ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2024)
ನಿತ್ಯ ನೀತಿ :ಎಲ್ಲರನ್ನೂ ಪ್ರೀತಿಸು. ಕೆಲವರನ್ನಷ್ಟೇ ನಂಬು. ಯಾರಿಗೂ ಕೇಡು ಬಗೆಯಬೇಡ. ಇದುವೇ ಜೀವನದ ನಿಜ ಸೂತ್ರ.
ಪಂಚಾಂಗ ಶುಕ್ರವಾರ 16-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಭರಣಿ / ಯೋಗ: ಬ್ರಹ್ಮ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.42ಸೂರ್ಯಾಸ್ತ : 06.26ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಮಕರ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಕುಂಭ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.