ಬೆಂಗಳೂರಲ್ಲಿ ಪಿಜಿಗಳಿಗೆ ಪರವಾನಗಿ ನೀಡಲು ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ
ಬೆಂಗಳೂರು :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಸೆಕ್ಷನ್ 305ರ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ “ಪೇಯಿಂಗ್ ಗೆಸ್ಟ್” ()ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ “ಪೇಯಿಂಗ್ ಗೆಸ್ಟ್’ ()ಗಳಿಗೆ ‘ಪರವಾನಿಗೆ ಮಂಜೂರಾತಿ’/’ನವೀಕರಣ’ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
ವಲಯ ಆರೊಗ್ಯಾಧಿಕಾರಿಯವರು, ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ-ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಪ್ರತೀ ಆರು ತಿಂಗಳಿಗೊಮ್ಮೆ ಖಚಿತಪಡಿಸಿಕೊಳ್ಳತಕ್ಕದ್ದು.
ಎಲ್ಲಾ ವಲಯ ಆಯುಕ್ತರುಗಳು ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವುದರ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಉದ್ದಿಮೆದಾರರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆ ಸೆಕ್ಷನ್ 307 & 308ರಂತೆ ಅಗತ್ಯ ಕ್ರಮ ಜರುಗಿಸಲು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಾರ್ಗಸೂಚಿ ಆದೇಶದ ಪ್ರತಿಯನ್ನು ಲಗತ್ತಿಸಿದೆ.