ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(02-04-2024)
ನಿತ್ಯ ನೀತಿ :ದುರಾಸೆ ಮನುಷ್ಯನ ಬದುಕಿನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಯಾವತ್ತೂ ಯಶಸ್ಸು ಸಾಧಿಸಲು ಸಾಧ್ಯವಿಲ್ಲ.
ಪಂಚಾಂಗ : ಗುರುವಾರ, 02-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷತಿಥಿ: ನವಮಿ / ನಕ್ಷತ್ರ: ಧನಿಷ್ಠಾ / ಯೋಗ: ಶುಕ್ಲ / ಕರಣ: ತೈತಿಲ
ಸೂರ್ಯೋದಯ : ಬೆ.05.58ಸೂರ್ಯಾಸ್ತ : 06.35ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ : 9.00-10.30
ರಾಶಿಭವಿಷ್ಯ :ಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಮಿಥುನ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ಕಟಕ: ಶಾಂತ ಮನಸ್ಸಿನಿಂದ ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಪ್ರಯತ್ನಿಸಿ.ಸಿಂಹ: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು.ಕನ್ಯಾ:ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ವೈವಾಹಿಕ ಜೀವನದ ಬಗ್ಗೆ ಗಮನ ಹರಿಸಿ.
ತುಲಾ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.ವೃಶ್ಚಿಕ: ಸರ್ಕಾರಿ ಉದ್ಯೋಗಿಗಳಿಗೆ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ.ಧನುಸ್ಸು: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ರೀತಿಯಲ್ಲಿ ಪ್ರಯತ್ನ ಮಾಡುವಿರಿ.
ಮಕರ: ಸಣ್ಣ ವ್ಯಾಪಾರಸ್ಥರಿಗೆ ಅನುಕೂಲಕರ ದಿನ. ಲಾಭ ಗಳಿಸಲು ಹಲವು ಅವಕಾಶಗಳು ಒದಗಲಿವೆ.ಕುಂಭ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.ಮೀನ: ಮನೆಯಲ್ಲಿ ಮಂಗಳಕಾರ್ಯಗಳು ನಡೆಯುವ ಸೂಚನೆಗಳು ಕಾಣುತ್ತವೆ.