ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-04-2024)
ನಿತ್ಯ ನೀತಿ :ವಿಗ್ರಹಗಳಲ್ಲಿ ದೇವರು ಇರಲ್ಲ. ನಿಮ್ಮ ಭಾವನೆಗಳೇ ನಿಮ್ಮ ಪರಮಾತ್ಮ. ಆತ್ಮವೇ ನಿಮ್ಮ ದೇವಾಲಯ.
ಪಂಚಾಂಗ : ಗುರುವಾರ, 04-04-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಶ್ರವಣ / ಯೋಗ: ಸಿದ್ಧ / ಕರಣ: ಭವ
ಸೂರ್ಯೋದಯ : ಬೆ.06.14ಸೂರ್ಯಾಸ್ತ : 06.32ರಾಹುಕಾಲ : 1.30-3.00ಯಮಗಂಡ ಕಾಲ : 6.00-7.30ಗುಳಿಕ ಕಾಲ : 9.00-10.30
ರಾಶಿಭವಿಷ್ಯ :ಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.ಮಿಥುನ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕಟಕ: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಕ ಧನವ್ಯಯವಾಗುವ ಸಂಭವವಿದೆ.ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.ಕನ್ಯಾ:ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಸೂಕ್ತ.
ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.ವೃಶ್ಚಿಕ: ಆರೋಗ್ಯದ ಬಗ್ಗೆ ಗಮನ ಹರಿಸಿ.ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಕರ: ನಿರೀಕ್ಷಿಸಿದಂತೆ ಅಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.ಕುಂಭ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.ಮೀನ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.