ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹಮದ್ ನೇಮಕ
ಬೆಂಗಳೂರು,ಜೂ.6-ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹದ್‌ ಅವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ.
ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ನಿಸಾರ್‌ ಅಹದ್‌ ಅವರನ್ನು ನೇಮಕ ಮಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇಂದು ಆದೇಶ ಹೊರಡಿಸಿದೆ. ಇಂದಿನಿಂದ ಮುಂದಿನ ಆದೇಶದವರೆಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬಹುದಾಗಿದೆ.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆ 1994ರ ಸೆಕ್ಷನ್‌ 3(1) ಮತ್ತು 4 (1)ರಡಿಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.