ಶಿವಕುಮಾರ ಸ್ವಾಮೀಜಿಗೆ ಪ್ರಧಾನಿ ಮೋದಿ ನಮನ
ನವದೆಹಲಿ,ಏ.1-ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ.
ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ.
ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡ ಬಾಷೆಯಲ್ಲಿ ಸಾಮಾಜಿಕ ಜಾಲ ತಾಣದ ಎಕ್ಸ್ ನಲ್ಲಿ ನವನಮನ ಸಲ್ಲಿಸಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು  ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ…