ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ
ಬೆಂಗಳೂರು,ಫೆ.15- ನಮ್ಮ ಪಕ್ಷದ ಮತಗಳು ನಷ್ಟವಾಗಬಾರದು ಎಂಬ ಕಾರಣಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯನಾಯಕರ ಸಲಹೆ ಮೇರೆಗೆ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ನಮಗೆ ಗೆಲುವಿಗೆ ಅಗತ್ಯವಿರುವ ಮತಗಳ ಕೊರತೆಯಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು.
  : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
ನಮಗೆ ಸಂಖ್ಯಾಬಲದ ಕೊರತೆ ಇರುವುದು ನಿಜ. ಚುನಾವಣೆಯಲ್ಲಿ ಯಾವ ನಿರ್ಧಾರ ಆಗಲಿದೆಯೋ ಕಾದು ನೋಡೋಣ. ಬಿಜೆಪಿಯ ಹೆಚ್ಚುವರಿ ಮತಗಳು ನಮಗೆ ದೊರೆಯಲಿವೆ. ಹೀಗಾಗಿ ಬಿಜೆಪಿ-ಜೆಡಿಎಸ್ ವತಿಯಿಂದ 2ನೇ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಅವರು ತಿಳಿಸಿದರು.