ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-03-2024)
ನಿತ್ಯ ನೀತಿ :ಜೀವನದಲ್ಲಿ ಎಲ್ಲ ರೀತಿಯ ಪಾಠವನ್ನು ಕಲಿಯುತ್ತೇನೆ. ಆದರೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಅನ್ನೋದನ್ನು ಕೊನೆವರೆಗೂ ಕಲಿಯುವುದಿಲ್ಲ.
ಪಂಚಾಂಗ : ಶುಕ್ರವಾರ, 01-03-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷತಿಥಿ: ಷಷ್ಠಿ / ನಕ್ಷತ್ರ: ಸ್ವಾತಿ / ಯೋಗ: ಧ್ರುವ / ಕರಣ: ಗರಜೆ
ಸೂರ್ಯೋದಯ : ಬೆ.06.35ಸೂರ್ಯಾಸ್ತ : 06.29ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ಇಂದಿನ ರಾಶಿಭವಿಷ್ಯ :ಮೇಷ: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.ವೃಷಭ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆ ವಹಿಸಿ.ಮಿಥುನ: ವಾಹನ ಚಾಲಕರು ಅತ್ಯಂತ ಎಚ್ಚರಿಕೆ ಯಿಂದ ಇರಬೇಕಾದ ದಿನ.
ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.ಸಿಂಹ: ನೀವು ಯೋಚಿಸಿ ದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.ಕನ್ಯಾ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.ಧನುಸ್ಸು: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಕರ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.ಕುಂಭ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.ಮೀನ: ಅತಿಯಾದ ಮಾತಿನಿಂದ ಉತ್ತಮ ಅವಕಾಶವನ್ನು ಕಳೆದುಕೊಳ್ಳಬೇಕಾದಿತು.