ರೇವ್‍ಪಾರ್ಟಿ ಮೇಲೆ ದಾಳಿ, ಡ್ರಗ್ಸ್ ಸೇವಿಸಿದ್ದ 80 ಮಂದಿ ಬಂಧನ
ಥಾಣೆ,ಡಿ.31- ಮಹಾರಾಷ್ಟ್ರದ ಥಾಣೆಯಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಸುಮಾರು 80 ಮಂದಿಯನ್ನು ಬಂಧಿಸಿದ್ದಾರೆ. ಪಾರ್ಟಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಸೇವಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
ರೇವ್ ಪಾರ್ಟಿಯಿಂದ ಎಲ್‍ಎಸ್‍ಡಿ, ಚರಸ್, ಎಕ್ಸ್‍ಟಾಸಿ ಮಾತ್ರೆಗಳು ಮತ್ತು ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಟಾಗ್ರಾಮ್‍ನಲ್ಲಿ ರೇವ್ ಪಾರ್ಟಿಗಾಗಿ ನೂರಾರು ಯುವಕರಿಗೆ ಆಹ್ವಾನವನ್ನು ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ. ಪಾರ್ಟಿಯ ಇಬ್ಬರು ಸಂಘಟಕರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.