ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ
ಬೆಂಗಳೂರು, ಜು.3– ಸ್ಥಳ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಹಾಲಿ ಆಯುಕ್ತರಾಗಿದ್ದ ಐಎಎಸ್‌‍ ಅಧಿಕಾರಿ ಸೂರಳ್ಕರ್‌ ವಿಕಾಸ್‌‍ ಕಿಶೋರ್‌ ಅವರನ್ನು ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದೆ.
ಈ ಹಿಂದೆ ಕೂಡ ಹೇಮಂತ್‌ ಎಂ.ನಿಂಬಾಳ್ಕರ್‌ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದರು. ಈ ವೇಳೆ ಇಲಾಖೆಯ ಹಿರಿಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅವರಿಗೆ ಶುಭ ಹಾರೈಸಿದರು.