ಸ್ಮಶಾನದ ಕಾಂಪೌಂಡ್‌ ಒಡೆದು ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ : ಹಿಂದೂಪರ ಸಂಘಟನೆಗಳ ಆಕ್ರೋಶ
         
ಹುಬ್ಬಳ್ಳಿ,ಸೆ.17-ಸ್ಮಶಾನದ ಕಾಂಪೌಂಡ್‌ ಒಡೆದು ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಿರುವ ಮಂಟೂರು ರಸ್ತೆಯ ಸತ್ಯಹರಿಶ್ಚಂದ್ರ ಕಾಲೋನಿಯಲ್ಲಿ ನಡೆದಿದೆ.ಇದು ಇಲ್ಲಿ ದಲಿತ ಮತ್ತು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ ಸಶಾನದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಔಚಿತ್ಯವೇನಿತ್ತು ಇದು ಸಮಾಜದ ಅಣುಕ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ಮಂಟೂರು ರಸ್ತೆಯಲ್ಲಿ ಸತ್ಯಹರಿಶ್ಚಂದ್ರ ಕಾಲೋನಿಯ ಪಕ್ಕದಲ್ಲಿ ಸರ್ವೆ ನಂಬರ್‌ 212ರಲ್ಲಿ ಸುಮಾರು ಏಂಟು ಎಕರೆಯಲ್ಲಿ ಹಿಂದೂಗಳ ರುದ್ರಭೂಮಿಯಿದೆ. ಸ್ಮಶಾನದ ಕಾಂಪೌಂಡ್‌ ಗೋಡೆ ಒಡೆದು ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡಲಾಗಿದೆ.
ಕಾಮಗಾರಿ ಸ್ಥಳಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಭೇಟಿ ನೀಡಿ ಮಾತನಾಡಿ, ಅಬ್ಬಯ್ಯ ಅವರು ದಲಿತರ ವೋಟ್‌ ಮೇಲೆ ಗೆದ್ದಿದ್ದಾರೆ. ಆದರೆ ಈಗ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವತ್ತು ಇಂದಿರಾ ಕ್ಯಾಂಟೀನ್‌, ನಾಳೆ ಅಬ್ಬಯ್ಯ ಕ್ಯಾಂಟೀನ್‌ ಕಟ್ಟುತ್ತಾರೆ. ಹಿಂದೂ ರುದ್ರಭೂಮಿಯಲ್ಲಿ ಇಂದಿರಾ ಕ್ಯಾಂಟೀನ್‌ ಬೇಡ. ಕೂಡಲೇ ಇಂದಿರಾ ಕ್ಯಾಂಟೀನ್‌ ಕಟ್ಟಡ ಸ್ಥಳಾಂತರ ಮಾಡಿ. ಇಲ್ಲದಿದ್ದರೆ ಉಗ್ರ ಹೋರಾಟ ಮೂಲಕ ನಾವೇ ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ