesanje/url_46_173_8.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತಷ್ಟು ಹೆಚ್ಚಾದ ನಾಯಕರ ಪ್ರಚಾರದ ಅಬ್ಬರ
|
| 2 |
+
ಬೆಂಗಳೂರು,ಏ.21-ಲೋಕಸಭಾ ಮಹಾಸಮರ ದಲ್ಲಿ ರಾಜ್ಯದ ಮೊದಲ ಅಧ್ಯಾಯಕ್ಕೆ ಬಹಿರಂಗ ಪ್ರಚಾರ ಇನ್ನು ಮೂರು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳೂ ರಣಕಣದಲ್ಲಿ ಆರ್ಭಟಿಸುತ್ತಿದ್ದು, ಮತದಾರರ ಮನಸ್ಸು ಗೆಲ್ಲಲು ಬೆವರಿಳಿಸುತ್ತಿದ್ದಾರೆ. ಕಳೆದೆರಡು ದಿನಗಳಿಂದ ಕೆಲವು ಕಡೆ ಸಣ್ಣಪುಟ್ಟ ಮಳೆಯಾಗಿದ್ದರೂ ಬಿಸಿಲಿನ ಝಳ ತಗ್ಗಿಲ್ಲ.
|
| 3 |
+
ಬೇಸಿಗೆಯ ಉಷ್ಣಾಂಶಕ್ಕಿಂತಲೂ ರಾಜಕೀಯದ ಕಾವು ದಿನೇದಿನೇ ಏರುತ್ತಿದೆ. ಏ.24 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದರಿಂದಾಗಿ ಪ್ರತಿಯೊಬ್ಬ ನಾಯಕರೂ ತಮಗೆ ನಿಯೋಜಿಸಿದ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರಮೋದಿ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ ತೆರಳಿದ್ದಾರೆ.
|
| 4 |
+
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದು,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪರವಾಗಿ ಮತ ಯಾಚಿಸಲಿದ್ದಾರೆ. ಜೊತೆಗೆ ಇತ್ತೀಚೆಗಷ್ಟೇ ಕೊಲೆಯಾದ ನೇಹಾ ಹಿರೇಮಠ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.
|
| 5 |
+
ಕಾಂಗ್ರೆಸ್ ಸರ್ಕಾರ ಚೊಂಬು ಜಾಹೀರಾತಿನ ಮೂಲಕ ಬಿಜೆಪಿಗೆ ಮುಜುಗರ ಉಂಟುಮಾಡಿದ್ದು, ಇದಕ್ಕೆ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಪತ್ರಿಕಾಗೋಷ್ಠಿ ನಡೆಸಿ ಠಕ್ಕರ್ ನೀಡಿದ್ದಾರೆ.ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯ ಬಳಿಕ ವಿಶ್ರಾಂತಿ ಪಡೆಯದೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತೆರಳಲಿದ್ದು, ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಎರಡೂ ಕಡೆ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತಯಾಚನೆ ನಡೆಸಲಿದ್ದಾರೆ.
|
| 6 |
+
ವಿರೋಧಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪರವಾಗಿ ಮತಪ್ರಚಾರ ನಡೆಸಲಿದ್ದಾರೆ.
|
| 7 |
+
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈಸೂರು ನಗರ, ಎಚ್.ಡಿ.ಕೋಟೆ, ನಂಜನಗೂಡು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಂದು ಪ್ರಚಾರ ನಡೆಸಿದ್ದಾರೆ.ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವಿಜಯನಗರ, ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಪ್ರಚಾ��� ನಡೆಸಿದರು.
|
| 8 |
+
ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಕೋಲಾರ ಲೋಕಸಭಾ ಕ್ಷೇತ್ರದ ಬಂಗಾರಪೇಟೆ, ಶಿಡ್ಲಘಟ್ಟದಲ್ಲಿ ರೋಡ್ ಶೋ ನಡೆಸಿ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ-2 ಅನ್ನು ಮುಂದುವರೆಸಲಿದ್ದಾರೆ.ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.
|
| 9 |
+
ಈ ಕ್ಷೇತ್ರಗಳಲ್ಲಿ ಹೆಚ್ಚಿನ ಮತ ಸೆಳೆಯಲು 3 ಪಕ್ಷಗಳು ಆಕ್ರಮಣಕಾರಿ ಪ್ರಚಾರ ತಂತ್ರಗಳನ್ನು ಅನುಸರಿಸುತ್ತಿವೆ.ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಕೇಂದ್ರದ ವಿರುದ್ಧ ತಾರತಮ್ಯದ ಅಸ್ತ್ರ ಪ್ರಯೋಗಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಸರ್ಕಾರ ಕಾನೂನು ಸುವ್ಯವಸ್ಥೆ ನಿರ್ವಹಣೆ, ಬರ ನಿರ್ವಹಣೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ವೈಫಲ್ಯ ಕಂಡಿದೆ ಎಂದು ವಾಗ್ದಾಳಿ ನಡೆಸುತ್ತಿವೆ.
|
| 10 |
+
ಕೇಂದ್ರ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮದ ನಡುವೆಯೂ ಅಲ್ಲಲ್ಲಿ ಅಪಾರ ಪ್ರಮಾಣದ ನಗದು, ಉಡುಗೊರೆಗಳು ಹಾಗೂ ಇತರ ವಸ್ತುಗಳು ಕೋಟ್ಯಂತರ ರೂ. ಲೆಕ್ಕದಲ್ಲಿ ಪತ್ತೆಯಾಗುತ್ತಲೇ ಇವೆ. ಉತ್ತರ ಕರ್ನಾಟಕ ಭಾಗ ಹಾಗೂ ಮಲೆನಾಡು ಪ್ರದೇಶದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದ್ದು, ಮೊದಲ ಹಂತದ ಬಳಿಕ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಸ್ಟಾರ್ ಪ್ರಚಾರಕರು ಮತ್ತೆ ಎರಡನೇ ಹಂತದ ಕ್ಷೇತ್ರಗಳತ್ತ ದಾಂಗುಡಿ ಇಡಬೇಕಾದ ಅನಿವಾರ್ಯತೆ ಎದುರಾಗಿದೆ.
|
eesanje/url_46_173_9.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಗದಗದಲ್ಲಿ ನಾಲ್ವರ ಭೀಕರ ಕೊಲೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ
|
| 2 |
+
ಬೆಂಗಳೂರು, ಏ.21-ಗದಗ್ನ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವುದು ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆಸ್ತಿ ವಿಚಾರ ಅಥವಾ ವೈಯಕ್ತಿಕ ಕಾರಣಗಳಿಂದ ಈ ಕೊಲೆ ನಡೆದಿರಬಹುದು ಎಂದು ಶಂಕಿಸಿ ಗದಗ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
|
| 3 |
+
ಐವರು ಸುಪಾರಿ ಹಂತಕರು ಇವರ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸಹ ಪೊಲೀಸರಿಗೆ ಗೊತ್ತಾಗಿದೆ. ಪರಾರಿಯಾಗಿರುವ ಹಂತಕರ ಬಂಧನಕ್ಕಾಗಿ ರಚಿಸಲಾಗಿರುವ ಐದು ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಒಂದು ತಂಡ ಮಹಾರಾಷ್ಟ್ರ ಮತ್ತೊಂದು ತಂಡ ಹೈದರಾಬಾದ್ಗೂ ತೆರಳಿವೆ.
|
| 4 |
+
ನಾಲ್ವರ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಸುತ್ತೇವೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.
|
| 5 |
+
ಗದಗ ನಗರದ ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಕುಟುಂಬ ವಾಸವಾಗಿದೆ. ಸುನಂದಾ ಬಾಕಳೆ ಪುತ್ರ ಕಾರ್ತಿಕ ಬಾಕಳೆಯ (28) ನಿಶ್ಚಿತಾರ್ಥ ಕಾರ್ಯದ ಹಿನ್ನೆಲೆಯಲ್ಲಿ ಸಂಬಂಧಿಕರಾದ ಪರಶುರಾಮ ಕುಟುಂಬ ಕೊಪ್ಪಳದಿಂದ ಸುನಂದಾ ಬಾಕಳೆ ಮನೆಗೆ ಬಂದಿದ್ದರು.
|
| 6 |
+
ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮಿ (45) ಮತ್ತು ಪುತ್ರಿ ಆಕಾಂಕ್ಷಾ (16) ಸುನಂದಾ ಬಾಕಳೆ ಮನೆಯಲ್ಲಿ ತಂಗಿದ್ದರು.ಏ.19ರ ರಾತ್ರಿ ಪರಶುರಾಮ ಹಾದಿಮನಿ ಪುತ್ರಿ ಆಕಾಂಕ್ಷಾ ಹುಟ್ಟುಹಬ್ಬವನ್ನು ಸುನಂದಾ ಬಾಕಳೆ ಮನೆಯಲ್ಲಿ ಆಚರಿಸಿ ಎಲ್ಲರೂ ಮಲಗಿದ್ದಾರೆ. ಪರಶುರಾಮ ಕುಟುಂಬ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.
|
| 7 |
+
ಮುಂಜಾನೆ ಪರಶುರಾಮ ಕುಟುಂಬ ಮಲಗಿದ್ದ ಕೋಣೆಯ ಗಾಜಿನ ಕಿಟಕಿಯನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಮೇಲೆ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್ನನ್ನೂ ಕೊಲೆ ಮಾಡಿದ್ದರು. ಬಳಿಕ ದುಷ್ಕರ್ಮಿಗಳು ಮನೆಯ ಮಾಲಿಕ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಲಿ ತಟ್ಟಿದ್ದರು.
|
| 8 |
+
ಆದರೆ ದಂಪತಿ ಬಾಗಿಲು ತೆಗೆಯದೆ ಕಳ್ಳರು ಬಂದಿರಬಹುದೆಂದು ಶಂಕಿಸಿ ಪೊಲೀಸರಿಗೆ ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಫೋನ್ ಮಾಡಿದ್ದರು. ನೆರೆಹೊರೆಯವರು ಬರುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಬಿಸಾಡಿದ್ದಾರೆ. ಸುದ್ದಿ ತಿಳಿದು ಗದಗ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಬಂದು ಪರಿಶೀಲಿಸಿ ��್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_174_1.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮೋದಿಯವರ ಚೊಂಬು ಶ್ರೀಮಂತರಿಗೆ ಮಾತ್ರ ಅಕ್ಷಯಪಾತ್ರೆ : ಸಿಎಂ ಸಿದ್ದರಾಮಯ್ಯ
|
| 2 |
+
ಕೋಲಾರ,ಏ.21-ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಏಕೆ ಬರಲಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
|
| 3 |
+
ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ ಅವರು, ಖಾಲಿ ಚೊಂಬು ಅಕ್ಷಯ ಪಾತ್ರೆಯಾಗಿದ್ದೇ ಆದರೆ ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಪ್ರಶ್ನಿಸಿದರು.
|
| 4 |
+
ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
|
| 5 |
+
ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಎಂದು ಕಿಡಿಕಾರಿದರು.
|
| 6 |
+
ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸಕ್ಕೆ ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ, ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು.
|
| 7 |
+
ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.
|
| 8 |
+
ಬಂಗಾರಪೇಟೆಯಲ್ಲಿ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು. ಮೋದಿಯವರು ನಿ��್ಮ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು.
|
| 9 |
+
ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು . ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್ ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
|
eesanje/url_46_174_10.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಪ್ರತಿಪಕ್ಷಗಳು ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ : ಸಿದ್ದು ಟೀಕೆ
|
| 2 |
+
ಮೈಸೂರು,ಏ.20-ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
|
| 3 |
+
ಕೊಲೆಗಾರರನ್ನು ಕೂಡಲೇ ಬಂಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.
|
| 4 |
+
ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ :ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಂದ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
|
| 5 |
+
ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ :ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.
|
| 6 |
+
ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚಂಬು ಕೊಟ್ಟಿದೆ :ಕಾಂಗ್ರೆಸ್ನ ಚಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚಂಬು ಕೊಟ್ಟಿದೆ ಎಂದು ತಿಳಿಸುವುದಾಗಿದೆ. ದೇಶದ ಜನರಿಗೆ 15 ಲಕ್ಷ ರೂ. ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಯಾವುದೂ ಆಗದಿರುವುದಕ್ಕೆ ಚಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ತಿಳಿಸಿದರು.
|
eesanje/url_46_174_11.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಐದು ವರ್ಷದಲ್ಲಿ ಸಂಸದರ ಸಾಧನೆ ತೀರಾ ಕಳಪೆ
|
| 2 |
+
ಬೆಂಗಳೂರು,ಏ.20-ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ರಾಜ್ಯದ ಎಲ್ಲಾ 28 ಸಂಸದರ ಕಾರ್ಯ ವೈಖರಿ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಈ ಪೈಕಿ ಬಹುತೇಕ ಮಂದಿ ತಮ್ಮ ಅಧಿಕಾರಾವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
|
| 3 |
+
ಎಲ್ಲ ಸಂಸದರ ಸರಾಸರಿ ಹಾಜರಾತಿ ಶೇ.71ರಷ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಸಂಸತ್ತಿನಲ್ಲಿ ಅವರ ಹಾಜರಾತಿ, ಕೇಳಿದ ಪ್ರಶ್ನೆಗಳು, ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿಕೆ ಮತ್ತು ಅವರ ಕ್ಷೇತ್ರಗಳಲ್ಲಿನ ಕಾರ್ಯಕ್ಷಮತೆಯನ್ನು ಸಮೀಕ್ಷೆ ಪರಿಗಣಿಸಿದೆ.
|
| 4 |
+
ಸಾಮಾಜಿಕ ವಿಜಾ್ಞನಿಗಳಾದ ಎ.ಆರ್.ವಾಸವಿ ಮತ್ತು ಜಾನಕಿ ನಾಯರ್ ಅವರು ಈ ವಿಶ್ಲೇಷಣೆ ನಡೆಸಿದ್ದಾರೆ. ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ) ಮತ್ತು ಪ್ರಹ್ಲಾದ್ ಜೋಶಿ ಅವರು ಕೋವಿಡ್ ಸಮಯದಲ್ಲಿ ಜನರಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
|
| 5 |
+
ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಸಂಸದ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಮತ್ತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಸದನದಲ್ಲಿ ಪ್ರಶ್ನೆ ಎತ್ತಲಿಲ್ಲ. ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ್ದು ಬಿಟ್ಟರೆ ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ ಸಂಸದ), ಡಿ.ವಿ.ಸದಾನಂದಗೌಡ, ಜೋಶಿ, ರಮೇಶ್ ಜಿಗಜಿಣಗಿ (ವಿಜಯಪುರ), ಶ್ರೀನಿವಾಸ ಪ್ರಸಾದ್ (ಚಾಮರಾಜನಗರ) ಮತ್ತು ಬಚ್ಚೇಗೌಡ (ಚಿಕ್ಕಬಳ್ಳಾಪುರ) ಚರ್ಚೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಶ್ಲೇಷಣೆ ಹೇಳಿದೆ. ಮಂಗಳಾ ಅಂಗಡಿ (ಬೆಳಗಾವಿ) ಒಂದು ಚರ್ಚೆಯಲ್ಲಿ ಭಾಗವಹಿಸಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ವಿಮಾನ ಒದಗಿಸುವಂತೆ ಕೋರಿದ್ದರು.
|
| 6 |
+
ಹನ್ನೊಂದು ಸಂಸದರು ನಿಯನ್ನು ನಿರ್ದೇಶಿಸುವ ಮೂಲಕ ಅಥವಾ ಸಭೆಗಳಿಗೆ ಹಾಜರಾಗುವ ಮೂಲಕ ಸೀಮಿತ ಕೆಲಸ ಮಾಡಿದ್ದಾರೆ. ಹದಿನೈದು ಮಂದಿ ಸಂಸದರು ನಿರಾಸಕ್ತರು ಎಂದು ಪರಿಗಣಿಸಲಾಗಿದೆ. ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ) ಮತ್ತು ಶ್ರೀನಿವಾಸಪ್ರಸಾದ್ ನೆಗೆಟಿವ್ ರೋಲ್ ನಿರ್ವಹಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
|
| 7 |
+
ರಾಜ್ಯಕ್ಕೆ ಜಿಎಸ್ಟಿ ಕೊಡುಗೆಗಳು ಮತ್ತು ತೆರಿಗೆ ಹಂಚಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುರೇಶ್ ಮತ್ತು ರಾಜ್ಯದಲ್ಲಿ ಜನೌಷದಿ ಕೇಂದ್ರಗಳನ್ನು ಉತ್ತೇಜಿಸಲು ಸದಾನಂದ ಗೌಡ ಅವರು ಮಾತ್ರ ಕರ್ನಾಟಕದ ನೀತಿಗಳು ಮತ್ತು ಕಾರ್ಯಕ್ರಮಗಳ ಪರ ಮಾತನಾಡಿದ್ದಾರೆ ಎಂಬುದನ್ನು ಪರಿಗಣಿಸಲಾಗಿದೆ.
|
eesanje/url_46_174_12.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬೆಂಗಳೂರಲ್ಲಿ ಚಂಬು ಹಿಂದಿಡು ಕಾಂಗ್ರೆಸ್ ಪ್ರತಿಭಟನೆ
|
| 2 |
+
ಬೆಂಗಳೂರು,ಏ.20-ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರ ಗಳಲ್ಲಿ ಚಂಬು ಪ್ರತಿಭಟನೆ ನಡೆಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಇಂದಿನಿಂದ ಆರಂಭವಾಗಿರುವ ಪ್ರತಿಭಟನೆ ಹಂತಹಂತವಾಗಿ ರಾಜ್ಯಾ ದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರಗಳ ಬ್ಲಾಕ್ ಮಟ್ಟದಲ್ಲಿ ನಡೆಯಲಿದೆ.
|
| 3 |
+
ಆಯಾ ಕ್ಷೇತ್ರಗಳ ಶಾಸಕರು, ಸಚಿವರು, ಕಾಂಗ್ರೆಸ್ನ ಅಭ್ಯರ್ಥಿಗಳು, ಪ್ರಮುಖ ನಾಯಕರು, ಕಾರ್ಯ ಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.ಬೆಂಗಳೂರಿನ ಮೇಕ್ರಿ ಸರ್ಕಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕರಾದ ರಿಜ್ವಾನ್ ಹರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಮುಖಂಡರಾದ ವಿಜಯ್ ಮುಗುಂದ್, ಬಿ.ಆರ್.ನಾಯ್ಡು, ಸುೀಂದ್ರ,ಎಚ್.ಎಸ್.ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.
|
| 4 |
+
ಈ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು ಕರುನಾಡಿಗೆ ಚಂಬು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಿಂದ ವಸೂಲಿಯಾಗುವ ತೆರಿಗೆಯಲ್ಲಿ ಶೇ.13 ರಷ್ಟು ಮಾತ್ರ ಪಾಲು ನೀಡಲಾಗುತ್ತಿದೆ. ಅನುದಾನ ಹಂಚಿಕೆಯಲ್ಲಿ ಕನ್ನಡಿಗರಿಗೆ ಮೋದಿ ಸರ್ಕಾರ ಚಂಬು ನೀಡಿದೆ ಎಂದು ಕಿಡಿಕಾರಿದರು.
|
| 5 |
+
ರಾಜ್ಯದಲ್ಲಿ ಕಳೆದ 6 ತಿಂಗಳಿನಿಂದ ಭೀಕರವಾದ ಬರಪರಿಸ್ಥಿತಿ ಇದೆ. 18,400 ಕೋಟಿ ರೂ. ನೆರವು ಕೇಳಿದರೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ನೀಡಿದ್ದು ಚಂಬು ಮಾತ್ರ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೊಷಿತ ಹಣವನ್ನೂ ನೀಡಲಿಲ್ಲ. 14 ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ರೂ.ಗಳಿಗೂ ಚಂಬು ನೀಡಿದ್ದಾರೆ.
|
| 6 |
+
ರೈತರ ಆದಾಯವನ್ನು ದ್ವಿಗುಣ ಗೊಳಿಸುತ್ತೇವೆ ಎಂದು ಹೇಳಿದ್ದರು. ಬದಲಿಗೆ ಸಿಕ್ಕಿರುವುದು ಚಂಬು ಮಾತ್ರ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದಲ್ಲಿರುವ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಅದಕ್ಕೂ ಚಂಬೇ ಗತಿಯಾಗಿದೆ.ರಾಜ್ಯದಿಂದ ಬಿಜೆಪಿ ಮತ್ತು ಜೆಡಿಎಸ್ನಿಂದ ಆಯ್ಕೆಯಾದ 27 ಲೋಕಸಭಾ ಸದಸ್ಯರು ರಾಜ್ಯಕ್ಕೆ ನೀಡಿರುವ ಕೊಡುಗೆ ಚಂಬು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
| 7 |
+
ಮತ್ತೊಂದೆಡೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಖುದ್ದು ಸಚಿವ ಕೃಷ್ಣ ಭೈರೇಗೌಡ ಅವರೇ ಮೋದಿ ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಮೊಳಗಿಸಿ ದರು. ಪ್ರತಿಭಟನೆಯುದ್ದಕ್ಕೂ ಕೇಂದ್ರ ದಿಂದ ರಾಜ್ಯಕ್ಕಾದ ಅನ್ಯಾಯಗಳ ಆಕ್ರೋಶದ ವಾಕ್ಯಗಳೊಂದಿಗೆ ಚಂಬಿನ ಚಿತ್ರವನ್ನು ಮುದ್ರಿಸಿದ್ದ ಭಿತ್ತಿಪತ್ರಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು. ಜೊತೆಗೆ ಸ್ಟೀಲ್ ಚಂಬುಗಳನ್ನು ಪ್ರದರ್ಶಿಸಲಾಗಿದೆ.
|
| 8 |
+
ಕರ್ನಾಟಕದ ದುಡಿಮೆಯ ತೆರಿಗೆಗೆ ಕೇಂದ್ರ ಸರ್ಕಾರ ಸರಿಯಾದ ಪಾಲು ನೀಡಿಲ್ಲ. ನಿರಂತರವಾಗಿ ಅನ್ಯಾಯ ಮಾಡುತ್ತಲೇ ಬಂದಿದೆ. ಮೋದಿ ಸರ್ಕಾರದ ಅವಧಿಯಲ್ಲಿ ರೈತರ ಆದಾಯ ದ್ವಿಗುಣಗೊಳ್ಳುವ ಬದಲು ಖರ್ಚು ಹೆಚ್ಚಾಗಿದೆ ಎಂದು ಕೃಷ್ಣ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಪ್ರಚಾರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತದಾರರು ತಿರುಗಿ ಚಂಬನ್ನೇ ನೀಡಬೇಕು ಎಂದು ಕೃಷ್ಣಭೈರೇಗೌಡರು ಸಲಹೆ ನೀಡಿದರು.
|
eesanje/url_46_174_2.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ : ಆರ್.ಅಶೋಕ್
|
| 2 |
+
ಆನೇಕಲ್, ಏ.21-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಗೆ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡು ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
|
| 3 |
+
ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ಜೈ ಶ್ರೀರಾಮ್ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್ ಕೂಡ ಕೊಡುತ್ತಾರೆ ಎಂದರು.
|
| 4 |
+
ಸಂಸದ ಡಿ.ಕೆ.ಸುರೇಶ್ ಅವರ ರ್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ. ಆದರೆ ಡಿ.ಕೆ.ಸುರೇಶ್ ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ. ಭಾರತ ಮಾತೆಯನ್ನು ಪ್ರೀತಿಸುವ ಬೆಂಗಳೂರು ಗ್ರಾಮಾಂತರದ ಜನರು ಇವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದರು.
|
| 5 |
+
ಹುಬ್ಬಳ್ಳಿಯಲ್ಲಿ ನಡೆದ ಘಟನೆ ನೋಡಿದರೆ ಕಾಲೇಜು ಆವರಣದಲ್ಲೇ ಭದ್ರತೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಕೊಲೆಯಾದ ನೇಹಾ ತಂದೆ ಕಾಂಗ್ರೆಸ್ನ ಕಾರ್ಪೊರೇಟರ್ ಲವ್ ಜಿಹಾದ್ ಇದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಹೀಗೆ ಮಾತನಾಡಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕುಟುಂಬದವರು ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಇದು ಲವ್ ಕೇಸ್ ಎಂದು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ದೂರಿದರು.
|
| 6 |
+
ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆ ಭಯೋತ್ಪಾದನಾ ಚಟುವಟಿಕೆಯಾಗಿದ್ದು, ಇದನ್ನು ಮಾಡುವವರೆಲ್ಲ ಡಿ.ಕೆ.ಶಿವಕುಮಾರ್ ಅವರ ಸಹೋದರರೇ ಆಗಿದ್ದಾರೆ. ಕುಕ್ಕರ್ ಬಾಂಬ್ ಸ್ಪೋಟ ಮಾಡಿದವನನ್ನು ಬ್ರದರ್ ಎಂದ ಡಿ.ಕೆ.ಶಿವಕುಮಾರ್ ಒಕ್ಕಲಿಗ ಹೇಗಾಗುತ್ತಾರೆ? ಒಕ್ಕಲಿಗ ಮುಖಂಡ ಎಂದು ಹೇಳಿಕೊಂಡು ಮತ ಯಾಚಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದರು.
|
| 7 |
+
ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹೇಳಿಕೆ ನೀಡಿದ ನಂತರ ಕ್ಷಮೆ ಕೇಳುತ್ತಾರೆ. ಕಾಂಗ್ರೆಸ್ ಕಾರ್ಪೊರೇಟರ್ ತಮ್ಮ ಜೊತೆ ಈಗ ಯಾರೂ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರನ್ನೇ ಬಿಟ್ಟುಬಿಡುತ್ತಾರೆ ಎಂದರು.ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ಗೆ ಚೊಂಬು ಗ್ಯಾರಂಟಿ. ರಾಹುಲ್ ಗಾಂಧಿಗೆ ನಾವು ಚೊಂಬು ಕಳುಹಿಸಿಕೊಡಲಿದ್ದು, ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ. ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದರು.
|
| 8 |
+
ಕಾಂಗ್ರೆಸ್ ಸರ್ಕಾರ ರೈತರಿಗೆ ಬೋರ್ವೆಲ್ ಅನುದಾನ ಕಿತ್ತುಕೊಂಡು ಮೊದಲ ಚೊಂಬು ನೀಡಿದೆ. ಕಿಸಾನ್ ಸಮ್ಮಾನ್ ಕಿತ್ತುಕೊಂಡಿದ್ದು ಎರಡನೇ ಚೊಂಬು, ಹಾಲಿನ ಪ್ರೋತ್ಸಾಹಧನ ನುಂಗಿದ್ದು ಮೂರನೇ ಚೊಂಬು, ಬರಗಾಲದ್ದು ನಾಲ್ಕನೇ ಚೊಂಬು, ಕಾವೇರಿ ನೀರನ್ನು ಸ್ನೇಹಕ್ಕೆ ತಮಿಳುನಾಡಿಗೆ ಬಿಟ್ಟಿದ್ದು ಐದನೇ ಚೊಂಬು, ವಿದ್ಯುತ್ ಶುಲ್ಕ ಹೆಚ್ಚಿಸಿದ್ದು ಆರನೇ ಚೊಂಬು. ಹಾಲು, ಮೊಸರು ದರ ಹೆಚ್ಚಳ, ಆಲ್ಕೋಹಾಲ್ ಬೆಲೆ ಹೆಚ್ಚಳ ಸೇರಿದಂತೆ ಹಲವಾರು ಚೊಂಬುಗಳನ್ನು ನೀಡಿದೆ ಎಂದು ಟೀಕೆ ಮಾಡಿದರು.
|
| 9 |
+
ಕಾಂಗ್ರೆಸ್ ಬಂತು ನಕ್ಸಲ್ ತಂತು:ಕಾಂಗ್ರೆಸ್ ಬಂತು, ಭಯೋತ್ಪಾದನೆ ಬಂತು, ನಕ್ಸಲ್ ಬಂತು, ಬಾಂಬ್ ಬಂತು ಎಂಬ ಸ್ಥಿತಿ ಉಂಟಾಗಿದೆ. ಹಿಂದೂಗಳನ್ನು ರಕ್ಷಿಸುವ ಶಕ್ತಿ ಇರುವುದು ಶಕ್ತಿಮಾನ್ ನರೇಂದ್ರ ಮೋದಿ ಅವರಿಗೆ ಮಾತ್ರ. ಮೋದಿ ಸರ್ಕಾರ ಬಂದ ಬಳಿಕ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ. ಬಿಜೆಪಿ ಸರ್ಕಾರ ಇದ್ದಾಗ ಬಾಂಬ್ ಸ್ಪೋಟವಾದರೂ ಆಗ ಅವರನ್ನು ಬೆಂಬಲಿಸದೆ ಹೆಡೆಮುರಿ ಕಟ್ಟಿದ್ದೇವೆ ಎಂದರು.
|
| 10 |
+
ಬೆಂಗಳೂರು ಗ್ರಾಮಾಂತರ ಹೃದಯವಂತ ಮಂಜುನಾಥ್ ಬೇಕೋ, ಕಲ್ಲು ಹೃದಯದ ಕಟುಕ ಡಿ.ಕೆ.ಸುರೇಶ್ ಬೇಕೋ ಎಂದು ಜನರು ತೀರ್ಮಾನಿಸುತ್ತಾರೆ. ಮಂಜುನಾಥ್ ಮೂರು ಲಕ್ಷ ಅಂತರದಲ್ಲಿ ಗೆಲ್ಲುತ್ತಾರೆ. ಈ ಕ್ಷೇತ್ರವನ್ನೂ ಗೆದ್ದರೆ ಒಂದು ಸೀಟು ಕೂಡ ಕಾಂಗ್ರೆಸ್ಗೆ ಸಿಗುವುದಿಲ್ಲ ಎಂದು ಹೇಳಿದರು.
|
| 11 |
+
ಪೆಟ್ರೋಲ್ ದರ ಏರಿಕೆ ಭಾರತದಲ್ಲಿ ನಿಯಂತ್ರಣದಲ್ಲಿದೆ. ಬೆಲೆ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಮೋದಿ ಸರ್ಕಾರ ಕೈಗೊಂಡಿದೆ. ಪೆಟ್ರೋಲ್ ದರ ಇಡೀ ಜಗತ್ತಿನಲ್ಲಾಗಿದೆ. ಆಗ ರಷ್ಯಾದಿಂದ ತೈಲ ತರಿಸಿಕೊಳ್ಳಲಾಯಿತು ಎಂದರು.ರಾಜ್ಯ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಶಾಸಕರು ಈಗ ಗಂಟು ಮೂಟೆ ಕಟ್ಟಿ ತಯಾರಾಗಿದ್ದಾರೆ. ಬಿಜೆಪಿಯವರು ಸರ್ಕಾರ ಬೀಳಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.
|
eesanje/url_46_174_3.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ದೀರ್ಘಕಾಲ ಆಡಳಿತ ನಡೆಸಿ ಚೆಂಬು ಕೊಟ್ಟ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತೆ : ಬೊಮ್ಮಾಯಿ
|
| 2 |
+
ಬೆಂಗಳೂರು,ಏ.21-ಕೇಂದ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಆಡಳಿತ ನಡೆಸಿದ ಕಾಂಗ್ರೆಸ್ಗೆ ರಾಜ್ಯದ ಜನತೆಗೆ ಚೆಂಬು ಕೊಟ್ಟ ಕೀರ್ತಿ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಕಲ್ಯಾಣ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ವರ್ಷಕ್ಕೆ ರೈತರಿಗೆ 10 ಸಾವಿರ ರೂ. ನೀಡಲಾಗುತ್ತಿತ್ತು. ಅದನ್ನು ನಿಲ್ಲಿಸಿ ಅವರ ಕೈಗೆ ಚೆಂಬು ಕೊಟ್ಟಿದ್ದು ನೀವಲ್ಲವೇ? ಎಂದು ಪ್ರಶ್ನಿಸಿದರು.
|
| 3 |
+
ರೈತ ವಿದ್ಯಾನಿಧಿ ನಿಲ್ಲಿಸಿರುವುದು , ಹೆಣ್ಣು ಮಕ್ಕಳಿಗೆ ಕನಿಷ್ಟಪಕ್ಷ ಶೌಚಾಲಯ ಕಟ್ಟಿಸಿಕೊಡದಿರುವುದು, ವಿವೇಕಾನಂದ ಶಾಲೆ, ಆಸ್ಪತ್ರೆ, ರಸ್ತೆ ಎಲ್ಲವನ್ನೂ ಸ್ಥಗಿತಗೊಳಿಸಿ ಕರ್ನಾಟಕ ಮತ್ತು ಕನ್ನಡಿಗರಿಗೆ ಚೆಂಬು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
|
| 4 |
+
ಮಾಜಿ ಪ್ರಧಾನಿ ದೇವೇಗೌಡರು ಆರೂವರೆ ದಶಕದ ತಮ್ಮ ರಾಜಕೀಯ ಅನುಭವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. 2014ರಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಜನತೆಗೆ ನಿಜವಾಗಿ ಚೆಂಬನ್ನೇ ಕೊಟ್ಟಿತ್ತು. ಈಗ ಮೋದಿಯವರು ಆ ಚೆಂಬನ್ನು ಅಕ್ಷಯಪಾತ್ರೆ ಮಾಡಿದ್ದಾರೆ. ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಹಿರಿಯರಾದ ದೇವೇಗೌಡರ ಬಗ್ಗೆಯೂ ಮಾತನಾಡುತ್ತಾರೆ ಎಂದು ಸಿಡಿಮಿಡಿಗೊಂಡರು.
|
| 5 |
+
ರೈತರಿಗೆ 54 ಸಾವಿರ ಕೋಟಿ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗಿದೆ. 6 ಲಕ್ಷ ಬೀದಿ ವ್ಯಾಪಾರಿಗಳಿಗೆ ವಿಶೇಷ ಅನುದಾನ, ಕೋವಿಡ್ ಸಂದರ್ಭದಲ್ಲಿ ಉಚಿತ ಲಸಿಕೆ, ಎರಡು ವರ್ಷ ಉಚಿತ ಆಹಾರಧಾನ್ಯ ವಿತರಣೆ ಕೊಟ್ಟಿದ್ದಾರೆ. ಇದು ಅಕ್ಷಯ ಪಾತ್ರೆಯೇ ಇಲ್ಲವೇ ಖಾಲಿ ಚೆಂಬೇ ಎಂದು ಬೊಮ್ಮಾಯಿ ಪ್ರಶ್ನಿಸಿದರು.
|
| 6 |
+
ಚುನಾವಣೆಗೂ ಮುನ್ನವೇ ನೀವು 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದೀರಿ. ಈಗ ಎಷ್ಟು ಅಕ್ಕಿ ಕೊಡುತ್ತಿದ್ದೀರಿ. ಚೆಂಬಿನ ಜಾಹೀರಾತು ಕೊಟ್ಟಿದ್ದೀರಿ. ನಿಮಗೆ ಆತ್ಮಸಾಕ್ಷಿ ಇದ್ದಿದ್ದರೆ ನಾಚಿಯಾಗಬೇಕಿತ್ತು ಎಂದು ಕಿಡಿಕಾರಿದರು. ನೇರ ಮತ್ತು ಪ್ರತ್ಯಕ್ಷ ತೆರಿಗೆ ಬಗ್ಗೆ ಪ್ರಸ್ತಾಪಿಸದೆ ಕಾಂಗ್ರೆಸ್ ಸುಳ್ಳು ಜಾಹೀರಾತು ನೀಡಿದೆ. ಡೆವಲ್ಯೂಷನ್ ಫಂಡ್ ಬಗ್ಗೆ ಇದೆ. ಇದು ನೆಹರೂ ಕಾಲದಿಂದಲೂ ಈ ಟ್ಯಾಕ್ಸ್ ಇದೆ. ಈ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು.
|
| 7 |
+
ಯುಪಿಎ ಅವಧಿಯಲ್ಲಿ 2004-14 ರ ವರೆಗೂ 81,795 ಕೋಟಿ. ಎನ್ಡಿಎ ಸರ್ಕಾರದಲ್ಲಿ 2014-24ರವರೆಗೂ 2,88,798 ಕೋಟಿ ಬಂದಿದೆ. ಎರಡು ಲಕ್ಷ ಕೋಟಿಗೂ ಹೆಚ್ಚು ಡೆವಲ್ಯೂಷನ್ ಹಣ ಬಂದಿದೆ. ಅನ್ಯಾಯ ಆಗಿದೆ ಎನ್ನುತ್ತಾರೆ. ನಾನು ಕೌಂಟರ್ ಪ್ರಶ್ನೆ ಮಾಡ್ತೀನಿ. ನೂರು ರೂಪಾಯಿ ಅನುಪಾತ ಮಾಡ್ತೀರಿ ಎಂದು ಸವಾಲು ಹಾಕಿದರು.
|
| 8 |
+
ಹಿಂ��ೆ 100ರೂ. ತೆರಿಗೆ ಕಟ್ಟಿದರೆ ರಾಜ್ಯಕ್ಕೆ 13 ರೂ. ಮಾತ್ರ ರಾಜ್ಯಕ್ಕೆ ಬರುತ್ತದೆ ಎಂದು ನಾಯಕರು ಹೇಳುತ್ತಿದ್ದಾರೆ. ಯುಪಿಎ ಸರ್ಕಾರಕ್ಕೆ ಹೋಲಿಸಿದರೆ 4 ರೂ. ಬರುತ್ತಿತ್ತು ಅಂದರೆ ಈಗ 13 ರೂ. ಬರುತ್ತಿದೆ ಎಂದ ಅವರು, ಗ್ರಾಂಟಿ ಯುಪಿಎ ಅವಧಿಯಲ್ಲಿ 2004-14 60,779.84. ಎನ್ಡಿಎ ಅವಧಿಯಲ್ಲಿ ಗ್ರಾಂಟ್ 2014-24ರವರೆಗೂ 2,08,832 ಕೋಟಿ. ಐದು ಸಾವಿರ ಕೋಟಿ ಹೆಚ್ಚಾಗಿ ಬಂದಿದೆ ಎಂದು ವಿವರಣೆ ನೀಡಿದರು.
|
| 9 |
+
ಕಳೆದ ವರ್ಷವೂ ಹೆಚ್ಚು ಬಂದಿದೆ. 1ಲಕ್ಷ 30 ಸಾವಿರ ಕೋಟಿ ಲೋನ್ ಕೊಟ್ಟಿದ್ದಾರೆ. ಕರ್ನಾಟಕಕ್ಕೆ 6,012 ಕೋಟಿ ಬಂದಿದೆ. ಬಡ್ಡಿ ರಹಿತ ಸಾಲ ನೀಡಿದ್ದು, 15 ವರ್ಷಗಳ ಬಳಿಕ ಸಾಲ ವಾಪಸ್ ನೀಡಬೇಕು ಎಂದು ವಿವರಿಸಿದರು. ಬಹಳ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ಸುಳ್ಳನ್ನ ನೂರು ಬಾರಿ ಹೇಳಿ, ಸತ್ಯ ಮಾಡಲು ಹೊರಟಿದೆ. ಭಾರತದಲ್ಲಿ ಇಷ್ಟು ಕೆಳಮಟ್ಟಕ್ಕೆ ಹೋಗಿರುವ ಕೀಳು ಸರ್ಕಾರ ಮತ್ತೊಂದಿಲ್ಲ. ಯುಪಿಎ ಸರ್ಕಾರ ಇದ್ದಾಗ ಅವರು ಜಾಹೀರಾತು ನೀಡಿದ್ದಾರೆ.
|
eesanje/url_46_174_4.txt
ADDED
|
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ ಖಾಲಿ ಚೊಂಬು ಜಾಹೀರಾತಿಗೆ ರೊಚ್ಚಿಗೆದ್ದ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ
|
| 2 |
+
ಬೆಂಗಳೂರು,ಏ.21-ಮುಸ್ಲಿಂ ಗೂಂಡಾಗಳು ನಡೆಸುವ ದಬ್ಬಾಳಿಕೆ ಮತ್ತು ಹಲ್ಲೆಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಗ್ಯಾರಂಟಿ. ಜನರ ಬದುಕನ್ನು ಕಿತ್ತುಕೊಂಡು ದಿವಾಳಿ ಮಾಡಿರುವುದು ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡ ಕಾರಿದ್ದಾರೆ.
|
| 3 |
+
ಕಾಂಗ್ರೆಸ್ನ ಜಾಹೀರಾತಿಗೆ ಪ್ರತ್ಯುತ್ತರ ಎಂಬಂತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದರು. ದರೋಡೆಕೋರರು, ಭಯೋತ್ಪಾದಕರಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕ ಒಂದೇ ವರ್ಷದಲ್ಲಿ ಮತಾಂಧರ ಯುದ್ಧಭೂಮಿಯಾಗಿ ಪರಿವರ್ತನೆಯಾಗಿದೆ. ಸಿದ್ದರಾಮಯ್ಯ ಸರ್ಕಾರ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
|
| 4 |
+
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ , ಸುಲಿಗೆ, ದೌರ್ಜನ್ಯ, ದಬ್ಬಾಕೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ತುಷ್ಟೀಕರಣದ ನೀತಿಯ ಪರಿಣಾಮವಾಗಿ ಮುಸ್ಲಿಂ ಗೂಂಡಾಗಳಿಗೆ ಸರ್ಕಾರವೇ ರಕ್ಷಣೆ ಗ್ಯಾರಂಟಿ ನೀಡುತ್ತಿದೆ. ಜನರ ನೆಮ್ಮದಿಯ ಬದುಕಿಗೆ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನೆ ಮಾಡಿದರು.
|
| 5 |
+
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಕೆಳಗಿಳಿಸಿದ್ದು, ಪಾಕ್ ಪರ ಘೋಷಣೆ, ವಿದ್ಯಾರ್ಥಿನಿ ನೇಹ ಹತ್ಯೆ, ಜೈಶ್ರೀರಾಮ್ ಎನ್ನುವರ ಮೇಲೆ ಹಲ್ಲೆ, ಹರ್ಷಿತ ಪೂಣ್ಣಚ್ಚ ದಂಪತಿ ಮೇಲೆ ದೌರ್ಜನ್ಯ, ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಿಡಿಯೋ ಪ್ರಕರಣ ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿವೆ. ಮಹಿಳೆಯರು, ಮಕ್ಕಳು, ಬದುಕಿನ ಭರವಸೆಯನ್ನೇ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
| 6 |
+
ದರೋಡೆಕೋರರು, ಭಯೋತ್ಪಾದಕರು, ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಬದುಕಿಗೆ ಗ್ಯಾರಂಟಿ ಇದೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದು ಮನುಷ್ಯತ್ವ, ಮಾನವೀಯತೆ ಇಲ್ಲದ ಸರ್ಕಾರ. ಕಲ್ಲುಬಂಡೆಯ ಸರ್ಕಾರ. ಅಭಿವೃದ್ಧಿಯನ್ನೇ ಸಂಪೂರ್ಣವಾಗಿ ಮರೆತು ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆ.
|
| 7 |
+
ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಕೂಡ ನಡೆಯುತ್ತಿಲ್ಲ. ಅಧಿಕಾರಕ್ಕೆ ಬಂದ ಮೇಲೆ ಒಂದು ಕಿ.ಮೀ ರಸ್ತೆ ಕೂಡ ಮಾಡಿಲ್ಲ. ನೀರಾವರಿ ಯೋಜನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಜನರು ಎಲ್ಲೆಡೆ ಛೀಮಾರಿ ಹಾಕುತ್ತಿದ್ದಾರೆ. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.
|
| 8 |
+
ಕಾಂಗ್ರೆಸ್ ನೀಡುತ್ತಿರುವ ಜಾಹಿರಾತುಗಳಿಗೆ ಕವಡೆಕಾಸಿನ ಕಿಮ್ಮತ್ತಿನ ಬೆಲೆಯೂ ಇಲ್ಲ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ಹೀಗಾಗಿ ಜನರನ್ನು ದಿಕ್ಕು ತಪ್ಪಿಸುವ ಜಾಹೀರಾತುಗಳನ್ನು ನೀಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
|
| 9 |
+
ಸವಾಲು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ನಾನು ಅವರಿಗೆ ಒಂದು ಬಹಿರಂಗ ಸವಾಲು ಹಾಕುತ್ತೇನೆ. 28 ಕ್ಷೇತ್ರಗಳಲ್ಲಿ ನೀವು ಗೆಲ್ಲಬಹುದಾದ ಕನಿಷ್ಠ 4ರಿಂದ 5 ಲೋಕಸಭಾ ಕ್ಷೇತ್ರಗಳ ಹೆಸರು ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನೀವು ಗ್ಯಾರಂಟಿಯಲ್ಲಿ ಗೆದ್ದೇಬಿಡುತ್ತೀರಿ ಎಂಬ ಭ್ರಮೆಯಲ್ಲಿದ್ದೀರಿ. ಆದರೆ ವಾಸ್ತವ ಚಿತ್ರಣವೇ ಬೇರೆ. ನಿಮ್ಮ ಸುಳ್ಳು ಪ್ರಚಾರ ಡೊಂಬರಾಟಕ್ಕೆ ಜನತೆ ಮನ್ನಣೆ ನೀಡುವುದಿಲ್ಲ ಎಂದು ಹೇಳಿದರು.
|
| 10 |
+
ತೆರಿಗೆ ವಿಚಾರವಾಗಿ ಸ್ವತಃ ಪ್ರಧಾನಿಯವರೇ ಕರ್ನಾಟಕಕ್ಕೆ ಕೇಂದ್ರದಿಂದ ಎಷ್ಟು ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾಳೆ ಅಮಿತ್ ಷಾ ಅವರು ಇದರ ಬಗ್ಗೆ ಮಾತನಾಡಲಿದ್ದಾರೆ ಎಂದರು.
|
| 11 |
+
ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಮಾತನಾಡಿ, ನಾವು ವಿಶೇಷ ಕಾಲಘಟ್ಟದಲ್ಲಿ ಇದ್ದೇವೆ. ಈ ಚುನಾವಣೆ ಭಯೋತ್ಪಾದಕ ವಿರುದ್ಧ ಮತ್ತು ಹಿಂದೂ ಧಾರ್ಮಿಕ ವಿಧಿವಿಧಾನ ವಿರುದ್ಧ ನಡೆಯುತ್ತಿದೆ. ಹಿಂದೂಗಳನ್ನು ತೃತಿಯ ದರ್ಜೆ ನಾಗರೀಕರ ತರ ನೋಡಲಾಗುತ್ತಿದೆ. ಮುಸ್ಲಿಂ ಮತಾಂದರನ್ನು, ಭಯೋತ್ಪಾದಕರನ್ನು ಅವರ ಕಾರ್ಯವೈಖರಿ ರೀತಿ ಮಾಡಿಕೊಂಡಿದ್ದಾರೆ.
|
| 12 |
+
ಕುಕ್ಕರ್ ಬ್ಲಾಸ್ಟ್ ಇಂದ ಹಿಡಿದು, ಎಲ್ಲವೂ ಅವರೇ ಇದ್ದಾರೆ. ಅವರ ಪರವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇದ್ದಾರೆ. ವಿಶ್ವಮಾನವನ ಸಂದೇಶ ನೀಡಿದ ನಾಡು ಕರ್ನಾಟಕ. ಆದರೆ ಚುನಾವಣೆ ನಡೆಸುವುದೇ ಗೂಂಡಾ ವರ್ತನೆ ರೀತಿ ಇದೆ. ಕರ್ನಾಟಕದಲ್ಲಿ ಯಾರೂ ಮಹಿಳೆಯರು ವೋಟ್ ಹಾಕಲು ಬಾರದ ರೀತಿ ವಾತಾವರಣ ಸೃಷ್ಟಿಯಾಗುತ್ತಿದೆ. ಗ್ಯಾರಂಟಿ ಯಾರಿಗೆ ಗೂಂಡಾಗಳಿಗೆ? ಹಿಂದೂಗಳ ಮೇಲೆ ಸವಾರಿ ಮಾಡುವವರಿಗಾ? ಎಂದು ಪ್ರಶ್ನಿಸಿದರು.
|
| 13 |
+
ನಿನ್ನೆ ಮೋದಿ ಅವರು ಬಂದಾಗ ಒಂದು ಮಾತು ಹೇಳಿದ್ದರು. ಜೀವನದ ಭರವಸೆ ನೀಡುವುದೇ ನಮ್ಮ ಗುರಿ. ಈ ಚುನಾವಣೆ ಅತ್ಯಂತ ದೊಡ್ಡ ಸಂದೇಶ ಕಳಿಸುವಂತಾಗಿರಬೇಕು. ಕರ್ನಾಟಕದ ಹಿಡಿತ ತರುವಂತೆ ಆಗ್ರಹ ಮಾಡುತ್ತೇನೆ ಎಂದರು.
|
eesanje/url_46_174_5.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಈವರೆಗೆ 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ ವಶ
|
| 2 |
+
ಬೆಂಗಳೂರು,ಏ.21-ಪ್ರಸಕ್ತ ಲೋಕಸಭಾ ಚುನಾವಣೆ ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಹಣ, ಉಚಿತ ಉಡುಗೊರೆಗಳ ಜಪ್ತಿ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮಾ.16 ರಿಂದ ಇಲ್ಲಿಯವರೆಗೆ ಒಟ್ಟು 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
| 3 |
+
ರಾಜ್ಯದಲ್ಲಿ ಇದುವರೆಗೂ ಅತೀ ಹೆಚ್ಚು ಮದ್ಯವನ್ನೇ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಮದ್ಯದ ಮೌಲ್ಯ 177 ಕೋಟಿ ರೂ. ದಾಟಿದೆ. 75.31 ಕೋಟಿ ರೂ. ನಗದು, 10.73 ಕೋಟಿ ರೂ. ಡ್ರಗ್ಸ್, 57.67 ಕೋಟಿ ರೂ. ಮೌಲ್ಯದ ಚಿನ್ನ, 1.18 ಕೋಟಿ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರ, 72.27 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
|
| 4 |
+
ಪೊಲೀಸ್, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ನಡೆಸಿದ ತಪಾಸಣೆ ಸಂದರ್ಭದಲ್ಲಿ 132.17 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
|
| 5 |
+
ಅಬಕಾರಿ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 176.59 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರವನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 79.83 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
|
| 6 |
+
ಇದುವರೆಗೂ 1,937 ಎಫ್ಐಆರ್ಗಳನ್ನು ದಾಖಲಿಸಿದ್ದು, 1,685 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
|
eesanje/url_46_174_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕರ್ತವ್ಯನಿರತ ಸಿಬ್ಬಂದಿಗೆ ನಾಳೆಯವರೆಗೆ ಅಂಚೆ ಮತದಾನ ಮಾಡಲು ಅವಕಾಶ
|
| 2 |
+
ಬೆಂಗಳೂರು,ಏ.21-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನ ಮಾಡಲು ಅನುಕೂಲವಾಗುವಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ ವ್ಯಾಪ್ತಿಯ ಸಿ.ವಿ.ರಾಮನ್ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಕೆಳಕಂಡಂತೆ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ.
|
| 3 |
+
ಸಿ.ವಿ.ರಾಮನಗರ ಕ್ಷೇತ್ರದ ಕಾಕ್ಸ್ ಟೌನ್ನಲ್ಲಿರುವ ಸೇಂಟ್ ಅಲಾಸುಯ್ಸ್ ಹೈಸ್ಕೂಲ್ನಲ್ಲಿ ಎರಡು ಅಂಚೆ ಮತದನ ಕೇಂದ್ರಗಳನ್ನು ತೆರೆಯಲಾಗಿದೆ. ಮತಗಟ್ಟೆ ನಂ.1ರಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಹಾಸನ ಚಾಮರಾಜನಗರ ಕ್ಷೇತ್ರಗಳ ಮತದಾರರಾಗಿರುವ ಕರ್ತವ್ಯನಿರತ ಸಿಬ್ಬಂದಿ ಮತದಾನ ಮಾಡಬಹುದು.
|
| 4 |
+
ಬೂತ್ ನಂ.2ರಲ್ಲಿ ಬೆಂಗಳೂರು ಉತ್ತರ, ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳ ಮತದಾರರಾಗಿರುವ ಕರ್ತವ್ಯನಿರತ ಸಿಬ್ಬಂದಿ ಮತದಾನ ಮಾಡಬಹುದು.
|
| 5 |
+
ಈ ಮೇಲಿನ ಸೌಲಭ್ಯ ಕೇಂದ್ರಗಳು ಇಂದಿನಿಂದ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಕಾರ್ಯ ನಿರ್ವಹಿಸಲಿವೆ ಎಂದು ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_174_7.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ ಹಲವು ಭಾಗಗಳಲ್ಲಿ ಇನ್ನೆರೆಡು ದಿನ ಮಳೆ
|
| 2 |
+
ಬೆಂಗಳೂರು,ಏ.21-ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೆರೆಡು ದಿನಗಳ ಕಾಲ ಮುಂದುವರೆಯಲಿದೆ.
|
| 3 |
+
ವಾತಾವರಣದಲ್ಲಿ ಟ್ರಪ್ ಉಂಟಾಗಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮತ್ತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
|
| 4 |
+
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ನಿನ್ನೆ ಕರಾವಳಿ ಭಾಗದಲ್ಲಿ ಮಳೆಯಾಗಿದ್ದು, ಕಾರವಾರ-8, ಗೋಕರ್ಣ-10.3, ಮುಂಡಗೋಡ-6.4, ಅಳಿಯಾಲ-3.2, ಹೊನ್ನಾವರ-2.8, ಸಿದ್ದಾಪುರ-1.8 ಮಿಲಿ ಮೀಟರ್ನಷ್ಟು ಸಾಧಾರಣ ಮಳೆಯಾದ ವರದಿಯಾಗಿದೆ.
|
| 5 |
+
ಗದಗ್-65.5, ಕಲಬುರಗಿ-86.4, ಹುಕ್ಕನೂರು-49, ಶಿಗ್ಗಾವಿ-45.2, ಸವಣೂರು-37.5, ಕಲಬುರಗಿ-31.7, ಶಿರಾಹಟ್ಟಿ-26.6, ಅಬ್ಜಲ್ಪುರ-19, ಅಳಂದ-13.5, ಕಲಗಟಗಿ-16.6, ಹುಬ್ಬಳ್ಳಿ-10.5, ಯಲಬುರ್ಗ-10, ಲಕ್ಷ್ಮೀಶ್ವರ-5, ಮುದಗಲ್-4.8, ಬೀಳಗಿ-3.5, ಹಾವೇರಿ-2.2, ಬಾದಾಮಿ-1.6, ಮಾಗಡಿ-1.8, ಆನವಟ್ಟಿ-1.2 ಮಿಲಿ ಮೀಟರ್ನಷ್ಟು ಸಾಧಾರಣ ಮಳೆಯಾಗಿದೆ. ಉಳಿದಂತೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾದ ವರದಿಯಾಗಿದೆ.
|
eesanje/url_46_174_9.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಇಂದು ನೇಹ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ ನಡ್ಡಾ
|
| 2 |
+
ಬೆಂಗಳೂರು,ಏ.21-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನು ಸೃಷ್ಟಿಸಿರುವ ಹುಬ್ಬಳ್ಳಿ-ಬಿ.ವಿ.ಬಿ ಕಾಲೇಜಿನ ವಿದ್ಯಾರ್ಥಿನಿ ನೇಹ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ. ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ನಡ್ಡಾ ಅವರು ಹುಬ್ಬಳ್ಳಿಯಲ್ಲಿರುವ ನೇಹ ಅವರ ತಂದೆ ಹಿರೇಮಠ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
|
| 3 |
+
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ತೆಂಗಿನಕಾಯಿ ಸೇರಿದಂತೆ ಮತ್ತಿತರರು ನಡ್ಡಾ ಅವರಿಗೆ ಸಾಥ್ ನೀಡಲಿದ್ದಾರೆ. ಇನ್ನೊಂದು ಮೂಲದ ಪ್ರಕಾರ ನೇಹ ಅವರ ಪೋಷಕರನ್ನು ನಿವಾಸದಲ್ಲಿ ಭೇಟಿಯಾಗಲು ಸಾಧ್ಯವಾಗಿದ್ದರೆ ನಡ್ಡಾ ಅವರು ತಂಗುವ ಬೆನಿಸಲ್ ಹೋಟೆಲ್ಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ.
|
| 4 |
+
ಒಂದು ಕಡೆ ನೇಹ ಹತ್ಯೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದೆ.ಆದರೆ ನೇಹಾಳ ಪೋಷಕರು ಇದನ್ನು ಸಾರಾಸಗಟಾಗಿ ನಿರಾಕರಿಸಿದ್ದು, ಇದೊಂದು ಪೂರ್ವ ನಿಯೋಜಿತ ಮತ್ತು ಲವ್ ಜಿಹಾದ್ ಎಂದು ಆರೋಪಿಸುತ್ತಿದ್ದಾರೆ. ಇದೀಗ ನಡ್ಡಾ ಅವರು ಭೇಟಿ ಕೊಡುತ್ತಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
|
| 5 |
+
ಭೇಟಿ ವಿವರ:ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆ.ಪಿ.ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
|
| 6 |
+
ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ಅವರು, ಪ್ರಹ್ಲಾದ್ ಜೋಶಿ ಪರ ಮತಯಾಚನೆ ಮಾಡಲಿದ್ದು, ಸಂಜೆ 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದ ನಂತರ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್ನಲ್ಲಿ ಕೋರ್ ಕಮೀಟಿ ಸಭೆ ನಡೆಸಲಿದ್ದಾರೆ.
|
eesanje/url_46_175_1.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಯುಪಿಎ ಅವಧಿಯ ಚೆಂಬನ್ನು ನಿನ್ನೆ ಜಾಹೀರಾತು ಕೊಟ್ಟಿದ್ದಾರೆ : ಎಚ್ಡಿಡಿ
|
| 2 |
+
ಚಿಕ್ಕಬಳಾಪುರ,ಏ.20-ಕಾಂಗೇಸ್ನ ಯುಪಿಎ ಸರ್ಕಾರದ 10 ವರ್ಷದ ಅವಧಿಯಲ್ಲಿ ಭ್ರಷ್ಟಾಚಾರ,ಹಗರಣದ ಮೂಲಕ ದೇಶದ ಸಂಪತ್ತು ಲೋಟಿ ಹೊಡೆದು ದೇಶದ ಜನತೆಗೆ ಖಾಲಿ ಚಂಬು ಕೊಟ್ಟಿದ್ದನ್ನು ಪ್ರಚಾರ ಮಾಡಿದ್ದಾರೆ ಅದನ್ನು ಮೋದಿ ಅಕ್ಷಯ ಪಾತ್ರೆಯನ್ನು ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್,ಡಿ.ದೇವೇಗೌಡ ಟೀಕಿಸಿದ್ದಾರೆ.
|
| 3 |
+
ಇಲ್ಲಿ ನಡೆದ ಎನ್ಡಿಎ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಲ್ಲಿ ದೀನ ದಲಿತರ ,ಹರಿಜನರ ಅಭಿವೃದ್ದಿಗೆ ಶ್ರಮಿಸಿದ್ದಾರೆ ಅಂತಹ ವ್ಯಕ್ತಿಯ ಮೇಲೆ ಕ್ಷುಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
|
| 4 |
+
5 ಗ್ಯಾರಂಟಿ ಕೊಟ್ಟ ಕಾಂಗ್ರೇಸ್ ಈಗ 25 ಗ್ಯಾರಂಟಿ ಮುಂದಿಟ್ಟಿದ್ದಾರೆ ಕಳೆದ 10 ವರ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ನೀಡದ ಕಾಂಗ್ರೇಸ್ ಅಕಾರದ ಬಯಕೆಯಿಂದಾಗಿ ನಮ್ಮ 400 ಕ್ಷೇತ್ರ ಗೆಲುವ ನಮ್ಮ ಗಾಡಿಗೆ ಅಡ್ಡ ಬರಲು ಸಾಧ್ಯವೇ ಎಂದರು. ಕೋಲಾರ ಚಿಕ್ಕಬಳ್ಳಾಪುರದ ನೀರಿನ ಸಮಸ್ಯೆಬಗೆಹರಿಸಲು ಕೃಷ್ಣ ಅಥವಾ ಕಾವೇರಿ ನೀರು ತರಲು ಪ್ರಯತ್ನ ಮಾಡಬೇಕು .ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸಲು ಕೋಲಾರ ,ಚಿಕ್ಕಬಳ್ಳಾಪುರದ ಸೇರಿ ರಾಜ್ಯದ 28 ಕ್ಷೇತ್ರದಲ್ಲಿ ಗೆದ್ದರೆ ಮಾತ್ತ ಪ್ರಧಾನಿ ಬಳಿ ನೈತಿಕತೆಯಿಂದ ಮಾತನಾಡಬಹುದು ಎಂದು ಹೇಳಿದರು.
|
| 5 |
+
ನಿನ್ನೆ ಈ ರಾಜ್ಯದ ಮುಖ್ಯಮಂತ್ರಿ ಜಾಹೀರಾತು ಕೊಟ್ಟಿದ್ದಾರೆ. ಆದರೆ, ಈ ಚೆಂಬನ್ನು ಯಾರು ಕೊಟ್ಟರು. ಡಾ. ಮನಮೋಹನ್ ಸಿಂಗ್ ಅವರು ಈ ರಾಷ್ಟ್ರವನ್ನು ಆಳ್ವಿಕೆ ಮಾಡಿದರು. ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷರಾಗಿದ್ದರು. ಆಗ ದೇಶದಲ್ಲಿ ಕೋಲ್ಗೇಟ್, 2ಜಿ ಸ್ಪೆಕ್ಟ್ರಂ, ರೈಲ್ಗೇಟ್, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಮ್ಮ ದೇಶದ ಸಂಪತ್ತು ಲೂಟಿ ಮಾಡಿದರು. ಆಗ ದೇಶದ ಆರ್ಥಿಕತೆ ಚೆಂಬು ಬರಿದಾಗಿತ್ತು. ಈ ಕಾಂಗ್ರೆಸ್ ನಾಯಕರು ಬರಿದಾದ ಚೆಂಬನ್ನು 2014ರಲ್ಲಿ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿಗೆ ಕೊಟ್ಟಿದ್ದಾರೆ. ಆದರೆ, ಕಳೆದ 10 ವರ್ಷದಲ್ಲಿ ನರೇಂದ್ರ ಮೋದಿ ಅವರು ಇದನ್ನು ಅಕ್ಷಯ ಪಾತ್ರೆಯನ್ನಾಗಿ ಮಾಡಿದ್ದಾರೆ ಎಂದರು.
|
| 6 |
+
ನನಗೆ 90 ಮುಗೀತು, ಇನ್ನು 20 ಇದೆ. ಬ್ಲಡ್ ಬಾಯಿಯಲ್ಲಿ ಬರುತ್ತದೆ. ಮೊನ್ನೆ ಕೋಲಾರದಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಬಗ್ಗೆ ವ್ಯಾಖ್ಯಾನ ಮಾಡಲು ಹೋಗುವುದೇ ಇಲ್ಲ. ನಮ್ಮ ಅಭ್ಯರ್ಥಿ ಮಹೇಶ್ ಬಾಬು ಅವರಿಗೆ ಸಂಬಂಧಪಟ್ಟಂತೆ ಎರಡು ಸಭೆ ಮಾಡಿದ್ದೇವೆ. ಇಂದು ಡಾ. ಸುಧಾಕರ್ ದೊಡ್ಡವರು ಬಂದಿದ್ದಾರೆ. ನಮ್ಮ ಪಕ್ಷದ ಒಬ್ಬ ಶಾಸಕರು, ನಾನು ಬಿಜೆಪಿಗೆ ನೀವು ಹೇಳಿದರೂ ಮಾಡೊಲ್ಲ ಎಂದು ಹೇಳಿದರು. ಆ ಶಾಸಕನ ತಂದೆ ಪಿಳ್ಳಪ್ಪ ಅವರನ್ನು ಒಂದು ರೂ. ಖರ್ಚು ಮಾಡಿಸದೇ ಹೆಗ್ಗಡೆ ವಿರುದ್ಧ ಗೆಲ್ಲಿಸಿದಂತಹ ದೇವೇಗೌಡ ನಿಮ್ಮ ಮುಂದೆ ಹೇಳ್ತಿದೀನಿ. ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ನಾನು ಹೇಳುತ್ತಿದ್ದೇನೆ. ನನ್ನ ಆದೇಶ ಡಾ. ಸುಧಾಕರ್ ಅವರಿಗೆ ಕೊಡಿ. ಈ ದೇಶವನ್ನು ಮುಂದಿನ 5 ವರ್ಷ ಆಡಳಿತ ಮಾಡಲು 400 ಸ್ಥಾನ ಗೆಲ್ಲುವ ಗುರಿ ಮುಟ್ಟಲು ನಾವು 28 ಸ್ಥಾನಗಳನ್ನು ಗೆಲ್ಲಿಸಿ ನಮ್ಮ ಕಾಣಿಕೆಯನ್ನು ನಿಮಗೆ ಒಪ್ಪಿಸುತ್ತೇವೆ ಎಂದರು.
|
eesanje/url_46_175_10.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಂದೇ ಸ್ವತ್ತಿಗೆ 22 ಬ್ಯಾಂಕುಗಳಲ್ಲಿ ಸಾಲ ಪಡೆದ ಕುಟುಂಬ
|
| 2 |
+
ಬೆಂಗಳೂರು,ಏ.19-ಒಂದೇ ಸ್ವತ್ತಿಗೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕ್ಗಳಿಗೆ 10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ವಂಚನೆ ಪ್ರಕರಣದಲ್ಲಿ ನಾಗೇಶ್ ಭಾರದ್ವಾಜ್, ಈತನ ಪತ್ನಿ ಸುಮಾ, ಮೂವರು ಸಂಬಂಕರಾದ ಶೋಭಾ, ಈಕೆಯ ಪತಿ ಶೇಷಗಿರಿ, ಭಾವಮೈದುನ ಸತೀಶ್ ಹಾಗೂ ಸ್ನೇಹಿತೆ ವೇದಾಳನ್ನು ಬಂಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
| 3 |
+
ಜಯನಗರ ಮೂರನೇ ಬ್ಲಾಕ್ನಲ್ಲಿರುವ ಕೋ ಆಪರೇಟಿವ್ ಬ್ಯಾಂಕೊಂದರ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಈ ವಂಚಕರನ್ನು ಬಂಸಲಾಗಿದೆ.ತಮ್ಮ ಬ್ಯಾಂಕ್ನಲ್ಲಿ ಖಾತೆದಾರರಾಗಿರುವ ಪತಿ, ಪತ್ನಿಯರು ಬೇಗೂರು ಗ್ರಾಮದಲ್ಲಿರುವ 2,100 ಅಡಿ ಉದ್ದಳತೆಯ ಜಾಗದಲ್ಲಿ ಕಟ್ಟಡ ಇರುವುದಾಗಿ ಅದನ್ನು ಅಡಮಾನವಾಗಿಟ್ಟುಕೊಂಡು ಕಂತು ಸಾಲ ಮತ್ತು ಯಂತ್ರೋಪಕರಣ ಸಾಲವೆಂದು 1.30 ಕೋಟಿ ರೂ. ಸಾಲ ನೀಡುವಂತೆ ಮನವಿ ಮಾಡಿಕೊಂಡಿದ್ದರು.
|
| 4 |
+
ಆದರೆ ಕಟ್ಟಡಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆದಿರುವುದರ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಕಳೆದ 2022 ರ ಡಿಸೆಂಬರ್ನಲ್ಲಿ ಜಯನಗರ ಪೊಲೀಸರಿಗೆ ದೂರು ನೀಡಿದ್ದರು.
|
| 5 |
+
ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ವಂಚಕ ಮಹಿಳೆಯ ಪತಿಯನ್ನು ಮಾರ್ಚ್ 2024 ರಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಆತನನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಈ ಕೃತ್ಯದಲ್ಲಿ ಆತನ ಪತ್ನಿ, ಪತ್ನಿಯ ತಮ್ಮ, ಅಕ್ಕ, ಭಾವ ಹಾಗೂ ಸ್ನೇಹಿತೆ ಇರುವುದಾಗಿ ತಿಳಿಸಿದ್ದಾನೆ.
|
| 6 |
+
ನಾವೆಲ್ಲಾ ನಮ್ಮ ಹೆಸರಿನಲ್ಲಿದ್ದ ಕಟ್ಟಡಕ್ಕೆ ವಿವಿಧ ಸರ್ವೆ ನಂಬರ್, ಸೈಟ್ ನಂಬರ್ಗಳನ್ನು ನಮೂದಿಸುವುದರ ಜೊತೆಗೆ ಸೈಟ್ ಉದ್ದಳತೆಯಲ್ಲೂ ಬದಲಾವಣೆ ಮಾಡಿ ನಕಲಿ ಡೀಡ್ ಮುಖಾಂತರ ರಿಜಿಸ್ಟರ್ ಮಾಡಿಸಿಕೊಂಡು ವಿವಿಧ ಬ್ಯಾಂಕುಗಳಿಗೆ ವಂಚಿಸಿರುವುದಾಗಿ ಬಾಯಿ ಬಿಟ್ಟಿದ್ದಾನೆ.
|
| 7 |
+
ಇದೇ ರೀತಿ ಆರೋಪಿಗಳು ಕಂತು ಸಾಲ ಮತ್ತು ಯಂತ್ರೋಪಕರಣದ ಸಾಲವೆಂದು ನಗರದ ವಿವಿಧ 22 ಬ್ಯಾಂಕುಗಳಿಂದ ಸುಮಾರು 10 ಕೋಟಿ ರೂ. ಸಾಲ ಪಡೆದು ವಂಚಿಸಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
|
| 8 |
+
ಆರೋಪಿ ನೀಡಿದ ಮಾಹಿತಿ ಮೇರೆಗೆ ಆತನ ಪತ್ನಿ ಸೇರಿದಂತೆ ಐದು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಎಲ್ಲರನ್ನೂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದರು.
|
| 9 |
+
ವಿವಿಧ ಬ್ಯಾಂಕುಗಳಿಗೆ 10 ಕೋಟಿ ರೂ. ವಂಚಿಸಿರುವ ವಂಚಕರನ್ನು ಬಂಸುವಲ್ಲಿ ಯಶಸ್ವಿಯಾಗಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬರಮಪ್ಪ ಜಗಲಾಸರ್, ಎಸಿಪಿ ನಾರ���ಯಣ ಸ್ವಾಮಿ, ಜಯನಗರ ಇನ್ಸ್ಪೆಕ್ಟರ್ ಮತ್ತವರ ತಂಡ ಕಾರ್ಯಕ್ಕೆ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
|
eesanje/url_46_175_11.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಕೊಲೆ ಹಿಂದೆ ‘ಲವ್ ಜಿಹಾದ್’ ಕೈವಾಡ : ಆರೋಪಿ ಎನ್ಕೌಂಟರ್ಗೆ ಆಗ್ರಹ
|
| 2 |
+
ಹುಬ್ಬಳ್ಳಿ, ಏ.19-ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
|
| 3 |
+
ಇಲ್ಲಿನ ಕಿಮ್ಸ್ ಶವಾಗಾರಕ್ಕೆ ಕೇಂದ್ರಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಡಹಗಲೇ ಹತ್ಯೆ ಆಗಿರೋದು ನೋಡಿದ್ರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ.
|
| 4 |
+
ಮೊನ್ನೆ ತಾನೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡೋ ಹೇಯ ಕೃತ್ಯ ನಡೆದಿತ್ತು. ಸಮಾಜಘಾತಕರಿಗೆ ಭಯ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.ಸರ್ಕಾರ ಈಗಲಾದರೂ ಗಂಭೀರವಾಗಿ ಪರಿಗಣಿಸಲಿ. ಆರೋಪ ಪರ ಯಾರು ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದರು. ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ಏನು ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದರು.
|
| 5 |
+
ಸರ್ಕಾರ ಮೂಕ ಪ್ರೇಕ್ಷಕನಂತಿದೆ: ಸಿ.ಟಿ.ರವಿ ಕಿಡಿಅವರು ಅವಳ ಕುತ್ತಿಗೆಗೆ ಚಾಕು ಹಾಕಿ ಸಾಯಿಸುತ್ತಾರೆ. ಸರ್ಕಾರ ಮೂಕಪ್ರೇಕ್ಷಕನಂತಿರುತ್ತದೆ ಎಂದು ಹುಬ್ಬಳ್ಳಿಯಲ್ಲಿ ಯುವತಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ.
|
| 6 |
+
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್ ದರ್ಬಾರ್ನಲ್ಲಿ ನಮ್ಮ ದುರ್ದೈವ. ಹನುಮಾನ್ ಚಾಲೀಸಾ ಕೇಳುತ್ತೀರಾ? ಅವರು ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಮತ್ತು ಕಾಂಗ್ರೆಸ್ ಸರ್ಕಾರ ನಿಮ್ಮ ಮೇಲೆಯೇ ಕೇಸ್ ಹಾಕುತ್ತಾರೆ.
|
| 7 |
+
ರಾಮಮಂದಿರ ಉದ್ಘಾಟನೆ ವಿಜೃಂಭಣೆಯಿಂದ ಮಾಡ್ತೀರಾ? ಅವರು ರಾಮೇಶ್ವರಂ ಕೆಫೆಗೆ ಬಾಂಬ್ ಇಡುತ್ತಾರೆ ಮತ್ತು ಕಾಂಗ್ರೆಸ್ ಸರ್ಕಾರ ಅದನ್ನು ಲೋ ಇಂಟೆನ್ಸಿಟಿ ಬಾಂಬ್ ಎಂದು ಮೂಲೆಗುಂಪು ಮಾಡುತ್ತದೆ.
|
| 8 |
+
ರಾಮನವಮಿ ದಿನ ಜೈ ಶ್ರೀರಾಮ್ ಅನ್ನುತ್ತೀರಾ? ಅವರು ಅಲ್ಲಾ ಅಕ್ಬರ್ ಘೋಷಣೆ ಕೂಗಿ ಎಂದು ಹಲ್ಲೆ ಮಾಡುತ್ತಾರೆ ಮತ್ತು ಸರ್ಕಾರ ಮಗುಮ್ಮಾಗಿ ಕುಳಿತುಕೊಳ್ಳುತ್ತದೆ. ಬಿಜೆಪಿ ಪರ ಚುನಾವಣಾ ಪ್ರಚಾರ ಕೈಗೊಳ್ಳುತ್ತೀರಾ? ಅವರು ನಿಮ್ಮ ಮೇಲೆ ಕಾರು ಹರಿಸಿ ಸಾಯಿಸುತ್ತಾರೆ ಮತ್ತು ಎಲ್ಲರೂ ಮೌನವಾಗಿರುತ್ತಾರೆ.
|
| 9 |
+
ನನಗಲ್ಲ ಎನ್ನುವ ಕಾಲ ಇದಲ್ಲ. ಪ್ರತಿಯೊಂದು ಬೆಳವಣಿಗೆಗೂ ನಮ್ಮ ಮೌನವು ಒಂದು ಕಾರಣ. ಇನ್ನಾದರೂ ಎದ್ದು ನಿಲ್ಲು ಹಿಂದೂ, ಸುಮ್ಮನಿದ್ದರೆ ದೇಶವೂ ಇರದು, ಜಾತಿಯು ಇರದು, ನಾನು ಇರೆನು, ನೀನು ಇರಲಾರೆ ಎಂದು ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
|
eesanje/url_46_175_12.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಎನ್ಕೌಂಟರ್ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್
|
| 2 |
+
ಹುಬ್ಬಳ್ಳಿ, ಏ.19-ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ ಸಚಿವ ಸಂತೋಷ್ಲಾಡ್ ಹೇಳಿದರು. ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಎನ್ಕೌಂಟರ್ ಬಗ್ಗೆ ಹಲವು ಮುಖಂಡರು ಮಾತನಾಡಿದ್ದಾರೆ. ನಾನು ಏನು ಹೇಳುವುದಿಲ್ಲ. ಆದರೆ ಮುಂದೆ ಇದಕ್ಕೆ ಒಂದು ಕಾನೂನು ಬರಲೇಬೇಕು ಎಂದರು.
|
| 3 |
+
ಡ್ರಗ್ಸ್ ಮಾಫಿಯಾ ಬಹಳ ದಿನದಿಂದ ಇದೆ. ಡ್ರಗ್ಸ್ ಬೇರೆ ಬೇರೆ ಕಡೆಯಿಂದ ಬರುತ್ತದೆ. ಇದು ಕೇವಲ ರಾಜ್ಯದ ಸಮಸ್ಯೆಯಲ್ಲ. ಈಗ ಆಗಿರುವ ಘಟನೆಗೆ ಅದಕ್ಕೂ ಹೋಲಿಕೆ ಬೇಡ ಎಂದು ಹೇಳಿದರು. ಎನ್ಕೌಂಟರ್ ಕಾನೂನು ಜಾರಿಗೊಳಿಸಿದರೆÉ ಈ ರೀತಿ ಮಾಡುವವರನ್ನು ಹೊಡೆದು ಉರುಳಿಸಬಹುದು ಎಂದರು.
|
| 4 |
+
ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಸರ್ಕಾರಗಳ ಅವ„ಯಲ್ಲಿ ಘಟನೆಗಳ ಸಂಖ್ಯೆಗಳನ್ನು ಕೊಡಬಲ್ಲೆ, ಆದರೆ ಅದಕ್ಕೆ ಉತ್ತರಿಸುವ ಪರಿಸ್ಥಿತಿ ಇದಲ್ಲ. ಕೆಲವರು ಇದನ್ನ ರಾಜಕೀಯ ಮಾಡಲು ಹೊರಟಿದ್ದಾರೆ. ಅವರಿಗೆ ಏನು ಅಂತಾ ಹೇಳಲಿ, ಇಂತಹ ಸೂಕ್ಷ್ಮ ವಿಷಯಗಳಲ್ಲಿ ರಾಜಕೀಯಗೊಳಿಸದೇ ಸೂಕ್ಷ್ಮತೆ, ಸ್ವಯಂತೆ ಕಾಯ್ದುಕೊಳ್ಳಬೇಕು ಬಿಜೆಪಿಗರಿಗೆ ಕಿವಿ ಮಾತು ಹೇಳಿದರು.
|
| 5 |
+
ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 13.30 ಲಕ್ಷ ಯುವತಿಯರು ಮಹಿಳೆಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಜೋಶಿ ಉತ್ತರಿಸಿಲಿ. ಹುಬ್ಬಳ್ಳಿ ಘಟನೆ ರಾಜಕೀಕರಣಗೊಳಿಸುತ್ತಿರುವ ಬಿಜೆಪಿಯವರು, ಬೆಂಗಳೂರು ಘಟನೆ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ. ಘಟನೆಯನ್ನು ಬೇರೆ ಆಯಾಮದಲ್ಲಿ ನೋಡಬಾರದು.
|
| 6 |
+
ತನಿಖೆ ಮುಗಿಯದೇ ರಾಜಕೀಯ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಅ„ಕಾರ ಇರುವ ರಾಜ್ಯದಲ್ಲಿ ಇಂತಹ ಘಟನೆ ನಡೆದಿಲ್ಲವೇ, ಅಂಕಿ ಸಂಖ್ಯೆ ಕೊಡಲೇ ಎಂದು ತಿರುಗೇಟು ನೀಡಿದರು. ತನಿಖೆ ಬಗ್ಗೆ ಈಗ ಮಾತನಾಡುವುದಿಲ್ಲ ಎಂದರು.ಘಟನೆ ಆಕಸ್ಮಿಕ ಎಂಬ ಗೃಹಸಚಿವರ ಹೇಳಿಕೆಯನ್ನು ಸಚಿವ ಲಾಡ್ ಸಮರ್ಥಿಸಿಕೊಂಡರು.
|
eesanje/url_46_175_2.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ ರೈತ ವಿರೋಧಿ ಎನ್ನುವುದಕ್ಕೆ ಕರ್ನಾಟಕ ಸರ್ಕಾರವೇ ತಾಜಾ ಉದಾಹರಣೆ : ಮೋದಿ ವಾಗ್ದಾಳಿ
|
| 2 |
+
ಚಿಕ್ಕಬಳ್ಳಾಪುರ, ಕಾಂಗ್ರೆಸ್ ರೈತ ವಿರೋಧಿ ಎನ್ನುವುದಕ್ಕೆ ಕರ್ನಾಟಕ ಸರ್ಕಾರವೇ ತಾಜಾ ಉದಾಹರಣೆ ಎಂದು ಪ್ರಧಾನಿ ನರೇಂದ್ರಮೋದಿ ಇಂಡಿ ಮೈತ್ರಿ ವಿರುದ್ಧ ವಾಗ್ದಾಳಿ ನೆಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಿಕ್ಕಬಳ್ಲಾಪುರ ಅಭ್ಯರ್ಥಿ ಡಾ. ಕೆ ಸುಧಾಕರ್ ಹಾಗೂ ಕೋಲಾರ ಅಭ್ಯರ್ಥಿ ಜೆಡಿಎಸ್ನ ಮಲ್ಲೇಶ್ ಬಾಬು ಪರ ಮತ ಯಾಚಿಸಿ ಮಾಡನಾಡಿ ಅವರು, ನಮ್ಮ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ಸಣ್ಣ ರೈತರಿಗೆ ಆರು ಸಾವಿರ ಮತ್ತು ರಾಜ್ಯ ಬಿಜೆಪಿ ಸರ್ಕಾರ ನಾಲ್ಕು ಸಾವಿರ ಸೇರಿಸಿ ವಾರ್ಷಿಕ ಹತ್ತು ಸಾವಿರ ಸಹಾಯ ದಾನ ನೀಡಲಾಗುತ್ತಿದ್ದು, ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ೪ ಸಾವಿರ ವನ್ನು ರದ್ದು ಮಾಡಿ ರೈತರಿಗೆ ಅನ್ಯಾಯ ಮಾಡಿದೆ. ಇದು ಕಾಂಗ್ರೆಸ್ ನ ರೈತ ವಿರೋಧಿ ನಡೆಗೆ ತಾಜಾ ಉದಾಹರಣೆ ಆಗಿದೆ. . ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ಶಿಕ್ಷೆ ನೀಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮೋದಿ ಹೇಳಿದ್ದಾರೆ.
|
| 3 |
+
ಅಧಿಕಾರದ ಆಸೆಯಲ್ಲಿರುವ ಇಂಡಿ ಮೈತ್ರಿಗೆ ಈಗ ಯಾವುದೇ ನಾಯಕನಿಲ್ಲ. ಭವಿಷ್ಯದ ಬಗ್ಗೆ ಯಾವುದೇ ಯೋಚನೆಗಳೂ ಅವರ ಮೈತ್ರಿಗೆ ಇಲ್ಲ. ಇದಲ್ಲದೆ, ಅವರ ಇತಿಹಾಸ ಪೂರ್ತಿ ಹಗರಣಗಳಿಂದಲೇ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದ ಸೋದರ ಸೋದರಿಯಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ಮೋದಿ, ಸಂತ ಕೈವಾರ ತಾತಯ್ಯ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರ ನೆಲಕ್ಕೆ ಬಂದಿರುವುದು ಖುಷಿ ಇದೆ. ಮೊದಲ ಹಂತದ ವೋಟಿಂಗ್ ದೇಶದ ಉತ್ಸಾಹ ಹೆಚ್ಚಿದೆ. ಈ ಉತ್ಸಾಹ ಇಲ್ಲಿಯೂ ಕಾಣುತ್ತಿದೆ. ಮೊದಲ ಹಂತದ ಮತದಾನ ಎನ್ಡಿಎ ಪರವಾಗಿ ಬಂದಿದೆ. ನಾನು ದೇವೇಗೌಡರಿಗೆ ಆಭಾರಿಯಾಗಿದ್ದೇನೆ. 90ರ ವಯಸ್ಸಿನಲ್ಲೂ ಅವರಲ್ಲಿನ ಉತ್ಸಾಹ, ಬದ್ಧತೆ ನನ್ನಂಥ ಯುವಕರಿಗೂ ಪ್ರೇರಣಾದಾಯಿಯಾಗಿದೆ ಎಂದು ಮೋದಿ ಹೇಳಿದರು.
|
| 4 |
+
ದೇವೇಗೌಡರು ಇಂಡಿ ಮೈತ್ರಿಯ ಒಬ್ಬೊಬ್ಬರ ಪಾತ್ರವನ್ನು ತುಂಬಾ ಚೆನ್ನಾಗಿ ಹೇಳಿದರು. ಆದರೆ, ಇಂಡಿ ಮೈತ್ರಿಯಲ್ಲಿ ಯಾರೂ ಲೀಡರ್ಗಳಿಲ್ಲ. ಭವಿಷ್ಯದಲ್ಲಿ ಯಾವುದೇ ವಿಷನ್ಗಳೂ ಇಲ್ಲ. ಆದರೆ, ಅವರ ಹಿಸ್ಟರಿಯಲ್ಲಿ ಇತಿಹಾಸಗಳೇ ತುಂಬಿದಿದೆ. ಚಿಕ್ಕಬಳ್ಳಾಪುರದ ನೆಲ ಈಗಾಗಲೇ ಮತ್ತೊಮ್ಮೆ ಮೋದಿ ಸರ್ಕಾರ ಎಂದು ತೀರ್ಮಾನ ಮಾಡಿದೆ. ಇಂದು ನಿಮ್ಮ ಎದುರು ನನ್ನ ರಿಪೋರ್ಟ್ ಕಾರ್ಡ್ ಇಟ್ಟು ಆಶೀರ್ವಾದ ಕೇಳಲು ಬಂದಿದ್ದೇನೆ. ನಿಮ್ಮೆಲ್ಲರನ್ನೂ ನನ್ನ ಪರಿವಾರ ಎಂದುಕೊಂಡಿದ್ದೇನೆ. ನಿಮ್ಮ ಸಲುವಾಗಿ ದಿನರಾತ್ರಿ ಕೆಲಸ ಮಾಡುವ ವಿಚಾರದಲ್ಲಿ ಯಾವುದನ್ನೂ ಕಡಿಮೆ ಮಾಡಿಲ್ಲ. ನಿಮ್ಮ ಕನಸುಗಳೇ ನನ್ನ ಸಂಕಲ್ಪ. ಪ್ರತಿ ಕ್ಷಣ ನಿಮ್ಮ ಹೆಸರಿಗೆ, ಪ್ರತಿ ಕ್ಷಣ ದೇಶದ ಹೆಸರಿಗೆ.. ��ದೇ ಕಾರಣಕ್ಕೆ ಬರೀ ಕೆಲಸ ಮಾತ್ರ ಮಾಡೋದಿಲ್ಲ. ಅದರ ಗ್ಯಾರಂಟಿ ಕೂಡ ನೀಡ್ತೇನೆ ಎಂದು ಹೇಳಿದ್ದಾರೆ.
|
eesanje/url_46_175_3.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ ವಿವಿಧೆಡೆ ವರುಣನ ಸಿಂಚನ
|
| 2 |
+
ಬೆಂಗಳೂರು, ಏ.20-ಬಿಸಿಲ ಬೇಗೆಯಿಂದ ಬಸವಳಿದಿದ್ದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವರುಣ ಕೃಪೆ ತೋರಿದ್ದು, ಇಂದು ಬೆಳ್ಳಂಬೆಳಗ್ಗೆ ವಿವಿಧೆಡೆ ಮಳೆಯ ಸಿಂಚನವಾಗಿದೆ.ನಿನ್ನೆ ತುಮಕೂರು, ಮಂಡ್ಯ, ಮಾಗಡಿ, ಮೈಸೂರು, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಸೇರಿದಂತೆ ಮತ್ತಿತರ ಕಡೆ ಮಳೆಯಾಗಿದ್ದು, ಇಂದು ಬೆಳಗ್ಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ.
|
| 3 |
+
ವಿಜಯನಗರ ಜಿಲ್ಲೆಯಾದ್ಯಂತ ಇಂದು ನಸುಕಿನ ಜಾವ ಮೋಡ ಕವಿದ ವಾತಾವರಣವಿದ್ದು, ಹೊಸಪೇಟೆ ನಗರ, ಹೂವಿನ ಹಡಗಲಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಎರಡು ತಾಸಿಗೂ ಹೆಚ್ಚು ಕಾಲ ಗುಡುಗು ಸಹಿತ ಭಾರೀ ಮಳೆಯಾಗಿದೆ.
|
| 4 |
+
ಇನ್ನು ಹುಬ್ಬಳ್ಳಿಯಲ್ಲೂ ಸಹ ಮಳೆಯಾಗಿದ್ದು, ಜನರಿಗೆ ಸಂತಸ ತಂದಿದೆ. ಚಿಕ್ಕಮಗಳೂರು, ಶಿವಮೊಗ್ಗ, ಯಾದಗಿರಿ, ವಿಜಯನಗರ, ಗದಗ, ಬೆಳಗಾವಿ, ಧಾರವಾಡದಲ್ಲೂ ಸಹ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ಮಳೆಯಾಗುವ ಸಾಧ್ಯತೆ ಇದೆ.
|
| 5 |
+
ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ನಾಡಿನ ಜನತೆಗೆ ವರುಣನ ಸಿಂಚನದಿಂದ ತುಸು ತಂಪೆರೆದಂತಾಗಿದೆ.
|
eesanje/url_46_175_4.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಗೊಂದಲದ ಗೂಡಾದ ಸಿಇಟಿ ಪರೀಕ್ಷೆ : ಮರುಪರೀಕ್ಷೆಗೆ ರುಪ್ಸಾ ಆಗ್ರಹ
|
| 2 |
+
ಬೆಂಗಳೂರು,ಏ.20-ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಹೊರಪಠ್ಯ (ಔಟ್ ಆಫ್ ಸಿಲಬೆಸ್) ಪ್ರಶ್ನೆಗಳೇ ಹೆಚ್ಚಾಗಿ ವಿದ್ಯಾರ್ಥಿಗಳು, ಪೊಷಕರು ಆತಂಕಗೊಳಗಾಗಿದ್ದಾರೆ, ಉಪನ್ಯಾಸಕರು ಅಸಹಾಯಕರಾಗಿದ್ದಾರೆ, ಕೂಡಲೇ ಮರು ಪರೀಕ್ಷೆ ನಡೆಸಬೇಕೆಂದು ರುಪ್ಸಾ ಸಂಘಟನೆ ಆಗ್ರಹಿಸಿದೆ.
|
| 3 |
+
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಇಂಜಿನಿಯರಿಂಗ್, ಮತ್ತಿತರೆ ಕೋರ್ಸ್ಗಳಿಗೆ ಸೇರಲು 3.50 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದೆರೆಡು ವರ್ಷದಿಂದ ಶ್ರಮ ವಹಿಸಿ ಸಿಇಟಿಗೆ ತಯಾರಾಗಿ ಪರೀಕ್ಷೆ ಎದುರಿಸಿದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಗಳಲ್ಲಿ ಹೊರಪಠ್ಯ ಪ್ರಶ್ನೆಗಳನ್ನು ಹೆಚ್ಚು ನೀಡಿರುವುದರಿಂದ ಆತಂಕಕ್ಕೆ ಒಳಗಾಗಿದ್ದಾರೆ.
|
| 4 |
+
ಒಂದು ವಿಷಯದಲ್ಲಿ ಒಂದು ಅಥವಾ ಎರಡು ಪ್ರಶ್ನೆಗಳು ತಪ್ಪಾಗಿ ಸಹಜ. ಅವುಗಳಿಗೆ ಗ್ರೇಸ್ ಮಾಕ್ರ್ಸ್ ಕೊಡುವಂತಹುದು ಸಾಮಾನ್ಯವಾಗಿತ್ತು. ಆದರೆ ಪ್ರಸ್ತುತ ನಡೆದ ಸಿಇಟಿ ಪರೀಕ್ಷೆಯ ನಾಲ್ಕೂ ವಿಷಯಗಳಲ್ಲಿ ಒಟ್ಟು 46 ಪ್ರಶ್ನೆಗಳು ಪಠ್ಯವನ್ನು ಹೊರತುಪಡಿಸಿ ಕೇಳಿರುವುದು ಅವಾಂತರಗಳಿಗೆ ಕಾರಣವಾಗಿದೆ. 240 ಅಂಕಗಳಲ್ಲಿ 46 ಪ್ರಶ್ನೆಗಳು ಪಠ್ಯಗಳಲ್ಲಿ ಇಲ್ಲದ ಪ್ರಶ್ನೆಗಳು ಬಂದಿರುವುದು ಇದೇ ಮೊದಲು. ಮರುಪರೀಕ್ಷೆಯಿಂದ ಮಾತ್ರ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ.
|
| 5 |
+
ಈ ರೀತಿಯ ಬೇಜವಾಬ್ದಾರಿ ಹಾಗೂ ಪ್ರಮಾದಕ್ಕೆ ಕಾರಣರಾದವರನ್ನು ತಕ್ಷಣ ತನಿಖೆಗೊಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಕೂಡಲೇ ಸಿಇಟಿ ಮರು ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ವಿಳಂಬ ಮಾಡಿದರೆ ಮಕ್ಕಳ ಹಿತ ಕಾಯಲು ನಮ್ಮ ಸಂಘಟನೆ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲು ಹಿಂಜರಿಯುವುದಿಲ್ಲ. ಶಿಕ್ಷಣ ಮಂತ್ರಿಗಳು ಕೂಡಲೇ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
|
eesanje/url_46_175_5.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..!
|
| 2 |
+
ಬೆಂಗಳೂರು,ಏ.20-ಗದಗ ನಗರದ ದಾಸರ ಓಣಿಯಲ್ಲಿ ನಿವಾಸಿ ನಗರಸಭಾ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಸುಫಾರಿ ಹಂತಕರು ಕೊಲೆ ಮಾಡಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಸುಫಾರಿ ಹಂತಕರು ಯಾರು? ಇವರಿಗೆ ಯಾರು ಸುಫಾರಿ ಕೊಟ್ಟರು? ಯಾವ ಕಾರಣಕ್ಕಾಗಿ ಸುಫಾರಿ ಕೊಟ್ಟಿದ್ದಾರೆ ಎಂಬ ಬಗ್ಗೆ ಗದಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
|
| 3 |
+
ಇಷ್ಟೊಂದು ಕ್ರೂರವಾಗಿ ಕೊಲೆ ಮಾಡಿರುವುದು ಗಮನಿಸಿ ದರೆ ಇದು ಸುಫಾರಿಹಂತಕರೇ ಈ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಕೌಟುಂಬಿಕ ವೈಷಮ್ಯ ಅಥವಾ ಆಸ್ತಿ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆ ನಿಟ್ಟಿನಲ್ಲಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
|
| 4 |
+
ಆರೋಪಿಗಳ ಬಂಧನಕ್ಕೆ ಈಗಾಗಲೇ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡ ಕೊಪ್ಪಳಕ್ಕೆ ಹೋಗಿ ಪರಶುರಾಮ ಕುಟುಂಬದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪರಶುರಾಮ ಅವರು ಕೊಪ್ಪಳದ ಭಾಗ್ಯನಗರದ ನಿವಾಸಿಗಳಾಗಿದ್ದು, ನಗರಸಭೆ ಸದಸ್ಯೆ ಸುನಂದಾ ಅವರ ಪುತ್ರ ಕಾರ್ತಿಕ್ ಪುತ್ರ ಕಾರ್ತಿಕ್ ನಿಶ್ಚಿತಾರ್ಥ ನಿಮಿತ್ತ ಏ.17ರಂದು ಇವರ ಮನೆಗೆ ಬಂದಿದ್ದರು.
|
| 5 |
+
ಮೊನ್ನೆ ಪರಶುರಾಮ ಅವರ ಪತ್ನಿ ಲಕ್ಷ್ಮಿ ಅವರ ಹುಟ್ಟಹಬ್ಬವಿದುದ್ದರಿಂದ ಅಂದು ರಾತ್ರಿ ಕುಟುಂಬದವರೆಲ್ಲ ಸಂತೋಷದಿಂದ ಹುಟ್ಟಹಬ್ಬ ಆಚರಿಸಿ ಗಾಢ ನಿದ್ರೆಗೆ ಜಾರಿದ್ದರು. ಬೆಳಗಾಗುವಷ್ಟರಲ್ಲಿ ದುಷ್ಕರ್ಮಿಗಳು ಇವರ ಮನೆಗೆ ಹಿಂಭಾಗದ ಕಿಟಕಿ, ಗಾಜು ಒಡೆದು ಆ ಮೂಲಕ ಒಳನುಗ್ಗಿದ್ದಾರೆ.
|
| 6 |
+
ಪರಶುರಾಮ್ ಕುಟುಂಬ ಮೊದಲು ದುಷ್ಕರ್ಮಿಗಳ ಕಣ್ಣಿಗೆ ಬಿದ್ದಿದ್ದು, ಪರಶುರಾಮ್, ಇವರ ಪತ್ನಿ ಹಾದಿಮನಿ, ಪುತ್ರಿ ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಅಷ್ಟಕ್ಕೆ ತಮ್ಮ ಕ್ರೌರ್ಯ ನಿಲ್ಲಿಸದೆ ನಿದ್ದೆಗಣ್ಣಿನಿಂದಲೇ ಎದ್ದುಬಂದ ಕಾರ್ತಿಕ್ ಅವರ ಮೇಲೂ ಮಚ್ಚು ಬೀಸಿ ಕೊಲೆ ಮಾಡಿ ನಂತರ ಸುನಂದಾ ಅವರ ಕೊಠಡಿ ಬಳಿ ಹೋಗಿ ಬಾಗಿಲು ತಟ್ಟಿದ್ದು, ಎಷ್ಟು ಹೊತ್ತಾದರೂ ಬಾಗಿಲು ತೆಗೆಯದಿದ್ದಾಗ ತಾವು ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
|
| 7 |
+
ಒಂದು ವೇಳೆ ಸುನಂದಾ ಅವರು ಕೊಠಡಿ ಬಾಗಿಲು ತೆಗೆದಿದ್ದರೆ ಅವರನ್ನೂ ಸಹ ಕೊಲೆ ಮಾಡುವ ಸಾಧ್ಯತೆಯಿತ್ತು.ಇಷ್ಟೊಂದು ಭೀಕರವಾಗಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿರುವುದ ಗಮನಿಸಿದರೆ ಇದು ಹಣ, ಆಭರಣಕ್ಕಾಗಿ ನಡೆದಿರುವುದಲ್ಲ ಎಂಬುದು ಗೊತ್ತಾಗುತ್ತಿದೆ. ಕೊಲೆಯಾದವರ ಮೈಮೇಲಿದ್ದ ಆಭರಣಗಳು ಹಾಗೆಯೇ ಇವೆ. ಹಾಗಾಗಿ ಇದು ಲಾಭಕ್ಕಾಗಿ ನಡೆದಿರುವುದಲ್ಲ ಎಂಬುದು ಕಂಡುಬಂದಿದೆ.
|
| 8 |
+
ಗದಗ ಪಟ್ಟಣ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದ���, ಸುನಂದಾ ಅವರ ಮನೆಯ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿ ಅದರಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಆಧರಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನೀರವ ಮೌನ: ನಗಸಬಾ ಸದಸ್ಯೆ ಸುನಂದಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಪುತ್ರ ಹಾಗೂ ಸಂಬಂಕರನ್ನು ಕಳೆದುಕೊಂಡ ಮದುವೆ ಮನೆ ಸ್ಮಶಾನದಂತೆ ಮೌನವಾಗಿದೆ.
|
eesanje/url_46_175_6.txt
ADDED
|
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ ಎರಡು ರಾಜಕೀಯ ಕುಟುಂಬಗಳಿಗೆ ಪ್ರತಿಷ್ಠೆಯಾದ ಲೋಕಸಭೆ ಚುನಾವಣೆ
|
| 2 |
+
ಬೆಂಗಳೂರು,ಏ.20-ಈ ಬಾರಿಯ ಲೋಕಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ಗೆ ಮಾತ್ರ ಪ್ರತಿಷ್ಠೆಯಾಗಿರದೆ ರಾಜ್ಯದ ಎರಡು ಪ್ರಬಲ ರಾಜಕೀಯ ಕುಟುಂಬ ಗಳಿಗೂ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
|
| 3 |
+
ರಾಜಕೀಯವನ್ನೇ ಅರಗಿಸಿಕೊಂಡಿರುವ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರೈತ ಹೋರಾಟದ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿ ರಾಜಕೀಯ ನಿವೃತ್ತಿ ಅಂಚಿನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಸಭೆ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.
|
| 4 |
+
ಒಂದು ವೇಳೆ ಈ ಚುನಾವಣೆಯಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಕುಟುಂಬಕ್ಕೆ ಅಪ್ಪಿತಪ್ಪಿಯೂ ಸ್ವಲ್ಪವೇನಾ ದರೂ ಹಿನ್ನಡೆಯಾದರೆ ಎರಡೂ ಕುಟುಂಬಗಳ ರಾಜಕೀಯ ಭವಿಷ್ಯಕ್ಕೆ ಕಲ್ಲು ಬೀಳುವುದರಲ್ಲಿ ಸಂಶಯವಿಲ್ಲ ಎಂದು ಇಬ್ಬರನ್ನೂ ಹತ್ತಿರದಿಂದ ಬಲ್ಲವರು ಹೇಳುತ್ತಿದ್ದಾರೆ.
|
| 5 |
+
ಹೀಗಾಗಿಯೇ ದೇವೇಗೌಡ ಮತ್ತು ಯಡಿಯೂರಪ್ಪ ತಮ್ಮ ರಾಜಕೀಯ ಜಿದ್ದನ್ನು ಮರೆತು ಪರಸ್ಪರ ಒಂದಾಗಿ ಹೆಗಲಿಗೆ ಹೆಗಲು ಕೊಟ್ಟು ಮೈತ್ರಿಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಇತ್ತೀಚಿನ ಚುನಾವಣೆಗಳಲ್ಲಿ ಎಚ್ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಕಳಪೆ ಸಾಧನೆ ಮಾಡಿದ್ದು, ಈ ಚುನಾವಣೆ ಕೂಡ ಕೈ ಕೊಟ್ಟರೆ ದೇವೇಗೌಡರ ಕುಟುಂಬದ ರಾಜಕೀಯ ಹಿಡಿತ ಮತ್ತಷ್ಟು ಸಡಿಲಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.
|
| 6 |
+
2004ರಲ್ಲಿ 58 ಶಾಸಕರನ್ನು ಹೊಂದಿದ್ದ ಜೆಡಿಎಸ್ ಈಗ ಕೇವಲ 19 ಶಾಸಕರು ಹಾಗೂ ಏಕೈಕ ಸಂಸದ ಸ್ಥಾನಕ್ಕೆ ಇಳಿದಿದೆ. ಜೆಡಿಎಸ್ನ ಅಧಃಪತನಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪ್ರಮುಖ ಕಾರಣ. 2023ರ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಗಣನೀಯವಾಗಿ ಕಾಂಗ್ರೆಸ್ ಕಡೆ ತಿರುಗಿಸುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ.
|
| 7 |
+
ಡಿ.ಕೆ.ಶಿವಕುಮಾರ್ ಅವರು ಅಗ್ರೆಸ್ಸಿವ್ ಆಗಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುತ್ತಿದ್ದಾರೆ. ಒಕ್ಕಲಿಗ ಮುಖಂಡರ ಜೊತೆ ರಹಸ್ಯ ಸಭೆಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಅದರ ಜೊತೆಗೆ ದೇವೇಗೌಡರ ಕುಟುಂಬದ ಪ್ರಾಬಲ್ಯದಿಂದ ತಮ್ಮನ್ನು ತಾವು ಮುಕ್ತಗೊಳಿಸಬೇಕಾದ ಅಗತ್ಯವನ್ನು ಒಕ್ಕಲಿಗ ಮುಖಂಡರ ಮುಂದೆ ಪ್ರತಿಪಾದಿಸುತ್ತಿದ್ದಾರೆ. ಜೊತೆಗೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ನ ಮೂಲಗಳು ಹೇಳಿವೆ.
|
| 8 |
+
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸಾಕಷ್ಟು ಕ್ಷೇತ್ರಗಳನ್ನು ಗೆದ್ದರೆ ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ಗೆ ಅಸ್ತಿತ್ವದ ಪ್ರಶ್ನೆ ಉಂಟಾಗಲಿದೆ ಎಂದು ಜೆಡಿಎಸ್ನ ಹಿರಿಯ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಒಕ್ಕಲಿಗ ಸಮುದಾಯದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಳಸಿಕೊಂಡು ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳನ್ನು ಓಲೈಸಲು ಕಾಂಗ್ರೆಸ್ ಸರ್ವಪ್ರಯತ್ನ ನಡೆಸುತ್ತಿದೆ.
|
| 9 |
+
ಈ ಸಮಸ್ಯೆಯನ್ನು ಗ್ರಹಿಸಿರುವ ದೇವೇಗೌಡ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ನರೇಂದ್ರಮೋದಿ ಅವರು ಮೂರನೇ ಅವಗೆ ಪ್ರಧಾನಿಯಾದರೆ ಕೇಂದ್ರ ಸರ್ಕಾರದ ಭಾಗವಾಗಬಹುದು. ಆದರೆ ಒಕ್ಕಲಿಗರು ಗೌಡರ ಕುಟುಂಬವನ್ನು ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತಾರೆಯೇ? ದೇವೇಗೌಡರ ಕುಟುಂಬ ಯಾವಾಗ ರಾಜಕೀಯವಾಗಿ ಕುಸಿತ ಕಂಡಿದೆಯಾ? ಆಗೆಲ್ಲಾ ಒಕ್ಕಲಿಗ ಸಮುದಾಯ ಅವರ ರಕ್ಷಣೆಗೆ ನಿಂತಿದೆ ಎಂಬ ಭಾವನೆ ಸಮುದಾಯದ ಅನೇಕರಲ್ಲಿದೆ.
|
| 10 |
+
ಯಡಿಯೂರಪ್ಪಗೆ ಆಂತರಿಕ ಸವಾಲು: ಅತ್ತ ದೇವೇಗೌಡರ ಕುಟುಂಬಕ್ಕೆ ಡಿ.ಕೆ.ಶಿವಕುಮಾರ್ ಸವಾಲಾಗಿದ್ದರೆ, ಇತ್ತ ಬಿಎಸ್ ಯಡಿಯೂರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಪಕ್ಷದಲ್ಲಿಯೇ ಹಲವು ಸವಾಲುಗಳು ಎದುರಾಗಿವೆ. ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ರಾಜ್ಯ ಬಿಜೆಪಿ ಘಟಕದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ನಳಿನ್ ಕುಮಾರ್ ಕಟೀಲ್, ಕೆಎಸ್ ಈಶ್ವರಪ್ಪ, ಡಿವಿ ಸದಾನಂದಗೌಡ ಸೇರಿ ಹಲವು ಹಿರಿಯ ಬಿಜೆಪಿ ನಾಯಕರು ವಿಜಯೇಂದ್ರ ಅವರ ಬಡ್ತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
|
| 11 |
+
ಕೆ.ಎಸ್.ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಡಿವಿ ಸದಾನಂದಗೌಡ ಅವರು ಯಡಿಯೂರಪ್ಪನವರ ಕುಟುಂಬವನ್ನು ಚುನಾವಣೆ ಬಳಿಕ ಎದುರಿಸಲು ಪಣ ತೊಟ್ಟಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಈಶ್ವರಪ್ಪ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.
|
| 12 |
+
ಇನ್ನು ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದ ಜೆಸಿ ಮಾಧುಸ್ವಾಮಿ, ಬಿಎನ್ ಚಂದ್ರಪ್ಪ, ಮಾಲೀಕಯ್ಯ ಗುತ್ತೇದಾರ್ ಸೇರಿ ಅನೇಕರಿಗೆ ಎಂಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅವರು ಕೆರಳಿದ್ದಾರೆ. ಹೀಗಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ಮೇಲೆ ಒತ್ತಡ ಸೃಷ್ಟಿಯಾಗಿರುವುದು ಸ್ಪಷ್ಟವಾಗಿದೆ.
|
| 13 |
+
ಬಿಎಸ್ವೈ ಕುಟುಂಬಕ್ಕೆ ಇದು ಮಾಡು ಇಲ್ಲವೇ ಮಡಿ ಕದನ ಎಂದು ಉತ್ತರ ಕರ್ನಾಟಕದ ಬಿಜೆಪಿಯ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ಗಿಂತ ಎನ್ಡಿಎ ಹೆಚ್ಚು ಸ್ಥಾನಗಳನ್ನು ಗೆದ್ದರೆ, ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಕುಟುಂಬದ ಪ್ರಾಬಲ್ಯ ಮುಂದುವರಿಯುತ್ತದೆ. ಇಲ್ಲದಿದ್ದರೆ, ಬಿವೈ ವಿಜಯೇಂದ್ರ ಅವರು ರಾಜಾ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರಬಹುದು. ಜೊತೆಗೆ ಕರ್ನಾಟಕ ಬ��ಜೆಪಿ ಮೇಲೆ ಬಿಎಸ್ವೈ ಕುಟುಂಬಕ್ಕಿರುವ ಹಿಡಿತ ಸಡಿಲವಾಗಬಹುದು.
|
eesanje/url_46_175_7.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ನಿಲ್ಲದ ಆಕ್ರೋಶ, ರಾಕ್ಷಸ ಫಯಾಜ್ ಗಲ್ಲುಶಿಕ್ಷೆಗೆ ಒತ್ತಾಯ
|
| 2 |
+
ಹುಬ್ಬಳ್ಳಿ,ಏ.20-ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಅವರ ಪುತ್ರಿ ನೇಹಾ ಹಿರೇಮಠ ಕೊಲೆ ಖಂಡಿಸಿ ಎಬಿವಿಪಿ, ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿವೆ.
|
| 3 |
+
ಕೊಲೆ ಆರೋಪಿ ಫಯಾಜ್ನನ್ನು ಗಲ್ಲಿಗೇರಿಸಬೇಕೆಂಬ ಆಕ್ರೋಶ ಎಲ್ಲೆಡೆ ಭುಗಿಲೆದ್ದಿದೆ. ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲೆಡೆ ಪ್ರತಿಭಟನೆಗಳು ತೀವ್ರಗೊಂಡಿವೆ.
|
| 4 |
+
ಕೊಲೆ ಖಂಡಿಸಿ ನಿನ್ನೆ ಕೂಡ ಹಲವೆಡೆ ಪ್ರತಿಭಟನೆ ನಡೆಸಲಾಯಿತು. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಹುಬ್ಬಳ್ಳಿಯಲ್ಲಿ ಬಂದ್ ಮಾಡಿದರೆ ಬೆಂಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಗೃಹಸಚಿವ ಡಾ.ಜಿ.ಪರಮೇಶ್ವರ್ ಗೃಹಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
|
| 5 |
+
ಅತ್ತ ಹುಬ್ಬಳ್ಳಿಯಲ್ಲಿ ಜಯಕರ್ನಾಟಕ ಸಂಘಟನೆ, ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದಲೇ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಾಂಕೇತಿಕವಾಗಿ ಹುಬ್ಬಳ್ಳಿ ಬಂದ್ ಮಾಡಲಾಗಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಸಿವೆ.
|
| 6 |
+
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದಿಂದ ಬಿವಿಬಿ ಕಾಲೇಜುವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿವಿಧ ಸಂಘಟನೆಗಳು, ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ನೇಹಾ ಹತ್ಯೆ ರೀತಿಯಲ್ಲಿ ಹಲವು ಪ್ರಕರಣಗಳು ನಡೆಯುತ್ತಿವೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದೆ. ರಾಜ್ಯಸರ್ಕಾರ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
| 7 |
+
ಜಯ ಕರ್ನಾಟಕ ಸಂಘಟನೆ ಮುಖಂಡ ಸುಧೀರ ಮುಧೋಳ ಹಾಗೂ ಸಂಘ ಸಂಘಟನೆಯ ಮುಖಂಡೆ ಮಧು ಪಟ್ಟಣಶೆಟ್ಟಿ ಮಾತನಾಡಿ, ಕೊಲೆ ಆರೋಪಿ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
|
| 8 |
+
ಹೊಸೂರು ಸರ್ಕಲ್ ಬಳಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಲಾಯಿತು. ನಗರದ ಬಿವಿಬಿ ಕಾಲೇಜು ಸೇರಿದಂತೆ ವಿವಿಧಡೆ ವಿವಿಧ ಸಂಘಟನೆಗಳು ಪ್ರತಿಭಟನಾ ವೇಳೆ ರಾಜ್ಯ ಸರ್ಕಾರದ ಬೇಜವಾಬ್ದಾರಿಂದಲೇ ಈ ಘಟನೆಯಾಗಿದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
| 9 |
+
ರಾಜ್ಯ ಸರ್ಕಾರವು ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳು ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಆಗಿವೆ ಎಂದು ಹೇಳಿದೆ. ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಹಾಗೂ ಇದು ಲವ್ ಜೆಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಯಿತು.
|
| 10 |
+
ಪೊಲೀಸ್ ಅಧಿಕಾರಿ ಜೊತೆಗೆ ಮಾತಿನ ಚಕಮಕಿ :ಹುಬ್ಬಳ್ಳಿ ಹೊಸೂರು ಕ್ರಾಸ್ ಬಳಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ಮಾಡಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದರು. ಇದಕ್ಕೆ ಆಕ್ರೋಶಗೊಂಡ ಕಾರ್ಯಕರ್ತರು ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
|
eesanje/url_46_175_8.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಕುರಿತ “ಲವ್’ ಹೇಳಿಕೆಗೆ ಕ್ಷಮೆ ಕೇಳಿದ ಗೃಹಸಚಿವ ಪರಮೇಶ್ವರ್
|
| 2 |
+
ಬೆಂಗಳೂರು,ಏ.20-ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತಮ್ಮ ಹೇಳಿಕೆಯಿಂದ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಯಾಚಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಎಬಿವಿಪಿಯವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
|
| 3 |
+
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ತಾವು ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದೇವೆ, ಬೇಜವಾಬ್ದಾರಿಯಿಂದ ಹೇಳಿಕೆ ನೀಡಿಲ್ಲ. ನಮಗೆ ಬಂದ ವರದಿಯನ್ನು ತಿಳಿಸಿದ್ದೇನೆ. ಪ್ರಕರಣದ ಬಗ್ಗೆ ತನಿಖೆಯಾಗಲಿದೆ. ಆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು. ನನ್ನ ಹೇಳಿಕೆಯಿಂದ ತಂದೆ-ತಾಯಿಯವರಿಗೆ, ಕುಟುಂಬದ ಸದಸ್ಯರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ತನಿಖೆಯ ನಂತರ ಸತ್ಯಾಂಶ ತಿಳಿದುಬರಲಿದೆ ಎಂದು ಹೇಳಿದರು.
|
| 4 |
+
ಈ ಹಿಂದೆ ಮತದಾನದ ವೇಳೆ ಏನೆಲ್ಲಾ ನಡೆಯುತ್ತಿತ್ತು ಎಂಬುದನ್ನು ನಾನು ವಿಶ್ಲೇಷಣೆ ಮಾಡಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನೇ ನಿಂತು ಚುನಾವಣಾ ಅಕ್ರಮ ಮಾಡಿಸಿದ್ದೇನೆ ಎಂದರ್ಥವಲ್ಲ. ಇದರ ಹಿಂದೆ ಮತಪೆಟ್ಟಿಗೆಗಳು ಅಪಹರಣವಾಗುತ್ತಿದ್ದವು. ಬೇರೆ ಬೇರೆ ಕ್ರಮಗಳು ನಡೆಯುತ್ತಿದ್ದವು. ಆ ಕಾರಣಕ್ಕಾಗಿ ಎಲೆಕ್ಟ್ರಾನಿಕ್ ಮತಯಂತ್ರಗಳು ಜಾರಿಗೆ ಬಂದವು ಎಂದು ಹೇಳಿದ್ದೇನೆ. ಈಗ ಮತಯಂತ್ರಗಳಲ್ಲೂ ಲೋಪಗಳಾಗುತ್ತಿವೆ.
|
| 5 |
+
ಮೊನ್ನೆ ಕಾಸರಗೋಡಿನಲ್ಲಿ ಮಾಕ್ಡ್ರಿಲ್ ಮಾಡಿದಾಗ ಯಾವುದೇ ಬಟನ್ ಒತ್ತಿದರೂ ಮತಗಳು ಬಿಜೆಪಿಗೆ ಮತ ಬೀಳುತ್ತಿತ್ತು ಎಂಬುದು ಗೊತ್ತಾಗಿದೆ. ಇದನ್ನು ಸರಿಮಾಡಿಕೊಳ್ಳಬೇಕೆಂದು ನಾನು ಹೇಳಿದ್ದೇನೆ. ಆದರೆ ಚುನಾವಣಾ ಸಂದರ್ಭದಲ್ಲಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದರು.
|
| 6 |
+
ಚುನಾವಣಾ ಕರ್ತವ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದರಿಂದಾಗಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಹೆಚ್ಚಾಗಿವೆ ಎಂಬುದು ಸರಿಯಲ್ಲ. ಒಂದೆಡೆ ಚುನಾವಣಾ ಕರ್ತವ್ಯವೂ ನಡೆಯಬೇಕು, ಮತ್ತೊಂದೆಡೆ ಕಾನೂನು ಸುವ್ಯವಸ್ಥೆಯೂ ಪಾಲನೆಯಾಗಬೇಕು. ಸಿಬ್ಬಂದಿಯ ಲಭ್ಯತೆಯನ್ನು ನೋಡಿಕೊಂಡು ಪರಸ್ಪರ ರಾಜ್ಯಗಳ ನಡುವೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದರು.
|
| 7 |
+
ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡನೇ ಬಾರಿಗೆ ಚುನಾವಣಾ ಪ್ರಚಾರಕ್ಕಾಗಿ ಬರುತ್ತಿದ್ದಾರೆ. ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ಹಿಂದೆ ನೆರೆ, ಪ್ರಸಕ್ತ ಬರ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಿಲ್ಲ. ಬರ ಅಧ್ಯಯನಕ್ಕಾಗಿ ಕೇಂದ್ರದ ಅಧ್ಯಯನ ತಂಡ ಶಿಫಾರಸ್ಸು ಮಾಡಿದ್ದ ನೆರವನ್ನು ಕೊಟ್ಟಿಲ್ಲ.
|
| 8 |
+
ರಾಜ್ಯಕ್ಕೆ ಹೊಸದಾಗಿ ಯಾವುದೇ ಹೊಸ ಯೋಜನೆಗಳನ್ನು ಕೊಟ್ಟಿಲ್ಲ. ತೆರಿಗೆ ಪಾಲಿನಲ್ಲೂ ನ್ಯಾಯಯುತ ಪಾಲು ಕೊಟ್ಟಿಲ್ಲ. ಭದ್ರಾ ಮೇಲ್ದಂಡೆಗೆ ಭರವಸೆ ನೀಡಿದಷ್ಟು ಹಣವನ್ನೂ ಬಿಡುಗಡೆ ಮಾಡಿಲ್ಲ. 26 ಮಂದಿ ಬಿಜೆಪಿಯ ಸಂಸದರಿದ್ದರು. ರಾಜ್ಯಕ್ಕೆ ಯಾವುದೇ ನೆರವು ದೊರೆಯದೇ ಇರುವ ಬಗ್ಗೆ ಪ್ರಧಾನಿಯವರು ಸ್ಪಷ್ಟನೆ ನೀಡಬೇಕಿದೆ ಎಂದು ಹೇಳಿದರು.
|
eesanje/url_46_175_9.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಕೊಲೆಗೆ ಪ್ರೀತಿ ಕಾರಣ ಎಂದ ಗೃಹಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ
|
| 2 |
+
ಬೆಂಗಳೂರು,ಏ.20-ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
|
| 3 |
+
ಇಂದು ಬೆಳಿಗ್ಗೆ ಸದಾಶಿವನಗರದ ಗೃಹಸಚಿವರ ಮನೆಯವರೆಗೆ ಬ್ಯಾನರ್ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಕಿತ್ತೆಸೆದು, ತುಳಿದು ತಮ್ಮ ಆಕ್ರೋಶ ಹೊರಹಾಕಿದರು.
|
| 4 |
+
ಸಚಿವರ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಕಾರ್ಯಕರ್ತರನ್ನು ನಿಯಂತ್ರಿಸಲು ಪರದಾಡಬೇಕಾಯಿತು. ಈ ವೇಳೆ ಮನೆಯ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು, ಸಚಿವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಲ್ಲದೆ, ಆರೋಪಿಗೆ ಗಲ್ಲುಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
|
| 5 |
+
ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ನಡುವೆ ಪರಸ್ಪರ ಪ್ರೀತಿ ಇತ್ತು ಎಂದು ಗೃಹಸಚಿವರು ಹೇಳಿದ್ದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ. ಹುಬ್ಬಳ್ಳಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
|
| 6 |
+
ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಆರಂಭದಲ್ಲಿ ಸಚಿವರ ಮನೆಯ ಬಳಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಕಡಿಮೆಯಿತ್ತು. ಕಾರ್ಯಕರ್ತರ ಪ್ರತಿಭಟನೆ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ.
|
eesanje/url_46_176_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನೇಹಾ ಹತ್ಯೆಗೆ ವ್ಯಾಪಕ ಆಕ್ರೋಶ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ
|
| 2 |
+
ಹುಬ್ಬಳ್ಳಿ,ಏ.19-ವಿದ್ಯಾರ್ಥಿನಿ ನೇಹಾ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ… ಹುಬ್ಬಳ್ಳಿಯಲ್ಲಿ ಮಡುವುಗಟ್ಟಿದ ಆಕ್ರೋಶ… ಪೊಷಕರ ಅಳಲು… ನಿನ್ನೆ ಕೊಲೆಯಾದ ವಿದ್ಯಾರ್ಥಿನಿ ನೇಹಾ ಮೃತದೇಹವನ್ನು ಪೊಷಕರಿಗೆ ಹಸ್ತಾಂತರಿಸುತ್ತಿದ್ದಂತೆ ಸಂಬಂಕರ ರೋಧನ ಹೇಳತೀರದಾಗಿತ್ತು.
|
| 3 |
+
ಪ್ರೀತಿಸಲು ನಿರಾಕರಿಸಿದ ಒಂದು ಕಾರಣಕ್ಕೆ ಕಾಲೇಜು ಆವರಣದಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಯೊಬ್ಬ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಜೀವನದಲ್ಲಿ ಹತ್ತು ಹಲವು ಕನಸುಗಳನ್ನು ಕಟ್ಟಿಕೊಂಡ ಕಾರ್ಪೊರೇಟರ್ ಮಗಳು ನೇಹಾ ಎಂಸಿಎ ಪರೀಕ್ಷೆ ಬರೆದು ಹೊರಬರುತ್ತಿದ್ದಂತೆ ಸವದತ್ತಿ ತಾಲ್ಲೂಕಿನ ಮುನಳ್ಳಿ ಮೂಲದ ಪಯಾಜ್ ಎಂಬ ದುಷ್ಕರ್ಮಿ ಚಾಕುವಿನಿಂದ ಇರಿದಿರಿದು ಭೀಕರವಾಗಿ ಕೊಲೆ ಮಾಡಿದ್ದ. ನೆಲದಲ್ಲಿ ಬಿದ್ದು ಒರಳಾಡಿ ಒರಳಾಡಿ ಯುವತಿ ಪ್ರಾಣ ಬಿಟ್ಟಿದ್ದಳು.
|
| 4 |
+
ಪಾಗಲ್ ಪ್ರೇಮಿ ಭೀಕರವಾಗಿ ಯುವತಿಯನ್ನು ಕೊಲೆ ಮಾಡಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡು ಹುಬ್ಬಳ್ಳಿಯಾದ್ಯಂತ ಪ್ರತಿಭಟನೆ, ಆಕ್ರೋಶ ಕಿಚ್ಚು ಭುಗಿಲೆದ್ದಿತ್ತು.ಈ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು, ಶ್ರೀರಾಮಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆನಡೆಸಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿವೆ.
|
| 5 |
+
ಇದಲ್ಲದೆ, ಕೊಲೆ ಮಾಡಿದ ದುಷ್ಕರ್ಮಿಯ ಊರಾದ ಸವದತ್ತಿಯ ಮುನಳ್ಳಿಯಲ್ಲೂ ಕೂಡ ಬಂದ್, ಪ್ರತಿಭಟನೆ ಮಾಡಲಾಯಿತು. ಈ ಪ್ರಕರಣವನ್ನು ಖಂಡಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಆರೋಪಿಯನ್ನು ಗಲ್ಲಿಗೇರಿಸುವಂತೆ ಹಿಂದೂ ಸಂಘಟನೆಗಳು, ಹಲವು ನಾಗರಿಕ ಸಂಘಟನೆಗಳು, ಮಹಿಳಾ ಸಂಘಟನೆಗಳು ಒತ್ತಾಯಿಸಿವೆ.
|
| 6 |
+
ನೇಹಾ ಕೊಲೆ ಖಂಡಿಸಿ ಹುಬ್ಬಳ್ಳಿಯ ಬಿವಿಬಿ ಕಾಲೇಜು ಮುಂಭಾಗ ಎಬಿವಿಪಿ ಕಾರ್ಯಕರ್ತರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ಕಾರ ಕೂಗಿಆರೋಪಿ ಪಯಾಜ್ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಮತ್ತೊಂದೆಡೆ ಎನ್ಎಸ್ಯುಐ ಕಾರ್ಯಕರ್ತರು ಕೂಡ ಕಿಮ್ಸ್ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು.
|
| 7 |
+
ಹಿಂದೂ ಸಂಘಟನೆಯ ಕಾರ್ಯಕರ್ತರು ವಿದ್ಯಾನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಡಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.ಅಲ್ಲದೆ, ಆರೋಪಿ ಪರ ಯಾರೂ ವಕಾಲತ್ತು ವಹಿಸಬಾರದು, ಯಾರೂ ಜಾಮೀನಿಗೆ ಅರ್ಜಿ ಸಲ್ಲಿಸಬಾರದು, ಅವರನ್ನು ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.
|
| 8 |
+
ರಾಜ್ಯದಲ್ಲಿ ಅರಾಜಕತೆಯೇ ಆಡಳಿತದ ಧ್ಯೇಯ. ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕಾಂಗ್ರೆಸ್ ಸರ್ಕಾರದ ಆಡಳಿತದ ಮಂತ್ರ ಎಂದು ಬಿಜೆಪಿ ಆಕ್ರ���ಶ ವ್ಯಕ್ತಪಡಿಸಿದೆ.ಸಿದ್ದರಾಮಯ್ಯನವರ ಓಲೈಕೆಯ ಪ್ರತಿಫಲವಾಗಿ ಹುಬ್ಬಳ್ಳಿಯ ಕಾಲೇಜಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ನಿಮ್ಮ ತುಷ್ಠೀಕರಣಕ್ಕೆ ಇನ್ನೆಷ್ಟು ಅಮಾಯಕರ ಬಲಿಯಾಗಬೇಕು ಎಂದು ಪ್ರಶ್ನಿಸಿದೆ.
|
eesanje/url_46_176_10.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
“ದರಿದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಇಸ್ಲಾಂಮೀಕರಣ ಹೆಚ್ಚಾಗಿದೆ” : ಆರ್.ಅಶೋಕ್ ಆಕ್ರೋಶ
|
| 2 |
+
ಬೆಂಗಳೂರು,ಏ.18-ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.
|
| 3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರು ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವರು ಜೈಶ್ರೀರಾಮ್ ಎಂದು ಕೂಗಬಾರದು. ಇಲ್ಲಿ ಅಲ್ಲಾವೋ ಎಂದು ಕೂಗಬೇಕೆಂದು ಜೀವ ಬೆದರಿಕೆ ಹಾಕುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಂದು ಮೂಲಭೂತವಾದಿಗಳ ಅಟ್ಟಹಾಸ , ಮತ್ತೊಂದು ಕಡೆ ದರಿದ್ರ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
|
| 4 |
+
ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಿರಂತರವಾಗಿದೆ. ಲಕ್ಷ್ಮಣ ಸವದಿಯವರು ಮಲ್ಲಿಕಾರ್ಜುನ ಖರ್ಗೆ ಕೇಳಿ ಭಾರತ್ ಮಾತಾ ಕೀ ಜೈ ಎನ್ನಬಹುದಾ ಎನ್ನುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರಾಮ ದೇವರೇ ಅಲ್ಲ ಅಂತಾರೆ. ನಾನು ಮನೆಯಲ್ಲಿ ರಾಮನ ಫೋಟೋನೇ ಇಟ್ಟಿಲ್ಲ ಎನ್ನುತ್ತಾರೆ. ಹಿಂದೂಗಳು ಭಯದಿಂದ ಜೀವನ ಮಾಡುವಂತಹ ಪರಿಸ್ಥಿತಿ ಬಂದಿದೆ ಎಂದರು.
|
| 5 |
+
ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದರು. ಒಂದು ರೀತಿಯಲ್ಲಿ ಇವರಿಗೆ ಕಾಂಗ್ರೆಸ್ ನವರು ಬೆಂಬಲ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ಈಗ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
|
| 6 |
+
ನಮ್ಮನ್ನು ಹೇಳುವವರು, ಕೇಳುವವರು ಯಾರೂ ಇಲ್ಲ. ಏನು ಬೇಕಾದರೂ ಮಾಡಬಹುದೆಂಬ ಮನಸ್ಥಿತಿಗೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಬಂದಿದ್ದಾರೆ. ಅಲ್ಲಾ ಅಕ್ಬರ್ ಎಂದು ಕೂಗಬೇಕು. ಜೈಶ್ರೀರಾಮ್ ಹೇಳಬಾರದು ಎಂದು ಬೆದರಿಕೆ ಹಾಕಿರುವವರ ವಿರುದ್ಧ ಸರ್ಕಾರ ಕೂಡಲೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ದೇಶದ್ರೋಹ ದೂರು ದಾಖಲಿಸಬೇಕೆಂದು ಒತ್ತಾಯಿಸಿದರು.
|
| 7 |
+
ಸಿಕ್ಕಿಬಿದ್ದಿರುವ ಆರೋಪಿಗಳು ಮದ್ಯ ಸೇವಿಸಿದ್ದರು. ಗಾಂಜಾ ಸೇವನೆ ಮಾಡಿದ್ದಾರೆ ಎಂದು ಪೊಲೀಸರು ಕಥೆ ಹೇಳಬಾರದು. ಮುಸ್ಲಿಮರು ಮುನಿಸಿಕೊಳ್ಳಬಹುದೆಂದು ಪೊಲೀಸರಿಗೆ ಒತ್ತಡ ಹಾಕುವ ಕೆಲಸವು ಸರ್ಕಾರದಿಂದ ನಡೆದಿದೆ. ಸುಳ್ಳು ನೆಪ ಹೇಳಿ ಅವರನ್ನು ಹೊರಬಿಟ್ಟರೆ ಮುಂದೆ ಇವರು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲೂ ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
|
| 8 |
+
ಆರೋಪಿಗಳನ್ನು ರಕ್ಷಿಸುವ ಕಾರ್ಯ ಸರ್ಕಾರದ ಮೇಲೆ ನಡೆಯುತ್ತಿದೆ. ಅವರ ವಿರುದ್ಧ ದೂರು ದಾಖಲಿಸಿದರೆ ಲೋಕಸಭೆ ಚುನಾವಣೆಯಲ್ಲಿ ಮತಗಳು ಕೈ ಕೊಡಬಹುದೆಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ. ಮುಸ್ಲಿಮರು ಏನೇ ಮಾಡಿದರೂ ಅವರನ್ನು ರಕ್ಷಣೆ ಮಾ��ಲು ಕಾಗಕ್ಕ ಬೂಬಕ್ಕನ ಕಥೆ ಕಟ್ಟುತ್ತಾರೆ. ತನಿಖೆ ನಡೆಯುವ ಮೊದಲೇ ಗಾಂಜಾ ಸೇವನೆ ಮಾಡಿದ್ದರು, ಮದ್ಯಪಾನ ಸೇವಿಸಿದ್ದು, ಮಾನಸಿಕವಾಗಿ ಅಸ್ವಸ್ಥರು ಎಂದು ತನಿಖೆಯಲ್ಲಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
| 9 |
+
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿ ಮುಸ್ಲಿಂ ಮೂಲಭೂತವಾದಿಗಳ ಆಟ ನಡೆಯುವುದಿಲ್ಲ. ಸುಳ್ಳು ಕಾರಣಗಳನ್ನು ಕೊಟ್ಟು ಆರೋಪಿಗಳನ್ನು ಬಿಟ್ಟು ಕಳುಹಿಸಿದರೆ ನಾವು ಸುಮ್ಮನಿರುವುದಿಲ್ಲ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಹೇಳಿದರು. ಸಿದ್ದರಾಮಯ್ಯ ನವರ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ದಿನೇದಿನೇ ಇಸ್ಲಾಮಿಕ್ ಸಂಘಟನೆಗಳು, ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರು, ಟಿಪ್ಪು ಸಿದ್ಧಾಂತ ಇಟ್ಟುಕೊಂಡಿರುವವರು ಹೆಚ್ಚಾಗಿದ್ದಾರೆ. ಭಯೋತ್ಪಾದನಾ ಚಟುವಟಿಕೆ, ಇಸ್ಲಾಮೀಕರಣ, ಮತೀಯ ಧೋರಣೆ ಹೆಚ್ಚಾಗಿದೆ.
|
| 10 |
+
ಕಾಂಗ್ರೆಸ್ನವರು ಹಿಂದೂಗಳನ್ನು ಬೈದು ಬೈದು ಇಸ್ಲಾಂಮೀಕರಣ ಜಾಸ್ತಿಯಾಗಿದೆ. ಗೂಡಾಗಿರಿ ಮಾಡುವ ವ್ಯಕ್ತಿಗಳನ್ನು ನಿಯಂತ್ರಣದಲ್ಲಿ ಇಡುವುದನ್ನು ಬಿಟ್ಟು, ಪರೋಕ್ಷವಾಗಿ ಸರ್ಕಾರ ಬೆಂಬಲ ಕೊಡುತ್ತಿದೆ, ನೀವು ಏನಾದರೂ ಮಾಡ್ಕೊಳ್ಳಿ ವೋಟ್ ಹಾಕಿ ಅನ್ನುತ್ತಾರೆ. ಕಾಂಗ್ರೆಸ್ನವರ ಸಪೋರ್ಟ್ನಿಂದ ಇಸ್ಲಾಂ ಮೂಲಭೂತವಾದಿಗಳು ಮಿತಿಮೀರಿದ್ದಾರೆ.ಸಿದ್ದರಾಮಯ್ಯ ನವರು ಇವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ. ಅರೆಸ್ಟ್ ಮಾಡಿದ್ದೀರಿ ಬಿರಿಯಾನಿ ಕೊಡುತ್ತೀರಿ, ಬಿಟ್ಟು ಕಳಿಸುತೀರಾ? ಈ ಮೂಲಭೂತ ವಾದ ರಾಜ್ಯಕ್ಕೆ ಅಪಾಯ ತಂದೊಡ್ಡುತ್ತದೆ. ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಏನಾಗುತ್ತಿದೆ ಇಲ್ಲಿ? ಎಂದು ಆತಂಕ ವ್ಯಕ್ತಪಡಿಸಿದರು.
|
| 11 |
+
ಪಿಎಸ್ಐ ಹಗರಣ ಕಿಂಗ್ಪಿನ್ ಬಿ.ಆರ್.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಕಿಂಗ್ಪಿನ್ ಜತೆ ಗುರುತಿಸಿಕೊಳ್ಳುವುದು ಬೇರೆ, ಮತ ಕೇಳುವುದು ಬೇರೆ. ಚುನಾವಣೆ ವೇಳೆ ಮತ ಕೇಳುವುದು ಧರ್ಮ, ಎಲ್ಲರನ್ನೂ ಕೇಳುತ್ತೇವೆ ಎಂದು ಸಮರ್ಥಿಸಿಕೊಂಡರು.
|
eesanje/url_46_176_11.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
“ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ”
|
| 2 |
+
ಬೆಂಗಳೂರು,ಏ.18-ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ.
|
| 3 |
+
ಈ ಕುರಿತು ಇಂದು ಬಿಜೆಪಿ ನಿಯೋಗವು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇನ್ನೊಂದು ದೂರು ಕೊಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್ನ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಆಗ್ರಹಿಸಲಾಯಿತು.
|
| 4 |
+
ಕುಣಿಗಲ್ ತಾಲ್ಲೂಕಿನ ಚಿಕ್ಕ ಅರ್ಜೇನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ಬಿನ್ ಪಿ.ಜಿ.ರಾಮಯ್ಯರವರ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನೊಂದಿರುವ ಪ್ರೇಮ್ ಕುಮಾರ್ ಅವರಿಗೆ ಭದ್ರತೆ ಕೊಡಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸ್ ಅಧಿಕಾರಿಗಳು, ಪೊಲೀಸರನ್ನು ಅಮಾನತುಪಡಿಸಲು ಒತ್ತಾಯಿಸಿ ದೂರು ಕೊಡಲಾಯಿತು.
|
| 5 |
+
ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಲಾಯಿತು.
|
| 6 |
+
ಮನವಿ ಸಲ್ಲಿಸುವ ನಿಯೋಗದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಸದಸ್ಯ ಯಶವಂತ್ ಮತ್ತು ಪಕ್ಷದ ಪ್ರಮುಖರು ಇದ್ದರು.
|
eesanje/url_46_176_12.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿಎಂ ಸಿದ್ದರಾಮಯ್ಯನವರಿದ್ದ ಇದ್ದ ಬಸ್ಸನ್ನು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು
|
| 2 |
+
ಬೆಂಗಳೂರು, ಏ.18-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈಟೆಕ್ ಬಸ್ಸನ್ನು ಹೆದ್ದಾರಿಯ ಅರ್ಧದಲ್ಲೇ ತಡೆದ ಚುನಾವಣಾಧಿಕಾರಿಗಳು ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಭದ್ರತೆಯ ಕಾನ್ವೇಯೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದರು. ಹೆದ್ದಾರಿಯ ಚೆಕ್ ಪೋಸ್ಟ್ ಬಳಿ ಬಸ್ಸನ್ನು ತಡೆದ ಚುನಾವಣಾ ವೀಕ್ಷಕರು ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಸಂಪೂರ್ಣ ತಪಾಸಣೆ ನಡೆಸಿದರು.
|
| 3 |
+
ಈ ವೇಳೆ ಮುಖ್ಯಮಂತ್ರಿಯವರು ಬಸ್ ಒಳಗೇ ಕುಳಿತಿದ್ದು ತಪಾಸಣೆಗೆ ಸಹಕಾರ ನೀಡಿದರು. ಸಾರ್ವಜನಿಕರು ಮುಖ್ಯಮಂತ್ರಿಯವರನ್ನು ಕುತೂಹಲದಿಂದ ವೀಕ್ಷಿಸಿಸಿದಲ್ಲದೆ ಫೋಟೊ ತೆಗೆದುಕೊಂಡರು.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಲು ಸಿದ್ದರಾಮಯ್ಯ ತೆರಳಿದ್ದರು. ಸಿದ್ದರಾಮಯ್ಯ ಪ್ರಚಾರಕ್ಕಾಗಿಯೇ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದೆ.
|
| 4 |
+
ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್ನಲ್ಲಿ ಪ್ರಯಾಣ ಮಾಡುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ರೋಡ್ಶೋನಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
|
| 5 |
+
ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ಕಳೆದ 10 ತಿಂಗಳಲ್ಲಿ 180 ಕೋಟಿ ರೂ. ಅನುದಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗಾಗಿ ನೀಡಿದ್ದಾರೆ. ಈ ಹಿಂದೆ ಬಿಜೆಪಿ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರ ಬೇಜಾವಬ್ದಾರಿತನದಿಂದಾಗಿ ರೈತರ ಜಮೀನುಗಳು ಪರಿಭಾವಿತ ಅರಣ್ಯ ಪ್ರದೇಶ ಎಂದು ಗುರುತಿಸಲ್ಪಟ್ಟಿವೆÉ. ಅದನ್ನು ನಮ್ಮ ಸರ್ಕಾರ ಸುಪ್ರೀಂಕೋರ್ಟ್ವರೆಗೆ ಹೋಗಿ ರೈತರಿಗೆ ಬಿಡಿಸಿಕೊಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು.
|
eesanje/url_46_176_2.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಏ.26ರಂದು ಮೊದಲ ಹಂತದ ಮತದಾನ, ಏ.24ರಂದು ಕ್ಷೇತ್ರ ಬಿಟ್ಟು ತೆರಳುವಂತೆ ರಾಜಕೀಯ ನಾಯಕರಿಗೆ ಆಯೋಗ ಸೂಚನೆ
|
| 2 |
+
ಬೆಂಗಳೂರು,ಏ.19- ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳ ಪ್ರಚಾರಕ್ಕೆ ಆಗಮಿಸಿರುವ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಏ.24ರ ಸಂಜೆ 6 ಗಂಟೆಯ ನಂತರ ಕ್ಷೇತ್ರ ಬಿಟ್ಟು ತೆರಳಲು ಭಾರತದ ಚುನಾವಣಾ ಆಯೋಗ ಸೂಚನೆ ನೀಡಿದೆ.
|
| 3 |
+
ಆಯಾ ಕ್ಷೇತ್ರದ ಮತದಾರರನ್ನು ರಾಜಕೀಯ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಬಹಿರಂಗ ಪ್ರಚಾರದ ಸಮಯ ಮುಗಿದ ಕೂಡಲೇ ತೆರಳಬೇಕು. ಕ್ಷೇತ್ರ ಬಿಟ್ಟು ತೆರಳಿರುವ ಬಗ್ಗೆ ಆಯಾ ಚುನಾವಣಾ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.
|
| 4 |
+
ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಹೊರಗಿನವರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದು ಸಾಮಾನ್ಯ. ಮತದಾನದ ಅವ ಮುಕ್ತಾಯವಾಗುವ 48 ಗಂಟೆಗಳ ಮುಂಚಿತ ಅವಯಲ್ಲಿ ಕ್ಷೇತ್ರದ ಮತದಾರರಲ್ಲದವರು ಆಯಾ ಕ್ಷೇತ್ರದಲ್ಲಿ ಉಪಸ್ಥಿತರಿರಬಾರದು.
|
| 5 |
+
ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯುವ ಉದ್ದೇಶದಿಂದ ಈ ರೀತಿಯ ಕ್ರಮ ಕೈಗೊಂಡಿದೆ. ಆಯೋಗವು ಜಿಲ್ಲಾ ಚುನಾವಣಾ ಅಧಿಕಾರಿ, ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಕಲ್ಯಾಣ ಮಂಟಪ, ಸಮುದಾಯ ಭವನಗಳನ್ನು ಪರಿಶೀಲಿಸಿ ಕ್ಷೇತ್ರದ ಮತದಾರರಲ್ಲದವರು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚಿಸಿದೆ.
|
| 6 |
+
ವಸತಿ ಗೃಹಗಳು, ಅತಿಥಿ ಗೃಹಗಳನ್ನು ಪರಿಶೀಲಿಸಬೇಕು. ಕ್ಷೇತ್ರದ ಗಡಿಗಳಲ್ಲಿ ಇರುವ ಚೆಕ್ ಪೋಸ್ಟ್ ಗಳಲ್ಲಿ ಹೊರಗಿನಿಂದ ಬರುವ ವಾಹನಗಳ ಚಲನವಲನಗಳ ಮೇಲೆ ನಿಗಾವಹಿಸಬೇಕು, ಗುರುತಿನಚೀಟಿಯನ್ನು ಪರಿಶೀಲಿಸಿ ಕ್ಷೇತ್ರದ ಹೊರಗಿನವರೇ ಅಥವಾ ಅಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿದೇರ್ಶಶನ ನೀಡಿದೆ. ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಏ.24ರ ಸಂಜೆ 6 ಗಂಟೆ ನಂತರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
|
| 7 |
+
ಏ.26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
|
eesanje/url_46_176_3.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
|
| 2 |
+
ಬೆಂಗಳೂರು,ಏ.19-ರಾಜ್ಯದ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಏ.12ರಿಂದ ನಿನ್ನೆಯವರೆಗೆ ಒಟ್ಟು 241 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ 221 ಪುರುಷ, 20 ಮಹಿಳೆಯರು, 143 ಸ್ವತಂತ್ರ ಅಭ್ಯರ್ಥಿಗಳು ಸೇರಿದ್ದಾರೆ.
|
| 3 |
+
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ರ್ಪಸಿದ್ದಾರೆ. ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಚುನಾವಣೆಯಿಂದ ದೂರ ಉಳಿದಿದೆ. ಆದರೆ ಒಬ್ಬ ಅಭ್ಯರ್ಥಿ ಮಾತ್ರ ಬಿಜಾಪುರ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
|
| 4 |
+
ಬಿಜೆಪಿಯ 14 ಅಭ್ಯರ್ಥಿಗಳಿಂದ 45 ನಾಮಪತ್ರಗಳು, ಕಾಂಗ್ರೆಸ್ನ 14 ಅಭ್ಯರ್ಥಿಗಳಿಂದ 48, ಎಎಪಿಯಿಂದ ಒಬ್ಬರು, ಬಿಎಸ್ಪಿಯಿಂದ 15 ನಾಮಪತ್ರಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದ್ದು, ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಅಂತಿಮ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಕೃತ ಪ್ರಕಟಣೆಯನ್ನು ಹೊರಡಿಸಲಿದ್ದಾರೆ.
|
| 5 |
+
ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
|
eesanje/url_46_176_4.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಕ್ಕಲಿಗರ ಸಂಘದಲ್ಲಿ ಒಡಕು, ಎಂ.ಲಕ್ಷ್ಮಣ್ ಗೆ ಮತ ಹಾಕುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ
|
| 2 |
+
ಬೆಂಗಳೂರು,ಏ.19-ಪ್ರತಿಷ್ಠೆಯ ಚುನಾವಣಾ ಕಣವಾಗಿ ಪರಿಣಮಿಸಿರುವ ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಂಘವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಲು ತೆಗೆದುಕೊಂಡಿರುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೈಸೂರಿನ ಒಕ್ಕಲಿಗ ಸಂಘದ ಕೆಲವು ಬೆರಳೆಣಿಕೆಯ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಹೇಳಿರುವುದು ಸಂಘದಲ್ಲೇ ಬಿರುಕು ಮೂಡಿಸಿದೆ.
|
| 3 |
+
ಯಾರನ್ನೂ ಕೇಳದೆ ಸಂಘದ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಏಕಪಕ್ಷೀಯವಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಒಕ್ಕಲಿಗ ಸಮುದಾಯ ಮತ ಹಾಕಲಿದೆ ಎಂದು ಹೇಳಿರುವುದು ಸರಿಯಲ್ಲ. ಅಷ್ಟಕ್ಕೂ ಒಕ್ಕಲಿಗ ಸಮುದಾಯವನ್ನು ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಗ್ರಾಂಟೆಡ್ ಫಾರ್ ಟೇಕನ್ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
|
| 4 |
+
ಸಮುದಾಯದವರು ಯಾರಿಗೆ ಬೇಕಾದರೂ ಮತ ಹಾಕಿಕೊಳ್ಳಲಿ. ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯಕರ್ತವ್ಯ. ನಮ್ಮ ಮತವನ್ನು ನಾವು ಯಾರಿಗೆ ಬೇಕಾದರೂ ಹಾಕುತ್ತೇವೆ. ಒಕ್ಕಲಿಗ ಸಂಘವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಬೆರಳೆಣಿಕೆಯ ಮುಖಂಡರು ಸೇರಿ ಇಡೀ ಸಮುದಾಯದವರೇ ಕಾಂಗ್ರೆಸ್ ಪರವಾಗಿ ಮತ ಹಾಕುತ್ತೇವೆ ಎಂದು ಹೇಳಿರುವುದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೆಸರು ಹೇಳಲಿಚ್ಛಿಸದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
| 5 |
+
ಲೋಕಸಭೆ ಚುನಾವಣೆಯು ರಾಷ್ಟ್ರೀಯ ವಿಷಯಗಳ ಮೇಲೆ ನಡೆಯುತ್ತದೆ. ರಾಷ್ಟ್ರೀಯ ಭದ್ರತೆ, ಸುರಕ್ಷತೆ, ಆರ್ಥಿಕ ಅಭಿವೃದ್ಧಿ, ದಕ್ಷ ಸರ್ಕಾರ, ಸುಭದ್ರ ನಾಯಕತ್ವ, ಭ್ರಷ್ಟಾಚಾರ ರಹಿತ ಆಡಳಿತ ಹೀಗೆ ಹಲವು ವಿಷಯಗಳ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ. ನಾವ್ಯಾರು ಗ್ಯಾರಂಟಿಗಳನ್ನು ನೋಡಿಕೊಂಡು ಕಾಂಗ್ರೆಸ್ ಪರವಾಗಿ ಇಲ್ಲವೇ ಬಿಜೆಪಿ, ಜೆಡಿಎಸ್ಗೆ ಮತ ಹಾಕುವುದಿಲ್ಲ. ನಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನಮಗಿದೆ.
|
| 6 |
+
ಒಕ್ಕಲಿಗರೆಲ್ಲರೂ ಸಾರಾಸಗಾಟಾಗಿ ಕಾಂಗ್ರೆಸ್ಗೆ ಮತ ಹಾಕುತ್ತಾರೆ ಎಂದು ಹೇಳಿಕೆ ಕೊಡಲು ಆ ಸಂಘಕ್ಕೆ ಅಕಾರ ಕೊಟ್ಟವರು ಯಾರು? ಹೀಗೆ ಹೇಳುವ ಅಧಿಕಾರವೂ ಅಧ್ಯಕ್ಷರಿಗಾಗಲೀ ಅಥವಾ ಬೇರೆ ಯಾರಿಗೂ ಕೂಡ ಇಲ್ಲ. ಸಂಘ ನೀಡಿರುವ ಹೇಳಿಕೆಗೂ ಸಮುದಾಯಕ್ಕೂ ಸಂಬಂಧವಿಲ್ಲ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
| 7 |
+
ಕೆಲವರು ತಮ್ಮ ಸ್ವಾರ್ಥಕ್ಕಾಗಿ ಅಥವಾ ಸರ್ಕಾರದಲ್ಲಿ ಸಿಗಬಹುದಾದ ಸ್ಥಾನಮಾನಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಪ್ರಬುದ್ಧ ಮತದಾರರು ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ತಮಗೆ ಯಾರು ಉತ್ತಮರೋ ಅವರನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು ಎಂದು ಕೆಲವರು ಪತ್ರಿಕೆ ಬಳಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
|
| 8 |
+
ಯಾವುದೇ ಒಂದು ಸಮುದಾಯ ರ್ನಿಷ್ಟ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳುವುದು ಸರಿಯಲ್ಲ. ನಮಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲವೂ ಒಂದೇ. ಎಲ್ಲಾ ಪಕ್ಷಗಳಲ್ಲೂ ನಮ್ಮ ಸಮುದಾಯದ ಮುಖಂಡರು ಗುರುತಿಸಿಕೊಂಡಿದ್ದಾರೆ. ಹೀಗೆ ತಮ್ಮ ಸ್ವಾರ್ಥ ಸಾಧನೆಗಾಗಿ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದು ಬೇಡ ಎಂದು ಅನೇಕರು ಮನವಿ ಮಾಡಿಕೊಂಡಿದ್ದಾರೆ.
|
eesanje/url_46_176_5.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ
|
| 2 |
+
ಬೆಂಗಳೂರು,ಏ.19-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಒಂದು ವಾರ ಬಾಕಿ ಇರುವಂತೆ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರು ಬೆವರು ಹರಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಕರುನಾಡಿಗೆ ಲಗ್ಗೆ ಇಡಲಿದ್ದಾರೆ.
|
| 3 |
+
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅವರು ನಾಳೆ ಬಹಿರಂಗ ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಮೋದಿಯವರು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಬಹಿರಂಗ ಪ್ರಚಾರವನ್ನು ನಡೆಸಲಿದ್ದಾರೆ.
|
| 4 |
+
ಪ್ರಧಾನಿಯವರು ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಾಳೆ ಚಿಕ್ಕಬಳ್ಳಾಪುರ (ಬೆಂಗಳೂರು-ಹೈದರಾಬಾದ್) ದ ರಾಷ್ಟ್ರೀಯ ಹೆದ್ದಾರಿ 44 ಬೈಪಾಸ್ನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಹೆದ್ದಾರಿಯ ಬೈಪಾಸ್ನ್ನು ನಾಳೆ ಸಂಜೆಯವರೆಗೆ ಬಂದ್ ಮಾಡಲಾಗಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.
|
| 5 |
+
ಹೈದರಾಬಾದ್ ಅಥವಾ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಚದಲಪುರ, ಚೊಕ್ಕಹಳ್ಳಿ ಮುಖಾಂತರ ಚಿಕ್ಕಬಳ್ಳಾಪುರ ನಗರದ ಒಳಗೆ ಪ್ರವೇಶಿಸಿ, ನಂತರ ಚಿಕ್ಕಬಳ್ಳಾಪುರ ಹೊರಗೆ ವಾಪಸಂದ್ರ ಬ್ರಿಡ್ಜ್ ಮೂಲಕ ರಾಷ್ಟ್ರೀಯ ಹೆದ್ದಾರಿ 44 ಅನ್ನು ಸಂಪರ್ಕಿಸಬಹುದು. ವಾಹನ ಸವಾರರು ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರ ಬಳಿ ಇರುವ ಬೈಪಾಸ್ ಮೂಲಕ ಸಂಚರಿಸುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
|
| 6 |
+
ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
|
| 7 |
+
ಲೋಕಸಭಾ ಚುನಾವಣೆಯ ಪ್ರಚಾರದ ದೃಷ್ಟಿಯಿಂದ ಬಿಜೆಪಿ ಕರ್ನಾಟಕದಲ್ಲಿ ಎಂಟು ಕ್ಲಸ್ಟರ್ಗಳನ್ನು ಮಾಡಿದೆ. ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ಹಳೆ ಮೈಸೂರು ಭಾಗ ಸೇರಿ ಒಟ್ಟು 8 ಕ್ಲಸ್ಟರ್ಗಳನ್ನು ಮಾಡಲಾಗಿದೆ. ಇದರಂತೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಧ್ಯಾಹ್ನ 3ಕ್ಕೆ ಸಮಾವೇಶದ ಬಳಿಕ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ಹಾಗೂ ತುಮಕೂರಿನಲ್ಲೂ ರೋಡ್ ಶೋ ನಡೆಸಲು ಮುಂದಾಗಿದೆ.
|
| 8 |
+
ಏ.26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷ��ಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
|
| 9 |
+
ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದರೆ ಮೇ 7ರಂದು ಚುನಾವಣೆ ನಡೆಯಲಿದೆ.
|
| 10 |
+
ಎರಡನೇ ಹಂತದ ಚುನಾವಣೆಯ ಅಸೂಚನೆ ಏಪ್ರಿಲ್ 12ರಂದು ಹೊರಬಿದ್ದಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು , ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
|