ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-05-2024)
ನಿತ್ಯ ನೀತಿ :ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ. ನಿನ್ನ ಕಾಯಕ ನಿರಂತರವಾಗಿರಲಿ.
ಪಂಚಾಂಗ : ಶನಿವಾರ, 04-05-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಐಂದ್ರ / ಕರಣ: ಭವ
ಸೂರ್ಯೋದಯ : ಬೆ.05.58ಸೂರ್ಯಾಸ್ತ : 06.35ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30
ರಾಶಿಭವಿಷ್ಯ :ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.ಕನ್ಯಾ:ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.