ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-04-2024)
ನಿತ್ಯ ನೀತಿ :ದುರಾಸೆ ಮನುಷ್ಯನ ಬದುಕಿನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಯಶಸ್ಸು ಸಾಸಲು ಸಾಧ್ಯವಿಲ್ಲ.
ಪಂಚಾಂಗ : ಬುಧವಾರ, 03-04-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಉತ್ತರಾಷಾಢ / ಯೋಗ: ಶಿವ / ಕರಣ: ತೈತಿಲ-ವಣಿಜ್
ಸೂರ್ಯೋದಯ : ಬೆ.06.14ಸೂರ್ಯಾಸ್ತ : 06.31ರಾಹುಕಾಲ : 12.00-1.30ಯಮಗಂಡ ಕಾಲ : 7.30-9.00ಗುಳಿಕ ಕಾಲ : 10.30-12.00
ರಾಶಿಭವಿಷ್ಯ :ಮೇಷ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.ಮಿಥುನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕನ್ಯಾ:ಉನ್ನತ ಅಧಿಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕುಂಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.