ಕುಮಾರಸ್ವಾಮಿಯವರನ್ನು ನಿಂದಿಸುವುದು ಕಾಂಗ್ರೆಸ್‍ಗೆ ಅಂಟಿದ ಬೇನೆ : ಜೆಡಿಎಸ್
ಬೆಂಗಳೂರು, ಡಿ.24- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಿಂದನೆ ಮಾಡುವುದೇ ಕಾಂಗ್ರೆಸ್‍ಗೆ ಅಂಟಿದ ಬೇನೆ ಎಂದು ಜೆಡಿಎಸ್ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ ಎಂದು ಆರೋಪಿಸಿದೆ.
ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ. ಅದರ , ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಟೀಕಾಪ್ರಹಾರ ನಡೆಸಿದೆ. ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.
ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ
ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ ಎಂದು ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಜೆಡಿಎಸ್ ಆರೋಪಿಸಿದೆ.