ನಾಗಮಂಗಲ ಗಲಭೆ ವೇಳೆ ಮತಾಂಧರಿಂದ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಆರ್‌.ಅಶೋಕ್‌
      : . 
ಬೆಂಗಳೂರು,ಸೆ.16– ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಘಟನೆ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ ನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹದ್‌ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್‌ ಮಾಡಿರುವಂತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.…../
ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ.
ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನು ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಗೆ ವಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.