ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-03-2024)
ನಿತ್ಯ ನೀತಿ :ತನ್ನ ಹಲ್ಲಲ್ಲಿ ವಿಷವಿಲ್ಲದಿದ್ದರೂ ಹಾವು ತನ್ನ ಆತ್ಮರಕ್ಷಣೆಗಾಗಿ ಬುಸುಗುಡಲೇಬೇಕು.
ಪಂಚಾಂಗ ಭಾನುವಾರ 03-03-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅನುರಾಧಾ / ಯೋಗ: ಹರ್ಷಣ /ಕರಣ: ಬಾಲವ
ಸೂರ್ಯೋದಯ : ಬೆ.06.34ಸೂರ್ಯಾಸ್ತ : 06.29ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ.ವೃಷಭ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಕಟಕ: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.ಸಿಂಹ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.ಧನುಸ್ಸು: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.ಮೀನ: ಒಡಹುಟ್ಟಿದವರಿಂದ ದೂರವಾಗಿದ್ದರೆ ಮಾತನಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿ.