ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದವರಿಗೆ ತಲಾ 5 ಲಕ್ಷ ರೂ ಘೋಷಿಸಿದ ಸಿಎಂ ಸಿದ್ದು
ಬೆಂಗಳೂರು,ಜು.31-ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರು ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್‌‍ ಅಽ ಕಾರಿಗಳು, ಎನ್‌‍.ಡಿ.ರ್ಆ.ಎ್‌‍ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್‌ ಲಾಡ್‌ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು…
ಸಂತ್ರಸ್ತರ ಪ್ರಾಣ ರಕ್ಷಣೆ ನಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ.