7 ದಿನಗಳ ಪ್ರವಾಸಕ್ಕೆ ಅಮೆರಿಕಾಗೆ ತೆರಳಿದ ಡಿಸಿಎಂ ಡಿಕೆಶಿ
         ,   
ಬೆಂಗಳೂರು,ಸೆ.8-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದಿನಿಂದ 7 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್‌ ತಮ ವಿದೇಶಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಮೆರಿಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್‌‍ ಅವರ ಆಹ್ವಾನದ ಮೇರೆಗೆ ಡಿ.ಕೆ.ಶಿವಕುಮಾರ್‌ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ.
ಕಮಲಾ ಹ್ಯಾರಿಸ್‌‍ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೂ ಆಹ್ವಾನಿತರಾಗಿದ್ದಾರೆ.
ಈ ಸಮಾವೇಶದಲ್ಲಿ ಚುನಾವಣೆ ವ್ಯವಸ್ಥೆ ಮತ್ತು ರಾಜಕೀಯದ ಕುರಿತು ಚರ್ಚೆಗಳಾಗಲಿವೆ. ಈ ವೇಳೆ ಡಿ.ಕೆ.ಶಿವಕುಮಾರ್‌ ಬರಾಕ್‌ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಚಿಕಾಗೋ ಪ್ರವಾಸ ಕೈಗೊಂಡು ಡಿ.ಕೆ.ಶಿವಕುಮಾರ್‌ ಬಂಡವಾಳ ಆಕರ್ಷಣೆ ಬಗ್ಗೆ ಕೈಗಾರಿಕೋದ್ಯಮಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ.