ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-12-2023)
ನಿತ್ಯ ನೀತಿ :ಅಹಿಂಸೆಗೆ ಬಹಳ ಶಕ್ತಿಯಿದೆ. ಇದೊಂದು ಸ್ವಾಧ್ಯಾಯದ ತಪಸ್ಸು. ಕೂಡಲೇ ಫಲಿಸದಿದ್ದರೂ ಕ್ರಮೇಣ ಅಂತರಂಗದ ಶಕ್ತಿಯ ಮೇಲೆ ಸತ್ಪರಿಣಾಮವನ್ನುಂಟು ಮಾಡಿಯೇ ತೀರುತ್ತದೆ.
ಪಂಚಾಂಗ ಶನಿವಾರ 23-12-2023ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಭರಣಿ / ಯೋಗ: ಶಿವ / ಕರಣ: ಭವ
ಸೂರ್ಯೋದಯ : ಬೆ.06.38ಸೂರ್ಯಾಸ್ತ : 05.59ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30
ರಾಶಿ ಭವಿಷ್ಯಮೇಷ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.ವೃಷಭ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಎಚ್ಚರಿಕೆಯಿಂದಿರಿ.ಮಿಥುನ: ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷ ಪ್ರಗತಿ ಕಾಣುವರು. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕಟಕ: ಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.ಕನ್ಯಾ: ಗೌರವ-ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.
ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಶತ್ರುಗಳ ಕಾಟ ಹೆಚ್ಚಾಗಬಹುದು.ಧನುಸ್ಸು: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ಕುಂಭ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.ಮೀನ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.