ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2024)
ನಿತ್ಯ ನೀತಿ :ಮಾತು ಸಂಬಂಧವನ್ನು ಕೂಡಿಸುವಂತೆ ಇರಬೇಕೆ ಹೊರತು ಸಂಬಂಧವನ್ನು ಹಾಳು ಮಾಡುವಂತೆ ಅಲ್ಲ.
ಪಂಚಾಂಗ : 19-04-2024, ಶುಕ್ರವಾರಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಮಘಾ / ಯೋಗ: ವೃದ್ಧಿ / ಕರಣ: ವಣಿಜ್ಸೂರ್ಯೋದಯ : ಬೆ.06.05ಸೂರ್ಯಾಸ್ತ : 06.33ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿಭವಿಷ್ಯ :ಮೇಷ: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.ವೃಷಭ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಕಟಕ: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಮಹಿಳೆಯರಿಗೆ ಶುಭ ದಿನ.ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.ಧನುಸ್ಸು: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.ಕುಂಭ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.ಮೀನ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಯಾಗುವುದು. ವ್ಯವಹಾರದಲ್ಲಿ ಎಚ್ಚರ ವಹಿಸಿ.