ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-12-2023)
ನಿತ್ಯ ನೀತಿ :ಮುಳುಗುವ ಸೂರ್ಯನನ್ನು ಕಂಡಾಗ, ಆರುವ ದೀಪ ನೋಡಿದಾಗ ಬದುಕಿನ ನಶ್ವರತೆಯ ದರ್ಶನವಾಗುತ್ತದೆ.
ಪಂಚಾಂಗ ಮಂಗಳವಾರ 05-12-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವಿಷ್ಕಂಭ / ಕರಣ: ಬಾಲವ
ಸೂರ್ಯೋದಯ : ಬೆ.06.28ಸೂರ್ಯಾಸ್ತ : 05.52ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ಸಮಾಧಾನದಿಂದ ವಿಚಾರ ವಿನಿಮಯ ಮಾಡಿಕೊಂಡರೆ ಸಮಸ್ಯೆ ಗಳಿಗೆ ಪರಿಹಾರ ಸಿಗಲಿದೆ.ವೃಷಭ: ಆರ್ಥಿಕವಾಗಿ ಅನುಕೂಲಕರ ದಿನವಾಗಿದೆ. ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಮಿಥುನ: ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಸ್ನೇಹಿತರಿಗೆ ಸಹಾಯ ಮಾಡುವಿರಿ.
ಕಟಕ: ಎಲ್ಲರಿಂದಲೂ ತಪ್ಪಾಗುವುದು ಸಹಜ. ಧೈರ್ಯವಾಗಿ ಮುನ್ನುಗ್ಗಬೇಕು.ಸಿಂಹ: ಕೆಲಸಗಳು ಸರಾಗವಾಗಿ ನಡೆದು ಮನಸ್ಸು ನಿರಾಳವಾಗಲಿದೆ. ಉತ್ತಮ ದಿನ.ಕನ್ಯಾ: ತಾಂತ್ರಿಕ ಕ್ಷೇತ್ರ ದವರಿಗೆ ಮೇಲಧಿಕಾರಿ ಗಳಿಂದ ಹೆಚ್ಚಿನ ಒತ್ತಡಗಳು ಎದುರಾಗಲಿವೆ.
ತುಲಾ: ಸ್ನೇಹಿತರು ಹಾಗೂ ನೆರೆಹೊರೆಯವರಿಂದ ಆರ್ಥಿಕವಾಗಿ ನೆರವು ದೊರೆಯಲಿದೆ.ವೃಶ್ಚಿಕ: ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ಬಹು ದಿನಗಳ ಕನಸು ನನಸಾಗಲಿದೆ.ಧನುಸ್ಸು: ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುವಿರಿ.
ಮಕರ: ಮಕ್ಕಳ ವಿಷಯದಲ್ಲಿ ಜಾಗ್ರತೆಯಿಂದಿರಿ. ಶತ್ರುಗಳ ಕಾಟ ಹೆಚ್ಚಾಗಲಿದೆ.ಕುಂಭ: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ ಮಾಡುವಿರಿ.ಮೀನ: ಮೇಲಧಿಕಾರಿಗಳಿಗೆ ಸಹೋದ್ಯೋಗಿಗಳಿಂದ ನಿರೀಕ್ಷೆಗೂ ಮೀರಿದ ಸಹಕಾರ ದೊರೆಯಲಿದೆ.