ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-02-2024)
ನಿತ್ಯ ನೀತಿ: ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ.
ಪಂಚಾಂಗ ಮಂಗಳವಾರ 06-02-2024ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ವ್ಯಾಘಾತ / ಕರಣ: ಕೌಲವ
ಸೂರ್ಯೋದಯ : ಬೆ.06.45ಸೂರ್ಯಾಸ್ತ : 06.22ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.ವೃಷಭ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.ಮಿಥುನ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ಕಟಕ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳಿಂದ ಅನುಕೂಲವಾಗಲಿದೆ.ಸಿಂಹ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.ಕನ್ಯಾ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.
ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.ವೃಶ್ಚಿಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.ಧನುಸ್ಸು: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಮಕರ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.ಕುಂಭ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ್ಮ ಮುಂದೆ ಪ್ರಸ್ತಾಪವಾಗಲಿದೆ.ಮೀನ: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.