ಸೆ.19 ರಂದು ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ
      19
ಬೆಂಗಳೂರು, ಸೆ.6-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದ 19ನೇ ಸಚಿವ ಸಂಪುಟ ಸಭೆ ಕಲ್ಬುರ್ಗಿಯಲ್ಲಿ ನಡೆಯಲಿದೆ.ಸೆ.19ರಂದು ಸಂಜೆ 4 ಗಂಟೆಗೆ ಕಲ್ಬುರ್ಗಿಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸಚಿವ ಸಂಪುಟಸಭೆ ನಡೆಯಲಿದೆ ಎಂದು ಸರ್ಕಾರದ ಸಚಿವಾಲಯ ತಿಳಿಸಿದೆ.
ಈ ಮೊದಲು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲೇ ಹೆಚ್ಚಿನ ಸಚಿವ ಸಂಪುಟ ಸಭೆಗಳನ್ನು ನಡೆಸಿದರು.ಈ ಹಿಂದೆ ದೇವರಾಜು ಅರಸು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಸಂಪ್ರಾದಾಯಕ್ಕೆ ನಾಂದಿ ಹಾಡಿದ್ದರು.
ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಪ್ರಾದೇಶಿಕ ಅಸಮಾನತೆ ನಿವಾರಣೆ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಬೆಂಗಳೂರಿನಿಂದ ಬೇರೆಡೆಗೆ ವಿಕೇಂದ್ರಿಕರಣಗೊಳಿಸು ಕುರಿತು ಹಲವು ಚರ್ಚೆಗಳು ನಡೆದಿವೆ. ಅದರ ಭಾಗವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಲಾಗಿದ್ದು, ವರ್ಷಕ್ಕೊಮೆ ವಿಧಾನಮಂಡಳ ಅಧಿವೇಶನ ನಡೆಸಲಾಗುತ್ತಿದೆ.
ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಆ ಭಾಗದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ದೊರಕಿಸಬೇಕು ಎಂಬ ಬೇಡಿಕೆಗೆ ಬಹಳ ವರ್ಷಗಳ ಬಳಿಕ ಮನ್ನಣೆ ದೊರೆತ್ತಿದೆ.