ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-06-2024)
ನಿತ್ಯ ನೀತಿ :ಮರದ ಕೊಂಬೆ ಮೇಲೆ ಕುಳಿತ ಹಕ್ಕಿಯು ತನ್ನ ರೆಕ್ಕೆಗಳನ್ನು ನಂಬಿದೆ, ಆದ್ದರಿಂದ ಕೊಂಬೆ ಮುರಿದು ಬಿದ್ದರೂ ಸಹ ಅದಕ್ಕೇನೂ ಆಗದು.
ಪಂಚಾಂಗ : ಮಂಗಳವಾರ , 18-06-2024ಕ್ರೋನಾಮ ಸಂವತ್ಸರ / ಉತ್ತರಾಯಣ / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಸ್ವಾತಿ / ಯೋಗ: ಶಿವ / ಕರಣ: ಬವ
ಸೂರ್ಯೋದಯ – ಬೆ.05.54ಸೂರ್ಯಾಸ್ತ – 06.48ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 12.00-1.30
ರಾಶಿಭವಿಷ್ಯ:ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.ವೃಷಭ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಯಂತ್ರೋಪಕಣ ಗಳನ್ನು ದುರಸ್ತಿ ಮಾಡುವ ವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.ಕನ್ಯಾ: ಉನ್ನತ ಅಽಕಾರಿ ಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ತುಲಾ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಮಕರ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.ಮೀನ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.