ಎನ್‍ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ
ಬೆಂಗಳೂರು,ಮಾ.10- ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
## 📌   1596     , .📌02     .📌   .📌 .@@@BhallaAjay26@dg_ncb@@@PIB_Karnataka…../1uUKzwHdKH
ಆಂಧ್ರ ಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಎನ್‍ಸಿಬಿ ಅಧಿಕಾರಿಗಳಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ವನಮಾರಪ್ಪನಹಳ್ಳಿ ಚೆಕ್‍ಪೋಸ್ಟ್ ಬಳಿ ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್‍ನನ್ನು ಬಂಧಿಸಿ ಎನ್‍ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.