ಹೊಸಕೋಟೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯನ ಬರ್ಬರ ಕೊಲೆ
ಹೊಸಕೋಟೆ,ಜು.8-ಹಳೆ ದ್ವೇಷದ ಹಿನ್ನಲೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಬೈಲ್‌ನರಸಾಪುರ ಗ್ರಾಮದಲ್ಲಿ ನಡೆದಿದೆ.ಅಮೀರ್‌ಖಾನ್‌ (45) ಕೊಲೆಯಾದ ವ್ಯಕ್ತಿ.
ಗ್ರಾಮ ಪಂಚಾಯಿತಿ ಕಚೇರಿ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಅದೇ ಗ್ರಾಮದ ಮೆಹಬೂಬ್‌ ಇತರರೊಂದಿಗೆ ಬಂದು ದಾಳಿ ಮಾಡಿ ಲಾಂಗ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಮೀರ್‌ಖಾನ್‌ನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.ಹಳೆ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ನಂದಗುಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.