ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(14-06-2024)
ನಿತ್ಯ ನೀತಿ :ಮುಂದೊಂದು ದಿನ ನಮ ಜೀವನದಲ್ಲಿ ವಿಶೇಷ ಘಳಿಗೆ ಬರಲಿದೆ ಎಂದು ಯೋಚಿಸುತ್ತಾ ಇರಬಾರದು. ಈಗಿನ ಕ್ಷಣಗಳನ್ನೇ ವಿಶೇಷವನ್ನಾಗಿಸುವುದು ಹೇಗೆ ಎಂದು ಯೋಚಿಸಿ ಕಾರ್ಯಪ್ರವೃತ್ತರಾಗಬೇಕು.
ಪಂಚಾಂಗ : ಶುಕ್ರವಾರ, 14-06-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ /ತಿಥಿ: ಅಷ್ಟಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸಿದ್ಧಿ / ಕರಣ: ವಿಷ್ಟಿಸೂರ್ಯೋದಯ – ಬೆ.05.54ಸೂರ್ಯಾಸ್ತ – 06.47ರಾಹುಕಾಲ – 10.30-12.00ಯಮಗಂಡ ಕಾಲ – 3.00-4.30ಗುಳಿಕ ಕಾಲ – 7.30-9.00
ರಾಶಿಭವಿಷ್ಯ :ಮೇಷ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.ವೃಷಭ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕನ್ಯಾ:ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.ವೃಶ್ಚಿಕ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.