ಆ.15ಕ್ಕೆ ಕೃಷ್ಣಂ ಪ್ರಣಯ ಸಖಿ ಚಿತ್ರ ತೆರೆಗೆ
ಬಹು ನಿರೀಕ್ಷಿತ ಚಿತ್ರ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಇತ್ತೀಚಿಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಆಗಸ್ಟ್ 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದ್ದು,ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಇತ್ತೀಚೆಗೆ ಶಶಿಕುಮಾರ್‌ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ನಮ್ಮ ಚಿತ್ರದಲ್ಲಿ ಅರ್ಜುನ್‌ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿದೆ. ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿ ಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಚಿನ್ನಮ್ಮ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.
ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್‌ ಅವರು ಬರೆದಿರುವ ಚಿನ್ನಮ್ಮ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್‌ ಜನ್ಯ ಅವರ ಸಂಗೀತ, ಕೈಲಾಶ್‌ ರ್ಖೇ ಹಾಗೂ ಇಂದು ನಾಗರಾಜ್‌ ಅವರ ಗಾಯನ ಮತ್ತು ಶೇಖರ್‌ ಮಾಸ್ಟರ್‌ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್‌ ರಾಮಪ್ರಸಾದ್‌ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್‌ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ ಎಂದರು ಗೋಲ್ಡನ್‌ ಸ್ಟಾರ್‌ ಗಣೇಶ್‌.
ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಪ್ರಶಾಂತ್‌ ಜಿ. ರುದ್ರಪ್ಪ ತಿಳಿಸಿದರು.ಬಹು ನಿರೀಕ್ಷಿತ ಕೃಷ್ಣಂ ಪ್ರಣಯ ಸಖಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ 41 ನೇ ಚಿತ್ರ. ಗಣೇಶ್‌ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್‌ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್‌, ಶ್ರುತಿ, ಭಾವನ, ಅಶೋಕ್‌, ರಾಮಕೃಷ್ಣ, ಶಿವಧ್ವಜ್‌‍, ರಘುರಾಮ್‌‍, ಮಾನಸಿ ಸುಧೀರ್‌, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.