ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-12-2023)
ನಿತ್ಯ ನೀತಿ :ಮಾತು, ಮನಸ್ಸು ಮತ್ತು ನಡೆಗಳು ಮನುಷ್ಯನನ್ನು ಸಜ್ಜನನ್ನಾಗಿಸುತ್ತವೆ. ದಾರಿ ತಪ್ಪಿದರೆ ಅಧಮನನ್ನಾಗಿಸುತ್ತವೆ.
ಪಂಚಾಂಗ ಶುಕ್ರವಾರ 01-12-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪುನರ್ವಸು / ಯೋಗ: ಶುಕ್ಲ / ಕರಣ: ಕೌಲವ
ಸೂರ್ಯೋದಯ : ಬೆ.06.26ಸೂರ್ಯಾಸ್ತ : 05.51ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ಸಮೀಪ ವರ್ತಿಗಳಿಂದ ಮೋಸ ಹೋಗುವ ಸಾಧ್ಯತೆಗಳಿವೆ. ಎಚ್ಚರ ವಹಿಸಿ.ವೃಷಭ: ವಕೀಲರು ಕೋರ್ಟು -ಕಚೇರಿ ಕೆಲಸಗಳಲ್ಲಿ ಅಧಿಕ ಲಾಭ ಗಳಿಸುವರು.ಮಿಥುನ: ಆಸ್ತಿ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಆರೋಗ್ಯ ಸಮಸ್ಯೆ ಕಾಡುವುದು.
ಕಟಕ: ಸಹೋದರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ ಮಾಡುವಿರಿ.ಸಿಂಹ: ರಫ್ತು, ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ.ಕನ್ಯಾ: ನೀವು ಮಾಡುವ ಕೆಲಸ -ಕಾರ್ಯಗಳಿಂದ ಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ.
ತುಲಾ: ಮಧ್ಯವರ್ತಿಗಳ ಸಹಾಯದಿಂದಾಗಿ ವಿವಾಹದ ವಿಷಯದಲ್ಲಿ ಅನುಕೂಲವಾಗಲಿದೆ.ವೃಶ್ಚಿಕ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆಗಳಾಗಲಿವೆ.ಧನುಸ್ಸು: ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡು ವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಮಕರ: ಕಾರ್ಯ ನಿಮಿತ್ತ ದೂರ ಪ್ರಯಾಣ ಮಾಡ ಬೇಕಾಗಬಹುದು. ಪಾಲುದಾರಿಕೆಯಲ್ಲಿ ನಷ್ಟ.ಕುಂಭ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ಮೀನ: ನಿಮ್ಮ ನೆಚ್ಚಿನ ಕಾರ್ಯಯೋಜನೆಗಳು ಕೈಗೂಡಲಿವೆ. ಸಂಭ್ರಮದ ದಿನ.