ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2024)
ನಿತ್ಯ ನೀತಿ :ಇತಿಹಾಸ ಓದುವಂತಹ ವ್ಯಕ್ತಿಗಳಾಗಬೇಡಿ. ಇತಿಹಾಸ ನಿರ್ಮಿಸುವಂಥ ವ್ಯಕ್ತಿಗಳಾಗಿ.
ಪಂಚಾಂಗ ಬುಧವಾರ 21-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಪುನರ್ವಸು / ಯೋಗ: ಆಯು / ಕರಣ: ಕೌಲವ
ಸೂರ್ಯೋದಯ : ಬೆ.06.40ಸೂರ್ಯಾಸ್ತ : 06.27ರಾಹುಕಾಲ : 12.00-1.30ಯಮಗಂಡ ಕಾಲ : 7.30-9.00ಗುಳಿಕ ಕಾಲ : 10.30-12.00
ರಾಶಿ ಭವಿಷ್ಯಮೇಷ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು. ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.ಕಟಕ: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಧಿಕ ಧನವ್ಯಯವಾಗುವ ಸಂಭವವಿದೆ.ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.
ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗದಿರಿ.ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.ವೃಶ್ಚಿಕ: ಆರೋಗ್ಯದ ಬಗ್ಗೆ ಗಮನ ಹರಿಸಿ.
ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.ಮಕರ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.ಕುಂಭ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.ಮೀನ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.