ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-05-2024)
ನಿತ್ಯ ನೀತಿ :ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ.
ಪಂಚಾಂಗ ಶುಕ್ರವಾರ 03-05-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಶತಭಿಷಾ / ಯೋಗ: ಬ್ರಹ್ಮ / ಕರಣ: ವಣಿಜ್
ಸೂರ್ಯೋದಯ : ಬೆ.05.58ಸೂರ್ಯಾಸ್ತ : 06.35ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ಸಂದಿಗ್ಧ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿರುವುದು ಸೂಕ್ತ.ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.ಮಿಥುನ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಕಟಕ: ಸಣ್ಣ ಮಾತಿನಿಂದ ಜಗಳ ಪ್ರಾರಂಭವಾಗಲಿದೆ. ಎಚ್ಚರಿಕೆಯಿಂದಿರಿ.ಸಿಂಹ: ಕಣ್ಣಿನ ತೊಂದರೆ ಇರುವುದರಿಂದ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಿ.ಕನ್ಯಾ: ಆರೋಗ್ಯ ಸಮಸ್ಯೆ ಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದು ಕೊಳ್ಳುವುದು ಕಷ್ಟವಾಗಲಿದೆ.
ತುಲಾ: ಮಾತಿನಿಂದ ಕಾರ್ಯ ಸಾಸುವ ನಿಮ್ಮ ಗುಣದಿಂದ ಅನುಕೂಲಕರ ವಾತಾವರಣ ನಿರ್ಮಾಣವಾಗುವುದು.ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.ಧನುಸ್ಸು: ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ.
ಮಕರ: ತಾಳ್ಮೆಯಿಂದ ಕಾರ್ಯನಿರ್ವಹಿಸಿದಲ್ಲಿ ಯಶಸ್ಸು ಖಂಡಿತವಾಗಿಯೂ ನಿಮ್ಮದಾಗಲಿದೆ.ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಮೀನ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.