ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ, ನ.1- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರುನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ.
ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ
ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಪೋರ್ತಿಯಾಗಲಿ ಎಂದು ಹಾರೈಸಿದ್ದಾರೆ.
ಕನ್ನಡಿಗರು ಫಿದಾ:ಕರ್ನಾಟಕ ರಚನೆಯಾಗಿ 50ನೆ ವರ್ಷದ ಸುವರ್ಣ ಮಹೋತ್ಸವಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲೇ ಬಂದಿರುವ ಈ ಬಾರಿಯ ಕನ್ನಡ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿರುವುದಕ್ಕೆ ನಾಡಿನ ಜನ ಫಿದಾ ಆಗಿದ್ದಾರೆ.