ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಸಂದೇಶ
ನವದೆಹಲಿ,ಏ.26-ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ…
ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಟ್ವೀಟ್‌ ಮಾಡಿದ್ದು, ಲೋಕಸಭೆ ಚುನಾವಣೆಯ ಎರಡನೇ ಹಂತ ಇಂದು ಆರಂಭವಾಗುತ್ತಿದ್ದು, ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಪೂರ್ಣ ಉತ್ಸಾಹದಿಂದ ಚಲಾಯಿಸಲು ಮತ್ತು ಪ್ರಜಾಪ್ರಭುತ್ವವನ್ನು ಮತದಾನದ ಮೂಲಕ ಎತ್ತಿ ಹಿಡಿಯಲು ನಾನು ನಮ್ಮ ನಾಗರಿಕರಲ್ಲಿ, ವಿಶೇಷವಾಗಿ ಯುವಕರಲ್ಲಿ ಮನವಿ ಮಾಡುತ್ತೇನೆ.
ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುವ ಮತ್ತು ವಿಕಸಿತ ಭಾರತ ಮಾಡುವ ನಮ್ಮ ಕನಸಿಗೆ ವೇಗ ನೀಡುವ ಸರ್ಕಾರವನ್ನು ಆಯ್ಕೆ ಮಾಡಲು ಎಲ್ಲಾ ಮತದಾರರಿಗೆ ಇದು ಸುವರ್ಣಾವಕಾಶವಾಗಿದೆ ಎಂದು ಹೇಳಿದ್ದಾರೆ.