ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್‌ ನಿಧನ, ಸಿಎಂ ಸಂತಾಪ
ಬೆಂಗಳೂರು, ಮೇ 6-ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.
ಪಾಟೀಲರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರು. ಅವರ ನಿಧನದಿಂದ ಒಬ್ಬ ಜನಾನುರಾಗಿ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ.
ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. 1983ರಲ್ಲಿ ನಾಗರೆಡ್ಡಿಯವರು ಮತ್ತು ನಾನು ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದೆವು. ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ದುಡಿದ ನಾಗರೆಡ್ಡಿಯವರ ನಿಧನದಿಂದ ನಾಡು ಬಡವಾಗಿದೆ.ಮೃತರ ಆತ್ಮಕ್ಕೆ ಶಾಂತಿ…../t7RX8vAaX7
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.