ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-05-2024)
ನಿತ್ಯ ನೀತಿ :ಪ್ರತಿಯೊಂದು ಗೆಳೆತನದ ಹಿಂದೆಯೂ ಸ್ವಲ್ಪವಾದರೂ ಸ್ವ ಹಿತಾಸಕ್ತಿ ಇದ್ದೇ ಇದೆ. ಅದಿಲ್ಲದ ಗೆಳೆತನವೇ ಇಲ್ಲ. ಇದು ಕಟು ಸತ್ಯ.
ಪಂಚಾಂಗ : ಶನಿವಾರ, 18-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಹರ್ಷಣ / ಕರಣ: ವಣಿಜ್‌ಸೂರ್ಯೋದಯ : ಬೆ.05.54ಸೂರ್ಯಾಸ್ತ : 06.39ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30
ರಾಶಿಭವಿಷ್ಯ :ಮೇಷ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.ವೃಷಭ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.ಸಿಂಹ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.ಕನ್ಯಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.ವೃಶ್ಚಿಕ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.ಧನುಸ್ಸು: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮಕರ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.ಕುಂಭ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.ಮೀನ: ರಿಯಲ್‌ ಎಸ್ಟೇಟ್‌ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
