ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(07-04-2024)
ನಿತ್ಯ ನೀತಿ :ಮತ್ತೊಬ್ಬರ ಸಹಾಯ ಪಡೆದು ಎದ್ದೇಳುವಷ್ಟು ಮಟ್ಟಿಗೆ ಯಾವ ಸಂಬಂಧದಲ್ಲಿಯೂ ಆಳಕ್ಕೆ ಕುಸಿದು ಬೀಳಬೇಡಿ.
ಪಂಚಾಂಗ : ಭಾನುವಾರ, 07-04-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಬ್ರಹ್ಮ / ಕರಣ: ವಿಷ್ಕ್ರಿ
ಸೂರ್ಯೋದಯ : 22.06.12ಸೂರ್ಯಾಸ್ತ : 06.32ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿಭವಿಷ್ಯ :ಮೇಷ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.ವೃಷಭ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ಕಟಕ: ಕುಟುಂಬದ ಅಗತ್ಯಗಳನ್ನು ಪೂರೈಸುವುದರಲ್ಲೇ ಹೆಚ್ಚು ಸಮಯ ಕಳೆಯುವಿರಿ.ಸಿಂಹ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.ಕನ್ಯಾ: ಮಹತ್ವದ ಕೆಲಸ ಗಳಿಗೆ ಕೈ ಹಾಕುವ ಮುನ್ನ ಮನೆಯವರೊಂದಿಗೆ ದೀರ್ಘ ಕಾಲದ ಸಮಾಲೋಚನೆ ನಡೆಸುವುದು ಒಳಿತು.
ತುಲಾ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.ವೃಶ್ಚಿಕ: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತ ವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.ಧನುಸ್ಸು: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.
ಮಕರ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.ಕುಂಭ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ