ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-01-2024)
ನಿತ್ಯ ನೀತಿ :ಸಾಂಸಾರಿಕ ಜೀವನವೆಂಬುದು ಕೆಸರಿನಲ್ಲಿದ್ದಂತೆ. ಆದರೆ, ಕೆಸರಿಗೆ ಅಂಟದೆ ಇರುವ ಕಮಲ ಪುಷ್ಪದಂತೆ ಜೀವನ ಧರ್ಮವಿರಬೇಕು.
ಪಂಚಾಂಗ ಶುಕ್ರವಾರ 05-01-2024ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಚಿತ್ತಾ / ಯೋಗ: ಅತಿಗಂಡ / ಕರಣ: ತೈತಿಲ
ಸೂರ್ಯೋದಯ : ಬೆ.06.43ಸೂರ್ಯಾಸ್ತ : 06.07ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ:ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳ ಬಹುದು. ಆದ್ದರಿಂದ ಜಾಗ್ರತೆಯಿಂದಿರಿ.ವೃಷಭ: ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲ ಪಡೆಯುತ್ತೀರಿ.ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.ಸಿಂಹ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕನ್ಯಾ:ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ.
ತುಲಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.ವೃಶ್ಚಿಕ: ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.ಧನುಸ್ಸು: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಮಕರ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಕುಂಭ: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.ಮೀನ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.