ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-03-2024)
ನಿತ್ಯ ನೀತಿ :ಬದುಕಿನ ಯಶಸ್ಸಿನ ಸಂತೋಷ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ.
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ವಿಶಾಖಾ / ಯೋಗ: ವಜ್ರ / ಕರಣ: ಭವಸೂರ್ಯೋದಯ : ಬೆ.06.18ಸೂರ್ಯಾಸ್ತ : 06.31ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿಭವಿಷ್ಯಮೇಷ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ವೃಷಭ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ.ಮಿಥುನ:ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಭಾವನೆಗಳಿಗೆ ಪೆಟ್ಟು ಬೀಳಲಿದೆ.
ಕಟಕ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ.ವೃಶ್ಚಿಕ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ಧನುಸ್ಸು: ಭೂ ವ್ಯವಹಾರ ದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.
ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.ಕುಂಭ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.ಮೀನ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.