ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!
ಬೆಂಗಳೂರು, ಆ.21-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಮುಂದಿನ ತಿಂಗಳ ಮೊದಲ ವಾರದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಲಿದ್ದಾರೆ.ವಿಜಯನಗರದ ಉಪ ವಿಭಾಗದ ಪೊಲೀಸರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. ಅಲ್ಲದೆ, ಹೈದರಾಬಾದ್ಗೆ ಕಳುಹಿ ಸಿದ್ದ ವಸ್ತುಗಳಲ್ಲಿ ಶೇ.70ರಷ್ಟು ವರದಿಗಳು ಬಂದಿವೆ. ಉಳಿದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಈಗಾಗಲೇ ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿ ದ್ದಾರೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.