ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(03-06-2024)
ನಿತ್ಯ ನೀತಿ :ಮಾತು ವೈರಿಗಳ ಮುಂದೆ ಗತ್ತಿನಂತಿರಬೇಕು. ಹೆದರಿಸುವವರ ಮುಂದೆ ಕತ್ತಿಯಂತಿರಬೇಕು. ಆತೀಯರ ಮುಂದೆ ಮುತ್ತಿನಂತಿರಬೇಕು. ಹಿರಿಯರ ಮುಂದೆ ಹತ್ತಿಯಂತಿರಬೇಕು.
ಪಂಚಾಂಗ : ಸೋಮವಾರ , 03-06-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅಶ್ವಿನಿ / ಯೋಗ: ಸೌಭಾಗ್ಯ / ಕರಣ: ಕೌಲವಸೂರ್ಯೋದಯ – ಬೆ.05.52ಸೂರ್ಯಾಸ್ತ – 06.44ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00
ರಾಶಿಭವಿಷ್ಯ :ಮೇಷ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.ವೃಷಭ: ನಿಮ್ಮ ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ಹೆಚ್ಚಾಗುವುದು. ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮವಾಗಿರುವುದು.ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ.
ಕಟಕ: ರಕ್ತ ಸಂಬಂಧಿಗಳ ಕಾಟ ಹೆಚ್ಚಾಗುತ್ತದೆ.ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.ಕನ್ಯಾ: ಉದ್ಯೋಗ ಅರಸುತ್ತಿ ರುವವರಿಗೆ ಶುಭ ಸೂಚನೆ.
ತುಲಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ಬಹಳ ತೊಂದರೆ ಎದುರಿಸಬೇಕಾಗುತ್ತದೆ.ವೃಶ್ಚಿಕ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ.ಧನುಸ್ಸು: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮಕರ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.ಕುಂಭ: ವೇತನ ಹೆಚ್ಚಳವಾಗುವ ಅವಕಾಶಗಳಿವೆ.ಮೀನ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.