ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2024)
ನಿತ್ಯ ನೀತಿ :ನಂಬಿ ಅನುಭವಿಸುವುದಕ್ಕಿಂತ ಅನುಭವಿಸಿ ನಂಬುವುದೇ ಒಳ್ಳೆಯದು. ಶಾಶ್ವತ ಮತ್ತು ಸತ್ಯ.
ಪಂಚಾಂಗ ಶುಕ್ರವಾರ 09-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಶ್ರವಣ / ಯೋಗ: ವ್ಯತೀಪಾತ / ಕರಣ: ಚತುಷ್ಪಾದ
ಸೂರ್ಯೋದಯ : ಬೆ.06.44ಸೂರ್ಯಾಸ್ತ : 06.24ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.ವೃಷಭ: ಭೂ ವ್ಯವಹಾರದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.ಮಿಥುನ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸಲಹೆ ಪಡೆಯುವುದು ಅನಿವಾರ್ಯ.
ಕಟಕ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ.ವೃಶ್ಚಿಕ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂತಸದ ದಿನ.
ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.ಕುಂಭ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.