ಭವಾನಿ ರೇವಣ್ಣ ಕಾರು ಚಾಲಕ ಅಜಿತ್‌ ಮನೆ ಮೇಲೆ ಕಲ್ಲು ತೂರಿ, ಮನೆಯವರ ಮೇಲೆ ಹಲ್ಲೆ
ಹಾಸನ,ಜೂ.13-ಕೆ.ಆರ್‌.ನಗರ ಸಂತ್ರಸ್ತೆಯ ಅಪಹರಣ ಆರೋಪ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್‌ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಕಿಡಿಗೇಡಿಗಳು ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆಯಲ್ಲಿರುವ ಅಜಿತ್‌ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ರಾತ್ರಿ ಮನೆ ಮೇಲೆ ದಾಳಿ ಮಾಡಿದ ಮೂರ್ನಾಲ್ಕು ಮಂದಿ ಕಿಡಿಗೇಡಿಗಳು ಅಜಿತ್‌ ಅವರ ಅಕ್ಕನ ಮಗ ಮೋಹಿತ್‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಮೋಹಿತ್‌ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಹಾಗೂ ಮನೆ ಮೇಲೆ ದಾಳಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.