ನಾಗಮಂಗಲದ ಗಲಭೆಗೆ ಸಿಎಂ, ಡಿಸಿಎಂ ಹೊಣೆ : ಸುನಿಲ್‌ ಕುಮಾರ್‌
,     :  
ಬೆಂಗಳೂರು,ಸೆ.12– ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟೋಲ್‌ ಬಾಂಬ್‌ ಸ್ಪೋಟಿಸಿ ತಲ್ವಾರ್‌ ಝಳಪಿಸಿದ್ದಾರೆ.
ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಸರ್ಕಾರವನ್ನು ಪ್ರಶ್ನೆಸಿದ್ದಾರೆ.
ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. ಇದರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಹೊರಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. 1/2@
ಮತ್ತೊಂದು ಟ್ವೀಟ್‌ ಮಾಡಿರುವ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ನಾಗಮಂಗಲ ಕೋಮುಗಲಭೆ; ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ.
ಪೆಟೋಲ್‌ ಬಾಂಬ್‌ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್‌ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ. ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.