ಕಾಂಗ್ರೆಸ್ ಸೇರಿದ ಕಾರ್ಯಕರ್ತರು, ಜೆಡಿಎಸ್ ಪ್ರತಿಕ್ರಿಯೆ ಏನು..?
ಬೆಂಗಳೂರು,ಏ.12-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಹಾಗೂ ಹತಾಶೆಯಿಂದ ಯುವಕಾಂಗ್ರೆಸ್ ಕಾರ್ಯಕರ್ತರನ್ನೇ ಜೆಡಿಎಸ್ ಕಾರ್ಯಕರ್ತರೆಂದು ಬಿಂಬಿಸಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಯುವಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಲು ಹಾಕಿ ಅವರನ್ನು ಜೆಡಿಎಸ್ ಕಾರ್ಯಕರ್ತರೆಂದು ಬಿಂಬಿಸಿದೆ. ಅವರೆಲ್ಲಾ ಕಾಂಗ್ರೆಸ್ ಸೇರಿದ್ದಾರೆಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದೆ.
ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ@DKShivakumarಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು  ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ  ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.ಸೋಲಿನ ಭೀತಿ, ಹತಾಶೆ ಎಂತೆಂತಹ…../P8Zl1AJS00
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರಿಗೆ ಸೋಲಿನ ಭೀತಿ ಎಷ್ಟರ ಮಟ್ಟಿಗೆ ಕಾಡುತ್ತಿದೆ ಎಂಬುದಕ್ಕೆ ಇದು ನಿದರ್ಶನ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‍ಗಳನ್ನು ಮಾಡಿಸುತ್ತದೆ ಎಂಬುದಕ್ಕೆ ಇದು ಜೀವಂತ ಸಾಕ್ಷಿ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 400ಕ್ಕೂ ಹೆಚ್ಚು ಜನರು ಇಂದು ಪಕ್ಷ ಸೇರ್ಪಡೆಗೊಂಡರು. ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದೆ.../Zw2PQ3XuTQ