ನಾಳೆ ತುಮಕೂರಿನಲ್ಲಿ ಜನಸ್ಪಂದನ ಕಾರ್ಯಕ್ರಮ
ತುಮಕೂರು,ಜು.8– ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ ಸಂಖ್ಯೆ 25, 26 ಮತ್ತು 27ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಜುಲೈ .9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗೆ 8.30ಕ್ಕೆ ಚಂದ್ರಶೇಖರ್‌ ಆಜಾದ್‌‍ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ತಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.